Connect with us


      
ರಾಜಕೀಯ

ಕಾಂಗ್ರೆಸ್‌ ಪ್ರತಿಭಟನಾ ಮೆರವಣಿಗೆ

Kumara Raitha

Published

on

ಬೆಳಗಾವಿ: ಡಿಸೆಂಬರ್‌ ೧೬ (ಯು.ಎನ್.ಐ.)  ರಾಜ್ಯ ಬಿಜೆಪಿ ಸರಕಾರ ಕಾಮಗಾರಿಗಳಲ್ಲಿ ಶೇಕಡ 40  ಕಮಿಷನ್ ಪಡೆಯುತ್ತಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್‌ ಇಂದು ಪ್ರತಿಭಟನಾ ಮೆರವಣಿಗೆ ನಡೆಸಿದರು.

ಬೆಳಗಾವಿ ಗ್ರಾಮೀಣ ಜಿಲ್ಲೆ‌ ಕಾಂಗ್ರೆಸ್ ಕಚೇರಿಯಿಂದ ಸುವರ್ಣಸೌಧದವರೆಗೆ ಮೆರವಣಿಗೆ ನಡೆಯಿತು. ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧದ ಭ್ರಷ್ಟಾಚಾರ ಆರೋಪದ ಬಗ್ಗೆ ತನಿಖೆ ನಡೆಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಪ್ರತಿಭಟನೆ ಕಾರರು ಸುವರ್ಣಸೌಧದ ಪ್ರವೇಶದ್ವಾರದೊಳಗೆ ತೆರಳಲು ಯತ್ನಿಸಿದಾ ಪೊಲೀಸರು ಅವರನ್ನು ಗೇಟುಗಳನ್ನು ಮುಚ್ಚಿ ತಡೆದರು.

ಪ್ರತಿಭಟನೆಯಲ್ಲಿ  ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್ , ಎಚ್.ಕೆ. ಪಾಟೀಲ್, ರಮೇಶ್ ಕುಮಾರ್  ವಿಧಾನ ಮಂಡಲದ ಉಭಯ ಸದನಗಳ  ಕಾಂಗ್ರೆಸ್‌ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು. ಮಾಜಿ ಸಚಿವರಾದ ಆರ್.ವಿ. ದೇಶಪಾಂಡೆ, ಪ್ರಿಯಾಂಕ್ ಖರ್ಗೆ, ಕಾರ್ಯಾಧ್ಯಕ್ಷ ಸಲೀಂ ಅಹಮದ್, ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮತ್ತಿತರ ಮುಖಂಡರು ಭಾಗವಹಿಸಿದ್ದರು.

Share