Connect with us


      
ಕರ್ನಾಟಕ

ಬೆಳಗಾವಿ ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ, ಚೆಕ್ ಪೋಸ್ಟ್ ಗಳಲ್ಲಿ ಬಿಗಿ ಕ್ರಮ:ಮುಖ್ಯಮಂತ್ರಿ ಬೊಮ್ಮಾಯಿ

UNI Kannada

Published

on

ಬೆಳಗಾವಿ: ಜನವರಿ 02,(ಯು.ಎನ್.ಐ.) ಕಳೆದ ಒಂದು ವಾರದಲ್ಲಿ ಕೊರೊನಾ, ಒಮೈಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿವೆ. ಮಹಾರಾಷ್ಟ್ರ ಅದರಲ್ಲಿಯೂ ಮುಂಬೈಯಲ್ಲಿ ಪ್ರಕರಣಗಳು ಹೆಚ್ಚುತ್ತಿದೆ. ಮುಂಬೈ ಮತ್ತು ಕರ್ನಾಟಕದ ವಹಿವಾಟು ಜಾಸ್ತಿಯಿರುವ ಕಾರಣ ಗಡಿಜಿಲ್ಲೆಗಳಲ್ಲಿ ಹೆಚ್ಚಿನ ಕಟ್ಟೆಚ್ಚರವನ್ನು ವಹಿಸಲು ಈಗಾಗಲೇ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಎರಡು ಡೋಸ್ ಕಡ್ಡಾಯ ಲಸಿಕೆ ಹಾಗೂ ಆರ್ ಟಿಪಿಸಿಆರ್ ಪರೀಕ್ಷೆಯ ಪ್ರಮಾಣಪತ್ರ ಕಡ್ಡಾಯವಾಗಿ ಹೊಂದಿದವರಿಗೆ ಪ್ರವೇಶಕ್ಕೆ ಅನುಮತಿಸಲಾಗುವುದು. ಬೆಳಗಾವಿ ಚೆಕ್ ಪೋಸ್ಟ್ ಜೊತೆಗೆ ಅಕ್ಕಪಕ್ಕದ ಚೆಕ್  ಪೋಸ್ಟ್ಗಳನ್ನೂ ಬಿಗಿಗೊಳಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ವಿಜಯಪುರ ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಸುಮಾರು 11 ಚೆಕ್ ಪೋಸ್ಟ್ ಗಳನ್ನು ಮಾಡಲಾಗಿದೆ. ಬೆಳಗಾವಿಯಲ್ಲೂ ಚೆಕ್ ಪೋಸ್ಟ್ ಗಳನ್ನು ಮಾಡಲಾಗುವುದು.  ಪ್ರಯಾಣಿಕರಿಗೆ ಸಣ್ಣಪ್ರಮಾಣದ ತೊಂದರೆಯಾದರೂ ಬೆಳಗಾವಿ ಜನರ ಆರೋಗ್ಯದ ದೃಷ್ಟಿಯಿಂದ ಈ ಕ್ರಮ ಅನಿವಾರ್ಯವಾಗಿದೆ ಎಂದು ತಿಳಿಸಿದರು.

Share