Connect with us


      
ದೇಶ

ಕೋವಿಡ್;  ಕಟ್ಟುನಿಟ್ಟು ಕ್ರಮ ಜಾರಿ ಮಾಡಿದ ತೆಲಂಗಾಣ ಸರ್ಕಾರ

UNI Kannada

Published

on

ಹೈದರಾಬಾದ್: ಜನವರಿ 02,(ಯು.ಎನ್.ಐ.) ಒಂದೆಡೆ ಹೊಸದಾಗಿ ಬಂದಿರುವ ಕೋವಿಡ್ ರೂಪಾಂತರಿ ಒಮೈಕ್ರಾನ್ ಪ್ರಕರಣಗಳು ಮತ್ತು ಇನ್ನೊಂದೆಡೆ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ನಿರ್ಬಂಧಗಳನ್ನು ವಿಧಿಸಲಾಗಿದೆ. ರ್ಯಾಲಿಗಳು, ಸಾರ್ವಜನಿಕ ಸಭೆಗಳು, ಧಾರ್ಮಿಕ, ರಾಜಕೀಯ,ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ಎಲ್ಲಾ ರೀತಿಯ ಸಾಮೂಹಿಕ ಚಟುವಟಿಕೆಗಳನ್ನು ನಿಷೇಧಿಸಿ ಸರ್ಕಾರದ ಪ್ರದಾನ ಕಾರ್ಯದರ್ಶಿ ಸೋಮೇಶ್ ಕುಮಾರ್ ಶನಿವಾರ ಆದೇಶ ಹೊರಡಿಸಿದ್ದಾರೆ. ಈ ಆದೇಶಗಳು ಜನವರಿ 10ರವರೆಗೆ ಜಾರಿಯಲ್ಲಿರುತ್ತವೆ ಎಂದು ಹೇಳಲಾಗಿದೆ.

ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆಯಲ್ಲಿ ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಪ್ರಧಾನ ಕಾರ್ಯದರ್ಶಿ ಸೋಮೇಶ್ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. ಹಲವು ರಾಜ್ಯಗಳಲ್ಲಿ ಒಮೈಕ್ರಾನ್ ಪ್ರಕರಣಗಳು ಮತ್ತು ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಕಾರಣ ರಾಜ್ಯದಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ನಿರ್ದೇಶಿಸಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದವರಿಗೆ ರೂ.1000 ದಂಡ ವಿಧಿಸುವ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಆದೇಶಗಳನ್ನು ವಿಧಿಸಲಾಗಿದೆ. ಸಾರ್ವಜನಿಕ ಸಾರಿಗೆ ಸಂಸ್ಥೆಗಳು, ಅಂಗಡಿಗಳು, ಮಾಲ್‌ಗಳು, ಕಂಪನಿಗಳು, ಸರ್ಕಾರಿ ಮತ್ತು ಖಾಸಗಿ ಕಚೇರಿಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾರ್ವಜನಿಕರಿಗೆ ಭೌತಿಕ ಅಂತರ, ಐಆರ್ ಥರ್ಮಾಮೀಟರ್ / ಥರ್ಮಲ್ ಸ್ಕ್ಯಾನರ್ ಮತ್ತು ಸ್ಯಾನಿಟೈಸರ್ ಸೌಲಭ್ಯಗಳನ್ನು ಕಾಪಾಡಿಕೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆದೇಶ ಮಾಡಲಾಗಿದೆ.

Share