Published
4 months agoon
By
UNI Kannadaಹೈದರಬಾದ್ : ಜನೆವರಿ 26 (ಯು.ಎನ್.ಐ.) ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅವರು ಶೀಘ್ರ ಗುಣಮುಖರಾಗಲಿ ಎಂದು ಟಾಲಿವುಡ್ ಸೆಲೆಬ್ರಿಟಿಗಳು ಟ್ವೀಟ್ ಮಾಡುತ್ತಿದ್ದಾರೆ. ಯಂಗ್ ಟೈಗರ್ ಎನ್ಟಿಆರ್, ಐಕಾನ್ ಸ್ಟಾರ್ ಅಲ್ಲು ಅರ್ಜುನ್, ನಾನಿ ಮತ್ತು ಇತರರು ಕೊರೊನಾ ಸೋಂಕಿನಿಂದ ಚಿರಂಜೀವಿ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಟ್ವೀಟ್ ಮಾಡುತ್ತಿದ್ದಾರೆ. ನೀವು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಸರ್.. ಶೀಘ್ರದಲ್ಲೇ ನಿಮಗೆ ಎಲ್ಲವೂ ಸರಿಹೋಗಲಿ ಎಂದು ಹಾರೈಸುತ್ತೇನೆ ಎಂದು ಎನ್ ಟಿಆರ್ ಟ್ವೀಟ್ ಮಾಡಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಅಲ್ಲು ಅರ್ಜುನ್.. ನೀವು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.. ಸಣ್ಣಪುಟ್ಟ ಆರಂಭಿಕ ಲಕ್ಷಣಗಳಿವೆ ಎಂದು ತಿಳಿದು ತುಂಬಾ ಸಂತೋಷವಾಯಿತು.. ಬೇಗ ಗುಣಮುಖರಾಗಲಿ ಎಂದು ಟ್ವೀಟ್ ಮಾಡಿದ್ದಾರೆ.
Wishing you a speedy recovery sir! Hope you feel better soon.
— Jr NTR (@tarak9999) January 26, 2022