Published
5 months agoon
By
Vanitha Jainಚೆನ್ನೈ, ಡಿಸೆಂಬರ್ 11(ಯು.ಎನ್.ಐ) ತಮಿಳುನಾಡಿನ ದಿವಂಗತ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಪೋಯಸ್ ಗಾರ್ಡನ್ನಲ್ಲಿರುವ ವೇದ ನಿವಾಸವು ಸೋದರ ಸೊಸೆ ದೀಪಾ ಜಯಕುಮಾರ್ ಅವರ ಕೈ ಸೇರಿದೆ. ಚೆನ್ನೈ ಜಿಲ್ಲಾಡಳಿತವು ಮನೆಯ ಕೀಯನ್ನು ದೀಪಾ ಜಯಕುಮಾರ್ ಅವರಿಗೆ ಹಸ್ತಾಂತರಿಸಿದೆ.
“ನನ್ನ ಚಿಕ್ಕಮ್ಮನ ಅನುಪಸ್ಥಿತಿಯಲ್ಲಿ ನಾನು ಇದೇ ಮೊದಲ ಬಾರಿಗೆ ಈ ಮನೆಗೆ ಭೇಟಿ ನೀಡುತ್ತಿದ್ದೇನೆ. ಚಿಕ್ಕಮ್ಮ ಇಲ್ಲದ ಮನೆ ಈಗ ಬರಡು ಮತ್ತು ಖಾಲಿ ಎನಿಸುತ್ತಿದೆ. ನನ್ನ ಚಿಕ್ಕಮ್ಮ ಬಳಸುತ್ತಿದ್ದ ಪೀಠೋಪಕರಣಗಳನ್ನು ತೆಗೆದುಹಾಕಲಾಗಿದೆ” ಎಂದು ದೀಪಾ ತನ್ನ ಚಿಕ್ಕಮ್ಮನ ಮನೆಯಲ್ಲಿ ವಾಸಿಸುವ ಆಸಕ್ತಿಯನ್ನು ವ್ಯಕ್ತಪಡಿಸಿದರು.
ನವೆಂಬರ್ 24 ರಂದು ಮದ್ರಾಸ್ ಹೈಕೋರ್ಟ್ನ ಏಕಸದಸ್ಯ ಪೀಠವು ಜಯಲಲಿತಾ ಅವರ ನಿವಾಸ ವೇದ ನಿಲಯವನ್ನು ಸ್ವಾಧೀನಪಡಿಸಿಕೊಳ್ಳುವ ಆದೇಶವನ್ನು ರದ್ದುಗೊಳಿಸಿ ಮನೆಯನ್ನು ವಾರಸುದಾರರಿಗೆ ಹಸ್ತಾಂತರಿಸುವಂತೆ ಆದೇಶಿಸಿತು. ತದನಂತರ ಚೆನ್ನೈ ಜಿಲ್ಲಾಡಳಿತವು ಕೀಗಳನ್ನು ನೀಡಿದೆ.
ರಾಜ್ಯದಲ್ಲಿ ಹಿಂದಿನ ಎಐಎಡಿಎಂಕೆ ಆಡಳಿತವು ಜಯಲಲಿತಾ ಅವರ ಕುಟುಂಬಸ್ಥರನ್ನು ಸಂಪರ್ಕಿಸದೆ ಮನೆಯನ್ನು ಸ್ವಾಧೀನಪಡಿಸಿಕೊಂಡಿತು ಮತ್ತು ಆ ಮನೆಯನ್ನು ಸ್ಮಾರಕವನ್ನಾಗಿ ಪರಿವರ್ತಿಸಿತು.
ಹಿಂದಿನ ಎಐಎಡಿಎಂಕೆ ಸರ್ಕಾರವು ಬಂಗಲೆಯನ್ನು ಸ್ವಾಧೀನಪಡಿಸಿಕೊಂಡಿರುವುದನ್ನು ಪ್ರಶ್ನಿಸಿ ದೀಪಾ ಮತ್ತು ಅವರ ಸಹೋದರ ದೀಪಕ್ ಅರ್ಜಿ ಸಲ್ಲಿಸಿದ್ದರು. ಇದೀಗ ಮದ್ರಾಸ್ ಹೈಕೋರ್ಟ್ ತೀರ್ಪಿನ ಪ್ರಕಾರ ಜಯಲಲಿತಾ ಮನೆ ದೀಪಾ ಹೆಸರಿಗೆ ದೊರೆತಿದೆ ಮತ್ತು ಕುಟುಂಬಕ್ಕೆ ಪಾವತಿಸಬೇಕಾದ ನ್ಯಾಯಾಲಯದಲ್ಲಿ ಠೇವಣಿ ಇಟ್ಟಿರುವ ಪರಿಹಾರದ ಹಣವನ್ನು ಹಿಂಪಡೆಯುವಂತೆ ರಾಜ್ಯ ಸರ್ಕಾರವನ್ನು ಕೇಳಿದೆ.
ಬಹಿರಂಗ ಕ್ಷಮೆಯಾಚಿಸುವಂತೆ ದೆಹಲಿ ಪೊಲೀಸರಿಗೆ ನೋಟಿಸ್ ಕಳುಹಿಸಿದ ಎಎಪಿ ಶಾಸಕ
ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಇಳಿಸಿದ ಮಹಾರಾಷ್ಟ್ರ ಸರ್ಕಾರ
ಅಜಯ್ ದೇವಗನ್ ರಂತೆ ಸ್ಟಂಟ್ ಪ್ರದರ್ಶನ; ಖಾಕಿ ಅತಿಥಿಯಾದ ಯುವಕ
ಬೆಚ್ಚಿಬೀಳಿಸುವ ಪ್ಲಾನ್!; ಮನೆಯನ್ನೇ ಗ್ಯಾಸ್ ಚೇಂಬರ್ ಮಾಡಿಕೊಂಡು ಮೂವರ ಆತ್ಮಹತ್ಯೆ!
ಥಾಮಸ್ ಕಪ್ ವಿಜೇತ ಲಕ್ಷ್ಯಸೇನ್ ಬಳಿ ‘ಆ ಸ್ವೀಟ್’ ತರಲು ಹೇಳಿದ್ದರಂತೆ ಪ್ರಧಾನಿ ಮೋದಿ
ರಾಂಬನ್-ಬನಿಹಾಲ್ ಸುರಂಗ ಕುಸಿತ: ತನಿಖೆಗೆ ಕೇಂದ್ರದಿಂದ ಸಮಿತಿ ರಚನೆ