Published
6 months agoon
By
UNI Kannadaಚನ್ನೈ : ಜನೆವರಿ 10 (ಯು.ಎನ್.ಐ.) ತಮಿಳುನಾಡಿನ ಸಾಂಪ್ರದಾಯಿಕ ಆಟ ಜಲ್ಲಿಕಟ್ಟು. ಜಲ್ಲಿಕಟ್ಟು ಕುರಿತು ಸಿಎಂ ಸ್ಟಾಲಿನ್ ಸೋಮವಾರ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಈ ವರ್ಷವೂ ಪ್ರತಿ ವರ್ಷದಂತೆ ಜಲ್ಲಿಕಟ್ಟು ನಡೆಸಲು ಅವಕಾಶ ಕಲ್ಪಿಸುವುದಾಗಿ ಘೋಷಿಸಿದರು.
ಇದಲ್ಲದೆ, ತಮಿಳುನಾಡು ಸರ್ಕಾರವು ಜಲ್ಲಿಕಟ್ಟು ಕಾರ್ಯಕ್ರಮ ನಿರ್ವಹಣೆಗೆ ಹಲವು ಮಾರ್ಗಸೂಚಿಗಳನ್ನು ಹೊರಡಿಸಿದೆ. ಸ್ಪರ್ಧೆಗಳಲ್ಲಿ ಭಾಗವಹಿಸಲು 300 ಜನರಿಗೆ ಮಾತ್ರ ಅವಕಾಶ ನೀಡಿದ್ದಾರೆ. ಸ್ಪರ್ಧೆಯನ್ನು ವೀಕ್ಷಿಸಲು 150 ಪ್ರೇಕ್ಷಕರು ಅಥವಾ ಶೇಕಡಾ 50 ರಷ್ಟು ಆಸನ ಸಾಮರ್ಥ್ಯ (ಯಾವುದು ಕಡಿಮೆಯೋ ಅದು) ಸಹ ಅನುಮತಿಸಲಾಗಿದೆ. ಸ್ಪರ್ಧಿಗಳು ಮತ್ತು ಪ್ರೇಕ್ಷಕರು ಎರಡು ಡೋಸ್ ಲಸಿಕೆಗಳನ್ನು ತೆಗೆದುಕೊಳ್ಳಬೇಕು ಮತ್ತು ಸ್ಪರ್ಧೆಯ ಪ್ರಾರಂಭದ 48 ಗಂಟೆಗಳ ಮೊದಲು ಕೋವಿಡ್ ನೆಗೆಟಿವ್ ಪ್ರಮಾಣಪತ್ರವನ್ನು ಸಲ್ಲಿಸಬೇಕು.
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಲ್ಲಿಕಟ್ಟು ಕಾರ್ಯಕ್ರಮವನ್ನು ಟಿವಿಯಲ್ಲಿ ವೀಕ್ಷಿಸುವಂತೆ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಸೇರದಂತೆ ರಾಜ್ಯ ಸರಕಾರ ಜನರಿಗೆ ಸೂಚಿಸಿದೆ. ಮಧುರೈ ಜಿಲ್ಲೆಯಲ್ಲಿ ಇದೇ 14ರಿಂದ ಜಲ್ಲಿಕಟ್ಟು ಸ್ಪರ್ಧೆಗಳು ಆರಂಭವಾಗಲಿವೆ. ಮಧುರೈ ಸಮೀಪದ ಅಲಂಗನಲ್ಲೂರು ಬಳಿ ನಡೆಯುವ ಈ ಸ್ಪರ್ಧೆಗಳನ್ನು ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುತ್ತಾರೆ.
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಉದ್ಧವ್ ಠಾಕ್ರೆ
ರಾಜಸ್ಥಾನ ಶಿರಚ್ಛೇದ: ಹಂತಕರಿಗೆ ಪಾಕಿಸ್ತಾನದಲ್ಲಿ 15 ದಿನ ಟ್ರೈನಿಂಗ್
National Statistics Day: ದೌರ್ಜನ್ಯಕ್ಕೆ ಒಳಗಾದವರ ಸಂಖ್ಯೆ ಶೇ.10ರಷ್ಟು ಹೆಚ್ಚಳ!
ಉದಯಪುರ ಹತ್ಯೆ: ಎನ್ಐಎ ತನಿಖೆ – ಕೇಂದ್ರ ಸರಕಾರ ಆದೇಶ
ಉದಯಪುರ ಟೈಲರ್ ಹತ್ಯೆ ಖಂಡಿಸಿದ ಮಮತಾ ಬ್ಯಾನರ್ಜಿ
ಬಿಹಾರ ರಾಜಕೀಯ: ಓವೈಸಿ ಪಾರ್ಟಿಯಿಂದ ನಾಲ್ವರು ಶಾಸಕರು ಆರ್ಜೆಡಿಗೆ ಜಿಗಿತ!