Connect with us


      
ದೇಶ

ಕಾಂಗ್ರೆಸ್‍ನ ಕ್ಷಮಿಸಲು ಸಾಧ್ಯವಿಲ್ಲ : ರಾಜನಾಥ್ ಸಿಂಗ್

Vanitha Jain

Published

on

ಡೆಹ್ರಾಡೂನ್: ಜನೆವರಿ 06 (ಯು.ಎನ್.ಐ.) ಪ್ರಧಾನಿ ನರೇಂದ್ರ ಮೋದಿ ಭದ್ರತಾ ಲೋಪಕ್ಕೆ ಪಂಜಾಬಿನ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ ಎಂದಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಕಾಂಗ್ರೆಸ್ ಸರ್ಕಾರದ ಈ ನಡೆಯನ್ನು ಕ್ಷಮಿಸಲು ಸಾಧ್ಯವಿಲ್ಲ ಎಂದು ನೇರವಾಗಿಯೇ ನುಡಿದಿದ್ದಾರೆ.

ಉತ್ತರಕಾಶಿಯಲ್ಲಿ ಬಿಜೆಪಿಯ ವಿಜಯ ಸಂಕಲ್ಪ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿ, ಪ್ರಧಾನ ಮಂತ್ರಿ ಇಡೀ ದೇಶದ ಪ್ರತಿನಿಧಿ ಮತ್ತು ಅವರ ಕಚೇರಿ ಎಲ್ಲರೂ ಗೌರವ ನೀಡಬೇಕಾದ ಸಂಸ್ಥೆ ಎಂದು ಹೇಳಿದರು.

ಇನ್ನು ಮುಂದುವರೆದು ಪಂಜಾಬಿನಲ್ಲಿ ಕಾಂಗ್ರೆಸ್ ಆಡಳಿತವಿದೆ. ಪಂಜಾಬಿನಲ್ಲಿ ಬುಧವಾರ ನಡೆದ ಪ್ರಧಾನಿ ಮೋದಿ ಭದ್ರತಾ ಲೋಪವನ್ನು ನಾವು ಊಹಿಸಲು ಸಾಧ್ಯವಾ? ಎಂದು ಕೇಳಿದ ಅವರು, ಪ್ರಧಾನಿಯವರಂತಹ ಭದ್ರತಾ ವ್ಯವಸ್ಥೆಯ ಬಗ್ಗೆ ನಾವು ನಿರ್ಲಕ್ಷ್ಯ ವಹಿಸಿದರೆ ಇನ್ನು ದೇಶದ ಪ್ರಜಾಪ್ರಭುತ್ವ ಸಂಸ್ಥೆಗಳ ವಿಘಟನೆಯನ್ನು ತಡೆಯುವುದು ಕಷ್ಟ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ ರಾಜನಾಥ್ ಸಿಂಗ್, ನಾನು ಕೂಡ ಮುಖ್ಯಮಂತ್ರಿಯಾಗಿದ್ದೆ. ಆದರೆ ಕಾಂಗ್ರೆಸ್ ಪಕ್ಷದ ಇಂತಹ ಕೊಳಕು ರಾಜಕಾರಣವನ್ನು ಎಂದಿಗೂ ಒಪ್ಪಿಕೊಳ್ಳಲ್ಲ ಎಂದರು.

ಇನ್ನು ಕೇಂದ್ರ ಗೃಹ ಸಚಿವಾಲಯವು ಭದ್ರತಾ ಲೋಪದ ಕುರಿತು ರಾಜ್ಯಸರ್ಕಾರಕ್ಕೆ ವರದಿಯನ್ನು ಕೇಳಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ, ಭದ್ರತಾ ಲೋಪ ಘಟನೆ ಸ್ವೀಕಾರಾರ್ಹವಲ್ಲ; ಇದನ್ನಉ ಸರಿಪಡಿಸಲಾಗುವುದು ಎಂದು ಹೇಳಿದ್ದಾರೆ. ಇನ್ನು ಕೆಲವು ಬಿಜೆಪಿ ಮುಖಂಡರು ಪಂಜಾಬ್ ಮುಖ್ಯಮಂತ್ರಿ ಚನ್ನಿ ರಾಜೀನಾಮೆ ನೀಡುವಂತೆ ಒತ್ತಾಯಿಸಿದರು.

Share