Connect with us


      




ದೇಶ

ಯುಪಿ ಸಂಪುಟದಲ್ಲಿ ‘ಕ್ವಿಟ್’ ಕೋಲಾಹಲ: ಬಿಜೆಪಿ ತೊರೆದ ಮತ್ತೊಬ್ಬ ಸಚಿವ

Published

on

ಲಕ್ನೋ: ಜನೆವರಿ 12 (ಯು.ಎನ್.ಐ.) ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸರ್ಕಾರದ ಸಂಪುಟವು ಕ್ವಿಟ್ ಕೋಲಾಹಲ ಎದುರಿಸುತ್ತಿದ್ದು, ಇದೀಗ ಮತ್ತೊಬ್ಬ ಸಚಿವ ದಾರಾ ಸಿಂಗ್ ಚೌಹಾಣ್ ಬಿಜೆಪಿ ಪಕ್ಷ ತೊರೆದಿದ್ದಾರೆ.

ಯೋಗಿ ಆದಿತ್ಯನಾಥ್ ಸಂಪುಟ ತೊರೆದ ಎರಡನೇ ಒಬಿಸಿ ಸಚಿವರಾಗಿದ್ದಾರೆ. ಮಂಗಳವಾರ ಸ್ವಾಮಿ ಪ್ರಸಾದ್ ಮೌರ್ಯ ಬಿಜೆಪಿ ತೊರೆದು ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ ಸೇರುವುದಾಗಿ ಘೋಷಿಸಿದ್ದರು. ಇವರು ತೊರೆದು ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.

ಇವರಲ್ಲದೇ ನಾಲ್ಕು ಶಾಸಕರು ಸಹ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಇವರು ಕೂಡ ಸಮಾಜವಾದಿ ಪಕ್ಷ ಸೇರಲು ಸಿದ್ಧರಾಗಿದ್ದಾರೆ. ಇದರಿಂದ ವಿಧಾನಸಭೆ ಚುನಾವಣೆ ಮುನ್ನ ಬಿಜೆಪಿಗೆ ಭಾರೀ ಹೊಡೆತ ಬೀಳುವ ಸಾಧ್ಯತೆ ಹೆಚ್ಚಾಗಿದೆ.

ನಾನು ಪಕ್ಷಕ್ಕೆ ಸಮರ್ಪಣಾ ಭಾವದಿಂದ ಕೆಲಸ ಮಾಡಿದ್ದೇನೆ ಆದರೆ ಹಿಂದುಳಿದ ವರ್ಗಗಳು, ದಲಿತರು, ರೈತರು ಮತ್ತು ನಿರುದ್ಯೋಗಿ ಯುವಕರ ಮೇಲಿನ ಈ ಸರ್ಕಾರದ ದಬ್ಬಾಳಿಕೆಯ ಧೋರಣೆ, ಹಿಂದುಳಿದವರು ಮತ್ತು ದಲಿತರ ಕೋಟಾವನ್ನು ನಿರ್ಲಕ್ಷಿಸಿದ್ದರಿಂದ ನನಗೆ ನೋವಾಗಿದೆ ಎಂದು ಚೌಹಾಣ್ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.

ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, “ಯಾವುದೇ ಕುಟುಂಬದ ಸದಸ್ಯರು ದಾರಿ ತಪ್ಪಿದರೆ, ತುಂಬಾ ನೋವಾಗುತ್ತದೆ. ನಾನು ಪಕ್ಷ ತೊರೆಯುವ ಗೌರವಾನ್ವಿತ ನಾಯಕರಲ್ಲಿ ಮಾತ್ರ ಮನವಿ ಮಾಡುತ್ತೇನೆ, ದಯವಿಟ್ಟು ಮುಳುಗುವ ಹಡಗನ್ನು ಹತ್ತಬೇಡಿ ಅದರಿಂದ ನಿಮಗೆ ನಷ್ಟವಾಗುತ್ತದೆ. ದಾರಾ ಸಿಂಗ್, ದಯವಿಟ್ಟು ನಿಮ್ಮ ನಿರ್ಧಾರವನ್ನು ಮರುಪರಿಶೀಲಿಸಿ, “ಕೇಶವ್ ಮೌರ್ಯ ಟ್ವೀಟ್ ಮಾಡಿದ್ದಾರೆ.

ಪೂರ್ವ ಯುಪಿಯಿಂದ ಬಂದಿರುವ ಚೌಹಾಣ್, ಮಾಯಾವತಿಯವರ ಬಹುಜನ ಸಮಾಜ ಪಕ್ಷ (ಬಿಎಸ್ಪಿ) ತೊರೆದ ನಂತರ 2015 ರಲ್ಲಿ ಬಿಜೆಪಿ ಸೇರಿದರು. ಅವರು 2009 ರಿಂದ 2014 ರವರೆಗೆ ಬಿಎಸ್ಪಿ ಸಂಸದರಾಗಿದ್ದರು.

ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿದ ಸ್ವಾಮಿ ಪ್ರಸಾದ್ ಮೌರ್ಯ ನನ್ನ ಈ ನಡೆ ಬಿಜೆಪಿಯಲ್ಲಿ ಭೂಕಂಪ ಉಂಟು ಮಾಡಿದೆ ಎಂದಿದ್ದಾರೆ.

ದೇಶ

ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ ಅಂತ್ಯ; ಶಾಲಾ-ಕಾಲೇಜುಗಳು ಬಂದ್

Published

on

ಹೊಸದಿಲ್ಲಿ: ಜನೆವರಿ 27 (ಯು.ಎನ್.ಐ.) ರಾಷ್ಟ್ರ ರಾಜಧಾನಿ ಜನರಿಗೆ ದೆಹಲಿ ಸರ್ಕಾರ ಗುಡ್ ನ್ಯೂಸ್ ನೀಡಿದೆ. ದೆಹಲಿಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿರುವ  ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ ಅನ್ನು ತೆಗೆದು ಹಾಕಲಾಗಿದೆ. ಇದಲ್ಲದೇ ಈಗ ಶೇ.50ರಷ್ಟು ಸಾಮರ್ಥ್ಯದೊಂದಿಗೆ ಸಿನಿಮಾ ಥಿಯೇಟರ್ ಗಳನ್ನು ತೆರೆಯಲು ಅನುಮತಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 7,498 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 29 ಮಂದಿ ಸಾವಿಗೀಡಾಗಿದ್ದಾರೆ. ಇನ್ನು ದೆಹಲಿಯಲ್ಲಿ ಬುಧವಾರ 5,760 ಕೊರೊನಾ ಪ್ರಕರಣಗಳು ದಾಖಲಾಗಿ 30 ಜನರು ಸಾವಿಗೀಡಾಗಿದ್ದರು.

ಡಿಡಿಎಂಎ ಸಭೆಯಲ್ಲಿ ಮಹತ್ವದ ನಿರ್ಧಾರ

ಸೋಂಕಿತ ಪ್ರಕರಣಗಳು ಕಡಿಮೆಯಾಗುತ್ತಿರುವುದರಿಂದ ದೆಹಲಿಯಲ್ಲಿ ಕೋವಿಡ್ ಗೈಡ್ ಲೈನ್ಸ್ ಗಳನ್ನು ಸಡಿಲಗೊಳಿಸಬೇಕೆಂಬ ಬಲವಾದ ಬೇಡಿಕೆ ಕೇಳಿಬಂದಿತ್ತು. ಈ ಒತ್ತಡಕ್ಕೆ ಮಣಿದಿರುವ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ಇಂದು ಮಹತ್ವದ ಸಭೆ ನಡೆಸಿತು. ಈ ಮಹತ್ವದ ಸಭೆಯಲ್ಲಿ ವಾರಾಂತ್ಯದ ಕರ್ಫ್ಯೂ ತೆಗೆದುಹಾಕುವುದು ಸೇರಿದಂತೆ ಕೆಲವು ನಿರ್ಬಂಧಗಳನ್ನು ಸಡಿಲಗೊಳಿಸುವ ನಿರ್ಧಾರ ಕೈಗೊಳ್ಳಲಾಯಿತು. ಆದರೆ, ರಾತ್ರಿ ಕರ್ಫ್ಯೂ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಮುಂದುವರಿಯುಲಿದೆ.

ದೆಹಲಿಯಲ್ಲಿ ಯಾವ್ಯಾವ ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದೆ?

– ಶುಕ್ರವಾರ ರಾತ್ರಿ 10 ರಿಂದ ಸೋಮವಾರ ಬೆಳಿಗ್ಗೆ 5 ರವರೆಗಿನ ವಾರಾಂತ್ಯದ ಕರ್ಫ್ಯೂನ್ನು ರದ್ದುಪಡಿಸಲಾಗಿದೆ.
– ಮದುವೆ ಸಮಾರಂಭದಲ್ಲಿ 200 ಜನರ ಮಿತಿ. ಈವರೆಗೆ ಇದ್ದ 15 ಮಂದಿ ಪಾಲ್ಗೊಳ್ಳಲು ಹಾಕಿದ್ದ ನಿರ್ಬಂಧವನ್ನು ತೆಗೆದು ಹಾಕಲಾಗಿದೆ.
– ದೆಹಲಿಯಲ್ಲಿ ಸಿನಿಮಾ ಹಾಲ್‌ ತೆರೆಯಲು ಅವಕಾಶ. ಆದರೆ, ಶೇ.50ರಷ್ಟು ಸಾಮರ್ಥ್ಯ ಹೊಂದಿರುವುದು ಕಡ್ಡಾಯ.
– ಬಾರ್ ಮತ್ತು ರೆಸ್ಟೋರೆಂಟ್‌ಗಳು ಶೇಕಡಾ 50ರಷ್ಟು ಆಸನ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ನಿರ್ದೇಶನ.

ದೆಹಲಿಯಲ್ಲಿ ಯಾವ್ಯಾವ ನಿರ್ಬಂಧಗಳು ಮುಂದುವರಿಯಲಿವೆ?

– ಶಾಲೆಗಳು, ಕಾಲೇಜುಗಳು ಮತ್ತು ಶಿಕ್ಷಣ ಸಂಸ್ಥೆಗಳು ಮುಚ್ಚಲ್ಪಡುತ್ತವೆ. ಶಾಲೆ ತೆರೆಯುವ ಬಗ್ಗೆ ಮುಂದಿನ ಸಭೆಯಲ್ಲಿ ಚರ್ಚೆ
– ರಾತ್ರಿ ಕರ್ಫ್ಯೂ ದೆಹಲಿಯಲ್ಲಿ ಮುಂದುವರಿಯಲಿದೆ.

ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ನೇತೃತ್ವದಲ್ಲಿ ನಡೆದ ಸಭೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡ ಉಪಸ್ಥಿತರಿದ್ದರು. ಡಿಡಿಎಂಎ ಇಂದು ಸಂಜೆ ಅಥವಾ ಶುಕ್ರವಾರ ಬೆಳಗ್ಗೆ ಆದೇಶ ಹೊರಡಿಸುವ ನಿರೀಕ್ಷೆಯಿದೆ. ಅಲ್ಲಿಯವರೆಗೆ ಈಗಿರುವ ನಿರ್ಬಂಧಗಳು ಮುಂದುವರಿಯಲಿವೆ.

Continue Reading

ದೇಶ

ಅನ್ಯ ಜಾತಿ ಹುಡುಗಿ ಮದುವೆಯಾದ ಮಗ: ತಾಯಿ ಮೇಲೆ ಹಲ್ಲೆ

Published

on

ಚೆನ್ನೈ: ಜನೆವರಿ 27 (ಯು.ಎನ್.ಐ.) ಅನ್ಯ ಜಾತಿಯ ಹುಡುಗಿಯನ್ನು ಮಗ ವಿವಾಹವಾದ ಕಾರಣ ತಾಯಿಯನ್ನು ದೀಪದ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ ಘಟನೆ ತಮಿಳುನಾಡಿನ ವಿರುದುನಗರ ಜಿಲ್ಲೆಯ ತಿರುಚುಲಿ ಬ್ಲಾಕ್‌ನ ಕೆ ವಾಗೈಕುಲಂ ಗ್ರಾಮದಲ್ಲಿ ನಡೆದಿದೆ.

ಹಲ್ಲೆಗೊಳದಾದ ಮಹಿಳೆಯೇ ಮೀನಾಕ್ಷಿ (೪೫). ಈಕೆಯ ಮಗ ಅದೇ ಗ್ರಾಮದ ಅನ್ಯ ಜಾತಿಯ ಹುಡುಗಿಯನ್ನು ವಿವಾಹವಾದ ಕಾರಣಕ್ಕೆ ತಾಯಿಯ ಮೇಲೆ ಹುಡುಗಿಯ ಸಂಬಂಧಿಕರು ಹಲ್ಲೆ ನಡೆಸಿದ್ದಾರೆ. ಮಹಿಳೆಯು ಅರುಪ್ಪುಕೊಟ್ಟೈ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಮೀನಾಕ್ಷಿಯು ಪರಾಳಚಿ ಠಾಣೆಯಲ್ಲಿ ಹಲ್ಲೆ ನಡೆಸಿದವರ ವಿರುದ್ಧ ದೂರು ನೀಡಿದ್ದು, ಬಾಲಕಿಯ ತಾಯಿ ಸೇರಿದಂತೆ 14 ಮಂದಿ ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೊಲೀಸರ ಪ್ರಕಾರ, ಜನವರಿ 22 ರಂದು ಮೀನಾಕ್ಷಿ ಅವರ ಮಗ ಅದೇ ಗ್ರಾಮದ ಬೇರೆ ಜಾತಿಯ ಹುಡುಗಿಯೊಂದಿಗೆ ಓಡಿಹೋಗಿ ವಿವಾಹವಾದರು. ನಂತರ ಆಶ್ರಯ ಕೋರಿ ಅರುಪ್ಪುಕೊಟ್ಟೈ ಎಲ್ಲಾ ಮಹಿಳಾ ಪೊಲೀಸ್ ಠಾಣೆಯನ್ನು ಸಂಪರ್ಕಿಸಿದರು. ಮೂರು ದಿನಗಳ ನಂತರ, ಜನವರಿ 25 ರಂದು, ಹುಡುಗಿಯ ಸಂಬಂಧಿಕರು ಮತ್ತು ಇತರರು ಮೀನಾಕ್ಷಿ ಅವರ ಮನೆಗೆ ನುಗ್ಗಿ ಅವಳನ್ನು ಹೊರಗೆಳೆದು, ದೀಪದ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದರು ಎಂದು ಹೇಳಿದರು.

Continue Reading

ದೇಶ

ಕಾಂಗ್ರೆಸ್ ಉಚ್ಛಾಟಿತ ನಾಯಕ ಕಿಶೋರ್ ಉಪಾಧ್ಯಾಯ ಬಿಜೆಪಿಗೆ ಸೇರ್ಪಡೆ

Published

on

ಡೆಹ್ರಾಡೂನ್: ಜನೆವರಿ 27 (ಯು.ಎನ್.ಐ.) ಉತ್ತರಾಖಂಡ ವಿಧಾನಸಭಾ ಚುನಾವಣೆಗೆ ಮುನ್ನ, ಉಚ್ಛಾಟಿತ ರಾಜ್ಯ ಕಾಂಗ್ರೆಸ್ ಮಾಜಿ ಮುಖ್ಯಸ್ಥ ಕಿಶೋರ್ ಉಪಾಧ್ಯಾಯ ಗುರುವಾರ ಭಾರತೀಯ ಜನತಾ ಪಕ್ಷ (ಬಿಜೆಪಿ) ಗೆ ಸೇರ್ಪಡೆಗೊಂಡಿದ್ದಾರೆ. ಉಪಾಧ್ಯಾಯ ಅವರು ಇಂದು ಬೆಳಗ್ಗೆ ಡೆಹ್ರಾಡೂನ್‌ನಲ್ಲಿರುವ ಬಿಜೆಪಿ ಕಚೇರಿಗೆ ಆಗಮಿಸಿದರು.

ಪಕ್ಷಕ್ಕೆ ಸೇರ್ಪಡೆಗೊಳ್ಳುವ ಮುನ್ನ ನಾನು ಈಗ ಹೊಸತೇನಾದರೂ ಮಾಡುತ್ತೇನೆ, ಮಾತನಾಡುವ ಸಮಯ ಬಂದಿದೆ” ಎಂದು ಹೇಳಿದರು.

ಬಿಜೆಪಿಗೆ ಸೇರ್ಪಡೆಗೊಂಡ ನಂತರ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಉಪಾಧ್ಯಾಯ, “ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಮಾತ್ರ ಉತ್ತರಾಖಂಡದ ಅಭಿವೃದ್ಧಿ ಸಾಧ್ಯ ಎಂದು ನಾನು ಭಾವಿಸುತ್ತೇನೆ ಮತ್ತು ಉತ್ತರಾಖಂಡವನ್ನು ಉತ್ತಮ ರಾಜ್ಯವಾಗಿಸಲು ನಾನು ಕೆಲಸ ಮಾಡಲು ಬಯಸುತ್ತೇನೆ” ಎಂದು ಹೇಳಿದರು.

“ತೆಹ್ರಿ ಮತ್ತು ಉತ್ತರಕಾಶಿಯಲ್ಲಿ ಆರ್‌ಎಸ್‌ಎಸ್ ಮತ್ತು ಬಿಜೆಪಿ ಮಾಡಿದ ಕೆಲಸಗಳಿಂದ ನಾನು ಪ್ರಭಾವಿತನಾಗಿದ್ದೇನೆ. ಬಿಜೆಪಿಯ ಭಾಗವಾಗಲು ನನಗೆ ಈ ಅವಕಾಶವನ್ನು ನೀಡಿದ ಪ್ರಹ್ಲಾದ್ ಜೋಶಿ ಅವರಿಗೆ ನಾನು ಆಭಾರಿಯಾಗಿದ್ದೇನೆ” ಎಂದು ಅವರು ಹೇಳಿದರು.

ಕಾಂಗ್ರೆಸ್‌ನಿಂದ ಹೊರಹಾಕಿದ ಹಿಂದಿನ ಕಾರಣದ ಕುರಿತು ಮಾತನಾಡುತ್ತಾ, “ಬಿಜೆಪಿಯೊಂದಿಗೆ ನಾನು ಇರುವ ಚಿತ್ರವು ವೈರಲ್ ಆಗಿದ್ದು ಅದನ್ನು ವಿಭಿನ್ನ ರೀತಿಯಲ್ಲಿ ವೈಭವೀಕರಿಸಲಾಗಿದೆ ಎಂದು ಹೇಳಿದರು.

ಬುಧವಾರ ಮುಂಜಾನೆ, ಉತ್ತರಾಖಂಡ್ ನಲ್ಲಿ ಪಕ್ಷದ ಮಾಜಿ ಮುಖ್ಯಸ್ಥ ಕಿಶೋರ್ ಉಪಾಧ್ಯಾಯ ಅವರನ್ನು “ಪಕ್ಷ ವಿರೋಧಿ ಚಟುವಟಿಕೆ”ಗಾಗಿ ಕಾಂಗ್ರೆಸ್ ಉಚ್ಚಾಟಿಸಿದೆ. ಅವರನ್ನು ಆರು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತೆಗೆದುಹಾಕಲಾಗಿದೆ ಎಂದು ಹೇಳಿದ್ದರು.

ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಜನವರಿ 26 ರಂದು ಬರೆದ ಪತ್ರದಲ್ಲಿ, “ಹಲವಾರು ಎಚ್ಚರಿಕೆಗಳ ನಡುವೆಯೂ ನೀವು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಕಾರಣ ತಕ್ಷಣವೇ ಜಾರಿಗೆ ಬರುವಂತೆ ಆರು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ನಿಮ್ಮನ್ನು ಹೊರಹಾಕಲಾಗಿದೆ ಎಂದು ಹೇಳಿತ್ತು.

ಕಿಶೋರ್ ಉಪಾಧ್ಯಾಯ ಅವರು 2014 ರಿಂದ 2017 ರವರೆಗೆ ಕಾಂಗ್ರೆಸ್ ನ ಉತ್ತರಾಖಂಡ ಘಟಕದ ಅಧ್ಯಕ್ಷರಾಗಿದ್ದರು. ಮೂಲಗಳ ಪ್ರಕಾರ, ಉಪಾಧ್ಯಾಯ ಅವರು ತೆಹ್ರಿ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ. ಏತನ್ಮಧ್ಯೆ, 70 ಸದಸ್ಯ ಬಲದ ಉತ್ತರಾಖಂಡ ವಿಧಾನಸಭೆಗೆ ಫೆಬ್ರವರಿ 14 ರಂದು ಚುನಾವಣೆ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

Continue Reading
Advertisement
ಕರ್ನಾಟಕ1 hour ago

ಸಿಎಂ ಭೇಟಿ ಮಾಡಿದ ಚಿಕ್ಕಮಗಳೂರು ಶಾಸಕರ ನಿಯೋಗ

ಬೆಂಗಳೂರು: ಜನೆವರಿ 27 (ಯು.ಎನ್.ಐ.) ಶಾಸಕ ಹಾಗೂ ಬಿಜೆಪಿ ಪ್ರಧಾನ ಕಾರ್ಯಯದರ್ಶಿ ಸಿ ಟಿ ರವಿ ನೇತೃತ್ವದಲ್ಲಿ ಚಿಕ್ಕಮಗಳೂರು ಜಿಲ್ಲೆ ಶಾಸಕರು ಮುಖ್ಯಮಂತ್ರಿ‌ ಬಸವರಾಜ ಎಸ್ ಬೊಮ್ಮಾಯಿ...

ಕರ್ನಾಟಕ1 hour ago

ಸಿಎಂ‌ ಇಬ್ರಾಹಿಂ ಬಂದರೆ ಸ್ವಾಗತ: ಎಚ್‌‌‌ಡಿಕೆ

ಬೆಂಗಳೂರು:ಜನೆವರಿ 27 (ಯು.ಎನ್.ಐ.) ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಸಿಎಂ‌ ಇಬ್ರಾಹಿಂ‌ ಅವರು ಜಾತ್ಯತೀತ ಜನತಾ ದಳಕ್ಕೆ ಬಂದರೆ ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.‌ಕುಮಾರಸ್ವಾಮಿ ಹೇಳಿದ್ದಾರೆ....

ದೇಶ2 hours ago

ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ ಅಂತ್ಯ; ಶಾಲಾ-ಕಾಲೇಜುಗಳು ಬಂದ್

ಹೊಸದಿಲ್ಲಿ: ಜನೆವರಿ 27 (ಯು.ಎನ್.ಐ.) ರಾಷ್ಟ್ರ ರಾಜಧಾನಿ ಜನರಿಗೆ ದೆಹಲಿ ಸರ್ಕಾರ ಗುಡ್ ನ್ಯೂಸ್ ನೀಡಿದೆ. ದೆಹಲಿಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿರುವ  ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ ಅನ್ನು...

ಕ್ರೀಡೆ2 hours ago

ಟೀಂ ಇಂಡಿಯಾ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಟ್ವಿಟರ್ ಖಾತೆ ಹ್ಯಾಕ್

ಮುಂಬೈ: ಜನೆವರಿ ೨೭ (ಯು.ಎನ್.ಐ.) ಇತ್ತೀಚೆಗೆ ಬಿಟ್‌ಕಾಯಿನ್ ಸ್ಕ್ಯಾಮರ್ ಗಳು ಟ್ವಿಟರ್ ಖಾತೆಗಳನ್ನು ಹ್ಯಾಕ್ ಮಾಡುತ್ತಿದ್ದು, ಈಗಾಗಲೇ ಸಾಕಷ್ಟು ಮಂದಿಯ ಟ್ವಿಟರ್ ಖಾತೆ ಇದೇ ವಿಚಾರಕ್ಕೆ ಹ್ಯಾಕ್...

ಸಿನೆಮಾ3 hours ago

ನಾಗಚೈತನ್ಯ, ಸಮಂತಾ ವಿಚ್ಛೇದನಕ್ಕೆ ನಟ ನಾಗಾರ್ಜುನ ಕೊಟ್ಟ ಕಾರಣ ಏನು?

ಹೈದರಾಬಾದ್: ಜನೆವರಿ 27 (ಯು.ಎನ್.ಐ.) ಟಾಲಿವುಡ್ ಸ್ಟಾರ್ ಗಳಾದ ನಾಗಚೈತನ್ಯ ಮತ್ತು ಸಮಂತಾ ರುತ್ ಪ್ರಭು 2021ರಲ್ಲಿ ವಿಚ್ಛೇದನ ಘೋಷಿಸಿದರು. ಅಂದಿನಿಂದ ಇಮದಿನವರೆಗೆ ಅವರ ನಡುವಿನ ಪ್ರತ್ಯೇಕತೆಗೆ...

ದೇಶ3 hours ago

ಅನ್ಯ ಜಾತಿ ಹುಡುಗಿ ಮದುವೆಯಾದ ಮಗ: ತಾಯಿ ಮೇಲೆ ಹಲ್ಲೆ

ಚೆನ್ನೈ: ಜನೆವರಿ 27 (ಯು.ಎನ್.ಐ.) ಅನ್ಯ ಜಾತಿಯ ಹುಡುಗಿಯನ್ನು ಮಗ ವಿವಾಹವಾದ ಕಾರಣ ತಾಯಿಯನ್ನು ದೀಪದ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ ಘಟನೆ ತಮಿಳುನಾಡಿನ ವಿರುದುನಗರ ಜಿಲ್ಲೆಯ ತಿರುಚುಲಿ...

ಸಿನೆಮಾ3 hours ago

‘ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ಳುತ್ತಿದ್ದಾರೆ’ – ನಟಿ ಶ್ವೇತಾ ತಿವಾರಿ

ಭೋಪಾಲ್: ಜನೆವರಿ 27 (ಯು.ಎನ್.ಐ.) ಕಿರುತೆರೆ ಹಾಗೂ ಹಿಂದಿ ಫಿಲಂ ನಟಿ ಶ್ವೇತಾ ತಿವಾರಿ ದೇವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಫ್ಯಾಶನ್ ಸಂಬಂಧಿತ ವೆಬ್ ಸರಣಿಯ...

ಸಿನೆಮಾ3 hours ago

ವಿವಾಹ ಜೀವನಕ್ಕೆ ಕಾಲಿರಿಸಿದ ಮೌನಿರಾಯ್, ಸೂರಜ್ ನಂಬಿಯಾರ್

ಪಣಜಿ: ಜನೆವರಿ 27 (ಯು.ಎನ್.ಐ.) ಬಾಲಿವುಡ್ ನಟಿ ಮೌನಿ ರಾಯ್ ಮತ್ತು ಉದ್ಯಮಿ ಸೂರಜ್ ನಂಬಿಯಾರ್ ಇಂದು ಗೋವಾದಲ್ಲಿ ವಿವಾಹ ಜೀವನಕ್ಕೆ ಕಾಲಿರಿಸಿದ್ದಾರೆ. ಇವರ ವಿವಾಹದ ಫೋಟೋಗಳು...

ದೇಶ4 hours ago

ಕಾಂಗ್ರೆಸ್ ಉಚ್ಛಾಟಿತ ನಾಯಕ ಕಿಶೋರ್ ಉಪಾಧ್ಯಾಯ ಬಿಜೆಪಿಗೆ ಸೇರ್ಪಡೆ

ಡೆಹ್ರಾಡೂನ್: ಜನೆವರಿ 27 (ಯು.ಎನ್.ಐ.) ಉತ್ತರಾಖಂಡ ವಿಧಾನಸಭಾ ಚುನಾವಣೆಗೆ ಮುನ್ನ, ಉಚ್ಛಾಟಿತ ರಾಜ್ಯ ಕಾಂಗ್ರೆಸ್ ಮಾಜಿ ಮುಖ್ಯಸ್ಥ ಕಿಶೋರ್ ಉಪಾಧ್ಯಾಯ ಗುರುವಾರ ಭಾರತೀಯ ಜನತಾ ಪಕ್ಷ (ಬಿಜೆಪಿ)...

ಕ್ರೀಡೆ4 hours ago

ವೆಸ್ಟ್ ಇಂಡೀಸ್ ತಂಡ ಪ್ರಕಟ; ಕೆಮರ್ ರೋಚ್‌ಗೆ ಬುಲಾವ್!

ಹೊಸದಿಲ್ಲಿ: ಜನೆವರಿ 27 (ಯು.ಎನ್.ಐ.) ಫೆಬ್ರುವರಿ 6 ರಿಂದ ಆರಂಭವಾಗಲಿರುವ ಭಾರತ ವಿರುದ್ಧದ ಏಕದಿನ ಸರಣಿಗೆ ವೆಸ್ಟ್ ಇಂಡೀಸ್ ತಂಡವನ್ನು ಪ್ರಕಟಿಸಿದೆ. ವೆಸ್ಟ್ ಇಂಡೀಸ್ ಕೆಮರ್ ರೋಚ್,...

ಟ್ರೆಂಡಿಂಗ್

Share