Connect with us


      




ಕರ್ನಾಟಕ

ಸೇನಾ ಮುಖ್ಯಸ್ಥರಿದ್ದ ಹೆಲಿಕಾಪ್ಟರ್ ಪತನ: ದಿಗ್ಭ್ರಮೆ ವ್ಯಕ್ತಪಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Iranna Anchatageri

Published

on

ಬೆಂಗಳೂರು, ಡಿ 8 (ಯುಎನ್ಐ) ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೆ ಈಡಾಗಿರುವ ಸುದ್ದಿ ಕೇಳಿ ದಿಗ್ಭ್ರಮೆ ಹಾಗೂ ಆಘಾತ ಉಂಟಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅಪಘಾತದ ಕುರಿತು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ಪೂರ್ಣ ವಿವರಗಳನ್ನು ಪಡೆದುಕೊಳ್ಳಲಾಗುತ್ತಿದೆ. ಘಟನಾ ಸ್ಥಳದಲ್ಲಿ ಶೋಧನೆಯಾಗುತ್ತಿದ್ದು, ಬಿಪಿನ್ ರಾವತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೊಂದು ಅತ್ಯಂತ ದುರದೃಷ್ಟಕರ ಘಟನೆ, ಇಡೀ ದೇಶ ದಿಗ್ಭ್ರಾಂತಗೊಂಡಿದೆ ಎಂದು ಹೇಳಿದರು..

Share