Connect with us


      




ಕರ್ನಾಟಕ

ಕೆಲಸ ಮಾಡಿಸಬೇಕಾಗಿದ್ದು ಜಿಲ್ಲಾಧಿಕಾರಿಗಳ ಜವಾಬ್ದಾರಿ : ಸಿಎಂ ಕ್ಲಾಸ್

Published

on

ಬೆಂಗಳೂರು, ಡಿಸೆಂಬರ್ 31 (ಯು.ಎನ್.ಐ.) ಸರ್ಕಾರದ ಆಡಳಿತಯಂತ್ರಕ್ಕೆ ಚುರುಕು ಮುಟ್ಟಿಸುವುದನ್ನು ಮುಂದುವರೆಸಿರುವ ಸಿಎಂ ಬೊಮ್ಮಾಯಿ, ರಾಜ್ಯದೆಲ್ಲಾ ಸಿಇಒಗಳ ಸಭೆ ಬಳಿಕ ಇದೀಗ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.
ವಿಧಾನಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಬೊಮ್ಮಾಯಿ, ಜಿಲ್ಲಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಠಾನ ಜಿಲ್ಲೆಗಳ ಅಭಿವೃದ್ಧಿಗೆ ಪ್ರಮುಖ ಆದ್ಯತೆ ನೀಡಬೇಕಾಗಿರುವುದು ಜಿಲ್ಲಾಧಿಕಾರಿಗಳೇ ಹೊರತು ಕೆಳಮಟ್ಟದ ಅಧಿಕಾರಿಗಳಲ್ಲ. ಸಬೂಬು ಹೇಳದೇ ಅಥವಾ ಎಲ್ಲ ಜವಾಬ್ದಾರಿ ಹೊಣೆಯನ್ನು ಅಧಿಕಾರಿಗಳಿಗೆ ವಹಿಸಿಬಿಟ್ಟರಾಯಿತೆಂಬ ಮನೋಭಾವ ಬಿಟ್ಟು ಖುದ್ದು ಜಿಲ್ಲಾಧಿಕಾರಿಗಳು ಅತ್ತ ಲಕ್ಷ್ಯವಹಿಸಬೇಕು. ಎಲ್ಲದರ ವರದಿ ಪಡೆಯಬೇಕೆಂದು ತಾಕೀತು ಮಾಡಿರುವ ಬಗ್ಗೆ ವರದಿಯಾಗಿದೆ.

ಡಿಸಿಗಳ ಜತೆ ಸಿಎಂ ಸಭೆ‌ ನಡೆಸಿದ ಸಿಎಂ, ಅತಿವೃಷ್ಟಿಯಿಂದ ಬೆಳೆಹಾನಿ, ಮನೆಗಳ ಹಾನಿ ಬಗ್ಗೆ ಪರಾಮರ್ಶೆ ನಡೆಸಿದರು. ಜಿಲ್ಲೆಗಳಲ್ಲಿ ಅಧಿಕಾರಿಗಳು ಸೇವಕರಂತೆ ಕೆಲಸಮಾಡಬೇಕೇ ಹೊರತು ಬಾಸ್‌ನಂತೆ ಅಲ್ಲ. ಅಧಿಕಾರಿಗಳು ಮೊದಲು ಜನರ ಸೇವಕರೆನ್ನುವುದನ್ನು ಮನದಟ್ಟು ಮಾಡಿಕೊಳ್ಳಬೇಕು. ಕಚೇರಿ ಬಿಟ್ಟು ಹೊರಬರಬೇಜು. ಜನರ ನಡುವೆ ಹೋಗಿ ಜನರ ಜತೆ ಕೆಲಸ ಮಾಡಿ, ಕೆಳಹಂತದ ಅಧಿಕಾರಿಗಳು ಡಿಸಿಗಳಂತೆ ವರ್ತಿಸಲು ಅವಕಾಶ ಕೊಡಬೇಡಿ ಎಂದು ಸೂಚಿಸಿದರು.
ನಿಮ್ಮ‌ಸ್ವಂತಿಕೆ, ವಿವೇಚನೆ ಬಳಸಿ ಕೆಲಸ ಮಾಡಿ. ಅಧಿಕಾರ ನಿಮ್ಮಲ್ಲಿ ಇನ್ನಷ್ಟು ಮೃದುತ್ವ, ವಿನಯತೆ ತರಬೇಕು.  ಎಚ್ಚರಿಕೆಯಿಂದ ಆಡಳಿತ ಕೆಲಸ ಮಾಡಿ
ಬೆಳೆಗಳ ಹಾನಿ, ಮನೆಗಳ ಹಾನಿಗೆ ಪರಿಹಾರ ಕೊಡದ ಡಿಸಿಗಳ ವಿರುದ್ಧ ಕ್ರಮದ ಎಚ್ಚರಿಕೆ ನೀಡಿದ ಸಿಎಂ, ಕೆಲಸ ಆಗಿಲ್ಲ ಎಂದು ಕೆಳಗಿನ ಅಧಿಕಾರಿಗಳ ಮೇಲೆ ಹಾಕಬೇಡಿ. ಕೆಲಸಗಳು ಆಗದಿರುವುದಕ್ಕೆ ನೀವೇ ಹೊಣೆ, ನಿಮ್ದೇ ಹೊಣೆಗಾರಿಕೆ ಎಂದು ಸಭೆಯಲ್ಲಿ ಡಿಸಿಗಳಿಗೆ ಸಿಎಂ ಕ್ಲಾಸ್ ತೆಗೆದುಕೊಂಡರೆನ್ನಲಾಗಿದೆ.

ಕರ್ನಾಟಕ

ಇಡೀ ವರ್ಷ ಸುಭಾಷ್ ಚಂದ್ರಬೋಸ್ ಜನ್ಮದಿನಾಚರಣೆಗೆ ತೀರ್ಮಾನ: ಸಿಎಂ

Published

on

ಬೆಂಗಳೂರು : ಜನೆವರಿ 23 (ಯು.ಎನ್.ಐ.) ರಾಜ್ಯ ಸರ್ಕಾರದ ವತಿಯಿಂದ ವರ್ಷವಿಡೀ ನೇತಾಜಿ ಸುಭಾಷ್ ಚಂದ್ರಬೋಸ್ ರವರ 125ನೇ ಜನ್ಮ ದಿನಾಚರಣೆಯನ್ನ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.  ಭಾರತದ ಸ್ವತಂತ್ರ್ಯಕ್ಕೆ ಬಹಳ ದೊಡ್ಡ ಬುನಾದಿ ಹಾಕಿಕೊಟ್ಟ ಮಹಾನ್ ನಾಯಕ ನೇತಾಜಿ ಸುಭಾಷ್ ಚಂದ್ರ ಭೋಸ್ ಅವರ 125 ನೇ ಜನ್ಮ ದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ವಿಧಾನಸೌಧ ಆವರಣದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಬಳಿಕ ಮಾತನಾಡಿದ ಅವರು, ರಾಜ್ಯ ಸರ್ಕಾರದ ವತಿಯಿಂದ ವರ್ಷವಿಡೀ ನೇತಾಜಿ ಅವರ 125ನೇ ಜನ್ಮ ದಿನಾಚರಣೆಯನ್ನ ವಿಚಾರಧಾರೆಯ ಮೂಲಕ, ಚರ್ಚೆಗಳ ಮೂಲಕ, ವಿಮರ್ಶೆಗಳ ಮೂಲಕ ಸ್ಮರಣೆ ಮಾಡುವ ಮೂಲಕ ಆಚರಣೆ ಮಾಡಲಿದ್ದೇವೆ ಎಂದರು.

ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಹೋರಾಟ ಮಾಡಿದ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನೋತ್ಸವದ ಅಂಗವಾಗಿ ಮುಖ್ಯಮಂತ್ರಿಗಳು ಪ್ರತಿಜ್ಞಾವಿಧಿ ಬೋಧಿಸಿದರು. ಬ್ರಿಟೀಷರ ವಿರುದ್ದ ಸೈನ್ಯವನ್ನ ಕಟ್ಟಿ ಹೋರಾಟ ಮಾಡಿದ ಅಪ್ರತಿಮ ವೀರ ಸುಭಾಷ್ ಚಂದ್ರಭೋಸ್. ಯುವಕರಿಗೆ ಪ್ರೇರಣೆಕೊಟ್ಟದ್ದು. ನೀವು ನನಗೆ ರಕ್ತ ಕೊಡಿ ನಾನು ನಿಮಗೆ ಸ್ವತಂತ್ರ್ಯಕೊಡಿಸುತ್ತೇನೆ ಎಂದು ಯುವಕರನ್ನ ಉತ್ಸಾಹಿಸಿ ಸೈನ್ಯಕಟ್ಟಿ ಹೋರಾಡಿದ ಸೇನಾನಿ ಎಂದು ಅವರ ಸಾಧನೆಯನ್ನ ಸ್ಮರಿಸಿದರು.

Continue Reading

ಕರ್ನಾಟಕ

ನ್ಯಾಯಮೂರ್ತಿ ಕೆ ಎಲ್. ಮಂಜುನಾಥ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

Published

on

ಬೆಂಗಳೂರು: ಜನವರಿ 23 (ಯು.ಎನ್.ಐ.)  ಕರ್ನಾಟಕ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

ನ್ಯಾಯಮೂರ್ತಿ ಮಂಜುನಾಥ್ ಅವರು ಅತ್ಯುತ್ತಮ ವಕೀಲರಾಗಿ, ವಕೀಲರ ಸಂಘದ ಅಧ್ಯಕ್ಷರಾಗಿ, ಹೈಕೋರ್ಟ್ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯದ ನದಿ ನೀರು ಮತ್ತು ಗಡಿ ವಿವಾದ ಪ್ರಾಧಿಕಾರದ ಅಧ್ಯಕ್ಷರಾಗಿ, ಆಂಧ್ರ ಪ್ರದೇಶದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಸಲ್ಲಿಸಿದ ಸೇವೆ ಅವಿಸ್ಮರಣೀಯವಾದದ್ದು ಎಂದು ಸಿಎಂ ಮೃತ ಗಣ್ಯರ ಸಾಧನೆಗಳನ್ನು ಸ್ಮರಿಸಿದ್ದಾರೆ.

ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬದವರು ಹಾಗೂ ಹಿತೈಷಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Continue Reading

ಕರ್ನಾಟಕ

ನಿವೃತ್ತ ಹೈಕೋರ್ಟ್‌ ನ್ಯಾಯಮೂರ್ತಿ ಕೆ.ಎಲ್.‌ ಮಂಜುನಾಥ್‌ ವಿಧಿವಶ

Published

on

By

ಬೆಂಗಳೂರು, ಜ 23 (ಯುಎನ್‌ ಐ) ರಾಜ್ಯ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್ ಶನಿವಾರ ತಡರಾತ್ರಿ ಹೃದಯಾಘಾತದಿಂದ ನಗರದ ನಿವಾಸದಲ್ಲಿ ವಿಧಿವಶರಾಗಿದ್ದಾರೆ.

ಬೆಂಗಳೂರಿನ ಕಾಮಾಕ್ಷಿಪಾಳ್ಯ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 12 ಗಂಟೆವರೆಗೆ ಪಾರ್ಥಿವ ಶರೀರದ ಅಂತಿಮ ದರ್ಶನ ಇರಲಿದ್ದು, ಮಧ್ಯಾಹ್ನ 3 ಗಂಟೆಗೆ ನೆಲಮಂಗಲದ ತೋಟದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ಹೇಳಿವೆ.

ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್ ಅವರು 1974ರ ಸೆ.13 ರಂದು ರಾಜ್ಯ ಹೈಕೋರ್ಟ್‌ ನಲ್ಲಿ ವಕೀಲ ವೃತ್ತಿ ಆರಂಭಿಸಿದ್ದರು. 2000ರ ಡಿ.11 ರಂದು ಕರ್ನಾಟಕ ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಯಾಗಿ, 2001ರ ಅ. 27 ರಂದು ಖಾಯಂ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು

Continue Reading
Advertisement
ದೇಶ33 seconds ago

ಬಂಗಾಳ: ನೇತಾಜಿ ಜನ್ಮದಿನದಂದು ಲಾಠಿ ಚಾರ್ಜ್

ಕೋಲ್ಕತ್ತಾ: ಜನೆವರಿ 23 (ಯು.ಎನ್.ಐ.) ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ಸಂದರ್ಭದಲ್ಲಿಯೂ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ರಾಜಕೀಯ ನಿಂತಿಲ್ಲ. ಪಶ್ಚಿಮ ಬಂಗಾಳದ...

ಅಂಕಣ51 mins ago

ದಟ್ಟ ಕಾಡಿನಲ್ಲಿ ʻಸಪ್ನೋಂ ಕೀ ರಾಣೀʼ

ಅಂಕಣ: ಒಂದೂರಲ್ಲಿ ಒಂದಿನ- 3 ಈ ಒಂದೂರು ಅನ್ನುವ ಮಾಯೆ ಇದೆಯಲ್ಲ, ಅದು ವಿಚಿತ್ರವಾದದ್ದು. ಅಪ್ಪ ಕಥೆ ಹೇಳುವಾಗ ಪ್ರತಿ ಸಲವೂ ಆ ಕಥೆ ಒಂದೂರಿನಲ್ಲಿ ಅಂತಲೇ...

ಕ್ರೀಡೆ1 hour ago

ಅಂಕುಶ್ ರಘುವಂಶಿ ಟೀಂ ಇಂಡಿಯಾದ ಉದಯೋನ್ಮುಖ ತಾರೆ!

ಹೊಸದಿಲ್ಲಿ: ಜನೆವರಿ 23 (ಯು.ಎನ್.ಐ.) ಅಂಡರ್ 19 ವರ್ಲ್ಡ್ ಕಪ್ ಮೂಲಕ ಭಾರತ ಕ್ರಿಕೆಟ್ ತಂಡಕ್ಕೆ ಮತ್ತೊಬ್ಬ ಉದಯೋನ್ಮುಖ ಆಟಗಾರ ದೊರೆತಿದ್ದಾರೆ. ಅವರೇ ದೆಹಲಿ ಮೂಲದ ಅಂಕುಶ್...

ಅಂಕಣ2 hours ago

ಎಳವೆಯಿಂದ ರಂಗಭೂಮಿ

ನಾದಾಂಕಣ – ಡಾ. ನಾ. ದಾಮೋದರ ಶೆಟ್ಟಿ ಭಾರತೀಯ ಹಾಗೂ ಗ್ರೀಕ್‌ ರಂಗಭೂಮಿಗೆ ಬಹುದೊಡ್ಡ ಪರಂಪರೆಇದೆ ಎನ್ನುವುದು ಸಾರ್ವಕಾಲಿಕ ಸತ್ಯ. ಆದರೆ ಯುರೋಪಿನ ರಂಗಭೂಮಿಯಾಗಲೀ ರಷ್ಯಾ, ಅಮೇರಿಕಾ...

ದೇಶ2 hours ago

ಅರುಣಾಚಲದಿಂದ ನಾಪತ್ತೆಯಾಗಿದ್ದ ಯುವಕ ಚೀನಾ ಗಡಿಯಲ್ಲಿ ಪತ್ತೆ!

ಹೊಸದಿಲ್ಲಿ: ಜನೆವರಿ 23 (ಯು.ಎನ್.ಐ.) ಅರುಣಾಚಲ ಪ್ರದೇಶದಿಂದ ನಾಪತ್ತೆಯಾಗಿದ್ದ ಭಾರತೀಯ ಯುವಕ ಚೀನಾ ಗಡಿಯಲ್ಲಿ ಪತ್ತೆಯಾಗಿದ್ದಾನೆ. ಈ ಬಗ್ಗೆ ಚೀನಾ ಸೈನಿಕರು ಭಾರತೀಯ ಯೋಧರಿಗೆ ಮಾಹಿತಿ ನೀಡಿದ್ದು,...

ಹಣಕಾಸು3 hours ago

ಕೆಲಸ ಬದಲಾಯಿಸಿದ್ದೀರಾ? ಚಿಂತೆ ಬಿಡಿ.. ನಿಮ್ಮ ನೆರವಿಗೆ ಇದೆ ಇಪಿಎಫ್ಒ!

ಬೆಂಗಳೂರು: ಜನೆವರಿ 23 (ಯು.ಎನ್.ಐ.) ಉತ್ತಮ ಸಂಬಳ, ಭದ್ರತೆಯುಳ್ಳ ನೌಕರಿ, ವಿಶೇಷ ಸವಲತ್ತುಗಳು.. ಹೀಗೆ ನಾನಾ ಉದ್ದೇಶಗಳಿಂದ ಉದ್ಯೋಗಿಗಳು ತಮ್ಮ ಕೆಲಸವನ್ನು ಬದಲಾಯಿಸುತ್ತಾ ಇರುತ್ತಾರೆ. ಇಂತಹ ಸಂದರ್ಭದಲ್ಲಿ...

ದೇಶ3 hours ago

ನೇತಾಜಿ ಸುಭಾಷ್ ಚಂದ್ರ ಬೋಸ್ ಜಯಂತಿ… ದೇಶಾದ್ಯಂತ ಪರಾಕ್ರಮ ದಿನವಾಗಿ ಆಚರಣೆ

ನವದೆಹಲಿ, ಜ ೨೩( ಯುಎನ್ ಐ) ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ೧೨೫ನೇ ಜನ್ಮಜಯಂತಿ ಇಂದು. ದೇಶಾದ್ಯಂತ ಪರಾಕ್ರಮ ದಿನವಾಗಿ ನೇತಾಜಿ...

ಕರ್ನಾಟಕ4 hours ago

ಇಡೀ ವರ್ಷ ಸುಭಾಷ್ ಚಂದ್ರಬೋಸ್ ಜನ್ಮದಿನಾಚರಣೆಗೆ ತೀರ್ಮಾನ: ಸಿಎಂ

ಬೆಂಗಳೂರು : ಜನೆವರಿ 23 (ಯು.ಎನ್.ಐ.) ರಾಜ್ಯ ಸರ್ಕಾರದ ವತಿಯಿಂದ ವರ್ಷವಿಡೀ ನೇತಾಜಿ ಸುಭಾಷ್ ಚಂದ್ರಬೋಸ್ ರವರ 125ನೇ ಜನ್ಮ ದಿನಾಚರಣೆಯನ್ನ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ...

ಅಂಕಣ4 hours ago

ಸ್ವಾತಂತ್ರ್ಯಕ್ಕಿಂತ ದೊಡ್ಡದು ಇನ್ಯಾವುದಿದೆ ?

‌ಅಂಕಣ: ದಿಟನುಡಿ -೩ ಕಳೆದ ವಾರ ನನ್ನ ಕೈರೋಪ್ರಾಕ್ಟರ್ ರೇ ಬಳಿ ಹೋಗಿದ್ದೆ. ಏಕೋ ಗೊತ್ತಿಲ್ಲ ಕೆಲ ದಿನಗಳ ಹಿಂದೆ ಸೊಂಟ ಹಿಡಿದಿತ್ತು. ಏಳಲು, ಕೂರಲು, ನಿಲ್ಲಲು...

ದೇಶ4 hours ago

ಪಂಜಾಬ್ ಚುನಾವಣೆ: ಕೆಂಪು ಕೋಟೆ ಹಿಂಸಾಚಾರದ ಆರೋಪಿಗೆ ರೈತ ಸಂಘಟನೆಯಿಂದ ಟಿಕೆಟ್!

ಚಂಡೀಗಢ: ಜನೆವರಿ 23 (ಯು.ಎನ್.ಐ.) ರೈತರ ಸಂಘಟನೆ ಯುನೈಟೆಡ್ ಸಮಾಜ ಮೋರ್ಚಾ ಪಂಜಾಬ್ ವಿಧಾನಸಭಾ ಚುನಾವಣೆಗೆ 35 ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಮಾಜಿ...

ಟ್ರೆಂಡಿಂಗ್

Share