ಕರ್ನಾಟಕ
ಸಮುದಾಯ ಭವನ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆ

Published
6 months agoon
By
UNI Kannadaಬೆಂಗಳೂರು: ಜನೆವರಿ 03 (ಯುಎನ್ಐ) ರಾಜಧಾನಿ ಬೆಂಗಳೂರಿನಲ್ಲಿ ರೂಪಾಂತರಿ ಒಮೈಕ್ರಾನ್ ಸೇರಿದಂತೆ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಿವಾಸಿಗಳ ಚಿಕಿತ್ಸೆಗಾಗಿ ಸ್ಥಳಿಯ ಕೆಂಪೇಗೌಡ ಸಮುದಾಯ ಭವನವನ್ನು ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆಗೊಳಿಸಲಾಗಿದೆ.
ಸಮುದಾಯ ಭವನವನ್ನು 50 ಐಸಿಯು ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದ್ದು, ಇಂದು ಸ್ಥಳಿಯ ಶಾಸಕರೂ ಆದ ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರು ಭವನಕ್ಕೆ ಭೇಟಿ ನೀಡಿ ಸಿದ್ಧತೆಗಳ ಪರಿಶೀಲನೆ ನಡೆಸಿದರು.
ರೋಗಿಗಳ ಚಿಕಿತ್ಸೆಗಾಗಿ ಇನ್ನೂ ಅಗತ್ಯವಿರುವ ಸೌಲಭ್ಯಗಳ ಬಗ್ಗೆ ತಿಳಿಸಿದರೆ ತ್ವರಿತವಾಗಿ ಒದಗಿಸಲಾಗುವುದು. ನಿತ್ಯ ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವರದಿಯಾಗುತ್ತಿರುವ ಕೋವಿಡ್ ಪ್ರಕರಣಗಳು ಎಷ್ಟು ಮತ್ತು ಸೋಂಕಿನ ಹತೋಟಿಗೆ ಕೈಗೊಂಡಿರುವ ಕ್ರಮಗಳು ಏನು ಎಂಬ ಬಗ್ಗೆ ವರದಿ ನೀಡುವಂತೆ ಬಿಬಿಎಂಪಿ ಆರೋಗ್ಯಾಧಿಕಾರಿ ಡಾ.ಮಂಜುಳಾ ಅವರಿಗೆ ಸಚಿವರು ಈ ಸಂದರ್ಭದಲ್ಲಿ ಸೂಚನೆ ನೀಡಿದರು.
ಇನ್ನು ಮುಖ್ಯಮಂತ್ರಿಗಳ ಸಮ್ಮುಖದಲ್ಲೇ ಇಂದು ರಾಮನಗರದಲ್ಲಿ ಮಾನ್ಯ ಸಚಿವ ಡಾ. ಅಶ್ವತ್ಥ್ ನಾರಾಯಣ ಮೇಲೆ ಕಾಂಗ್ರೆಸ್ ಪಕ್ಷದ ಗೂಂಡಾಗಳು ಹಲ್ಲೆಗೆ ಪ್ರಯತ್ನಿಸಿರುವುದು ಅತ್ಯಂತ ಖಂಡನೀಯ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸುವುದಾಗಿ ಗೋಪಾಲಯ್ಯ ಸ್ಪಷ್ಟಡಿಸಿದರು.
ಧಾರವಾಡ-ಬೆಳಗಾವಿ ರೈಲು ಯೋಜನೆ ಶೀಘ್ರದಲ್ಲಿ ಪ್ರಾರಂಭ : ಸಿಎಂ
ರಮೇಶ್ ಜಾರಕಿಹೊಳಿ ವಿರುದ್ಧ ಗಂಭೀರ ಆರೋಪ: 819 ಕೋಟಿ ರೂ. ಲೂಟಿ!
ಬೆಳಗಾವಿ ಭೀಕರ ಅಪಘಾತ: ಮೃತ ಕಾರ್ಮಿಕರಿಗೆ 5 ಲಕ್ಷ ರೂ. ಪರಿಹಾರ
ಅಂಜನಾದ್ರಿ ಬೆಟ್ಟದಲ್ಲಿ ಜುಲೈನಲ್ಲಿ ಕಾಮಗಾರಿ ಪ್ರಾರಂಭಿಸಲು ಸಿಎಂ ಬೊಮ್ಮಾಯಿ ಸೂಚನೆ
ಎಸ್. ಎಂ. ಕೃಷ್ಣ, ನಾರಾಯಣ ಮೂರ್ತಿ, ಪ್ರಕಾಶ್ ಪಡುಕೋಣೆಗೆ ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿ
ತಿಂಗಳಲ್ಲಿ 15 ದಿನ ಅರಣ್ಯದಲ್ಲಿರಿ: ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಿಎಂ ತಾಕೀತು