Published
6 months agoon
ನೈನಿತಾಲ್: ಡಿಸೆಂಬರ್ 02 (ಯು.ಎನ್.ಐ.) ಉತ್ತರಾಖಂಡದಲ್ಲಿ ಕರೋನಾ ಪ್ರಕರಣಗಳು ಅಧಿಕಗೊಳ್ಳುವುದರ ಜೊತೆಗೆ ಒಮೈಕ್ರಾನ್ ಅಪಾಯವೂ ಹೆಚ್ಚಾಗಲು ಪ್ರಾರಂಭಿಸಿದೆ. ನೈನಿತಾಲ್ ಜಿಲ್ಲೆಯ ಸುಯಲ್ಬರಿಯಲ್ಲಿರುವ ಜವಾಹರ್ ನವೋದಯ ವಿದ್ಯಾಲಯ ಗಂಗಾರ್ಕೋಟ್ನಲ್ಲಿ ಏಕಕಾಲದಲ್ಲಿ 85 ವಿದ್ಯಾರ್ಥಿಗಳಿಗೆ ಕರೋನಾ ಸೋಂಕು ದೃಢಪಟ್ಟಿರುವುದು ಸಂಚಲನ ಮೂಡಿಸಿದೆ.
ಏಕಕಾಲದಲ್ಲಿ 85 ವಿದ್ಯಾರ್ಥಿಗಳಿಗೆ ಸೋಂಕು ತಗುಲಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮುಂಜಾಗ್ರತ ಕ್ರಮವಹಿಸಿದೆ. 85 ವಿದ್ಯಾರ್ಥಿಗಳು ಸೋಂಕಿಗೆ ಒಳಗಾಗಿರುವ ಬಗ್ಗೆ ಹಾಗೂ 70 ರಷ್ಟು ಶಾಲಾ ಮಕ್ಕಳು ಜ್ವರ, ಕೆಮ್ಮು ಮತ್ತು ಮೂಗು ಕಟ್ಟುವಿಕೆಯಿಂದ ಬಳಲುತ್ತಿದ್ದರು ಎಂದು ಸಿಎಚ್ಸಿ ಗರಂಪಾನಿಯ ಕೋವಿಡ್ ಮಾದರಿ ಉಸ್ತುವಾರಿ ಮದನ್ ಗಿರಿ ಗೋಸ್ವಾಮಿ ಮಾಹಿತಿ ನೀಡಿದ್ದಾರೆ. ನವೋದಯ ವಿದ್ಯಾಲಯದ ಎಲ್ಲ ಮಕ್ಕಳನ್ನು ಶಾಲೆಯಲ್ಲಿಯೇ ಪ್ರತ್ಯೇಕಗೊಳಿಸಲಾಗಿದೆ.
ಸೌಂಗಾವ್ನಲ್ಲಿ ನೇಮಕಗೊಂಡ ಶಿಕ್ಷಕರಿಗೂ ಸೋಂಕು
ಸೌಂಗಾಂವ್ನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಿಯೋಜಿಸಲಾದ ಇತರ ಶಿಕ್ಷಕರಿಗೂ ಕರೋನಾ ಸೋಂಕು ಕಾಣಿಸಿಕೊಂಡಿದೆ. ಈ ಪ್ರದೇಶದಲ್ಲಿ ಕೊರೊನಾ ಸೋಂಕು ನಿರಂತರವಾಗಿ ಹೆಚ್ಚುತ್ತಿರುವ ಕಾರಣ ಆರೋಗ್ಯ ಇಲಾಖೆ ತಂಡ ಸ್ಥಳದಲ್ಲಿ ಮೊಕ್ಕಾಂ ಹೂಡಿದೆ. ಈ ಪ್ರದೇಶದಲ್ಲಿ ಹೆಚ್ಚುತ್ತಿರುವ ಸೋಂಕನ್ನು ತಡೆಗಟ್ಟಲು ಅಧಿಕಾರಿಗಳು ಮಾಸ್ಕ್, ಸ್ಯಾನಿಟೈಜರ್ಗಳು ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವ ಬಗ್ಗೆ ಜನರಿಗೆ ಅರಿವು ಮೂಡಿಸುತ್ತಿದ್ದಾರೆ. ನವೋದಯ ವಿದ್ಯಾಲಯವನ್ನು ಮೈಕ್ರೋ ಕಂಟೈನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ.
ಕರೊನಾದಿಂದ ಚೇತರಿಸಿಕೊಂಡ ಮಕ್ಕಳನ್ನು ಇನ್ನೊಮ್ಮೆ ತಪಾಸಣೆ ನಡೆಸಿ ಬಳಿಕ ಕುಟುಂಬ ಸದಸ್ಯರ ಒಪ್ಪಿಗೆ ಪಡೆದು ಮನೆಗೆ ಕಳುಹಿಸಲಾಗುವುದು ಎಂದು ಎಸ್ಡಿಎಂ ರಾಹುಲ್ ಸಾಹ್ ತಿಳಿಸಿದ್ದಾರೆ. ಅಲ್ಲದೆ, ಮಕ್ಕಳ ಮೇಲೆ ನಿಗಾವಹಿಸಲು ಪ್ರತ್ಯೇಕ ಮೇಲ್ವಿಚಾರಣೆಯನ್ನು ಹೆಚ್ಚಿಸುವುದರ ಜೊತೆಗೆ, ವಿಶೇಷ ತಂಡಗಳನ್ನು ಸಹ ನಿಯೋಜಿಸಲಾಗುತ್ತಿದೆ ಎಂದರು.
ಶಾಲೆ ಮುಚ್ಚಲು ಆದೇಶ
ಜವಾಹರ್ ನವೋದಯ ವಿದ್ಯಾಲಯದ ಹಾಸ್ಟೆಲ್ನಲ್ಲಿ ವಾಸಿಸುವ 450 ಮಕ್ಕಳ ಮಾದರಿಯನ್ನು ಪರೀಕ್ಷಿಸಿದ ನಂತರ 85 ಮಕ್ಕಳಲ್ಲಿ ಪಾಸಿಟಿವ್ ಕಂಡುಬಂದಿದೆ. ಮಕ್ಕಳ ಮಾದರಿಯನ್ನು ಮತ್ತೊಮ್ಮೆ ಪರೀಕ್ಷೆ ಮಾಡಲಾಗುತ್ತದೆ. ಫಲಿತಾಂಶ ಬಂದ ನಂತರ ಮಕ್ಕಳನ್ನು ಮನೆಗೆ ಕಳುಹಿಸಲಾಗುವುದು. ಸೋಂಕಿತ ಮಕ್ಕಳಲ್ಲಿ ಕರೋನಾ ರೋಗಲಕ್ಷಣಗಳಿಲ್ಲ. ಶಾಲೆ ಮುಚ್ಚುವಂತೆ ಪ್ರಾಂಶುಪಾಲರಿಗೆ ಸೂಚನೆ ನೀಡಲಾಗಿದೆ. ಕೊರೊನಾ ಸೋಂಕಿತ ಮಕ್ಕಳ ಮೇಲೆ ನಿಗಾ ಇಡಲು ಆರೋಗ್ಯ ಇಲಾಖೆ ವೈದ್ಯರ ತಂಡವನ್ನು ರಚಿಸಲಾಗಿದೆ ಎಂದು ಡಿಎಂ ನೈನಿತಾಲ್ ಧೀರಜ್ ಸಿಂಗ್ ಗಾರ್ಬ್ಯಾಲ್ ಹೇಳಿದ್ದಾರೆ.
ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಜುಬೇರ್ ಬಂಧನ; ಜರ್ಮನಿ ಹೇಳಿಕೆಗೆ ಕಟುವಾಗಿ ಪ್ರತಿಕ್ರಿಯಿಸಿದ ಕೇಂದ್ರ
ಚೀನಾದ ಕಂಪನಿಗಳು ಭಾರತದ ಕಾನೂನು ಪಾಲಿಸಬೇಕು: ವಿದೇಶಾಂಗ ಸಚಿವಾಲಯ
ಶೀಘ್ರದಲ್ಲೇ ವಾಣಿಜ್ಯ ಹಾರಾಟ ನಡೆಸಲಿದೆ ‘ಆಕಾಶ ಏರ್’
ಫೋನ್ ಹಿಂತಿರುಗಿಸಲು ನಿರಾಕರಿಸಿದ್ದಕ್ಕೆ ಸ್ನೇಹಿತನ ಕೊಂದ ಪಾಪಿ
ಹಿಂದೂ ವ್ಯಕ್ತಿಯ ಅಂತಿಮ ವಿಧಿವಿಧಾನ ನೆರವೇರಿಸಿದ ಮುಸ್ಲಿಂ ಕುಟುಂಬ
ವಿವಾಹ ಜೀವನಕ್ಕೆ ಕಾಲಿರಿಸಿದ ಪಂಜಾಬ್ ಸಿಎಂ ಭಗವಂತ್ ಮಾನ್