Connect with us


      
ರಾಜಕೀಯ

ಯುಪಿ ಚುನಾವಣೆ: ಕಾಂಗ್ರೆಸ್ ಮೊದಲ ಅಭ್ಯರ್ಥಿ ಪಟ್ಟಿಯಲ್ಲಿ ಉನ್ನಾವೋ ಅತ್ಯಾಚಾರ ಸಂತ್ರಸ್ತೆ ತಾಯಿಗೆ ಸ್ಥಾನ

Published

on

ಯುಪಿ ಚುನಾವಣೆ: ಕಾಂಗ್ರೆಸ್ ಮೊದಲ ಅಭ್ಯರ್ಥಿ ಪಟ್ಟಿಯಲ್ಲಿ ಉನ್ನಾವೋ ಅತ್ಯಾಚಾರ ಸಂತ್ರಸ್ತೆ ತಾಯಿಗೆ ಸ್ಥಾನ

ಲಕ್ನೋ: ಜನೆವರಿ 13 (ಯು.ಎನ್.ಐ.) ಉತ್ತರಪ್ರದೇಶ ವಿಧಾನಸಭಾ ಚುನಾವಣೆ ಕಾವು ದಿನೇ ದಿನೇ ಹೆಚ್ಚಾಗುತ್ತಿದ್ದು, ಪ್ರತಿಯೊಂದು ಪಕ್ಷಗಳು ತಮ್ಮ ಅಭ್ಯರ್ಥಿಗಳ ನಹೆಸರನ್ನು ಅಂತಿಮಗೊಳಿಸುವಲ್ಲಿ ನಿರತರಾಗಿದ್ದಾರೆ.

ಬಿಜೆಪಿ ಇನ್ನು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ. ಸಮಾಜವಾದಿ ಪಕ್ಷವು ಯಾವುದೇ ಕುರುಹು ಬಿಟ್ಟುಕೊಟ್ಟಿಲ್ಲ. ಇದೀಗ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಉನ್ನಾವೋ ಅತ್ಯಾಚಾರ ಸಂತ್ರಸ್ತೆ ತಾಯಿಯನ್ನು ಕಾಂಗ್ರೆಸ್ ಸ್ಪರ್ಧಿಯಾಗಿ ನಾಮನಿರ್ದೇಶನ ಮಾಡಿದೆ.

ಪಕ್ಷವು ಇಂದು ಬಿಡುಗಡೆ ಮಾಡಿದ 125 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಉನ್ನಾವೋ ಸಂತ್ರಸ್ತೆಯ ತಾಯಿ ಆಶಾ ಸಿಂಗ್ ಹೆಸರು ಕೂಡ ಇದೆ.

ಈ ಬಗ್ಗೆ ಮಾತನಾಡಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, 125 ಅಭ್ಯರ್ಥಿಗಳಲ್ಲಿ ಶೇಕಡಾ 40ರಷ್ಟು ಮಹಿಳೆಯರು ಮತ್ತು ಶೇಕಡಾ 40 ರಷ್ಟು ಯುವಕರು ಇರಲಿದ್ದಾರೆ. ಯುಪಿ ಚುನಾವಣೆಗೆ 125 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿ ಆಶಾ ಸಿಂಗ್ ಸೇರಿದಂತೆ 50 ಮಹಿಳಾ ಅಭ್ಯರ್ಥಿಗಳಿದ್ದಾರೆ. ಗೌರವಧನ ಹೆಚ್ಚಳಕ್ಕಾಗಿ ಆಂದೋಲನದ ನೇತೃತ್ವ ವಹಿಸಿದ್ದ ಆಶಾ ಕಾರ್ಯಕರ್ತೆ ಪೂನಂ ಪಾಂಡೆಯನ್ನು ಶಹಜಹಾನ್‍ಪುರದಿಂದ ಕಣಕ್ಕಿಳಿಸಿದ್ದೇವೆ ಎಂದು ಹೇಳಿದ್ದಾರೆ.

ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ನಿವಾಸದ ಹೊರಗೆ ಪೊಲೀಸರ ನಿಷ್ಕ್ರಿಯತೆಯ ವಿರುದ್ಧ ಪ್ರತಿಭಟಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. 2019ರಲ್ಲಿ, ಬಿಜೆಪಿಯ ಉಚ್ಛಾಟಿತ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ 2017ರಲ್ಲಿ ಹದಿಹರೆಯದ ಹುಡುಗಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದರು.

ಕುಲದೀಪ್ ಸೆಂಗಾರ್ ವಿರುದ್ಧದ ಆರೋಪಗಳು ಮುನ್ನೆಲೆಗೆ ಬಂದ ಕೂಡಲೇ ಅತ್ಯಾಚಾರ ಸಂತ್ರಸ್ತೆ ತಂದೆಯನ್ನು ಶಸ್ತ್ರಾಸ್ತ್ರ ಕಾಯ್ದೆಯಡಿ ಬಂಧಿಸಲಾಯಿತು. ಆಪಾದಿತ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದರು. 2020 ರಲ್ಲಿ, ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಸಾವಿಗೆ ಸಂಬಂಧಿಸಿದಂತೆ ಕುಲದೀಪ್ ಸಿಂಗ್ ಸೆಂಗಾರ್‍ಗೆ ಹತ್ತು ವರ್ಷಗಳ ಜೈಲು ಶಿಕ್ಷೆ ಮತ್ತು 10 ಲಕ್ಷ ರೂಪಾಯಿ ದಂಡ ವಿಧಿಸಲಾಯಿತು.

ರಾಜಕೀಯ

ಭಾರತದ ಅತಿ ಎತ್ತರ ವ್ಯಕ್ತಿ ಧರ್ಮೇಂದ್ರ ಪ್ರತಾಪ್ ಸಿಂಗ್ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ

Published

on

ಲಕ್ನೋ: ಜನೆವರಿ 22 (ಯು.ಎನ್.ಐ.) ಭಾರತದ ಅತಿ ಎತ್ತರದ ವ್ಯಕ್ತಿ ಧರ್ಮೇಂದ್ರ ಪ್ರತಾಪ್ ಸಿಂಗ್ ಶನಿವಾರ ಸಮಾಜವಾದಿ ಪಕ್ಷ (SP) ಗೆ ಸೇರ್ಪಡೆಗೊಂಡಿದ್ದಾರೆ.

ಉತ್ತರ ಪ್ರದೇಶದ ಪ್ರತಾಪ್‌ಗಢ್ ಜಿಲ್ಲೆಯ ನರಹರ್ ಪುರ ಕಾಸಿಯಾಹಿ ಗ್ರಾಮದ ನಿವಾಸಿಯಾದ ಸಿಂಗ್ ಧರ್ಮೇಂದ್ರ ಪ್ರತಾಪ್ ಅವರನ್ನು ಎಸ್ಪಿಯ ರಾಜ್ಯಾಧ್ಯಕ್ಷ ನರೇಶ್ ಪಟೇಲ್ ಪಕ್ಷಕ್ಕೆ ಬರಮಾಡಿಕೊಂಡರು. ಅಖಿಲೇಶ್ ಯಾದವ್ ಸೇರಿದಂತೆ ಪಕ್ಷದ ನಾಯಕರೊಂದಿಗೆ ಧರ್ಮೇಂದ್ರ ಪ್ರತಾಪ್ ಸಿಂಗ್ ಇರುವ ಫೋಟೋವನ್ನು ಪಕ್ಷವು ಹಂಚಿಕೊಂಡಿದ್ದಾರೆ.

ಪ್ರತಾಪ್‌ಗಢದ ಧರ್ಮೇಂದ್ರ ಪ್ರತಾಪ್ ಸಿಂಗ್ ಅವರು ಎಸ್‌ಪಿ ಪಕ್ಷದ ನೀತಿಗಳು ಮತ್ತು ಅಖಿಲೇಶ್ ಯಾದವ್ ಅವರ ನಾಯಕತ್ವದಲ್ಲಿ ಸಮಾಜವಾದಿ ಪಕ್ಷದ ಸದಸ್ಯತ್ವವನ್ನು ಪಡೆದು ಪಕ್ಷದ ಏಳಿಗೆಗಾಗಿ ದುಡಿಯುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

8 ಅಡಿ 2 ಇಂಚುಗಳಷ್ಟು ಎತ್ತರದ ವ್ಯಕ್ತಿತ್ವ, ಧರ್ಮೇಂದ್ರ ಪ್ರತಾಪ್ ಸಿಂಗ್ ಭಾರತದ ಅತಿ ಎತ್ತರದ ವ್ಯಕ್ತಿ. 46 ವರ್ಷ ವಯಸ್ಸಿನವರಾದ ಇವರು ಗಿನ್ನೆಸ್ ವಿಶ್ವ ದಾಖಲೆಗಳಲ್ಲಿ ತಮ್ಮ ಹೆಸರನ್ನು ಅಚ್ಚೊತ್ತಿದ್ದಾರೆ ಮತ್ತು ಏಷ್ಯಾದ ಅತಿ ಎತ್ತರದ ಪುರುಷ ಎಂಬ ಖ್ಯಾತಿಗೂ ಒಳಗಾಗಿದ್ದಾರೆ. ಕಳೆದ ವರ್ಷ ಏಪ್ರಿಲ್‌ನಲ್ಲಿ ಯುಪಿ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದ್ದ ಸಹವರ್ತಿ ಪರ ಪ್ರಚಾರ ಕೂಡ ಮಾಡಿದ್ದರು.

Continue Reading

ರಾಜಕೀಯ

ಮನೆ ಮನೆ ಪ್ರಚಾರ ಆರಂಭಿಸಿದ ಬಿಜೆಪಿ ಧುರೀಣ ಅಮಿತ್ ಶಾ; 300ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಭರವಸೆ

Published

on

ಲಕ್ನೋ: ಜನೆವರಿ 22 (ಯು.ಎನ್.ಐ.) ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿಯ ಹಿರಿಯ ಚುನಾವಣಾ ತಂತ್ರಗಾರ ಅಮಿತ್ ಶಾ ಅವರು ಕೈರಾನಾದಲ್ಲಿ ಪಕ್ಷದ ಅಭ್ಯರ್ಥಿ ಮೃಗಾಂಕಾ ಸಿಂಗ್ ಪರವಾಗಿ ಮನೆ ಮನೆ ಪ್ರಚಾರವನ್ನು ಪ್ರಾರಂಭಿಸುವ ಮೂಲಕ ‘ಅಬ್ ಕಿ ಬಾರ್ 300 ಪಾರ್’ (ಬಿಜೆಪಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ) ಘೋಷಣೆಯಡಿ ಮತಯಾಚಿಸಿದರು.

ಹಣ ಸುಲಿಗೆಗಾಗಿ ಸ್ಥಳೀಯರ ಬೆದರಿಕೆಯಿಂದಾಗಿ ಪಟ್ಟಣವನ್ನು ತೊರೆಯಲು ಒತ್ತಾಯಿಸಲ್ಪಟ್ಟ ಹಲವಾರು ಕುಟುಂಬಗಳನ್ನು ಷಾ ಭೇಟಿಯಾದರು.

ಪ್ರಮುಖ ಗುರ್ಜರ್ ನಾಯಕ ದಿವಂಗತ ಹುಕುಮ್ ಸಿಂಗ್ ಅವರ ಪುತ್ರಿ ಮೃಗಾಂಕಾ ಸಿಂಗ್ ಅವರು 1996 ರಿಂದ 2012 ರವರೆಗೆ ಸತತ ನಾಲ್ಕು ಅವಧಿಗೆ ಬಿಜೆಪಿಯ ಸ್ಥಾನವನ್ನು ಪ್ರತಿನಿಧಿಸಿದ್ದಾರೆ. ಕೈರಾನಾದಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಇವರ ವಿರುದ್ಧ ಸ್ಪರ್ಧಿಸಿದ್ದಾರೆ. 2017 ರಲ್ಲಿ, ಸಮಾಜವಾದಿ ಪಕ್ಷದ ನಹಿದ್ ಹಾಸನ್ ಮುಂದೆ ಮೃಗಾಂಕಾ ಸಿಂಗ್ ಸೋಲನ್ನು ಅನುಭವಿಸಿದ್ದರು. ಅವರು ಈ ವರ್ಷ ಎಸ್‌ಪಿಯಿಂದ ಮತ್ತೊಮ್ಮೆ ನಾಮನಿರ್ದೇಶನಗೊಂಡಿದ್ದಾರೆ ಆದರೆ ಪ್ರಸ್ತುತ ಕ್ರಿಮಿನಲ್ (ಗ್ಯಾಂಗ್ ಸ್ಟಾರ್ ಆಕ್ಟ) ಕಾಯಿದೆಯಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿದ್ದಾರೆ. ಇದರ ಪರಿಣಾಮವಾಗಿ, ನಹಿದ್ ತನ್ನ ಕ್ರಿಮಿನಲ್ ಹಿನ್ನಲೆಯ ಕಾರಣದಿಂದ ಸ್ಪರ್ಧಿಸಲು ವಿಫಲವಾದರೆ ಎಸ್ಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಲು ಹಾಸನದ ಸಹೋದರಿ ಇಕ್ರಾ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಕೈರಾನಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾ, ಮಿತ್ತಲ್ ಕುಟುಂಬದ 11 ಸದಸ್ಯರೊಂದಿಗೆ ಸಂವಾದ ನಡೆಸಿದ್ದೇನೆ, ಅವರು ಇನ್ನು ಮುಂದೆ ಭಯದಿಂದ ಬದುಕುವುದಿಲ್ಲ. ಕಾನೂನು ಮತ್ತು ಸುವ್ಯವಸ್ಥೆಯಿಂದಾಗಿ ಕುಟುಂಬವು ಉತ್ತರ ಪ್ರದೇಶವನ್ನು ಮೊದಲೇ ತೊರೆಯಬೇಕಾಯಿತು ಎಂದು ಅವರು ಹೇಳಿದರು.

ಉತ್ತರ ಪ್ರದೇಶದ ಜನರಲ್ಲಿರುವ ವಿಶ್ವಾಸವನ್ನು ನಾನು ನೋಡಿದೆ. ಮುಂದಿನ ದಿನಗಳಲ್ಲಿ, ಇದು ಭಾರತದ ಅತ್ಯಂತ ಅಭಿವೃದ್ಧಿ ಹೊಂದಿದ ರಾಜ್ಯವಾಗಲಿದೆ ಎಂದು ಅಮಿತ್ ಶಾ ಅವರು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಉತ್ತರಪ್ರದೇಶದಲ್ಲಿನ ಕೇಂದ್ರ ಕಲ್ಯಾಣ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಶ್ಲಾಘಿಸಿದರು.

ಯಾವುದೇ ರಾಜ್ಯವು ಅಭಿವೃದ್ಧಿ ಹೊಂದಬೇಕಾದರೆ ಕಾನೂನು ಮತ್ತು ಸುವ್ಯವಸ್ಥೆಯು ಉತ್ತಮವಾಗಿರಬೇಕು. ಯುಪಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಎತ್ತಿ ಹಿಡಿಯಬೇಕಾದರೆ, ತುಷ್ಟೀಕರಣವನ್ನು ಕೊನೆಗೊಳಿಸಬೇಕು, ಒಂದು ಜಾತಿಗಾಗಿ ಕೆಲಸ ಮಾಡುವ ಸಂಪ್ರದಾಯವನ್ನು ಕೊನೆಗೊಳಿಸಬೇಕು ಮತ್ತು ಮುಂದೆಯೂ ಸಮರ್ಪಕವಾದ ಅಭಿವೃದ್ಧಿಯಾಗಬೇಕಾದರೆ ಯುಪಿಯಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರವನ್ನು ರಚನೆಯಾಗಬೇಕು. ಯೋಗಿ ಆದಿತ್ಯನಾಥ್ ನಾಯಕತ್ವದಲ್ಲಿ 300 ಕ್ಕೂ ಹೆಚ್ಚು ಸ್ಥಾನಗಳೊಂದಿಗೆ ಬಹುಮತ ಸಾಧಿಸಬೇಕು ಎಂದು ಅಮಿತ್ ಶಾ ಹೇಳಿದರು.

ಕುಟುಂಬಗಳೊಂದಿಗಿನ ಸಭೆ ಮತ್ತು ಮನೆ-ಮನೆ ಪ್ರಚಾರದ ಸಮಯದಲ್ಲಿ, ಬಲವಂತವಾಗಿ ವಲಸೆ ಹೋಗಲಾಯಿತು. ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶದ ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ “ಸುಧಾರಣೆ” ಯಾಗಲು ಕಾರಣ ಎಂದು ಜನರು ಹೇಳಿದರು. ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 300 ಪಾರ್ (ಬಿಜೆಪಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ) ಎಂದು ಎಲ್ಲರೂ ಹೇಳುತ್ತಿದ್ದಾರೆ ಎಂದು ಶಾ ಹೇಳಿದರು.

ಮತ್ತೊಂದೆಡೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ನಗೀನಾ, ಬಿಜ್ನೋರ್ ಮತ್ತು ಮುಜಾಫರ್‌ನಗರದ ಬಿಜೆಪಿ ನಾಯಕರೊಂದಿಗೆ ಸರಣಿ ಸಭೆಗಳನ್ನು ನಡೆಸಿದರೆ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಶನಿವಾರ ಅಲಿಘರ್ ಮತ್ತು ಬುಲಂದ್‌ಶಹರ್‌ನಲ್ಲಿ ಪಕ್ಷದ ಪ್ರಚಾರದ ನೇತೃತ್ವ ವಹಿಸಿಕೊಂಡರು.

Continue Reading

ರಾಜಕೀಯ

ಸಮಾಜವಾದಿ ಪಕ್ಷ, ರಾಷ್ಟ್ರೀಯ ಲೋಕ ದಳದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

Published

on

ಲಕ್ನೋ: ಜನೆವರಿ 22 (ಯು.ಎನ್.ಐ.) ಉತ್ತರ ಪ್ರದೇಶ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಈಗಾಗಲೇ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿವೆ. ಇನ್ನು ಕೆಲವು ಪಕ್ಷಗಳ ಸಚಿವರು, ಶಾಸಕರು ಬೇರೊಂದು ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ.

ಇದೀಗ ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷ, ಕಾಂಗ್ರೆಸ್, ಬಿಜೆಪಿಯ ನಡುವೆ ಪ್ರಬಲ ಪೈಪೋಟಿ ಇದೆ. ಇದರ ಮಧ್ಯೆ ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ರಾಷ್ಟ್ರೀಯ ಲೋಕ ದಳ (ಆರ್‌ಎಲ್‌ಡಿ) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಮೈತ್ರಿಕೂಟವು 36 ಹೆಸರುಗಳ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿದೆ. 29 ಅಭ್ಯರ್ಥಿಗಳ (10 ಎಸ್‌ಪಿ ಮತ್ತು 19 ಆರ್‌ಎಲ್‌ಡಿ) ಮೊದಲ ಪಟ್ಟಿಯನ್ನು ಜನವರಿ 13 ರಂದು ಬಿಡುಗಡೆ ಮಾಡಿದ್ದರೆ, 7 ಆರ್‌ಎಲ್‌ಡಿ ಅಭ್ಯರ್ಥಿಗಳ ಎರಡನೇ ಪಟ್ಟಿ ಜನವರಿ 15 ರಂದು ಬಿಡುಗಡೆಗೊಳಿಸಿತ್ತು.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮೈನ್‌ಪುರಿ ಜಿಲ್ಲೆಯ ಕರ್ಹಾಲ್ ಕ್ಷೇತ್ರದಿಂದ ತನ್ನ ಮೊದಲ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಘೋಷಿಸಿತು.

ಯಾದವ್ ಪ್ರಸ್ತುತ ಅಜಂಗಢದಿಂದ ಲೋಕಸಭಾ ಸಂಸದರಾಗಿದ್ದಾರೆ. 2012ರಲ್ಲಿ ಯಾದವ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾದಾಗ ವಿಧಾನ ಪರಿಷತ್ತಿನ ಹಾದಿ ಹಿಡಿದರು. ಕರ್ಹಾಲ್ ಅಸೆಂಬ್ಲಿ ಕ್ಷೇತ್ರವು ಉತ್ತರ ಪ್ರದೇಶ ವಿಧಾನಸಭೆಯ 403 ಕ್ಷೇತ್ರಗಳಲ್ಲಿ ಒಂದಾಗಿದೆ ಮತ್ತು ಮೈನ್‌ಪುರಿ (ಲೋಕಸಭಾ ಕ್ಷೇತ್ರ) ದ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಒಂದಾಗಿದೆ.

ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3 ಮತ್ತು 7 ರಂದು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

Continue Reading
Advertisement
ಕ್ರೀಡೆ11 mins ago

ಅಂಕುಶ್ ರಘುವಂಶಿ ಟೀಂ ಇಂಡಿಯಾದ ಉದಯೋನ್ಮುಖ ತಾರೆ!

ಹೊಸದಿಲ್ಲಿ: ಜನೆವರಿ 23 (ಯು.ಎನ್.ಐ.) ಅಂಡರ್ 19 ವರ್ಲ್ಡ್ ಕಪ್ ಮೂಲಕ ಭಾರತ ಕ್ರಿಕೆಟ್ ತಂಡಕ್ಕೆ ಮತ್ತೊಬ್ಬ ಉದಯೋನ್ಮುಖ ಆಟಗಾರ ದೊರೆತಿದ್ದಾರೆ. ಅವರೇ ದೆಹಲಿ ಮೂಲದ ಅಂಕುಶ್...

ಅಂಕಣ1 hour ago

ಎಳವೆಯಿಂದ ರಂಗಭೂಮಿ

ನಾದಾಂಕಣ – ಡಾ. ನಾ. ದಾಮೋದರ ಶೆಟ್ಟಿ ಭಾರತೀಯ ಹಾಗೂ ಗ್ರೀಕ್‌ ರಂಗಭೂಮಿಗೆ ಬಹುದೊಡ್ಡ ಪರಂಪರೆಇದೆ ಎನ್ನುವುದು ಸಾರ್ವಕಾಲಿಕ ಸತ್ಯ. ಆದರೆ ಯುರೋಪಿನ ರಂಗಭೂಮಿಯಾಗಲೀ ರಷ್ಯಾ, ಅಮೇರಿಕಾ...

ದೇಶ1 hour ago

ಅರುಣಾಚಲದಿಂದ ನಾಪತ್ತೆಯಾಗಿದ್ದ ಯುವಕ ಚೀನಾ ಗಡಿಯಲ್ಲಿ ಪತ್ತೆ!

ಹೊಸದಿಲ್ಲಿ: ಜನೆವರಿ 23 (ಯು.ಎನ್.ಐ.) ಅರುಣಾಚಲ ಪ್ರದೇಶದಿಂದ ನಾಪತ್ತೆಯಾಗಿದ್ದ ಭಾರತೀಯ ಯುವಕ ಚೀನಾ ಗಡಿಯಲ್ಲಿ ಪತ್ತೆಯಾಗಿದ್ದಾನೆ. ಈ ಬಗ್ಗೆ ಚೀನಾ ಸೈನಿಕರು ಭಾರತೀಯ ಯೋಧರಿಗೆ ಮಾಹಿತಿ ನೀಡಿದ್ದು,...

ಹಣಕಾಸು2 hours ago

ಕೆಲಸ ಬದಲಾಯಿಸಿದ್ದೀರಾ? ಚಿಂತೆ ಬಿಡಿ.. ನಿಮ್ಮ ನೆರವಿಗೆ ಇದೆ ಇಪಿಎಫ್ಒ!

ಬೆಂಗಳೂರು: ಜನೆವರಿ 23 (ಯು.ಎನ್.ಐ.) ಉತ್ತಮ ಸಂಬಳ, ಭದ್ರತೆಯುಳ್ಳ ನೌಕರಿ, ವಿಶೇಷ ಸವಲತ್ತುಗಳು.. ಹೀಗೆ ನಾನಾ ಉದ್ದೇಶಗಳಿಂದ ಉದ್ಯೋಗಿಗಳು ತಮ್ಮ ಕೆಲಸವನ್ನು ಬದಲಾಯಿಸುತ್ತಾ ಇರುತ್ತಾರೆ. ಇಂತಹ ಸಂದರ್ಭದಲ್ಲಿ...

ದೇಶ2 hours ago

ನೇತಾಜಿ ಸುಭಾಷ್ ಚಂದ್ರ ಬೋಸ್ ಜಯಂತಿ… ದೇಶಾದ್ಯಂತ ಪರಾಕ್ರಮ ದಿನವಾಗಿ ಆಚರಣೆ

ನವದೆಹಲಿ, ಜ ೨೩( ಯುಎನ್ ಐ) ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ೧೨೫ನೇ ಜನ್ಮಜಯಂತಿ ಇಂದು. ದೇಶಾದ್ಯಂತ ಪರಾಕ್ರಮ ದಿನವಾಗಿ ನೇತಾಜಿ...

ಕರ್ನಾಟಕ3 hours ago

ಇಡೀ ವರ್ಷ ಸುಭಾಷ್ ಚಂದ್ರಬೋಸ್ ಜನ್ಮದಿನಾಚರಣೆಗೆ ತೀರ್ಮಾನ: ಸಿಎಂ

ಬೆಂಗಳೂರು : ಜನೆವರಿ 23 (ಯು.ಎನ್.ಐ.) ರಾಜ್ಯ ಸರ್ಕಾರದ ವತಿಯಿಂದ ವರ್ಷವಿಡೀ ನೇತಾಜಿ ಸುಭಾಷ್ ಚಂದ್ರಬೋಸ್ ರವರ 125ನೇ ಜನ್ಮ ದಿನಾಚರಣೆಯನ್ನ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ...

ಅಂಕಣ3 hours ago

ಸ್ವಾತಂತ್ರ್ಯಕ್ಕಿಂತ ದೊಡ್ಡದು ಇನ್ಯಾವುದಿದೆ ?

‌ಅಂಕಣ: ದಿಟನುಡಿ -೩ ಕಳೆದ ವಾರ ನನ್ನ ಕೈರೋಪ್ರಾಕ್ಟರ್ ರೇ ಬಳಿ ಹೋಗಿದ್ದೆ. ಏಕೋ ಗೊತ್ತಿಲ್ಲ ಕೆಲ ದಿನಗಳ ಹಿಂದೆ ಸೊಂಟ ಹಿಡಿದಿತ್ತು. ಏಳಲು, ಕೂರಲು, ನಿಲ್ಲಲು...

ದೇಶ3 hours ago

ಪಂಜಾಬ್ ಚುನಾವಣೆ: ಕೆಂಪು ಕೋಟೆ ಹಿಂಸಾಚಾರದ ಆರೋಪಿಗೆ ರೈತ ಸಂಘಟನೆಯಿಂದ ಟಿಕೆಟ್!

ಚಂಡೀಗಢ: ಜನೆವರಿ 23 (ಯು.ಎನ್.ಐ.) ರೈತರ ಸಂಘಟನೆ ಯುನೈಟೆಡ್ ಸಮಾಜ ಮೋರ್ಚಾ ಪಂಜಾಬ್ ವಿಧಾನಸಭಾ ಚುನಾವಣೆಗೆ 35 ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಮಾಜಿ...

ಕರ್ನಾಟಕ3 hours ago

ನ್ಯಾಯಮೂರ್ತಿ ಕೆ ಎಲ್. ಮಂಜುನಾಥ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಬೆಂಗಳೂರು: ಜನವರಿ 23 (ಯು.ಎನ್.ಐ.)  ಕರ್ನಾಟಕ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. ನ್ಯಾಯಮೂರ್ತಿ ಮಂಜುನಾಥ್ ಅವರು...

ಅಂಕಣ3 hours ago

ಸ್ವಾತಂತ್ರ್ಯ ಕೇವಲ ಮನುಷ್ಯನ ಹಕ್ಕೆ?

ಅ‌ಂಕಣ- ಖಚಿತ ನೋಟ ಹೆಸರಾಂತ ಪ್ರಾಣಿಹಕ್ಕುಗಳ ಪ್ರತಿಪಾದಕ, ಪೀಟರ್ ಸಿಂಗರ್ ಹೇಳುವಂತೆ, ಮನುಷ್ಯ ತನ್ನ ಇತಿಹಾಸದಲ್ಲಿ ಮಾಡಿರುವ ಜಾತಿ ಮತ್ತು ಲಿಂಗ ಆಧಾರಿತ ಶೋಷಣೆಯ ಬಗ್ಗೆ ಇಂದು...

ಟ್ರೆಂಡಿಂಗ್

Share