Connect with us


      




ದೇಶ

ಸಿಎಂ ಅಕ್ರಮ ಆಸ್ತಿ ವಿಚಾರ : ತೀರ್ಪನ್ನ ಕಾಯ್ದಿರಿಸಿದ ಕೋರ್ಟ್

Published

on

ಹೈದರಬಾದ್ : ಡಿಸೆಂಬರ್ 27 (ಯು.ಎನ್.ಐ.) ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅಕ್ರಮ ಆಸ್ತಿ ವಿಚಾರವಾಗಿ ಇಂದು ಆಂಧ್ರಪ್ರದೇಶದ ಹೈಕೋರ್ಟ್ ನಲ್ಲಿ ವಾದ ವಿವಾದಗಳು ಮುಕ್ತಾಯಗೊಂಡಿದೆ.

ಅಕ್ರಮ ಆಸ್ತಿ ವಿಚಾರದಲ್ಲಿ ಜಗನ್ ಮೋಹನ್ ರೆಡ್ಡಿ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದ್ದರು. ಜಾಮೀನು ಮಂಜೂರು ಮಾಡಬಾರದೆಂದು ಎಂಪಿ ರಘುರಾಮ ಕೃಷ್ಣರಾಜು ನ್ಯಾಯಾಲಯದ ಕದ ತಟ್ಟಿದ್ದರು. ಇದೇ ವಿಚಾರವಾಗಿ ವಾದ ವಿವಾದಗಳನ್ನ ಆಲಿಸಿದ ತೆಲಂಗಾಣ ನ್ಯಾಯಾಲಯ ತೀರ್ಪನ್ನ ಕಾಯ್ದಿರಿಸಿದೆ.

ಈ ಹಿಂದೆ ಇದೇ ವಿಚಾರವಾಗಿ ಎಂಪಿ ರಘುರಾಮ ಕೃಷ್ಣರಾಜು ದಾಖಲು ಮಾಡಿದ್ದ ಅರ್ಜಿಯನ್ನು ಸಿಬಿಐ ನ್ಯಾಯಾಲಯ ತಳ್ಳಿಹಾಕಿತ್ತು. ಇದನ್ನು ಪ್ರಶ್ನಿಸಿ ರಘುರಾಂ ತೆಲಂಗಾಣ ಉಚ್ಚ ನ್ಯಾಯಾಲಯದ ಮೊರೆ ಹೋಗಿದ್ದರು. ರಘುರಾಂ ಪರ ವಕೀಲರು ಇಂದು ತಮ್ಮ ವಾದವನ್ನು ಮಂಡಿಸಿ ಈಗಾಗಲೇ ರಾಜ್ಯದ ಉನ್ನತ ಹುದ್ದೆಯಲ್ಲಿರುವ ಸಿಎಂ ಜಗನ್ ಮೋಹನ್ ರೆಡ್ಡಿ ಸಾಕ್ಷಿಗಳ ಮೇಲೆ ತಮ್ಮ ಪ್ರಭಾವ ಬೀರುತ್ತಿದ್ದಾರೆಂದು ಮತ್ತು ಜಗನ್ ಗೆ ಈ ವಿಚಾರವಾಗಿ ನೋಟೀಸ್ ಜಾರಿಮಾಡಬೇಕೆಂದು  ನ್ಯಾಯಾಲಯಕ್ಕೆ ಮನವರಿಕೆ ಮಾಡಿದ್ದಾರೆ.

ದೇಶ

ಅಧಿಕೃತವಾಗಿ ಟಾಟಾ ಸಮೂಹಕ್ಕೆ ಏರ್ ಇಂಡಿಯಾ ಕಂಪೆನಿ ಹಸ್ತಾಂತರ

Published

on

ನವದೆಹಲಿ: ಜನೆವರಿ 27  (ಯು.ಎನ್.ಐ.) ಕೇಂದ್ರ ಸರ್ಕಾರವು ಗುರುವಾರ ಅಧಿಕೃತವಾಗಿ ಏರ್ ಇಂಡಿಯಾವನ್ನು ಟಾಟಾ ಸಮೂಹಕ್ಕೆ ಹಸ್ತಾಂತರಿಸಿದೆ. 69 ವರ್ಷಗಳ ಬಳಿಕ ಪುನಃ ಟಾಟಾ ಮಡಿಲಿಗೆ ಏರ್ ಇಂಡಿಯಾ ಬಂದಿದೆ.

ಟಾಟಾ ಸನ್ಸ್ ಅಧ್ಯಕ್ಷ ಎನ್ ಚಂದ್ರಶೇಖರನ್ ಅವರು ಅಧಿಕೃತ ಹಸ್ತಾಂತರಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು

ಟಾಟಾ ಸನ್ಸ್ ಅಧ್ಯಕ್ಷ ಎನ್ ಚಂದ್ರಶೇಖರನ್ ಮಾತನಾಡಿ, ಏರ್ ಇಂಡಿಯಾವನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ಪೂರ್ಣಗೊಂಡಿದೆ. ಏರ್ ಇಂಡಿಯಾವನ್ನು ತನ್ನ ಮಡಿಲಿಗೆ ಮರಳಿ ಪಡೆದಿರುವುದಕ್ಕೆ ಟಾಟಾ ಸಮೂಹ ತುಂಬಾ ಸಂತೋಷಗೊಂಡಿದೆ. ವಿಶ್ವದರ್ಜೆ ಮಟ್ಟದಲ್ಲಿ ವಿಮಾನಯಾನ ಸಂಸ್ಥೆಯನ್ನು ರಚಿಸಲು, ಉತ್ಸಾಹದಿಂದ ಎಲ್ಲರೊಂದಿಗೆ ಕೆಲಸ ಮಾಡಲು ನಾವು ಎದುರು ನೋಡುತ್ತಿದ್ದೇವೆ ಎಂದು ಹೇಳಿದರು.

ನಿರ್ವಹಣಾ ನಿಯಂತ್ರಣದೊಂದಿಗೆ ಏರ್ ಇಂಡಿಯಾದ 100 ಪ್ರತಿಶತ ಷೇರುಗಳನ್ನು M/s ಟ್ಯಾಲೇಸ್ ಪ್ರೈವೇಟ್ ಲಿಮಿಟೆಡ್‌ಗೆ ವರ್ಗಾಯಿಸುವುದರೊಂದಿಗೆ ಏರ್ ಇಂಡಿಯಾದ ಕಾರ್ಯತಂತ್ರದ ಹೂಡಿಕೆ ವಹಿವಾಟು ಇಂದು ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಸ್ಟ್ರಾಟೆಜಿಕ್ ಪಾಲುದಾರರ ನೇತೃತ್ವದ ಹೊಸ ಮಂಡಳಿಯು ಏರ್ ಇಂಡಿಯಾದ ಜವಾಬ್ದಾರಿಯನ್ನು ವಹಿಸುತ್ತದೆ ಎಂದು ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣೆ ಇಲಾಖೆ (ಡಿಐಪಿಎಎಂ) ಕಾರ್ಯದರ್ಶಿ ತುಹಿನ್ ಕಾಂತಾ ಪಾಂಡೆ ತಿಳಿಸಿದ್ದಾರೆ.

ಸಂಪೂರ್ಣ 2,700 ಕೋಟಿ ರೂಪಾಯಿ ಸರ್ಕಾರಕ್ಕೆ ಬಂದಿರುವುದರಿಂದ ತಲಾಸ್ ಹೊಸ ಮಾಲೀಕರಾಗಿದ್ದಾರೆ. ನಾವು ಷೇರುಗಳನ್ನು ವರ್ಗಾಯಿಸಿದ್ದೇವೆ. 15,300 ಕೋಟಿ ಸಾಲವನ್ನು ಸಹ ಸ್ವೀಕರಿಸಲಾಗಿದೆ. ಆದ್ದರಿಂದ ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡಿವೆ” ಎಂದು ಡಿಐಪಿಎಎಂ ಕಾರ್ಯದರ್ಶಿ ಹೇಳಿದರು.

ಸ್ಪರ್ಧಾತ್ಮಕ ಹರಾಜು ಪ್ರಕ್ರಿಯೆಯ ನಂತರ, ಸರ್ಕಾರವು ಕಳೆದ ವರ್ಷ ಅಕ್ಟೋಬರ್ 8 ರಂದು ಏರ್ ಇಂಡಿಯಾವನ್ನು 18,000 ಕೋಟಿ ರೂ.ಗೆ ಟ್ಯಾಲೇಸ್ ಪ್ರೈವೇಟ್ ಲಿಮಿಟೆಡ್‌ಗೆ ಮಾರಾಟ ಮಾಡಿತ್ತು.

Continue Reading

ದೇಶ

ವೈಯಕ್ತಿಕ ದ್ವೇಷ: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ದುಷ್ಟರು

Published

on

ನವದೆಹಲಿ: ಜನೆವರಿ 27 (ಯು.ಎನ್.ಐ.) ವೈಯಕ್ತಿಕ ದ್ವೇಷದ ಕಾರಣ ಮಹಿಳೆಯನ್ನು ಅಪಹರಿಸಿ ಆಕೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ದುಷ್ಟರು ಚಪ್ಪಲಿ ಹಾರ ಹಾಕಿ, ಮುಖಕ್ಕೆ ಕಪ್ಪು ಬಣ್ಣ ಬಳಿದು, ದೆಹಲಿಯ ಬೀದಿಗಳಲ್ಲಿ ಮೆರವಣಿಗೆ ಮಾಡಿದ ಘಟನೆ ಶಹದಾರ ಜಿಲ್ಲೆಯ ವಿವೇಕ್ ವಿಹಾರ್ ಪ್ರದೇಶದಲ್ಲಿ ನಡೆದಿದೆ.

ಯುವತಿಯ ಜೊತೆ ಅಮಾನವೀಯವಾಗಿ ನಡೆದುಕೊಂಡ ನಾಲ್ವರು ಆರೋಪಿಗಳನ್ನು ಬಂಧಿಸಿದ ದೆಹಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಡಿಸಿಡಬ್ಲ್ಯೂ  ಮುಖ್ಯಸ್ಥೆ ಸ್ವಾತಿ ಮಲಿವಾಲ್ ಪ್ರಕಾರ, ಕೆಲವು ಅಕ್ರಮ ಮದ್ಯ ಮಾರಾಟಗಾರರು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಮತ್ತು ನಂತರ ಜನರ ಹರ್ಷೋದ್ಗಾರದ ನಡುವೆ ಆಕೆಯ ತಲೆಯನ್ನು ಬೋಳಿಸಿ, ಮುಖಕ್ಕೆ ಕಪ್ಪು ಬಣ್ಣ ಬಳಿದು ಮೆರವಣಿಗೆ ಮಾಡಲಾಯಿತು. ಪೊಲೀಸರ ಪ್ರಕಾರ, ಘಟನೆಯು ಆರೋಪಿಯೊಂದಿಗೆ ಮಹಿಳೆಯ ಮೇಲಿನ ವೈಯಕ್ತಿಕ ದ್ವೇಷದ ಕಾರಣ ಈ ರೀತಿಯಾಗಿ ನಡೆದುಕೊಂಡಿದ್ದಾರೆ ಎಂದು ಶಂಕಿಸಲಾಗಿದೆ ಎಂದು ಹೇಳಿದರು.

ವರದಿಗಳ ಪ್ರಕಾರ, ಆತ್ಮಹತ್ಯೆ ಮಾಡಿಕೊಂಡ ಯುವಕನ ಕುಟುಂಬದವರು ಹಲ್ಲೆ ನಡೆಸಿದ್ದಾರೆ. ಆತನ ಸಾವಿಗೆ ಮಹಿಳೆಯೇ ಕಾರಣ ಎಂದು ಯುವಕನ ಕುಟುಂಬಸ್ಥರು ಆರೋಪಿಸಿದ್ದಾರೆ. ಮಹಿಳೆಗೆ ಮದುವೆಯಾಗಿ ಒಂದು ಮಗುವಿದೆ.

Continue Reading

ದೇಶ

ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ ಅಂತ್ಯ; ಶಾಲಾ-ಕಾಲೇಜುಗಳು ಬಂದ್

Published

on

ಹೊಸದಿಲ್ಲಿ: ಜನೆವರಿ 27 (ಯು.ಎನ್.ಐ.) ರಾಷ್ಟ್ರ ರಾಜಧಾನಿ ಜನರಿಗೆ ದೆಹಲಿ ಸರ್ಕಾರ ಗುಡ್ ನ್ಯೂಸ್ ನೀಡಿದೆ. ದೆಹಲಿಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿರುವ  ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ ಅನ್ನು ತೆಗೆದು ಹಾಕಲಾಗಿದೆ. ಇದಲ್ಲದೇ ಈಗ ಶೇ.50ರಷ್ಟು ಸಾಮರ್ಥ್ಯದೊಂದಿಗೆ ಸಿನಿಮಾ ಥಿಯೇಟರ್ ಗಳನ್ನು ತೆರೆಯಲು ಅನುಮತಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 7,498 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 29 ಮಂದಿ ಸಾವಿಗೀಡಾಗಿದ್ದಾರೆ. ಇನ್ನು ದೆಹಲಿಯಲ್ಲಿ ಬುಧವಾರ 5,760 ಕೊರೊನಾ ಪ್ರಕರಣಗಳು ದಾಖಲಾಗಿ 30 ಜನರು ಸಾವಿಗೀಡಾಗಿದ್ದರು.

ಡಿಡಿಎಂಎ ಸಭೆಯಲ್ಲಿ ಮಹತ್ವದ ನಿರ್ಧಾರ

ಸೋಂಕಿತ ಪ್ರಕರಣಗಳು ಕಡಿಮೆಯಾಗುತ್ತಿರುವುದರಿಂದ ದೆಹಲಿಯಲ್ಲಿ ಕೋವಿಡ್ ಗೈಡ್ ಲೈನ್ಸ್ ಗಳನ್ನು ಸಡಿಲಗೊಳಿಸಬೇಕೆಂಬ ಬಲವಾದ ಬೇಡಿಕೆ ಕೇಳಿಬಂದಿತ್ತು. ಈ ಒತ್ತಡಕ್ಕೆ ಮಣಿದಿರುವ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ಇಂದು ಮಹತ್ವದ ಸಭೆ ನಡೆಸಿತು. ಈ ಮಹತ್ವದ ಸಭೆಯಲ್ಲಿ ವಾರಾಂತ್ಯದ ಕರ್ಫ್ಯೂ ತೆಗೆದುಹಾಕುವುದು ಸೇರಿದಂತೆ ಕೆಲವು ನಿರ್ಬಂಧಗಳನ್ನು ಸಡಿಲಗೊಳಿಸುವ ನಿರ್ಧಾರ ಕೈಗೊಳ್ಳಲಾಯಿತು. ಆದರೆ, ರಾತ್ರಿ ಕರ್ಫ್ಯೂ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಮುಂದುವರಿಯುಲಿದೆ.

ದೆಹಲಿಯಲ್ಲಿ ಯಾವ್ಯಾವ ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದೆ?

– ಶುಕ್ರವಾರ ರಾತ್ರಿ 10 ರಿಂದ ಸೋಮವಾರ ಬೆಳಿಗ್ಗೆ 5 ರವರೆಗಿನ ವಾರಾಂತ್ಯದ ಕರ್ಫ್ಯೂನ್ನು ರದ್ದುಪಡಿಸಲಾಗಿದೆ.
– ಮದುವೆ ಸಮಾರಂಭದಲ್ಲಿ 200 ಜನರ ಮಿತಿ. ಈವರೆಗೆ ಇದ್ದ 15 ಮಂದಿ ಪಾಲ್ಗೊಳ್ಳಲು ಹಾಕಿದ್ದ ನಿರ್ಬಂಧವನ್ನು ತೆಗೆದು ಹಾಕಲಾಗಿದೆ.
– ದೆಹಲಿಯಲ್ಲಿ ಸಿನಿಮಾ ಹಾಲ್‌ ತೆರೆಯಲು ಅವಕಾಶ. ಆದರೆ, ಶೇ.50ರಷ್ಟು ಸಾಮರ್ಥ್ಯ ಹೊಂದಿರುವುದು ಕಡ್ಡಾಯ.
– ಬಾರ್ ಮತ್ತು ರೆಸ್ಟೋರೆಂಟ್‌ಗಳು ಶೇಕಡಾ 50ರಷ್ಟು ಆಸನ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ನಿರ್ದೇಶನ.

ದೆಹಲಿಯಲ್ಲಿ ಯಾವ್ಯಾವ ನಿರ್ಬಂಧಗಳು ಮುಂದುವರಿಯಲಿವೆ?

– ಶಾಲೆಗಳು, ಕಾಲೇಜುಗಳು ಮತ್ತು ಶಿಕ್ಷಣ ಸಂಸ್ಥೆಗಳು ಮುಚ್ಚಲ್ಪಡುತ್ತವೆ. ಶಾಲೆ ತೆರೆಯುವ ಬಗ್ಗೆ ಮುಂದಿನ ಸಭೆಯಲ್ಲಿ ಚರ್ಚೆ
– ರಾತ್ರಿ ಕರ್ಫ್ಯೂ ದೆಹಲಿಯಲ್ಲಿ ಮುಂದುವರಿಯಲಿದೆ.

ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ನೇತೃತ್ವದಲ್ಲಿ ನಡೆದ ಸಭೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡ ಉಪಸ್ಥಿತರಿದ್ದರು. ಡಿಡಿಎಂಎ ಇಂದು ಸಂಜೆ ಅಥವಾ ಶುಕ್ರವಾರ ಬೆಳಗ್ಗೆ ಆದೇಶ ಹೊರಡಿಸುವ ನಿರೀಕ್ಷೆಯಿದೆ. ಅಲ್ಲಿಯವರೆಗೆ ಈಗಿರುವ ನಿರ್ಬಂಧಗಳು ಮುಂದುವರಿಯಲಿವೆ.

Continue Reading
Advertisement
ದೇಶ13 mins ago

ಅಧಿಕೃತವಾಗಿ ಟಾಟಾ ಸಮೂಹಕ್ಕೆ ಏರ್ ಇಂಡಿಯಾ ಕಂಪೆನಿ ಹಸ್ತಾಂತರ

ನವದೆಹಲಿ: ಜನೆವರಿ 27  (ಯು.ಎನ್.ಐ.) ಕೇಂದ್ರ ಸರ್ಕಾರವು ಗುರುವಾರ ಅಧಿಕೃತವಾಗಿ ಏರ್ ಇಂಡಿಯಾವನ್ನು ಟಾಟಾ ಸಮೂಹಕ್ಕೆ ಹಸ್ತಾಂತರಿಸಿದೆ. 69 ವರ್ಷಗಳ ಬಳಿಕ ಪುನಃ ಟಾಟಾ ಮಡಿಲಿಗೆ ಏರ್...

ಕರ್ನಾಟಕ37 mins ago

ಉ.ಪ್ರ.‌ಚುನಾವಣೆ ನಂತರ ರಾಜ್ಯದಲ್ಲಿ‌ಮಹತ್ವದ ಬದಲಾವಣೆ: ಸಿ.ಎಂ ಇಬ್ರಾಹಿಮ್

ಬೆಂಗಳೂರು: ಜನೆವರಿ 27 (ಯು.ಎನ್.ಐ.)‌ ನಾನು ಹೇಳಿದಂತೆ ರಾಜ್ಯದಲ್ಲಿ ರಾಜಕೀಯ ಬೆಳವಣಿಗೆಗಳು ಘಟಿಸುತ್ತಾ ಬಂದಿವೆ.‌ ಉತ್ತರ ಪ್ರದೇಶ ಚುನಾವಣಾ ಬಳಿಕ ಸಾರ್ವತ್ರಿಕ ಚುನಾವಣೆ, ಇಲ್ಲವೇ ರಾಷ್ಟ್ರ ಪತಿ...

ದೇಶ51 mins ago

ವೈಯಕ್ತಿಕ ದ್ವೇಷ: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ದುಷ್ಟರು

ನವದೆಹಲಿ: ಜನೆವರಿ 27 (ಯು.ಎನ್.ಐ.) ವೈಯಕ್ತಿಕ ದ್ವೇಷದ ಕಾರಣ ಮಹಿಳೆಯನ್ನು ಅಪಹರಿಸಿ ಆಕೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ದುಷ್ಟರು ಚಪ್ಪಲಿ ಹಾರ ಹಾಕಿ, ಮುಖಕ್ಕೆ ಕಪ್ಪು...

ಕರ್ನಾಟಕ2 hours ago

ಸಿಎಂ ಭೇಟಿ ಮಾಡಿದ ಚಿಕ್ಕಮಗಳೂರು ಶಾಸಕರ ನಿಯೋಗ

ಬೆಂಗಳೂರು: ಜನೆವರಿ 27 (ಯು.ಎನ್.ಐ.) ಶಾಸಕ ಹಾಗೂ ಬಿಜೆಪಿ ಪ್ರಧಾನ ಕಾರ್ಯಯದರ್ಶಿ ಸಿ ಟಿ ರವಿ ನೇತೃತ್ವದಲ್ಲಿ ಚಿಕ್ಕಮಗಳೂರು ಜಿಲ್ಲೆ ಶಾಸಕರು ಮುಖ್ಯಮಂತ್ರಿ‌ ಬಸವರಾಜ ಎಸ್ ಬೊಮ್ಮಾಯಿ...

ಕರ್ನಾಟಕ2 hours ago

ಸಿಎಂ‌ ಇಬ್ರಾಹಿಂ ಬಂದರೆ ಸ್ವಾಗತ: ಎಚ್‌‌‌ಡಿಕೆ

ಬೆಂಗಳೂರು:ಜನೆವರಿ 27 (ಯು.ಎನ್.ಐ.) ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಸಿಎಂ‌ ಇಬ್ರಾಹಿಂ‌ ಅವರು ಜಾತ್ಯತೀತ ಜನತಾ ದಳಕ್ಕೆ ಬಂದರೆ ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.‌ಕುಮಾರಸ್ವಾಮಿ ಹೇಳಿದ್ದಾರೆ....

ದೇಶ3 hours ago

ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ ಅಂತ್ಯ; ಶಾಲಾ-ಕಾಲೇಜುಗಳು ಬಂದ್

ಹೊಸದಿಲ್ಲಿ: ಜನೆವರಿ 27 (ಯು.ಎನ್.ಐ.) ರಾಷ್ಟ್ರ ರಾಜಧಾನಿ ಜನರಿಗೆ ದೆಹಲಿ ಸರ್ಕಾರ ಗುಡ್ ನ್ಯೂಸ್ ನೀಡಿದೆ. ದೆಹಲಿಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿರುವ  ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ ಅನ್ನು...

ಕ್ರೀಡೆ3 hours ago

ಟೀಂ ಇಂಡಿಯಾ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಟ್ವಿಟರ್ ಖಾತೆ ಹ್ಯಾಕ್

ಮುಂಬೈ: ಜನೆವರಿ ೨೭ (ಯು.ಎನ್.ಐ.) ಇತ್ತೀಚೆಗೆ ಬಿಟ್‌ಕಾಯಿನ್ ಸ್ಕ್ಯಾಮರ್ ಗಳು ಟ್ವಿಟರ್ ಖಾತೆಗಳನ್ನು ಹ್ಯಾಕ್ ಮಾಡುತ್ತಿದ್ದು, ಈಗಾಗಲೇ ಸಾಕಷ್ಟು ಮಂದಿಯ ಟ್ವಿಟರ್ ಖಾತೆ ಇದೇ ವಿಚಾರಕ್ಕೆ ಹ್ಯಾಕ್...

ಸಿನೆಮಾ3 hours ago

ನಾಗಚೈತನ್ಯ, ಸಮಂತಾ ವಿಚ್ಛೇದನಕ್ಕೆ ನಟ ನಾಗಾರ್ಜುನ ಕೊಟ್ಟ ಕಾರಣ ಏನು?

ಹೈದರಾಬಾದ್: ಜನೆವರಿ 27 (ಯು.ಎನ್.ಐ.) ಟಾಲಿವುಡ್ ಸ್ಟಾರ್ ಗಳಾದ ನಾಗಚೈತನ್ಯ ಮತ್ತು ಸಮಂತಾ ರುತ್ ಪ್ರಭು 2021ರಲ್ಲಿ ವಿಚ್ಛೇದನ ಘೋಷಿಸಿದರು. ಅಂದಿನಿಂದ ಇಮದಿನವರೆಗೆ ಅವರ ನಡುವಿನ ಪ್ರತ್ಯೇಕತೆಗೆ...

ದೇಶ4 hours ago

ಅನ್ಯ ಜಾತಿ ಹುಡುಗಿ ಮದುವೆಯಾದ ಮಗ: ತಾಯಿ ಮೇಲೆ ಹಲ್ಲೆ

ಚೆನ್ನೈ: ಜನೆವರಿ 27 (ಯು.ಎನ್.ಐ.) ಅನ್ಯ ಜಾತಿಯ ಹುಡುಗಿಯನ್ನು ಮಗ ವಿವಾಹವಾದ ಕಾರಣ ತಾಯಿಯನ್ನು ದೀಪದ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ ಘಟನೆ ತಮಿಳುನಾಡಿನ ವಿರುದುನಗರ ಜಿಲ್ಲೆಯ ತಿರುಚುಲಿ...

ಸಿನೆಮಾ4 hours ago

‘ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ಳುತ್ತಿದ್ದಾರೆ’ – ನಟಿ ಶ್ವೇತಾ ತಿವಾರಿ

ಭೋಪಾಲ್: ಜನೆವರಿ 27 (ಯು.ಎನ್.ಐ.) ಕಿರುತೆರೆ ಹಾಗೂ ಹಿಂದಿ ಫಿಲಂ ನಟಿ ಶ್ವೇತಾ ತಿವಾರಿ ದೇವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಫ್ಯಾಶನ್ ಸಂಬಂಧಿತ ವೆಬ್ ಸರಣಿಯ...

ಟ್ರೆಂಡಿಂಗ್

Share