Published
6 months agoon
By
UNI Kannadaನವದೆಹಲಿ, ಜ 9(ಯುಎನ್ ಐ) ರಾಷ್ಟ್ರ ರಾಜಧಾನಿಯಲ್ಲಿ ದೆಹಲಿಯಲ್ಲಿ ಲಾಕ್ ಡೌನ್ ವಿಧಿಸುವ ಯಾವುದೇ ಆಲೋಚನೆ ಇಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ. ಜನರು ಮಾಸ್ಕ್ ಧರಿಸಿ ದೈಹಿಕ ಅಂತರ ಪಾಲಿಸಿದರೆ ಲಾಕ್ಡೌನ್ ಅಗತ್ಯವಿರುವುದಿಲ್ಲ ಎಂದು ಅವರು ಹೇಳಿದರು. ಕೊರೊನಾ ಮೂರನೇ ಅಲೆಯ ತೀವ್ರತೆ ಕಡಿಮೆಯಿದ್ದು, ಸಾಂಕ್ರಾಮಿಕ ಪ್ರಸರಣ ತಡೆಗೆ ಕೆಲವು ನಿರ್ಬಂಧಗಳನ್ನು ವಿಧಿಸಿದರೆ ಸಾಕು ಎಂದು ಭಾನುವಾರ ಹೇಳಿದ್ದಾರೆ. ಜನರು ನಿರ್ಲಕ್ಷ್ಯ ವಹಿಸಿದರೆ ಕಠಿಣ ನಿರ್ಧಾರ ಕೈಗೊಳ್ಳಬೇಕಾಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.
ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಪರಿಸ್ಥಿತಿ ಪರಾಮರ್ಶೆ ನಡೆಸಲು ನಾಳೆ ಮತ್ತೊಮ್ಮೆ ಸಭೆ ಸೇರಲಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಈ ನಡುವೆ ಇತ್ತೀಚಿಗೆ ಕೋವಿಡ್ ಸೋಂಕಿಗೆ ಒಳಗಾಗಿದ್ದ ಅರವಿಂದ್ ಕೇಜ್ರಿವಾಲ್ ಚೇತರಿಸಿಕೊಂಡಿದ್ದಾರೆ. ಈ ವಿಷಯವನ್ನು ಅವರು ಟ್ವಿಟರ್ ಮೂಲಕ ತಿಳಿಸಿದ್ದಾರೆ. . ಈ ತಿಂಗಳ 4 ರಂದು ಕೋವಿಡ್ ಸೋಂಕು ಇರುವುದು ದೃಢಪಟ್ಟಿತ್ತು. ಇದರಿಂದಾಗಿ ಅವರು ಐಸೋಲೇಶನ್ಗೆ ತೆರಳಿದ್ದರು. ಸೋಂಕಿನ ಲಘು ಲಕ್ಷಣಗಳಿದ್ದ ಕಾರಣ ಅವರು ಮನೆಯಲ್ಲಿ ಸ್ವಯಂ ನಿರ್ಬಂಧಕ್ಕೊಳಗಾಗಿ, ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ