Connect with us


      
ರಾಜಕೀಯ

ಇಂದಿನ ಕಾಂಗ್ರೆಸ್ ಪ್ರತಿಭಟನೆ ರಾಮಮಂದಿರ ವಿರೋಧಿ ಸಂದೇಶ: ಅಮಿತ್ ಶಾ

Lakshmi Vijaya

Published

on

ನವದೆಹಲಿ: ಆಗಸ್ಟ್ 05 (ಯು.ಎನ್.ಐ.) ಕಾಂಗ್ರೆಸ್ ಓಲೈಕೆ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದ್ದು ಅಯೋಧ್ಯೆಯಲ್ಲಿ ರಾಮ ಮಂದಿರ ಶಂಕುಸ್ಥಾಪನಾ ಸಮಾರಂಭದ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಆಗಸ್ಟ್ 05 2020 ರಂದು ಪ್ರಧಾನಿ ಮೋದಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ರು.  ಆಗಸ್ಟ್ 05 ರಂದೇ ಕಾಂಗ್ರೆಸ್ ಕಪ್ಪು ಬಟ್ಟೆ ಧರಿಸಿ ಪ್ರತಿಭಟಿಸಿದ್ದನ್ನ ಅಮಿತ್ ಶಾ ಈ ರೀತಿ ಟೀಕಿಸಿದ್ದಾರೆ.

ನ್ಯಾಯಾಲಯದಲ್ಲಿ ಪ್ರಕರಣಗಳು ದಾಖಲಾಗಿವೆ. ಆದರೆ ಅವರು ಪ್ರತಿದಿನ ಏಕೆ ಪ್ರತಿಭಟನೆಗಳನ್ನು ಮಾಡುತ್ತಾರೆ? ಕಾಂಗ್ರೆಸ್‌ಗೆ ಹಿಡನ್ ಅಜೆಂಡಾವಿದೆ ಎಂದು ನಾನು ಭಾವಿಸುತ್ತೇನೆ. ಅವರು ತಮ್ಮ ಓಲೈಕೆ ನೀತಿಯನ್ನು ಮರೆಮಾಚುವ ರೀತಿಯಲ್ಲಿ ವಿಸ್ತರಿಸಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ.

ಪ್ರತಿಭಟನೆಯ ಸಮಯವನ್ನು ಪ್ರಶ್ನಿಸಿದ ಅವರು ಇಂದು ಜಾರಿ ನಿರ್ದೇಶನಾಲಯವು ಯಾರನ್ನೂ ಕರೆದಿಲ್ಲ, ಯಾರನ್ನೂ ವಿಚಾರಣೆ ಮಾಡಿಲ್ಲ, ಯಾವುದೇ ದಾಳಿ ನಡೆದಿಲ್ಲ. ಆದರೆ ಕಾಂಗ್ರೆಸ್ ಇಂದು ಇದ್ದಕ್ಕಿದ್ದಂತೆ ಈ ಪ್ರತಿಭಟನೆಯನ್ನು ಯೋಜಿಸಿದೆ. ಏಕೆ ಪ್ರತಿಭಟನೆ ನಡೆಸಬೇಕು ಎಂದು ನನಗೆ ಅರ್ಥವಾಗುತ್ತಿಲ್ಲ. ಇಂದು 550 ವರ್ಷಗಳ ಹಿಂದಿನ ಸಮಸ್ಯೆಗೆ ಶಾಂತಿಯುತ ಪರಿಹಾರ ಒದಗಿಸಿ, ದೇಶದಲ್ಲಿ ಎಲ್ಲಿಯೂ ಗಲಭೆ ಹಿಂಸಾಚಾರ ನಡೆಯದೇ ರಾಮ ಜನ್ಮಭೂಮಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಡಿಪಾಯ ಹಾಕಿದ್ದು ಇದೇ ದಿನ ಎಂದು ಒಪ್ಪಿಕೊಳ್ಳುತ್ತೇನೆ.

ಕಾಂಗ್ರೆಸ್ ಇಂದು ಪ್ರತಿಭಟನೆ ನಡೆಸುವ ಮೂಲಕ ಮತ್ತು ಕಪ್ಪು ಬಟ್ಟೆ ಧರಿಸಿ, ರಾಮಜನ್ಮಭೂಮಿಯ ಶಂಕುಸ್ಥಾಪನೆ ಸಮಾರಂಭದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದೇವೆ ಮತ್ತು ಓಲೈಕೆ ನೀತಿಯನ್ನು ಮುಂದುವರಿಸುತ್ತಿದ್ದೇವೆ ಎಂಬ ಸೂಕ್ಷ್ಮ ಸಂದೇಶವನ್ನು ರವಾನಿಸುತ್ತಿದೆ ಎಂದು ಅವರು ಹೇಳಿದರು.

ಬೆಲೆ ಏರಿಕೆ, ನಿರುದ್ಕಯೋಗ ಸಮಸ್ಯೆ ಬಗ್ಗೆ ಕಳೆದ ವಾರದಿಂದ ಯೋಜಿಸಲಾಗಿದ್ದ ಕಾಂಗ್ರೆಸ್ ಪ್ರತಿಭಟನೆ ಇಂದು ಭಾರೀ ಗಲಾಟೆಗೆ ತಿರುಗಿದ್ದು, ದೆಹಲಿ ಪೊಲೀಸರು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಪಕ್ಷದ ಪ್ರಮುಖ ನಾಯಕರನ್ನು ವಶಕ್ಕೆ ಪಡೆದರು. ಸಂಜೆ ಆರು ಗಂಟೆಗಳ ನಂತರ ನಾಯಕರನ್ನು ಬಿಡುಗಡೆ ಮಾಡಲಾಯಿತು.

Share