Connect with us


      




ಕರ್ನಾಟಕ

ಕಾಂಗ್ರೆಸ್ ಗೆ ಕಾಮನ್ ಸೆನ್ಸ್ ಇಲ್ಲ – ಬಿಜೆಪಿ

Published

on

ಬೆಂಗಳೂರು : ಜನೆವರಿ 13 (ಯು.ಎನ್.ಐ.) ಕೋವಿಡ್ ಹೆಚ್ಚಳದ ಸಂದರ್ಭದಲ್ಲಿ ಪಾದಯಾತ್ರೆ ಮಾಡುತ್ತಿರುವ ಕಾಂಗ್ರೆಸ್ ಗೆ ಕಾಮನ್ ಸೆನ್ ಇಲ್ಲ ಎಂದು ಬಿಜೆಪಿ ನಾಯಕರು ಟೀಕೆ ಮಾಡಿದ್ದಾರೆ.

ರಾಜ್ಯ ಬಿಜೆಪಿ ಕಚೇರಿಯಲ್ಲಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಪರಿಷತ್ ಸದಸ್ಯೆ ತೇಜಸ್ವಿನಿಗೌಡ ಸುದ್ದಿಗೋಷ್ಠಿ ನಡೆಸಿ, ಸಿಎಂ ಕುರ್ಚಿಯ ಸ್ಪರ್ಧೆಯಲ್ಲಿ ಕಾಂಗ್ರೆಸ್ ನವರು ಪಾದಯಾತ್ರೆ ಮಾಡ್ತಿದ್ದಾರೆ. ಕೋವಿಡ್ ಹೆಚ್ಚಳದ ಸಂದರ್ಭದಲ್ಲಿ ಪಾದಯಾತ್ರೆ ಮಾಡ್ತಿರುವ ಕಾಂಗ್ರೆಸ್ಸಿಗೆ ಕಾಮನ್ ಸೆನ್ಸ್ ಇಲ್ಲ. ಆದರಲ್ಲೂ ಡಿಕೆಶಿಗೆ ಗುಲಗಂಜಿಯಷ್ಟು ಕಾಮನ್ ಸೆನ್ಸ್ ಇಲ್ಲ. ಅಮಾನವೀಯವಾಗಿ ನಡೆದುಕೊಳ್ತಿದ್ದಾರೆ ಎಂದರು.

ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಬಹಳಷ್ಟು ಜನರಿಗೆ ಕೊರೊನಾ ಬಂದಿದೆ. ರಾಮನಗರದಲ್ಲಿ 100 ಜನಕ್ಕೆ ಟೆಸ್ಟ್ ಮಾಡಿದ್ರೆ 30 ಜನರಿಗೆ ಪಾಸಿಟಿವ್ ಬರ್ತಿದೆ. ಇದು ಪಾದಯಾತ್ರೆ ಅಲ್ಲ.. ಕೊರೊನಾ ಜಾತ್ರೆ ಇದು. ಡಿಕೆಶಿ ಸಿಎಂ ಮಾಡಲು, ಡಿಕೆಶಿ ಬೇಳೆ ಬೇಯಿಸಲು ಕಾಂಗ್ರೆಸ್ ಹೈಕಮಾಂಡ್ ಕೂಡ ಇದಕ್ಕೆ ಬೆಂಬಲ ಕೊಟ್ಟಿದೆ. ಸಿದ್ದರಾಮಯ್ಯ ಕೂಡ ಸಂವಿಧಾನದ ಬಗ್ಗೆ ಮಾತಾಡ್ತಾರೆ. ಡಿಕೆಶಿ ಪಕ್ಕದಲ್ಲಿ ಹೋಗಿ ನಿಲ್ತಾರೆ. ಇದು ಕುರ್ಚಿಯ ಯಾತ್ರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಮಾತನಾಡಿದ ಪರಿಷತ್ ಸದಸ್ಯೆ ತೇಜಸ್ವಿನಿಗೌಡ, ಸ್ವಾರ್ಥಕ್ಕಾಗಿ, ಮುಂದಿನ ಚುನಾವಣೆ ಲಾಭಕ್ಕಾಗಿ ಮೇಕೆದಾಟು ಹೋರಾಟ ಇವರದ್ದು, ಕೊರೊನಾ ಜಾತ್ರೆ ಹಬ್ಬಿಸ್ತಿದ್ದಾರೆ. ಡಿಕೆಶಿಗೆ ಆರೋಗ್ಯ ಸರಿ ಇಲ್ಲ, ನಿತ್ರಾಣರಾಗಿ ಕಾಣ್ತಿದ್ದಾರೆ. ಸಿದ್ದರಾಮಯ್ಯ ಹುಷಾರಿಲ್ಲದೆ ಬೆಂಗಳೂರಿಗೆ ಬಂದು ಬಂದು ಹೋಗ್ತಿದ್ದಾರೆ. ಜನ ಅಗತ್ಯ ವಸ್ತುಗಳನ್ನ ತರಲು ಕಷ್ಟಪಡ್ತಿದ್ದಾರೆ, ಆದ್ರೆ ಇವರು ಪಾದಯಾತ್ರೆ ಮಾಡ್ತಿದ್ದಾರೆ. ಬೇರೆಯವರ ಜೀವ ತೆಗೆಯುವ ಹಕ್ಕು ಇವರಿಗೆ ಇಲ್ಲ. ಕುಂಭಮೇಳದ ಬಗ್ಗೆ ಬೊಬ್ಬೆ ಹಾಕಿದ್ರು. ಈಗ ಯಾವ ಮೇಳ ಮಾಡ್ತಿದ್ದಾರೆ ಇವರು.. ಕೊರೊನಾ ಮೇಳ ಇವರದ್ದು, ರಾಲಿ ನಿಗ್ರಹ ಮಾಡಲೇಬೇಕು. ಸರಕಾರ ಬಲಪ್ರಯೋಗ ಮಾಡಿ ಪಾದಯಾತ್ರೆ ತಡೆದು ಜನರ ಜೀವ ಉಳಿಸಬೇಕು. ಹೋಂ ಮಿನಿಸ್ಟರ್ ಮಾಡಿರೋದು ಮಲ್ಲಯುದ್ಧಕ್ಕೆ ಅಲ್ಲ. ಅವರು ಏನ್ ಮಾಡಬೇಕು ಅದನ್ನ ಮಾಡ್ತಾರೆ ಎಂದು ತಿಳಿಸಿದರು.

ಕರ್ನಾಟಕ

ಇಡೀ ವರ್ಷ ಸುಭಾಷ್ ಚಂದ್ರಬೋಸ್ ಜನ್ಮದಿನಾಚರಣೆಗೆ ತೀರ್ಮಾನ: ಸಿಎಂ

Published

on

ಬೆಂಗಳೂರು : ಜನೆವರಿ 23 (ಯು.ಎನ್.ಐ.) ರಾಜ್ಯ ಸರ್ಕಾರದ ವತಿಯಿಂದ ವರ್ಷವಿಡೀ ನೇತಾಜಿ ಸುಭಾಷ್ ಚಂದ್ರಬೋಸ್ ರವರ 125ನೇ ಜನ್ಮ ದಿನಾಚರಣೆಯನ್ನ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.  ಭಾರತದ ಸ್ವತಂತ್ರ್ಯಕ್ಕೆ ಬಹಳ ದೊಡ್ಡ ಬುನಾದಿ ಹಾಕಿಕೊಟ್ಟ ಮಹಾನ್ ನಾಯಕ ನೇತಾಜಿ ಸುಭಾಷ್ ಚಂದ್ರ ಭೋಸ್ ಅವರ 125 ನೇ ಜನ್ಮ ದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ವಿಧಾನಸೌಧ ಆವರಣದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಬಳಿಕ ಮಾತನಾಡಿದ ಅವರು, ರಾಜ್ಯ ಸರ್ಕಾರದ ವತಿಯಿಂದ ವರ್ಷವಿಡೀ ನೇತಾಜಿ ಅವರ 125ನೇ ಜನ್ಮ ದಿನಾಚರಣೆಯನ್ನ ವಿಚಾರಧಾರೆಯ ಮೂಲಕ, ಚರ್ಚೆಗಳ ಮೂಲಕ, ವಿಮರ್ಶೆಗಳ ಮೂಲಕ ಸ್ಮರಣೆ ಮಾಡುವ ಮೂಲಕ ಆಚರಣೆ ಮಾಡಲಿದ್ದೇವೆ ಎಂದರು.

ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಹೋರಾಟ ಮಾಡಿದ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನೋತ್ಸವದ ಅಂಗವಾಗಿ ಮುಖ್ಯಮಂತ್ರಿಗಳು ಪ್ರತಿಜ್ಞಾವಿಧಿ ಬೋಧಿಸಿದರು. ಬ್ರಿಟೀಷರ ವಿರುದ್ದ ಸೈನ್ಯವನ್ನ ಕಟ್ಟಿ ಹೋರಾಟ ಮಾಡಿದ ಅಪ್ರತಿಮ ವೀರ ಸುಭಾಷ್ ಚಂದ್ರಭೋಸ್. ಯುವಕರಿಗೆ ಪ್ರೇರಣೆಕೊಟ್ಟದ್ದು. ನೀವು ನನಗೆ ರಕ್ತ ಕೊಡಿ ನಾನು ನಿಮಗೆ ಸ್ವತಂತ್ರ್ಯಕೊಡಿಸುತ್ತೇನೆ ಎಂದು ಯುವಕರನ್ನ ಉತ್ಸಾಹಿಸಿ ಸೈನ್ಯಕಟ್ಟಿ ಹೋರಾಡಿದ ಸೇನಾನಿ ಎಂದು ಅವರ ಸಾಧನೆಯನ್ನ ಸ್ಮರಿಸಿದರು.

Continue Reading

ಕರ್ನಾಟಕ

ನ್ಯಾಯಮೂರ್ತಿ ಕೆ ಎಲ್. ಮಂಜುನಾಥ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

Published

on

ಬೆಂಗಳೂರು: ಜನವರಿ 23 (ಯು.ಎನ್.ಐ.)  ಕರ್ನಾಟಕ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

ನ್ಯಾಯಮೂರ್ತಿ ಮಂಜುನಾಥ್ ಅವರು ಅತ್ಯುತ್ತಮ ವಕೀಲರಾಗಿ, ವಕೀಲರ ಸಂಘದ ಅಧ್ಯಕ್ಷರಾಗಿ, ಹೈಕೋರ್ಟ್ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯದ ನದಿ ನೀರು ಮತ್ತು ಗಡಿ ವಿವಾದ ಪ್ರಾಧಿಕಾರದ ಅಧ್ಯಕ್ಷರಾಗಿ, ಆಂಧ್ರ ಪ್ರದೇಶದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಸಲ್ಲಿಸಿದ ಸೇವೆ ಅವಿಸ್ಮರಣೀಯವಾದದ್ದು ಎಂದು ಸಿಎಂ ಮೃತ ಗಣ್ಯರ ಸಾಧನೆಗಳನ್ನು ಸ್ಮರಿಸಿದ್ದಾರೆ.

ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬದವರು ಹಾಗೂ ಹಿತೈಷಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Continue Reading

ಕರ್ನಾಟಕ

ನಿವೃತ್ತ ಹೈಕೋರ್ಟ್‌ ನ್ಯಾಯಮೂರ್ತಿ ಕೆ.ಎಲ್.‌ ಮಂಜುನಾಥ್‌ ವಿಧಿವಶ

Published

on

By

ಬೆಂಗಳೂರು, ಜ 23 (ಯುಎನ್‌ ಐ) ರಾಜ್ಯ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್ ಶನಿವಾರ ತಡರಾತ್ರಿ ಹೃದಯಾಘಾತದಿಂದ ನಗರದ ನಿವಾಸದಲ್ಲಿ ವಿಧಿವಶರಾಗಿದ್ದಾರೆ.

ಬೆಂಗಳೂರಿನ ಕಾಮಾಕ್ಷಿಪಾಳ್ಯ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 12 ಗಂಟೆವರೆಗೆ ಪಾರ್ಥಿವ ಶರೀರದ ಅಂತಿಮ ದರ್ಶನ ಇರಲಿದ್ದು, ಮಧ್ಯಾಹ್ನ 3 ಗಂಟೆಗೆ ನೆಲಮಂಗಲದ ತೋಟದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ಹೇಳಿವೆ.

ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್ ಅವರು 1974ರ ಸೆ.13 ರಂದು ರಾಜ್ಯ ಹೈಕೋರ್ಟ್‌ ನಲ್ಲಿ ವಕೀಲ ವೃತ್ತಿ ಆರಂಭಿಸಿದ್ದರು. 2000ರ ಡಿ.11 ರಂದು ಕರ್ನಾಟಕ ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಯಾಗಿ, 2001ರ ಅ. 27 ರಂದು ಖಾಯಂ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು

Continue Reading
Advertisement
ಕ್ರೀಡೆ16 mins ago

ಅಂಕುಶ್ ರಘುವಂಶಿ ಟೀಂ ಇಂಡಿಯಾದ ಉದಯೋನ್ಮುಖ ತಾರೆ!

ಹೊಸದಿಲ್ಲಿ: ಜನೆವರಿ 23 (ಯು.ಎನ್.ಐ.) ಅಂಡರ್ 19 ವರ್ಲ್ಡ್ ಕಪ್ ಮೂಲಕ ಭಾರತ ಕ್ರಿಕೆಟ್ ತಂಡಕ್ಕೆ ಮತ್ತೊಬ್ಬ ಉದಯೋನ್ಮುಖ ಆಟಗಾರ ದೊರೆತಿದ್ದಾರೆ. ಅವರೇ ದೆಹಲಿ ಮೂಲದ ಅಂಕುಶ್...

ಅಂಕಣ1 hour ago

ಎಳವೆಯಿಂದ ರಂಗಭೂಮಿ

ನಾದಾಂಕಣ – ಡಾ. ನಾ. ದಾಮೋದರ ಶೆಟ್ಟಿ ಭಾರತೀಯ ಹಾಗೂ ಗ್ರೀಕ್‌ ರಂಗಭೂಮಿಗೆ ಬಹುದೊಡ್ಡ ಪರಂಪರೆಇದೆ ಎನ್ನುವುದು ಸಾರ್ವಕಾಲಿಕ ಸತ್ಯ. ಆದರೆ ಯುರೋಪಿನ ರಂಗಭೂಮಿಯಾಗಲೀ ರಷ್ಯಾ, ಅಮೇರಿಕಾ...

ದೇಶ1 hour ago

ಅರುಣಾಚಲದಿಂದ ನಾಪತ್ತೆಯಾಗಿದ್ದ ಯುವಕ ಚೀನಾ ಗಡಿಯಲ್ಲಿ ಪತ್ತೆ!

ಹೊಸದಿಲ್ಲಿ: ಜನೆವರಿ 23 (ಯು.ಎನ್.ಐ.) ಅರುಣಾಚಲ ಪ್ರದೇಶದಿಂದ ನಾಪತ್ತೆಯಾಗಿದ್ದ ಭಾರತೀಯ ಯುವಕ ಚೀನಾ ಗಡಿಯಲ್ಲಿ ಪತ್ತೆಯಾಗಿದ್ದಾನೆ. ಈ ಬಗ್ಗೆ ಚೀನಾ ಸೈನಿಕರು ಭಾರತೀಯ ಯೋಧರಿಗೆ ಮಾಹಿತಿ ನೀಡಿದ್ದು,...

ಹಣಕಾಸು2 hours ago

ಕೆಲಸ ಬದಲಾಯಿಸಿದ್ದೀರಾ? ಚಿಂತೆ ಬಿಡಿ.. ನಿಮ್ಮ ನೆರವಿಗೆ ಇದೆ ಇಪಿಎಫ್ಒ!

ಬೆಂಗಳೂರು: ಜನೆವರಿ 23 (ಯು.ಎನ್.ಐ.) ಉತ್ತಮ ಸಂಬಳ, ಭದ್ರತೆಯುಳ್ಳ ನೌಕರಿ, ವಿಶೇಷ ಸವಲತ್ತುಗಳು.. ಹೀಗೆ ನಾನಾ ಉದ್ದೇಶಗಳಿಂದ ಉದ್ಯೋಗಿಗಳು ತಮ್ಮ ಕೆಲಸವನ್ನು ಬದಲಾಯಿಸುತ್ತಾ ಇರುತ್ತಾರೆ. ಇಂತಹ ಸಂದರ್ಭದಲ್ಲಿ...

ದೇಶ2 hours ago

ನೇತಾಜಿ ಸುಭಾಷ್ ಚಂದ್ರ ಬೋಸ್ ಜಯಂತಿ… ದೇಶಾದ್ಯಂತ ಪರಾಕ್ರಮ ದಿನವಾಗಿ ಆಚರಣೆ

ನವದೆಹಲಿ, ಜ ೨೩( ಯುಎನ್ ಐ) ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ೧೨೫ನೇ ಜನ್ಮಜಯಂತಿ ಇಂದು. ದೇಶಾದ್ಯಂತ ಪರಾಕ್ರಮ ದಿನವಾಗಿ ನೇತಾಜಿ...

ಕರ್ನಾಟಕ3 hours ago

ಇಡೀ ವರ್ಷ ಸುಭಾಷ್ ಚಂದ್ರಬೋಸ್ ಜನ್ಮದಿನಾಚರಣೆಗೆ ತೀರ್ಮಾನ: ಸಿಎಂ

ಬೆಂಗಳೂರು : ಜನೆವರಿ 23 (ಯು.ಎನ್.ಐ.) ರಾಜ್ಯ ಸರ್ಕಾರದ ವತಿಯಿಂದ ವರ್ಷವಿಡೀ ನೇತಾಜಿ ಸುಭಾಷ್ ಚಂದ್ರಬೋಸ್ ರವರ 125ನೇ ಜನ್ಮ ದಿನಾಚರಣೆಯನ್ನ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ...

ಅಂಕಣ3 hours ago

ಸ್ವಾತಂತ್ರ್ಯಕ್ಕಿಂತ ದೊಡ್ಡದು ಇನ್ಯಾವುದಿದೆ ?

‌ಅಂಕಣ: ದಿಟನುಡಿ -೩ ಕಳೆದ ವಾರ ನನ್ನ ಕೈರೋಪ್ರಾಕ್ಟರ್ ರೇ ಬಳಿ ಹೋಗಿದ್ದೆ. ಏಕೋ ಗೊತ್ತಿಲ್ಲ ಕೆಲ ದಿನಗಳ ಹಿಂದೆ ಸೊಂಟ ಹಿಡಿದಿತ್ತು. ಏಳಲು, ಕೂರಲು, ನಿಲ್ಲಲು...

ದೇಶ3 hours ago

ಪಂಜಾಬ್ ಚುನಾವಣೆ: ಕೆಂಪು ಕೋಟೆ ಹಿಂಸಾಚಾರದ ಆರೋಪಿಗೆ ರೈತ ಸಂಘಟನೆಯಿಂದ ಟಿಕೆಟ್!

ಚಂಡೀಗಢ: ಜನೆವರಿ 23 (ಯು.ಎನ್.ಐ.) ರೈತರ ಸಂಘಟನೆ ಯುನೈಟೆಡ್ ಸಮಾಜ ಮೋರ್ಚಾ ಪಂಜಾಬ್ ವಿಧಾನಸಭಾ ಚುನಾವಣೆಗೆ 35 ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಮಾಜಿ...

ಕರ್ನಾಟಕ3 hours ago

ನ್ಯಾಯಮೂರ್ತಿ ಕೆ ಎಲ್. ಮಂಜುನಾಥ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಬೆಂಗಳೂರು: ಜನವರಿ 23 (ಯು.ಎನ್.ಐ.)  ಕರ್ನಾಟಕ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. ನ್ಯಾಯಮೂರ್ತಿ ಮಂಜುನಾಥ್ ಅವರು...

ಅಂಕಣ4 hours ago

ಸ್ವಾತಂತ್ರ್ಯ ಕೇವಲ ಮನುಷ್ಯನ ಹಕ್ಕೆ?

ಅ‌ಂಕಣ- ಖಚಿತ ನೋಟ ಹೆಸರಾಂತ ಪ್ರಾಣಿಹಕ್ಕುಗಳ ಪ್ರತಿಪಾದಕ, ಪೀಟರ್ ಸಿಂಗರ್ ಹೇಳುವಂತೆ, ಮನುಷ್ಯ ತನ್ನ ಇತಿಹಾಸದಲ್ಲಿ ಮಾಡಿರುವ ಜಾತಿ ಮತ್ತು ಲಿಂಗ ಆಧಾರಿತ ಶೋಷಣೆಯ ಬಗ್ಗೆ ಇಂದು...

ಟ್ರೆಂಡಿಂಗ್

Share