Connect with us


      
ಕರ್ನಾಟಕ

ಕೇಂದ್ರ ಜಲಶಕ್ತಿ ಸಚಿವ ಹಾಗೂ ಸಿಎಂ ಭೇಟಿ – ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ

Iranna Anchatageri

Published

on

ಹೊಸದಿಲ್ಲಿ: ಏಪ್ರಿಲ್ 05 (ಯು.ಎನ್.ಐ.) ಎರಡು ದಿನಗಳ ಭೇಟಿಗಾಗಿ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಕೇಂದ್ರ ಸಚಿವರುಗಳನ್ನು ಭೇಟಿ ಮಾಡಿದರು.

ಪ್ರಮುಖವಾಗಿ ರಾಜ್ಯದಲ್ಲಿ ಆಗಬೇಕಾಗಿರುವ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಮುಖ್ಯಮಂತ್ರಿಗಳು ಚರ್ಚೆ ನಡೆಸಿದರು.

ಕರ್ನಾಟಕ ಕೈಗೆತ್ತಿಕೊಳ್ಳಲು ಉದ್ದೇಶಿಸಿರುವ ಮೇಕೆದಾಟು ಯೋಜನೆಗೆ ತಮಿಳುನಾಡು ಸರಕಾರ ಅಡ್ಡಗಾಲು ಹಾಕುತ್ತಿದೆ. ಈ ಮಧ್ಯೆ ಕಳೆದ ವಾರ ತಮಿಳುನಾಡು ಮುಖ್ಯಮಂತ್ರಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಮೇಕೆದಾಟು ಯೋಜನೆಗೆ ಅವಕಾಶ ಮಾಡಿ ಕೊಡಬಾರದು ಎಂದು ಒತ್ತಡ ಹೇರಿದ್ದಾರೆ ಎನ್ನಲಾಗುತ್ತಿದೆ. ಇತ್ತ ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಕೈಗೊಂಡು ರಾಜ್ಯ ಸರಕಾರದ ಮೇಲೆ ಒತ್ತಡ ಹೇರುತ್ತಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಇಂದು ಕೈಗೊಂಡಿರುವ ದೆಹಲಿ ಪ್ರವಾಸ ತೀವ್ರ ಕುತೂಹಲ ಕೆರಳಿಸಿದೆ.

ಕೇಂದ್ರ ಜಲಶಕ್ತಿ ಸಚಿವರ ಭೇಟಿ ವೇಳೆ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಭಗವಂತ ಖೂಬಾ, ಸಚಿವರಾದ ಗೋವಿಂದ ಕಾರಜೋಳ, ವಿ. ಸುನೀಲ್ ಕುಮಾರ್, ಮುರುಗೇಶ್ ನಿರಾಣಿ, ಸಂಸದ ಪ್ರತಾಪ ಸಿಂಹ, ಶಿವಕುಮಾರ್ ಉದಾಸಿ, ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಮತ್ತು ಇತರರು ಉಪಸ್ಥಿತರಿದ್ದರು.

Share