Published
2 weeks agoon
ಹೊಸದಿಲ್ಲಿ: ಜೂನ್ 23 (ಯು.ಎನ್.ಐ.) ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 13,313 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಈ ವೇಳೆ 38 ರೋಗಿಗಳು ಸಾವನ್ನಪ್ಪಿದ್ದಾರೆ. ಗುರುವಾರ ಬೆಳಗ್ಗೆ 8 ಗಂಟೆಗೆ ಕೇಂದ್ರ ಆರೋಗ್ಯ ಸಚಿವಾಲಯವು ನವೀಕರಿಸಿದ ಮಾಹಿತಿಯ ಪ್ರಕಾರ ಸಕ್ರಿಯ ಪ್ರಕರಣಗಳು 83,990. ದೇಶದಲ್ಲಿ ದೈನಂದಿನ ಸೋಂಕಿನ ಪ್ರಮಾಣವು ಪ್ರಸ್ತುತ 2.03 ಪ್ರತಿಶತದಷ್ಟಿದೆ. ಹೆಚ್ಚುತ್ತಿರುವ ಪ್ರಕರಣಗಳ ಕುರಿತು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಇಂದು ತಜ್ಞರ ಪ್ರಮುಖ ತಂಡದೊಂದಿಗೆ ಉನ್ನತ ಮಟ್ಟದ ಪರಿಶೀಲನಾ ಸಭೆಯನ್ನು ಕರೆದಿದ್ದಾರೆ.
ಬುಧವಾರದ ಅಂಕಿಅಂಶಗಳಿಗೆ ಹೋಲಿಸಿದರೆ, ದೈನಂದಿನ ಸೋಂಕಿನ ಪ್ರಮಾಣವು ಶೇಕಡಾ 3.94 ರಿಂದ 2.03 ಕ್ಕೆ ಇಳಿದಿದೆ. ಆದರೆ, ನಿನ್ನೆಗಿಂತ ಇಂದು ಹೆಚ್ಚು ಹೊಸ ಪ್ರಕರಣಗಳು ಪತ್ತೆಯಾಗಿವೆ. ಬುಧವಾರ, 12,249 ಹೊಸ ಕರೋನಾ ರೋಗಿಗಳು ಕಂಡುಬಂದರೆ, ಮಂಗಳವಾರ, 9,923 ಪ್ರಕರಣಗಳು ವರದಿಯಾಗಿವೆ. ಸಾವಿನ ಸಂಖ್ಯೆಯು ಬುಧವಾರಕ್ಕೆ ಹೋಲಿಸಿದರೆ ಎರಡು ಪಟ್ಟು ಹೆಚ್ಚಾಗಿದೆ. ಬುಧವಾರ 13 ಸಾವುಗಳು ಸಂಭವಿಸಿವೆ, ಗುರುವಾರ ಬೆಳಗ್ಗೆ ಸಿಕ್ಕ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ 38 ಸಾವುಗಳು ಸಂಭವಿಸಿವೆ.
10 ರಾಜ್ಯಗಳಲ್ಲಿ 1000ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳು!
ಕಳೆದ ಕೆಲವು ವಾರಗಳಲ್ಲಿ ದೇಶವು ಕರೋನವೈರಸ್ ಸೋಂಕಿನ ಹೆಚ್ಚಳಕ್ಕೆ ಸಾಕ್ಷಿಯಾಗಿದೆ. ಮಹಾರಾಷ್ಟ್ರ, ಕೇರಳ, ದೆಹಲಿ, ಕರ್ನಾಟಕ, ತಮಿಳುನಾಡು, ಹರಿಯಾಣ, ಉತ್ತರ ಪ್ರದೇಶ, ತೆಲಂಗಾಣ, ಪಶ್ಚಿಮ ಬಂಗಾಳ ಮತ್ತು ಗುಜರಾತ್ನಲ್ಲಿ 1,000 ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳು ದಾಖಲಾಗಿವೆ.
ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಜುಬೇರ್ ಬಂಧನ; ಜರ್ಮನಿ ಹೇಳಿಕೆಗೆ ಕಟುವಾಗಿ ಪ್ರತಿಕ್ರಿಯಿಸಿದ ಕೇಂದ್ರ
ಚೀನಾದ ಕಂಪನಿಗಳು ಭಾರತದ ಕಾನೂನು ಪಾಲಿಸಬೇಕು: ವಿದೇಶಾಂಗ ಸಚಿವಾಲಯ
ಶೀಘ್ರದಲ್ಲೇ ವಾಣಿಜ್ಯ ಹಾರಾಟ ನಡೆಸಲಿದೆ ‘ಆಕಾಶ ಏರ್’
ಫೋನ್ ಹಿಂತಿರುಗಿಸಲು ನಿರಾಕರಿಸಿದ್ದಕ್ಕೆ ಸ್ನೇಹಿತನ ಕೊಂದ ಪಾಪಿ
ಹಿಂದೂ ವ್ಯಕ್ತಿಯ ಅಂತಿಮ ವಿಧಿವಿಧಾನ ನೆರವೇರಿಸಿದ ಮುಸ್ಲಿಂ ಕುಟುಂಬ
ವಿವಾಹ ಜೀವನಕ್ಕೆ ಕಾಲಿರಿಸಿದ ಪಂಜಾಬ್ ಸಿಎಂ ಭಗವಂತ್ ಮಾನ್