Connect with us


      




ಕರ್ನಾಟಕ

ಗೋವಿಂದ ಕಾರಜೋಳ ಆರೋಪಕ್ಕೆ ಗುತ್ತಿಗೆದಾರರ ತಿರುಗೇಟು

Published

on

ಬೆಂಗಳೂರು: ಜನೆವರಿ 06 (ಯು.ಎನ್.ಐ.) ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ಸ್ ಅಸೋಸಿಯೇಷನ್ ಕುರಿತು ನೀಡಿದ್ದ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮಾಡಿದ ಆರೋಪಕ್ಕೆ ಸಂಘದ ಪದಾಧಿಕಾರಿಗಳು ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.ಅದರ ಪೂರ್ಣಪಾಠ ಇಲ್ಲಿದೆ.

 ಜಲಸಂಪನ್ಮೂಲ ಸಚಿವ ಶ್ರೀ ಗೋವಿಂದ ಕಾರಜೋಳ ಅವರು ಇತ್ತೀಚೆಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಶೇ.40 ರಷ್ಟು ಹಣವನ್ನು ಕಮೀಷನ್ ರೂಪದಲ್ಲಿ ನೀಡಬೇಕಾಗಿದೆ ಎಂಬ ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ಸ್ ಅಸೋಸಿಯೇಷನ್ (ಕೆಎಸ್‌ಸಿಎ) ಆರೋಪ ಕುರಿತು ಪ್ರತಿಕ್ರಿಯಿಸುತ್ತಾ ಈ ಹಿಂದೆಯೂ ಕಮೀಷನ್ ದಂಧೆ ಇತ್ತು ಎಂದು ಹೇಳಲಿ ಎಂದು ಸವಾಲು ಹಾಕಿದ್ದಾರೆ. ಹೌದು! ಈ ಹಿಂದೆಯೂ ಕಮೀಷನ್ ದಂಧೆ ಇತ್ತು. ಈ ಹಿಂದಿನ ಸರಕಾರ ಮತ್ತು ಅದರ ಹಿಂದಿನ ಸರಕಾರದಲ್ಲಿಯೂ ಇತ್ತು.

ಒಟ್ಟಾರೆ ಹಲವು ದಶಕಗಳಿಂದ ಎಲ್ಲಾ ಸರಕಾರಗಳಲ್ಲಿಯೂ ಭ್ರಷ್ಟಾಚಾರವಿತ್ತು ಎಂದು ಘಂಟಾಘೋಷವಾಗಿ ಹೇಳುತ್ತಿದ್ದೇವೆ. ಆದರೆ ಇಂತಹ ಸರಕಾರದಲ್ಲಿ ಭ್ರಷ್ಟಾಚಾರವನ್ನು ಕೊನೆಗಾಣಿಸಲು ಪ್ರಯತ್ನ ನಡೆದಿತ್ತು, ಇಂತಹ ಸಚಿವರು ಸರ್ವ ಪ್ರಯತ್ನ ನಡೆಸಿದ್ದರು ಎಂದು ಹೇಳುವ ಅವಕಾಶ ನಮಗೆ ಒದಗಿ ಬಂದಿಲ್ಲ. ಇದೀಗ ಇಂತಹ ಸುವರ್ಣಾವಕಾಶವನ್ನು ಬಳಸಿಕೊಳ್ಳುವ ಅವಕಾಶ ಮಾನ್ಯ ಸಚಿವರು ಮತ್ತು ಅವರ ಸರಕಾರಕ್ಕೆ ಒದಗಿ ಬಂದಿದೆ. ನಿಶ್ಚಿತವಾಗಿ ಈ ಅವಕಾಶವನ್ನು ಬಳಸಿಕೊಂಡು ಈ ಕಾರಣಕ್ಕಾಗಿ ಸಚಿವರನ್ನು ಅಭಿನಂದಿಸುವ ಅವಕಾಶವನ್ನು ನಮಗೆ ಕಲ್ಪಿಸಿಕೊಡುತ್ತಾರೆ ಎಂಬ ವಿಶ್ವಾಸ ನಮಗಿದೆ.

ಎರಡನೆಯದಾಗಿ ಈ ಸಂಘದ ಸದಸ್ಯರ ಸಂಖ್ಯೆ ಕೇವಲ 800 ಎಂದು ಹೇಳಿದ್ದಾರೆ. ಕೆಎಸ್‌ಸಿಎಗೆ ಸುಮಾರು 1 ಲಕ್ಷ ಗುತ್ತಿಗೆದಾರರು ಸದಸ್ಯರಾಗಿದ್ದಾರೆ ಎಂಬ ಸಂಗತಿಯನ್ನು ಜಲಸಂನ್ಮೂಲ ಸಚಿವರ ಗಮನಕ್ಕೆ ತರಲು ಬಯಸುತ್ತೇವೆ. ಕೆಎಸ್‌ಸಿಎಗೆ ಸುಮಾರು ಏಳು ದಶಕಗಳ ಸುದೀರ್ಘ ಇತಿಹಾಸವಿದೆ. ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀ ಅರಕಲಗೂಡು ವೆಂಕಟರಾಮಯ್ಯ ಅವರು ಈ ಸಂಘದ ಸಂಸ್ಥಾಪಕರು. ಗುತ್ತಿಗೆದಾರರು ಮತ್ತು ಕಾರ್ಮಿಕರ ಹಿತ ಕಾಪಾಡಲು 1948ರಲ್ಲಿ ಈ ಸಂಘಕ್ಕೆ ಅಡಿಪಾಯ ಹಾಕಿದ್ದಾರೆ. ಅಂದಿನಿಂದ ಇಂದಿನವರೆಗೂ ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಸಂಘ ನಡೆಯುತ್ತಾ ಬಂದಿದೆ.

ಅಂದಿನಿಂದ ಈ ರಾಜ್ಯದಲ್ಲಿ ನಿರ್ಮಾಣವಾಗಿರುವ ಮೂಲಭೂತ ಸೌಕರ್ಯಗಳನ್ನು ನಿರ್ಮಾಣ ಮಾಡಿರುವ ಎಲ್ಲಾ ಗುತ್ತಿಗೆದಾರರು ಈ ಸಂಘದ ಸದಸ್ಯರು ಎಂದು ಹೇಳಲು ಹೆಮ್ಮೆ ಪಡುತ್ತೇವೆ.  ಕೆ.ವಿ.ಪುಟ್ಟರಂಗಯ್ಯ, ಕೆ.ವಿ.ಕಾಮತ್, ಕೆ.ಎಂ.ಜೋಷಿ, ಎಚ್.ವಿಶ್ವನಾಥ್, ಸಿ.ವಿ.ಎಲ್. ಶಾಸ್ತ್ರಿ ಮೊದಲಾದ ಗಣ್ಯರು ಸಂಘವನ್ನು ಮುನ್ನೆಡೆಸಿದ್ದಾರೆ. ಇದುವರೆಗೂ ಒಂದೂ ಕಪ್ಪು ಚುಕ್ಕೆ ಇಲ್ಲದೆ ಸಂಘವು ಕರ್ತವ್ಯ ನಿರ್ವಹಿಸುತ್ತಾ ಬಂದಿದೆ ಎಂದು ಹೇಳಲು ಹೆಮ್ಮೆಯಾಗುತ್ತದೆ.

ಮೂರನೆಯದಾಗಿ ಶೇ.40 ಕಮೀಷನ್ ಕೊಟ್ಟು ಶೇ.20 ರಷ್ಟು ತೆರಿಗೆ ಕಟ್ಟಿ ಶೇ.40ರಲ್ಲಿ ಕೆಲಸ ಮಾಡಿದ ಗುತ್ತಿಗೆದಾರರು ಯಾರು ಎಂದು ಪ್ರಶ್ನಿಸಿದ್ದಾರೆ. ಶೇ.40ರಷ್ಟು ಕಮೀಷನ್ ಪಡೆದು ಉಳಿದ ಮೊತ್ತದಲ್ಲಿ ಕೆಲಸ ಮಾಡಿಸಿಕೊಳ್ಳುತ್ತಿದ್ದವರು ಯಾರು ಎಂದು

ಪ್ರಶ್ನಿಸಿದ್ದರೆ ಲೋಕಕ್ಕೆ ಉಪಯೋಗವಾಗುತ್ತಿತ್ತು. ವ್ಯವಸ್ಥೆ ಭ್ರಷ್ಟವಾಗಲು ಪ್ರಸ್ತುತ ಸರಕಾರ ಮಾತ್ರ ಕಾರಣ ಎಂದು ಎಲ್ಲಿಯೂ ಆರೋಪ ಮಾಡಿಲ್ಲ. ಎಲ್ಲ ಪಕ್ಷಗಳ ಅವಧಿಯಲ್ಲಿಯೂ ಭ್ರಷ್ಟಾಚಾರ ಹೆಚ್ಚುತ್ತಲೇ ಬಂದಿದೆ ಎಂದು ಪ್ರತಿಪಾದಿಸುತ್ತಾ ಬಂದಿದ್ದೇವೆ. ಸಚಿವರು ತಮ್ಮ ಇಲಾಖೆಯ ಜವಾಬ್ದಾರಿ ಹೊತ್ತ ನಂತರ ಭ್ರಷ್ಟಾಚಾರವನ್ನು ಕೊನೆಗಾಣಿಸಲು ಹಾಕಿಕೊಂಡಿರುವ ಕಾರ್ಯ ಯೋಜನೆಗಳು, ತಮಿಳುನಾಡು ಮಾದರಿಯಲ್ಲಿ ಪ್ಯಾಕೇಜ್ ಪದ್ದತಿಗೆ ಅಂತ್ಯ ಹಾಡಿ ಸ್ಥಳಿಯ ಮತ್ತು ರಾಜ್ಯದ ಗುತ್ತಿಗೆದಾರರಿಗೆ ಮಾತ್ರ ಕಾಮಗಾರಿಗಳು ಲಭ್ಯವಾಗುವಂತೆ ರೂಪಿಸಿರುವ ನಿಯಮಾವಳಿಗಳನ್ನು ರಾಜ್ಯದ ಜನತೆಯ ಮುಂದಿಟ್ಟರೆ ಒಳಿತಾಗುತ್ತದೆ. ಒಂದು ವೇಳೆ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದರೆ ಅವರಿಗೆ ಸಹಕಾರ ನೀಡಲು ಸಂಘವು ಸದಾ ಸಿದ್ದವಾಗಿರುತ್ತದೆ.

ಹಲವು ದಶಕಗಳಿಂದ ವ್ಯವಸ್ಥೆ ಹೇಗೆ ಹದಗೆಡುತ್ತಾ ಬಂದಿದೆ ಎನ್ನುವುದನ್ನು ಪ್ರಧಾನಿ  ನರೇಂದ್ರ ಮೋದಿ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಘನತೆವೆತ್ತ ರಾಜ್ಯಪಾಲರ ಗಮನಕ್ಕೂ ತಂದಿದ್ದೇವೆ. ಶೀಘ್ರದಲ್ಲೇ ಪ್ರಧಾನಿಗಳನ್ನು ಮುಖತಃ ಭೇಟಿ ಮಾಡಿ ಮತ್ತಷ್ಟು ವಿವರಗಳನ್ನು ನೀಡಲಿದ್ದೇವೆ. ಆಡಳಿತಾರೂಢ ಬಿಜೆಪಿ ಪಕ್ಷದ ವರಿಷ್ಠರನ್ನೂ ಭೇಟಿ ಮಾಡಿ ಭ್ರಷ್ಟಾಚಾರವನ್ನು ಕೊನೆಗಾಣಿಸಲು ಸರಕಾರಕ್ಕೆ ನಿರ್ದೆಶನ ನೀಡಬೇಕು ಎಂದು ಮನವಿ ಮಾಡಿಕೊಳ್ಳಲಿದ್ದೇವೆ ಎಂದು ಸಂಘದ ಅಧ್ಯಕ್ಷ ಕೆಂಪಣ್ನ ಹೇಳಿದ್ದಾರೆ.

ಕರ್ನಾಟಕ

ಸಿಎಂ ಭೇಟಿ ಮಾಡಿದ ಚಿಕ್ಕಮಗಳೂರು ಶಾಸಕರ ನಿಯೋಗ

Published

on

ಬೆಂಗಳೂರು: ಜನೆವರಿ 27 (ಯು.ಎನ್.ಐ.) ಶಾಸಕ ಹಾಗೂ ಬಿಜೆಪಿ ಪ್ರಧಾನ ಕಾರ್ಯಯದರ್ಶಿ ಸಿ ಟಿ ರವಿ ನೇತೃತ್ವದಲ್ಲಿ ಚಿಕ್ಕಮಗಳೂರು ಜಿಲ್ಲೆ ಶಾಸಕರು ಮುಖ್ಯಮಂತ್ರಿ‌ ಬಸವರಾಜ ಎಸ್ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದರು. ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ನಿಯೋಗದ ಅಹವಾಲುಗಳನ್ನು ಮುಖ್ಯಮಂತ್ರಿ ಆಲಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ, ಮತ್ತು ಭದ್ರಾ ಉಪಕಣವೆಯ 2 ಮತ್ತು 3 ನೇ ಹಂತದ ಯೋಜನೆಗೆ ಹಣ ಬಿಡುಗಡೆ ಹಾಗೂ ಜಿಲ್ಲೆಯ ಜಲಧಾರೆ ಯೋಜನೆಗೆ ಬಜೆಟ್ ಹಣ ನೀಡುವಂತೆ ನಿಯೋಗ ಮನವಿ ಮಾಡಿದೆ. ನಿಯೋಗದಲ್ಲಿ ಉಪ ಸಭಾಪತಿ ಪ್ರಾಣೇಶ್, ಶಾಸಕ ಸುರೇಶ್, ಬೆಳ್ಳಿ ಪ್ರಕಾಶ್, ಸಿಎಂ ರಾಜಕೀಯ ಕಾರ್ಯದರ್ಶಿ ಜೀವರಾಜ್‌ ಸಹ ಇದ್ದರು.

ಸಿಎಂ ಭೇಟಿ ಬಳಿಕ ಜೀವರಾಜ್ ಅವರು ಮಾತನಾಡಿ, ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯಿಸಿದರು. ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ. ನಮ್ಮ ಜಿಲ್ಲೆಯಲ್ಲಿ ನನಗಿಂತಲೂ ಹಿರಿಯರಿದ್ದಾರೆ, ಮೂಡಿಗೆರೆ ಎಂ ಪಿ ಕುಮಾರಸ್ವಾಮಿ ಇದಾರೆ, ತರೀಕೆರೆ ಸುರೇಶ್ ಇದಾರೆ, ಅವರಿಗೆ ಕೊಡಲಿ. ಸಿ ಟಿ ರವಿ ಮಾರ್ಗದರ್ಶನದಲ್ಲಿ ಮುಂದೆ‌ ಹೋಗ್ತೀವಿ.
ಸಂಪುಟ ವಿಸ್ತರಣೆ ಸಮಯದಲ್ಲಿ ನಮ್ಮ ಜಿಲ್ಲೆಗೆ ಅವಕಾಶ ಸಿಕ್ಕರೆ ಸಿಗಬಹುದು.. ಸಿಗದೇನೂ ಇರಬಹುದು. ಯಾರಿಗೆ ಕೊಟ್ಟರು ಸಂತೋಷ ಕೊಟ್ಟಿಲ್ಲ ಅಂದ್ರೂ ಸಂತೋಷ ಎಂದರು.

ಬಿಜೆಪಿ ಶಾಸಕರು ಕಾಂಗ್ರೆಸ್ನವರ ಸಂಪರ್ಕದಲ್ಲಿರುವ ವಿಚಾರವಾಗಿ ಮಾತನಾಡಿ, ನಮ್ಮ ಪಕ್ಷದಿಂದ ಯಾರು ಹೋಗೋದಿಲ್ಲ. ಚುನಾವಣಾ ಹತ್ತಿರ ಬಂದಾಗ ಏನ್ ಆಗುತ್ತೆ ಅನ್ನೋದು ದೇವರೊಬ್ಬರಿಗೆ ಮಾತ್ರ ಗೊತ್ತು.‌ ಒಮ್ಮೆ ಪಕ್ಷಕ್ಕೆ ಸೇರ್ಪಡೆಯಾದರೆ ಅಲ್ಲಿ ವಲಸಿಗ ಮೂಲ ಅನ್ನೋದು ಬರೋದಿಲ್ಲ.‌ ಈಶ್ವರಪ್ಪ ಉಸ್ತುವಾರಿಯಾಗಿ ಬಂದಿರೋದನ್ನ ನಾವು ಸ್ವಾಗತ ಮಾಡ್ತೀವಿ ಎಂದು ಹೇಳಿದರು.

ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಮಾತನಾಡಿ.‌ ಸಿ.ಟಿ ರವಿ ನೇತೃತ್ವದಲ್ಲಿ ನಮ್ಮ ಪಕ್ಷದ ಚಿಕ್ಕಮಗಳೂರು ಶಾಸಕರೆಲ್ಲ ಸಿಎಂ ಭೇಟಿ ಮಾಡಿದ್ವಿ. ಚಿಕ್ಕಮಗಳೂರು ಜಿಲ್ಲೆ ಸಮಸ್ಯೆ ಬಗ್ಗೆ ಚರ್ಚೆಗೆ ತೆರಳಿದ್ವಿ. ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಮತ್ತು ಮೂಡಿಗೆರೆಯಲ್ಲಿ ತೋಟಗಾರಿಕೆ ವಿಶ್ವವಿದ್ಯಾಲಯ ಹಾಗೂ ಭದ್ರಾ ಉಪಕಣಿವೆಯ ಕಾಮಗಾರಿ, ಜಿಲ್ಲೆಯ ಜಲಧಾರೆಯ ಯೋಜನೆ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ಮನವಿ ಸಲ್ಲಿಸಿ ಬಂದಿದ್ದೇವೆ ಎಂದು ವಿವರಿಸಿದರು.

Continue Reading

ಕರ್ನಾಟಕ

ಸಿಎಂ‌ ಇಬ್ರಾಹಿಂ ಬಂದರೆ ಸ್ವಾಗತ: ಎಚ್‌‌‌ಡಿಕೆ

Published

on

ಬೆಂಗಳೂರು:ಜನೆವರಿ 27 (ಯು.ಎನ್.ಐ.) ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಸಿಎಂ‌ ಇಬ್ರಾಹಿಂ‌ ಅವರು ಜಾತ್ಯತೀತ ಜನತಾ ದಳಕ್ಕೆ ಬಂದರೆ ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.‌ಕುಮಾರಸ್ವಾಮಿ ಹೇಳಿದ್ದಾರೆ.

ಅವರಿಂದು ಸುದ್ದಿಗಾರರ ಜೊತೆ ಮಾತನಾಡಿ, ಇಬ್ರಾಹಿಂ ಅವರು ಹಿರಿಯ ರಾಜಕಾರಣಿ.‌ ನಮ್ಮ ಪಕ್ಷ ಹಾಗೂ ದೇವೇಗೌಡರ ಏಳು ಬೀಳುವಿನಲ್ಲೊಯೂ ಜೊತೆಯಾದವರು. ವಿರೋಧ ಪಕ್ಷದ ನಾಯಕರ ಸ್ಥಾನಕ್ಕೆ ಅವರ ಹೆಸರು ಕೇಳಿ‌ ಬಂದಿತ್ತು. ಆ ಸ್ಥಾನ ದೊರೆತರೆ ನಾಯಕರ ಉಪಯೋಗ ಮಾಡಿಕೊಳ್ಳಿ. ನಿಮ್ಮನ್ನು ದುರುಪಯೋಗ ಪಡಿಸಿಕೊಳ್ಳಲ್ಲ ಎಂದಿದ್ದೆ ಎಂದು ವಿವರಿಸಿದರು.

ಅವರಿಗೆ ಇನ್ನೂ ದೇವೇಗೌಡರು ಹಾಗೂ ನಮ್ಮ ಪಕ್ಷದ ಬಗ್ಗೆ ವ್ಯಾಮೋಹ ಇದೆ.‌ ಅವರು ಬಂದರೆ ಸ್ವಾಗತ. ನಾವು ಕದ್ದು ಮುಚ್ಚಿ ಯಾವುದನ್ನೂ ಮಾಡಿಲ್ಲ. ಇಂದೂ ಕೂಡ ನಾನು ಕರೆ ಮಾಡಿ ಮಾತಾಡಿದ್ದೀನಿ. ಅವರು ನಮ್ಮ ಪಕ್ಷಕ್ಕೆ ಬಂದರೆ ಸ್ವಾಗತ. ಜನತಾ ಪರಿವಾರದ ನಾಯಕರು ಸೆಟ್ಟಲ್ ಆಗಿದ್ದಾರೆ. ಅವರನ್ನು ವಾಪಸ್ ತರುವ ನಿರೀಕ್ಷೆ ಇಟ್ಟುಕೊಂಡಿಲ್ಲ ಎಂದರು.

ಯವ ನಾಯಕತ್ವ ತರುವ ನಿಟ್ಟಿನಲ್ಲಿ ಚಿಂತಿಸಲಾಗುತ್ತಿದೆ. ಹೊಸ ನಾಯಕರ ನೇಮಕಾತಿ‌ ಮಾಡಲಾಗುತ್ತಿದೆ. ಹೊಸ ನಾಯಕರ ಸೃಷ್ಟಿ ಮೊದಲಿನಿಂದಲೂ ನಡೆಯುತ್ತಿದೆ. ಜೆಡಿಎಸ್ ಮೊದಲಿನಿಂದಲೂ ಗುರು ಮನೆ ಇದ್ದಂತೆ. ಹಲವರು ನಾಯಕರಾಗಿ‌ ಬೆಳೆದು ಹೋಗಿದ್ದಾರೆ ಎಂದು ಪ್ರತಿಪಾದಿಸಿದರು.

Continue Reading

ಕರ್ನಾಟಕ

ಶಾಲಾ ವಿದ್ಯಾರ್ಥಿಗಳಿಗೆ ಕೋವಿಡ್ ದೃಢ; ಹೆಬ್ಬಳ್ಳಿ ಶಾಲೆ ಸೀಲ್‌ಡೌನ್

Published

on

ಧಾರವಾಡ: ಜನೆವರಿ 27 (ಯು.ಎನ್.ಐ.) ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ಹಾವಳಿ ಹೆಚ್ಚಾಗತೊಡಗಿದೆ. ಧಾರವಾಡ ಜಿಲ್ಲಾ ಆರೋಗ್ಯ ಇಲಾಖೆ ಜನೆವರಿ 26ರಂದು ಕೊಟ್ಟ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ ಅತ್ಯಧಿಕ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಬರೋಬ್ಬರಿ 1,523 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಆಕ್ಟಿವ್ ಕೇಸ್ ಗಳ ಸಂಖ್ಯೆ 5,718ಕ್ಕೆ ಏರಿಕೆಯಾಗಿದೆ.

ಇನ್ನೊಂದೆಡೆ ಧಾರವಾಡ ಜಿಲ್ಲೆಯಲ್ಲಿನ ಶಾಲೆಗಳಲ್ಲೂ ಕೋವಿಡ್ ದುಗುಡ ಹೆಚ್ಚಾಗುತ್ತಿದ್ದು, ತಾಲೂಕಿನ ಹೆಬ್ಬಳ್ಳಿ ಗ್ರಾಮದ ಶಾಲೆಯಲ್ಲಿ 18 ವಿದ್ಯಾರ್ಥಿಗಳಿಗೆ ಕೋವಿಡ್ ಕಾಣಿಸಿಕೊಂಡಿದೆ. ಇಲ್ಲಿನ ನೆಹರು ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಜನೆವರಿ 24 ರಂದು ಇಬ್ಬರು ವಿದ್ಯಾರ್ಥಿಗಳಲ್ಲಿ ಮಾತ್ರ ಸೋಂಕು ಕಾಣಿಸಿಕೊಂಡಿತು. ಬಳಿಕ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಮಾಡಿಸಿದಾಗ ಒಟ್ಟಾರೆ 18 ವಿದ್ಯಾರ್ಥಿಗಳಲ್ಲಿ ಕೋವಿಡ್ ಹರಡಿರುವುದು ಗ್ರಾಮದಲ್ಲಿ ಆತಂಕ ಹೆಚ್ಚಿಸಿದೆ.

18 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮಂಗಳವಾರ ಬಾಕಿ ವಿದ್ಯಾರ್ಥಿಗಳ ಕೋವಿಡ್ ಪರೀಕ್ಷೆಯನ್ನು ಮಾಡಲಾಗಿದ್ದು, ಇಂದು ವರದಿ ಬರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುಂಜಾಗ್ರತ ಕ್ರಮಕೈಗೊಂಡಿದ್ದು, ಹೆಬ್ಬಳ್ಳಿ ಶಾಲೆಯನ್ನು ಸೀಲ್ ಡೌನ್ ಮಾಡಲಾಗಿದೆ. ಈ ಬಗ್ಗೆ ಶಾಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಮೂಲಕ ಮಾಹಿತಿ ಕಳುಹಿಸಿರುವ ಪ್ರಾಂಶುಪಾಲರು, ಸರ್ಕಾರದ ನಿರ್ದೇಶನ ಮತ್ತು ತಹಸೀಲ್ದಾರರ ಮಾಹಿತಿ ಆದೇಶದಂತೆ ಇಂದು 27/01/2022 ರಿಂದ 02/02/2022 ವರೆಗೆ ಶಾಲೆಗೆ ರಜೆ ನೀಡಲಾಗಿದೆ. ಅಲ್ಲದೆ, ಭೌತಿಕ ಶಿಕ್ಷಣಕ್ಕೆ ರಜೆ ನೀಡಲಾಗಿದ್ದು, ಆನ್ ಲೈನ್ ಕ್ಲಾಸುಗಳಿಗೆ ಹಾಜರಾಗುವಂತೆ ಸೂಚಿಸಿದ್ದಾರೆ.

Continue Reading
Advertisement
ದೇಶ8 mins ago

ವೈಯಕ್ತಿಕ ದ್ವೇಷ: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ದುಷ್ಟರು

ನವದೆಹಲಿ: ಜನೆವರಿ 27 (ಯು.ಎನ್.ಐ.) ವೈಯಕ್ತಿಕ ದ್ವೇಷದ ಕಾರಣ ಮಹಿಳೆಯನ್ನು ಅಪಹರಿಸಿ ಆಕೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ದುಷ್ಟರು ಚಪ್ಪಲಿ ಹಾರ ಹಾಕಿ, ಮುಖಕ್ಕೆ ಕಪ್ಪು...

ಕರ್ನಾಟಕ1 hour ago

ಸಿಎಂ ಭೇಟಿ ಮಾಡಿದ ಚಿಕ್ಕಮಗಳೂರು ಶಾಸಕರ ನಿಯೋಗ

ಬೆಂಗಳೂರು: ಜನೆವರಿ 27 (ಯು.ಎನ್.ಐ.) ಶಾಸಕ ಹಾಗೂ ಬಿಜೆಪಿ ಪ್ರಧಾನ ಕಾರ್ಯಯದರ್ಶಿ ಸಿ ಟಿ ರವಿ ನೇತೃತ್ವದಲ್ಲಿ ಚಿಕ್ಕಮಗಳೂರು ಜಿಲ್ಲೆ ಶಾಸಕರು ಮುಖ್ಯಮಂತ್ರಿ‌ ಬಸವರಾಜ ಎಸ್ ಬೊಮ್ಮಾಯಿ...

ಕರ್ನಾಟಕ2 hours ago

ಸಿಎಂ‌ ಇಬ್ರಾಹಿಂ ಬಂದರೆ ಸ್ವಾಗತ: ಎಚ್‌‌‌ಡಿಕೆ

ಬೆಂಗಳೂರು:ಜನೆವರಿ 27 (ಯು.ಎನ್.ಐ.) ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಸಿಎಂ‌ ಇಬ್ರಾಹಿಂ‌ ಅವರು ಜಾತ್ಯತೀತ ಜನತಾ ದಳಕ್ಕೆ ಬಂದರೆ ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.‌ಕುಮಾರಸ್ವಾಮಿ ಹೇಳಿದ್ದಾರೆ....

ದೇಶ2 hours ago

ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ ಅಂತ್ಯ; ಶಾಲಾ-ಕಾಲೇಜುಗಳು ಬಂದ್

ಹೊಸದಿಲ್ಲಿ: ಜನೆವರಿ 27 (ಯು.ಎನ್.ಐ.) ರಾಷ್ಟ್ರ ರಾಜಧಾನಿ ಜನರಿಗೆ ದೆಹಲಿ ಸರ್ಕಾರ ಗುಡ್ ನ್ಯೂಸ್ ನೀಡಿದೆ. ದೆಹಲಿಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿರುವ  ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ ಅನ್ನು...

ಕ್ರೀಡೆ2 hours ago

ಟೀಂ ಇಂಡಿಯಾ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಟ್ವಿಟರ್ ಖಾತೆ ಹ್ಯಾಕ್

ಮುಂಬೈ: ಜನೆವರಿ ೨೭ (ಯು.ಎನ್.ಐ.) ಇತ್ತೀಚೆಗೆ ಬಿಟ್‌ಕಾಯಿನ್ ಸ್ಕ್ಯಾಮರ್ ಗಳು ಟ್ವಿಟರ್ ಖಾತೆಗಳನ್ನು ಹ್ಯಾಕ್ ಮಾಡುತ್ತಿದ್ದು, ಈಗಾಗಲೇ ಸಾಕಷ್ಟು ಮಂದಿಯ ಟ್ವಿಟರ್ ಖಾತೆ ಇದೇ ವಿಚಾರಕ್ಕೆ ಹ್ಯಾಕ್...

ಸಿನೆಮಾ3 hours ago

ನಾಗಚೈತನ್ಯ, ಸಮಂತಾ ವಿಚ್ಛೇದನಕ್ಕೆ ನಟ ನಾಗಾರ್ಜುನ ಕೊಟ್ಟ ಕಾರಣ ಏನು?

ಹೈದರಾಬಾದ್: ಜನೆವರಿ 27 (ಯು.ಎನ್.ಐ.) ಟಾಲಿವುಡ್ ಸ್ಟಾರ್ ಗಳಾದ ನಾಗಚೈತನ್ಯ ಮತ್ತು ಸಮಂತಾ ರುತ್ ಪ್ರಭು 2021ರಲ್ಲಿ ವಿಚ್ಛೇದನ ಘೋಷಿಸಿದರು. ಅಂದಿನಿಂದ ಇಮದಿನವರೆಗೆ ಅವರ ನಡುವಿನ ಪ್ರತ್ಯೇಕತೆಗೆ...

ದೇಶ3 hours ago

ಅನ್ಯ ಜಾತಿ ಹುಡುಗಿ ಮದುವೆಯಾದ ಮಗ: ತಾಯಿ ಮೇಲೆ ಹಲ್ಲೆ

ಚೆನ್ನೈ: ಜನೆವರಿ 27 (ಯು.ಎನ್.ಐ.) ಅನ್ಯ ಜಾತಿಯ ಹುಡುಗಿಯನ್ನು ಮಗ ವಿವಾಹವಾದ ಕಾರಣ ತಾಯಿಯನ್ನು ದೀಪದ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ ಘಟನೆ ತಮಿಳುನಾಡಿನ ವಿರುದುನಗರ ಜಿಲ್ಲೆಯ ತಿರುಚುಲಿ...

ಸಿನೆಮಾ3 hours ago

‘ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ಳುತ್ತಿದ್ದಾರೆ’ – ನಟಿ ಶ್ವೇತಾ ತಿವಾರಿ

ಭೋಪಾಲ್: ಜನೆವರಿ 27 (ಯು.ಎನ್.ಐ.) ಕಿರುತೆರೆ ಹಾಗೂ ಹಿಂದಿ ಫಿಲಂ ನಟಿ ಶ್ವೇತಾ ತಿವಾರಿ ದೇವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಫ್ಯಾಶನ್ ಸಂಬಂಧಿತ ವೆಬ್ ಸರಣಿಯ...

ಸಿನೆಮಾ4 hours ago

ವಿವಾಹ ಜೀವನಕ್ಕೆ ಕಾಲಿರಿಸಿದ ಮೌನಿರಾಯ್, ಸೂರಜ್ ನಂಬಿಯಾರ್

ಪಣಜಿ: ಜನೆವರಿ 27 (ಯು.ಎನ್.ಐ.) ಬಾಲಿವುಡ್ ನಟಿ ಮೌನಿ ರಾಯ್ ಮತ್ತು ಉದ್ಯಮಿ ಸೂರಜ್ ನಂಬಿಯಾರ್ ಇಂದು ಗೋವಾದಲ್ಲಿ ವಿವಾಹ ಜೀವನಕ್ಕೆ ಕಾಲಿರಿಸಿದ್ದಾರೆ. ಇವರ ವಿವಾಹದ ಫೋಟೋಗಳು...

ದೇಶ4 hours ago

ಕಾಂಗ್ರೆಸ್ ಉಚ್ಛಾಟಿತ ನಾಯಕ ಕಿಶೋರ್ ಉಪಾಧ್ಯಾಯ ಬಿಜೆಪಿಗೆ ಸೇರ್ಪಡೆ

ಡೆಹ್ರಾಡೂನ್: ಜನೆವರಿ 27 (ಯು.ಎನ್.ಐ.) ಉತ್ತರಾಖಂಡ ವಿಧಾನಸಭಾ ಚುನಾವಣೆಗೆ ಮುನ್ನ, ಉಚ್ಛಾಟಿತ ರಾಜ್ಯ ಕಾಂಗ್ರೆಸ್ ಮಾಜಿ ಮುಖ್ಯಸ್ಥ ಕಿಶೋರ್ ಉಪಾಧ್ಯಾಯ ಗುರುವಾರ ಭಾರತೀಯ ಜನತಾ ಪಕ್ಷ (ಬಿಜೆಪಿ)...

ಟ್ರೆಂಡಿಂಗ್

Share