Connect with us


      
ಕರ್ನಾಟಕ

ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಗೌರವ ನಮನ ಸಲ್ಲಿಸಿದ ಸಿಎಂ

Iranna Anchatageri

Published

on

ಬೆಂಗಳೂರು, ಜನವರಿ 26: ಭಾರತದ ಸಂಪತ್ತನ್ನು ಲೂಟಿ ಹೊಡೆದು ಭಾರತೀಯರನ್ನು ಗುಲಾಮರನ್ನಾಗಿ ಮಾಡಿದ್ದ ಬ್ರಿಟಿಷರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರನ್ನು ಗಲ್ಲಿಗೇರಿಸಿದ ದಿನ ಇಂದು.

ಸಂಗೊಳ್ಳಿ ರಾಯಣ್ಣ ಅವರವನ್ನು ಜನವರಿ 26, 1831ರಂದು ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ನಂದಗಡದಲ್ಲಿ ಗಲ್ಲಿಗೇರಿಸಲಾಯಿತು. ಇಂಥ ಅಪ್ರತಿಮ ವೀರನ ಪುತ್ಥಳಿಗೆ ಬೆಂಗಳೂರಿನಲ್ಲಿಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಮನ ಸಲ್ಲಿಸಿದರು. ರಾಯಣ್ಣ ಅವರ 191ನೇ ಸ್ಮರಣೋತ್ಸವ ಅಂಗವಾಗಿ ರಾಯಣ್ಣನ ಪುತ್ಥಳಿಗೆ ಮಾಲಾರ್ಪಣೆ ಮಾಡಿ  ಸಿಎಂ ಗೌರವ ಸಲ್ಲಿಸಿದರು.

ಈ ವೇಳೆ ಕಾಗಿನೆಲೆ ಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಸಚಿವ ಆರ್.ಅಶೋಕ್, ಸಂಸದ ಪಿ.ಸಿ.ಮೋಹನ್,ಮಾಜಿ ಶಾಸಕ ವಾಟಾಳ್ ನಾಗರಾಜ್ ಮೊದಲಾದವರು ಉಪಸ್ಥಿತರಿದ್ದರು.

Share