Connect with us


      
ಕರ್ನಾಟಕ

ಕೋವಿಡ್ ನಾಳೆ ಹೊಸ ಮಾರ್ಗಸೂಚಿ : ಸಿಎಂ ಬಸವರಾಜ್ ಬೊಮ್ಮಾಯಿ

Iranna Anchatageri

Published

on

ಬೆಂಗಳೂರು, ಡಿ 8 (ಯುಎನ್ಐ) ಇಂದು ಕೋವಿಡ್ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅನೌಪಚಾರಿಕ ಸಭೆ ನಡೆಸಿದ್ರು.ಕೊವೀಡ್ ಬಗ್ಗೆ ವಿವರ ಪಡೆದು ನಾಳಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಒಮೈಕ್ರಾನ್ ಹಾಗೂ ಕ್ಲಸ್ಟರ್ ಗೆ ಹೊಸ ಮಾರ್ಗಸೂಚಿ ಹೊರಡಿಸುವ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಇಂದು ಆರ್.ಟಿ.ನಗರದ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ಕೆಲವು ಜಿಲ್ಲೆಗಳಲ್ಲಿ ಒಮೈಕ್ರಾನ್ ಇಲ್ಲ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಇದೆ. ಹೀಗಾಗಿ ಬರುವಂತ ಡಿಸೆಂಬರ್, ಜನವರಿಯಲ್ಲಿ ನಿಯಂತ್ರಣ ಬಗ್ಗೆ ಚರ್ಚೆ ಮಾಡುತ್ತೇವೆ. ಶಾಲೆಗಳಿಗೆ ಮಾರ್ಗಸೂಚಿ ಹೊರಡಿಸುವ ಬಗ್ಗೆಯೂ ತೀರ್ಮಾನ ಕೈಗೊಳ್ಳುತ್ತೇವೆ ಅಂತಾ ತಿಳಿಸಿದರು.

ಆರೋಗ್ಯ ಸಿಬ್ಬಂದಿಗೆ ಬೂಸ್ಟರ್ ಡೋಸ್ ನೀಡುವ ಬಗ್ಗೆ ಕೇಂದ್ರ ಸರ್ಕಾರ ಪರಿಶೀಲನೆ ಮಾಡುತ್ತಿದೆ. ತಜ್ಞರ ಜೊತೆ ಚರ್ಚೆ ಮಾಡಿ, ತಿಳಿಸುವುದಾಗಿ ಕೇಂದ್ರ ಆರೋಗ್ಯ ಸಚಿವರು ಹೇಳಿದ್ದಾರೆ. ಅದಕ್ಕಾಗಿ ನಾವು ಕೂಡ ಕಾಯ್ತಿದ್ದೇವೆ. ಪೋಷಕರು, ಶಿಕ್ಷಕರಿಗೆ ಡಬಲ್ ಡೋಸ್ ವ್ಯಾಕ್ಸಿನ್ ಆಗಿರಬೇಕು ಅಂತಾ ಸೂಚಿಸಲಾಗಿದೆ. ಯಾರು ಆತಂಕ ಪಡುವ ಸ್ಥಿತಿ ಏನಿಲ್ಲ, ಅಗತ್ಯವೂ ಇಲ್ಲ. ಪೋಷಕರು ಕೂಡ ಆತಂಕ ಪಡಬಾರದು ಎಂದು ತಿಳಿಸಿದ ಸಿಎಂ, ಮಕ್ಕಳನ್ನು ಜಾಗೃತರಾಗಿ ನೋಡಿಕೊಳ್ಳಬೇಕು ಎಂದು ಹೇಳಿದರು. ಶಾಲೆಯಲ್ಲಿ ಸ್ವಚ್ಚತೆ  ಹಾಗೂ ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ವಸತಿ ಶಾಲೆಯಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆ ವಿವರ ಪಡೆಯುತ್ತೇವೆ ಎಂದು ಹೇಳಿದರು.

ಹೊಸ ವರ್ಷಾಚರಣೆಗೆ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿಗೆ ತರುವ ಬಗ್ಗೆ ಸುದ್ದಿಗಾರರು ಮುಖ್ಯಮಂತ್ರಿಗಳನ್ನು ಪ್ರಶ್ನೆ ಮಾಡಿದಾಗ “ಹೊಸ ವರ್ಷಚಾರಣೆ ಬಗ್ಗೆ‌ ನಮಗೆ ಗೊತ್ತಿದೆ. ಆದರೆ ಆ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಮಾಡಿಲ್ಲ. ಮುಂದೆ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಮಾಡ್ತೇವೆ” ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

ಕೋವಿಡ್ ಕುರಿತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಅಧಿಕಾರಗಳ ಸಭೆ

ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಅನೌಪಚಾರಿಕ ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ, ಹಣಕಾಸು ಇಲಾಖೆ ಎಸಿಎಸ್ ಐಎಸ್ ಎನ್ ಪ್ರಸಾದ, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತಾ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ ಗಿರಿನಾಥ ಮತ್ತು ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Share