Connect with us


      




ಆರೋಗ್ಯ

ಇಂದಿನಿಂದ 15ರಿಂದ 18 ವರ್ಷದ ಕಿರಿಯರಿಗೆ ಲಸಿಕೆ ಅಭಿಯಾನ ಆರಂಭ

UNI Kannada

Published

on

ನವದೆಹಲಿ, ಜ 3(ಯುಎನ್‌ ಐ) 15 ರಿಂದ 18 ವರ್ಷ ವಯಸ್ಸಿನ ಕಿರಿಯರಿಗೆ ಕೋವಿಡ್-19 ಲಸಿಕಾ ಅಭಿಯಾನ ದೇಶಾದ್ಯಂತ ಇಂದಿನಿಂದ ಪ್ರಾರಂಭವಾಗಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಡಿಸೆಂಬರ್ 25, 2021 ರಂದು, ಮಕ್ಕಳಿಗೆ ಕೊರೊನಾ ಲಸಿಕೆ, ಹಿರಿಯ ನಾಗರಿಕರಿಗೆ ಬೂಸ್ಟರ್ ಡೋಸ್ ನೀಡುವ ಮಹತ್ವದ ಘೋಷಣೆ ಮಾಡಿದ್ದರು. ಅದರಂತೆ ಇಂದಿನಿಂದ ದೇಶಾದ್ಯಂತ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಮೊದಲ ಹಂತದಲ್ಲಿ ಲಸಿಕೆ ನೀಡಲಾಗುತ್ತಿದೆ.

ಈ ಕುರಿತು ಮಾಹಿತಿ ನಿಡಿರುವ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ಪ್ರಸ್ತುತ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲಾಗುತ್ತದೆ. Co-WIN ಪೋರ್ಟಲ್‌ನಲ್ಲಿ ಶನಿವಾರದಿಂದವೇ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ಹೊರಡಿಸಿದ ಮಾರ್ಗಸೂಚಿಗಳ ಅನ್ವಯ ಲಸಿಕೆ ನೀಡಲಾಗುವುದು. ಕೋವಾಕ್ಸಿನ್​ನ ಹೆಚ್ಚುವರಿ ಡೋಸ್​ಗಳನ್ನು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕಳುಹಿಸುವುದಾಗಿ ವಿವರಿಸಿದ್ದಾರೆ.

15-18 ವರ್ಷ ವಯಸ್ಸಿನವರು ಕೋ-ವಿನ್ ವೆಬ್​ಸೈಟ್​ನಲ್ಲಿ ಅಸ್ತಿತ್ವದಲ್ಲಿರುವ ಖಾತೆಯ ಮೂಲಕ ಅಥವಾ ಬೇರೆ ಮೊಬೈಲ್ ಸಂಖ್ಯೆಯ ಮೂಲಕ ಹೊಸ ಖಾತೆಯನ್ನು ರಚಿಸಿ ಆನ್‌ಲೈನ್‌ನಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು.

ಅಷ್ಟೇ ಅಲ್ಲದೆ, ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಗುರುತಿನ ಚೀಟಿಗಳನ್ನು ಬಳಸಿಕೊಂಡು ಪೋರ್ಟಲ್‌ನಲ್ಲಿ ಲಸಿಕೆಗಾಗಿ ಹೆಸರು ನೋಂದಾಯಿಸಿಕೊಳ್ಳಬಹುದು. 2007 ರಲ್ಲಿ ಹಾಗೂ ಅದಕ್ಕಿಂತ ಮುನ್ನ ಜನಿಸಿದ ಎಲ್ಲಾ ಮಕ್ಕಳಿಗೂ ಲಸಿಕೆ ನೀಡಲಾಗುತ್ತಿದೆ.

ಜನವರಿ 1 ರಿಂದಲೇ ನೋಂದಣಿ ಪ್ರಕಿಯೆ ಪ್ರಾರಂಭವಾಗಿದ್ದು, ಹಿರಿಯ ನಾಗರಿಕರಿಗೆ ಬೂಸ್ಟರ್ ಡೋಸ್ ಅನ್ನು ಜನವರಿ 10 ರಿಂದ ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಇಲಾಖೆ ಈಗಾಗಲೇ ಘೋಷಿಸಿದೆ.

Continue Reading
Share