Connect with us


      




ಕರ್ನಾಟಕ

ಕಾಂಗ್ರೆಸ್ ಪಾದಯಾತ್ರೆ ನಿಲ್ಲಿಸದಿದ್ದರೆ ಕಠಿಣ ಕ್ರಮಕೈಗೊಳ್ಳಿ – ಕುಮಾರಸ್ವಾಮಿ

Published

on

ಬೆಂಗಳೂರು : ಜನೆವರಿ 12 (ಯು.ಎನ್.ಐ.) ಮೇಕೆದಾಟು ಹೆಸರಿನಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಯ ಬಗ್ಗೆ ಬಗ್ಗೆ ರಾಜ್ಯ ಹೈಕೋರ್ಟ್ ಛೀಮಾರಿ ಹಾಕಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕೂಡಲೇ ಪಾದಯಾತ್ರೆ ನಿಲ್ಲಿಸಬೇಕು. ಒಂದು ವೇಳೆ ಅವರು ನಿಲ್ಲಿಸದಿದ್ದರೆ ಸರಕಾರವೇ ಕಠಿಣ ಕ್ರಮ ಕೈಗೊಂಡು ತಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ.

ಕೋವಿಡ್ ಸೋಂಕು ಎಲ್ಲೆಲ್ಲೂ ವಿಜೃಂಭಿಸುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಜನರ ಆರೋಗ್ಯ-ಜೀವದ ಲೆಕ್ಕವಿಲ್ಲದ ರಾಜಕೀಯಕ್ಕಾಗಿ ಈ ಯಾತ್ರೆ ಕೈಗೊಂಡಿದೆ ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು ಕಾಂಗ್ರೆಸ್ ಮೇಲೆ ಟೀಕಾಪ್ರಹಾರ ನಡೆಸಿದ್ದಾರೆ. ಟ್ವೀಟ್ʼನ ಸಾರಾಂಶ ಹೀಗಿದೆ.

ಮೇಕೆದಾಟು ಪಾದಯಾತ್ರೆಯನ್ನು ʼಒಮೈಕ್ರಾನ್ ಜಾತ್ರೆʼಯನ್ನಾಗಿ ಪರಿವರ್ತಿಸಿದ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯ ಹೈಕೋರ್ಟ್ ಛೀಮಾರಿ ಹಾಕಿದೆ. ಸೋಂಕಿನ ಬಗ್ಗೆ ನಿರ್ಲಕ್ಷ್ಯ ತೋರಿದ ಸರಕಾರಕ್ಕೂ ಚಾಟಿ ಬೀಸಿದೆ. ಸರಕಾರವು ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ನೀರಿನ ಹೆಸರಿನಲ್ಲಿ ನಡೆಯುತ್ತಿರುವ ಈ ಸರ್ಕಸ್ ನಿಲ್ಲಿಸಬೇಕು.

ರಾಜ್ಯವ್ಯಾಪಿ ಕೋವಿಡ್ ವಿಜೃಂಭಿಸುತ್ತಿದೆ. ಸೋಂಕು ವೇಗವಾಗಿ ಹರಡುತ್ತಿದೆ. ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಅನೇಕ ನಾಯಕರಿಗೆ ಪಾಸಿಟವ್ ಆಗಿ ಅವರು ಆಸ್ಪತ್ರೆ ಸೇರಿಕೊಳ್ಳುತ್ತಿದ್ದಾರೆ. ಪರೀಕ್ಷೆ ನಡೆಸಿದರೆ ದೊಡ್ಡ ಸಂಖ್ಯೆಯ ಜನರು ಸೋಂಕಿತರಾಗಿರುವುದು ಪತ್ತೆಯಾಗುತ್ತದೆ.

ನ್ಯಾಯಾಲಯದಿಂದ ಮತ್ತೆ ಛೀಮಾರಿ ಹಾಕಿಸಿಕೊಳ್ಳುವುದು ಬೇಡ. ಪರಿಸ್ಥಿತಿ ಕೈಮೀರಿದೆ. ಎಚ್ಚರ ತಪ್ಪಿದರೆ ಇರುವ ಆಸ್ಪತ್ರೆಗಳು, ವೈದ್ಯ ವ್ಯವಸ್ಥೆ ಸಾಲುವುದಿಲ್ಲ. ಕಳೆದ 4 ದಿನಗಳಿಂದ ಬಸ್ಸುಗಳಲ್ಲಿ ಜನರನ್ನು ಕರೆಸಿಕೊಂಡು ನಡೆಸುತ್ತಿರುವ ಈ ಜಾತ್ರೆಯಿಂದ ಮೇಕೆದಾಟು ಸಾಕಾರ ಅಸಾಧ್ಯ. ಇದು ʼಸೋಂಕಿನ ಸಮಾರಾಧನೆʼಯಷ್ಟೇ!

ಮೇಕೆದಾಟು ಬಗ್ಗೆ ಏನೇನು ಮಾಡಲಾಗಿದೆ ಎಂದು ಸರಕಾರ ಜಾಹೀರಾತು ನೀಡಿದೆ. ಬಿಜೆಪಿ-ಕಾಂಗ್ರೆಸ್ ಪಕ್ಷಗಳೂ ಜಾಹೀರಾತು ಕೊಟ್ಟುಕೊಂಡು ಸಮಜಾಯಿಷಿ ನೀಡಿವೆ. ಯಾವುದು ಸತ್ಯ? ಯಾವುದು ಸುಳ್ಳು? ಎನ್ನುವ ಲೆಕ್ಕವನ್ನು ನಾನು ಜನರ ಮುಂದೆ ಇಡುತ್ತೇನೆ. 1924ರಿಂದ ಕಾವೇರಿ ವಿಷಯದಲ್ಲಿ ಏನೆಲ್ಲಾ ನಡೆಯಿತು? ರಾಜ್ಯಕ್ಕೆಷ್ಟು ಅನ್ಯಾಯ ಆಯಿತು ಎಂಬುದನ್ನು ಮುಂದೆ ಚರ್ಚೆ ಮಾಡುತ್ತೇನೆ.

ಕಾಂಗ್ರೆಸ್ ಪಾದಯಾತ್ರೆಯಿಂದ ನಮ್ಮ ಪಕ್ಷಕ್ಕೇನು ಆತಂಕವಿಲ್ಲ. ಆದರೆ ಜನ ಆರೋಗ್ಯದ ಆತಂಕದಲ್ಲಿದ್ದಾರೆ. ಹಾಗಂತ, ಇವರ ಯಾತ್ರೆ ಬಗ್ಗೆ ಅಥವಾ ನಾಡಿನ ಪರ ದನಿಯೆತ್ತುವ ಬಗ್ಗೆ ನನ್ನ ತಕರಾರಿಲ್ಲ. ಆದರೆ, ಕೋವಿಡ್ ಅಟ್ಟಹಾಸದ ಹೊತ್ತಿನಲ್ಲಿ ಇದು ಖಂಡಿತಾ ಬೇಕಿರಲಿಲ್ಲ.

ಗಾಂಧೀಜಿ ಅವರ ಪಾದಯಾತ್ರೆ ಬಗ್ಗೆ ಓದಿದ್ದೇನೆ. ವಿನೋಬಾ ಭಾವೆ ಅವರ ಪಾದಯಾತ್ರೆ ಬಗ್ಗೆ ಅರಿತಿದ್ದೇನೆ. ದೇವೇಗೌಡರ ಪಾದಪಾತ್ರೆಯನ್ನು ಕಣ್ಣಾರೆ ಕಂಡಿದ್ದೇನೆ. ಆದರೆ, ಇಂಥ ʼಹೈಟೆಕ್ ಪಾದಯಾತ್ರೆʼಯನ್ನು ನೋಡಿರಲಿಲ್ಲ. ಇಂಥ ದೊಂಬರಾಟದಿಂದ ಕಾನೂನಿನ ವ್ಯಾಪ್ತಿಯಲ್ಲಿರುವ ಮೇಕೆದಾಟು ಯೋಜನೆ ಜಾರಿ ಸಾಧ್ಯವಿಲ್ಲ.

ಚುನಾವಣೆ ಹತ್ತಿರದಲ್ಲಿದೆ. ಕಾಂಗ್ರೆಸ್ ನಾಯಕರು ಪಕ್ಷದ ಸಂಘಟನೆ ಮಾಡಿಕೊಳ್ಳಲಿ. ಕೋವಿಡ್ ಇಳಿಮುಖವಾದ ನಂತರ ಅದನ್ನು ಮಾಡಲಿ. ಅದನ್ನು ಬಿಟ್ಟು ಜನರ ಜೀವದ ಜತೆ ಚೆಲ್ಲಾಟ ಆಡುವುದು ಸರಿಯಲ್ಲ. ಕಾಂಗ್ರೆಸ್ ಒಂದು ಜವಾಬ್ದಾರಿ ಪಕ್ಷವಾಗಿದ್ದರೆ ತಕ್ಷಣ ಪಾದಯಾತ್ರೆ ನಿಲ್ಲಿಸಲಿ. ಗಂಡಸ್ತನ ತೋರಿಸುವುದಕ್ಕೆ ಹೋಗಿ ʼಮೇಕೆದಾಟನ್ನು ಮಸಣʼ ಮಾಡುವುದು ಬೇಡ.

ಕಳೆದ 4 ದಿನಗಳಿಂದ ಸರಕಾರ ತೋರಿದ ಉದಾರತೆ ಸಾಕು. ಇನ್ನೂ ಔದಾರ್ಯ ತೋರಿದರೆ ರಾಜ್ಯದ ಅವನತಿಗೆ ದಾರಿಯಾದೀತು. ಕೋವಿಡ್ ನಿಯಮ ಪಾಲಿಸುವಂತೆ ಜನರಿಗೆ ಹಿಂಸೆ ಕೊಟ್ಟು, ರಾಜಕಾರಣಿಗಳಿಗೆ ವಿನಾಯಿತಿ ಕೊಡುವುದು ಉತ್ತಮ ಆಡಳಿತದ ಲಕ್ಷಣವಲ್ಲ. ಸರಕಾರ ಕೆಚ್ಚೆದೆಯ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯ ಮಾಡಿದ್ದಾರೆ.

ಕರ್ನಾಟಕ

ಇಡೀ ವರ್ಷ ಸುಭಾಷ್ ಚಂದ್ರಬೋಸ್ ಜನ್ಮದಿನಾಚರಣೆಗೆ ತೀರ್ಮಾನ: ಸಿಎಂ

Published

on

ಬೆಂಗಳೂರು : ಜನೆವರಿ 23 (ಯು.ಎನ್.ಐ.) ರಾಜ್ಯ ಸರ್ಕಾರದ ವತಿಯಿಂದ ವರ್ಷವಿಡೀ ನೇತಾಜಿ ಸುಭಾಷ್ ಚಂದ್ರಬೋಸ್ ರವರ 125ನೇ ಜನ್ಮ ದಿನಾಚರಣೆಯನ್ನ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.  ಭಾರತದ ಸ್ವತಂತ್ರ್ಯಕ್ಕೆ ಬಹಳ ದೊಡ್ಡ ಬುನಾದಿ ಹಾಕಿಕೊಟ್ಟ ಮಹಾನ್ ನಾಯಕ ನೇತಾಜಿ ಸುಭಾಷ್ ಚಂದ್ರ ಭೋಸ್ ಅವರ 125 ನೇ ಜನ್ಮ ದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ವಿಧಾನಸೌಧ ಆವರಣದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಬಳಿಕ ಮಾತನಾಡಿದ ಅವರು, ರಾಜ್ಯ ಸರ್ಕಾರದ ವತಿಯಿಂದ ವರ್ಷವಿಡೀ ನೇತಾಜಿ ಅವರ 125ನೇ ಜನ್ಮ ದಿನಾಚರಣೆಯನ್ನ ವಿಚಾರಧಾರೆಯ ಮೂಲಕ, ಚರ್ಚೆಗಳ ಮೂಲಕ, ವಿಮರ್ಶೆಗಳ ಮೂಲಕ ಸ್ಮರಣೆ ಮಾಡುವ ಮೂಲಕ ಆಚರಣೆ ಮಾಡಲಿದ್ದೇವೆ ಎಂದರು.

ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಹೋರಾಟ ಮಾಡಿದ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನೋತ್ಸವದ ಅಂಗವಾಗಿ ಮುಖ್ಯಮಂತ್ರಿಗಳು ಪ್ರತಿಜ್ಞಾವಿಧಿ ಬೋಧಿಸಿದರು. ಬ್ರಿಟೀಷರ ವಿರುದ್ದ ಸೈನ್ಯವನ್ನ ಕಟ್ಟಿ ಹೋರಾಟ ಮಾಡಿದ ಅಪ್ರತಿಮ ವೀರ ಸುಭಾಷ್ ಚಂದ್ರಭೋಸ್. ಯುವಕರಿಗೆ ಪ್ರೇರಣೆಕೊಟ್ಟದ್ದು. ನೀವು ನನಗೆ ರಕ್ತ ಕೊಡಿ ನಾನು ನಿಮಗೆ ಸ್ವತಂತ್ರ್ಯಕೊಡಿಸುತ್ತೇನೆ ಎಂದು ಯುವಕರನ್ನ ಉತ್ಸಾಹಿಸಿ ಸೈನ್ಯಕಟ್ಟಿ ಹೋರಾಡಿದ ಸೇನಾನಿ ಎಂದು ಅವರ ಸಾಧನೆಯನ್ನ ಸ್ಮರಿಸಿದರು.

Continue Reading

ಕರ್ನಾಟಕ

ನ್ಯಾಯಮೂರ್ತಿ ಕೆ ಎಲ್. ಮಂಜುನಾಥ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

Published

on

ಬೆಂಗಳೂರು: ಜನವರಿ 23 (ಯು.ಎನ್.ಐ.)  ಕರ್ನಾಟಕ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

ನ್ಯಾಯಮೂರ್ತಿ ಮಂಜುನಾಥ್ ಅವರು ಅತ್ಯುತ್ತಮ ವಕೀಲರಾಗಿ, ವಕೀಲರ ಸಂಘದ ಅಧ್ಯಕ್ಷರಾಗಿ, ಹೈಕೋರ್ಟ್ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯದ ನದಿ ನೀರು ಮತ್ತು ಗಡಿ ವಿವಾದ ಪ್ರಾಧಿಕಾರದ ಅಧ್ಯಕ್ಷರಾಗಿ, ಆಂಧ್ರ ಪ್ರದೇಶದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಸಲ್ಲಿಸಿದ ಸೇವೆ ಅವಿಸ್ಮರಣೀಯವಾದದ್ದು ಎಂದು ಸಿಎಂ ಮೃತ ಗಣ್ಯರ ಸಾಧನೆಗಳನ್ನು ಸ್ಮರಿಸಿದ್ದಾರೆ.

ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬದವರು ಹಾಗೂ ಹಿತೈಷಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Continue Reading

ಕರ್ನಾಟಕ

ನಿವೃತ್ತ ಹೈಕೋರ್ಟ್‌ ನ್ಯಾಯಮೂರ್ತಿ ಕೆ.ಎಲ್.‌ ಮಂಜುನಾಥ್‌ ವಿಧಿವಶ

Published

on

By

ಬೆಂಗಳೂರು, ಜ 23 (ಯುಎನ್‌ ಐ) ರಾಜ್ಯ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್ ಶನಿವಾರ ತಡರಾತ್ರಿ ಹೃದಯಾಘಾತದಿಂದ ನಗರದ ನಿವಾಸದಲ್ಲಿ ವಿಧಿವಶರಾಗಿದ್ದಾರೆ.

ಬೆಂಗಳೂರಿನ ಕಾಮಾಕ್ಷಿಪಾಳ್ಯ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 12 ಗಂಟೆವರೆಗೆ ಪಾರ್ಥಿವ ಶರೀರದ ಅಂತಿಮ ದರ್ಶನ ಇರಲಿದ್ದು, ಮಧ್ಯಾಹ್ನ 3 ಗಂಟೆಗೆ ನೆಲಮಂಗಲದ ತೋಟದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ಹೇಳಿವೆ.

ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್ ಅವರು 1974ರ ಸೆ.13 ರಂದು ರಾಜ್ಯ ಹೈಕೋರ್ಟ್‌ ನಲ್ಲಿ ವಕೀಲ ವೃತ್ತಿ ಆರಂಭಿಸಿದ್ದರು. 2000ರ ಡಿ.11 ರಂದು ಕರ್ನಾಟಕ ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಯಾಗಿ, 2001ರ ಅ. 27 ರಂದು ಖಾಯಂ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು

Continue Reading
Advertisement
ಅಂಕಣ30 mins ago

ದಟ್ಟ ಕಾಡಿನಲ್ಲಿ ʻಸಪ್ನೋಂ ಕೀ ರಾಣೀʼ

ಅಂಕಣ: ಒಂದೂರಲ್ಲಿ ಒಂದಿನ- 3 ಈ ಒಂದೂರು ಅನ್ನುವ ಮಾಯೆ ಇದೆಯಲ್ಲ, ಅದು ವಿಚಿತ್ರವಾದದ್ದು. ಅಪ್ಪ ಕಥೆ ಹೇಳುವಾಗ ಪ್ರತಿ ಸಲವೂ ಆ ಕಥೆ ಒಂದೂರಿನಲ್ಲಿ ಅಂತಲೇ...

ಕ್ರೀಡೆ50 mins ago

ಅಂಕುಶ್ ರಘುವಂಶಿ ಟೀಂ ಇಂಡಿಯಾದ ಉದಯೋನ್ಮುಖ ತಾರೆ!

ಹೊಸದಿಲ್ಲಿ: ಜನೆವರಿ 23 (ಯು.ಎನ್.ಐ.) ಅಂಡರ್ 19 ವರ್ಲ್ಡ್ ಕಪ್ ಮೂಲಕ ಭಾರತ ಕ್ರಿಕೆಟ್ ತಂಡಕ್ಕೆ ಮತ್ತೊಬ್ಬ ಉದಯೋನ್ಮುಖ ಆಟಗಾರ ದೊರೆತಿದ್ದಾರೆ. ಅವರೇ ದೆಹಲಿ ಮೂಲದ ಅಂಕುಶ್...

ಅಂಕಣ2 hours ago

ಎಳವೆಯಿಂದ ರಂಗಭೂಮಿ

ನಾದಾಂಕಣ – ಡಾ. ನಾ. ದಾಮೋದರ ಶೆಟ್ಟಿ ಭಾರತೀಯ ಹಾಗೂ ಗ್ರೀಕ್‌ ರಂಗಭೂಮಿಗೆ ಬಹುದೊಡ್ಡ ಪರಂಪರೆಇದೆ ಎನ್ನುವುದು ಸಾರ್ವಕಾಲಿಕ ಸತ್ಯ. ಆದರೆ ಯುರೋಪಿನ ರಂಗಭೂಮಿಯಾಗಲೀ ರಷ್ಯಾ, ಅಮೇರಿಕಾ...

ದೇಶ2 hours ago

ಅರುಣಾಚಲದಿಂದ ನಾಪತ್ತೆಯಾಗಿದ್ದ ಯುವಕ ಚೀನಾ ಗಡಿಯಲ್ಲಿ ಪತ್ತೆ!

ಹೊಸದಿಲ್ಲಿ: ಜನೆವರಿ 23 (ಯು.ಎನ್.ಐ.) ಅರುಣಾಚಲ ಪ್ರದೇಶದಿಂದ ನಾಪತ್ತೆಯಾಗಿದ್ದ ಭಾರತೀಯ ಯುವಕ ಚೀನಾ ಗಡಿಯಲ್ಲಿ ಪತ್ತೆಯಾಗಿದ್ದಾನೆ. ಈ ಬಗ್ಗೆ ಚೀನಾ ಸೈನಿಕರು ಭಾರತೀಯ ಯೋಧರಿಗೆ ಮಾಹಿತಿ ನೀಡಿದ್ದು,...

ಹಣಕಾಸು3 hours ago

ಕೆಲಸ ಬದಲಾಯಿಸಿದ್ದೀರಾ? ಚಿಂತೆ ಬಿಡಿ.. ನಿಮ್ಮ ನೆರವಿಗೆ ಇದೆ ಇಪಿಎಫ್ಒ!

ಬೆಂಗಳೂರು: ಜನೆವರಿ 23 (ಯು.ಎನ್.ಐ.) ಉತ್ತಮ ಸಂಬಳ, ಭದ್ರತೆಯುಳ್ಳ ನೌಕರಿ, ವಿಶೇಷ ಸವಲತ್ತುಗಳು.. ಹೀಗೆ ನಾನಾ ಉದ್ದೇಶಗಳಿಂದ ಉದ್ಯೋಗಿಗಳು ತಮ್ಮ ಕೆಲಸವನ್ನು ಬದಲಾಯಿಸುತ್ತಾ ಇರುತ್ತಾರೆ. ಇಂತಹ ಸಂದರ್ಭದಲ್ಲಿ...

ದೇಶ3 hours ago

ನೇತಾಜಿ ಸುಭಾಷ್ ಚಂದ್ರ ಬೋಸ್ ಜಯಂತಿ… ದೇಶಾದ್ಯಂತ ಪರಾಕ್ರಮ ದಿನವಾಗಿ ಆಚರಣೆ

ನವದೆಹಲಿ, ಜ ೨೩( ಯುಎನ್ ಐ) ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ೧೨೫ನೇ ಜನ್ಮಜಯಂತಿ ಇಂದು. ದೇಶಾದ್ಯಂತ ಪರಾಕ್ರಮ ದಿನವಾಗಿ ನೇತಾಜಿ...

ಕರ್ನಾಟಕ3 hours ago

ಇಡೀ ವರ್ಷ ಸುಭಾಷ್ ಚಂದ್ರಬೋಸ್ ಜನ್ಮದಿನಾಚರಣೆಗೆ ತೀರ್ಮಾನ: ಸಿಎಂ

ಬೆಂಗಳೂರು : ಜನೆವರಿ 23 (ಯು.ಎನ್.ಐ.) ರಾಜ್ಯ ಸರ್ಕಾರದ ವತಿಯಿಂದ ವರ್ಷವಿಡೀ ನೇತಾಜಿ ಸುಭಾಷ್ ಚಂದ್ರಬೋಸ್ ರವರ 125ನೇ ಜನ್ಮ ದಿನಾಚರಣೆಯನ್ನ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ...

ಅಂಕಣ3 hours ago

ಸ್ವಾತಂತ್ರ್ಯಕ್ಕಿಂತ ದೊಡ್ಡದು ಇನ್ಯಾವುದಿದೆ ?

‌ಅಂಕಣ: ದಿಟನುಡಿ -೩ ಕಳೆದ ವಾರ ನನ್ನ ಕೈರೋಪ್ರಾಕ್ಟರ್ ರೇ ಬಳಿ ಹೋಗಿದ್ದೆ. ಏಕೋ ಗೊತ್ತಿಲ್ಲ ಕೆಲ ದಿನಗಳ ಹಿಂದೆ ಸೊಂಟ ಹಿಡಿದಿತ್ತು. ಏಳಲು, ಕೂರಲು, ನಿಲ್ಲಲು...

ದೇಶ3 hours ago

ಪಂಜಾಬ್ ಚುನಾವಣೆ: ಕೆಂಪು ಕೋಟೆ ಹಿಂಸಾಚಾರದ ಆರೋಪಿಗೆ ರೈತ ಸಂಘಟನೆಯಿಂದ ಟಿಕೆಟ್!

ಚಂಡೀಗಢ: ಜನೆವರಿ 23 (ಯು.ಎನ್.ಐ.) ರೈತರ ಸಂಘಟನೆ ಯುನೈಟೆಡ್ ಸಮಾಜ ಮೋರ್ಚಾ ಪಂಜಾಬ್ ವಿಧಾನಸಭಾ ಚುನಾವಣೆಗೆ 35 ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಮಾಜಿ...

ಕರ್ನಾಟಕ4 hours ago

ನ್ಯಾಯಮೂರ್ತಿ ಕೆ ಎಲ್. ಮಂಜುನಾಥ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಬೆಂಗಳೂರು: ಜನವರಿ 23 (ಯು.ಎನ್.ಐ.)  ಕರ್ನಾಟಕ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. ನ್ಯಾಯಮೂರ್ತಿ ಮಂಜುನಾಥ್ ಅವರು...

ಟ್ರೆಂಡಿಂಗ್

Share