Connect with us


      
ದೇಶ

ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ; ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ: ಅರವಿಂದ್ ಕೇಜ್ರಿವಾಲ್

Published

on

ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ; ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ: ಅರವಿಂದ್ ಕೇಜ್ರಿವಾಲ್

ನವದೆಹಲಿ: ಜನೆವರಿ 14 (ಯು.ಎನ್.ಐ.) ಕೋವಿಡ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ ಆದರೆ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಾಗರೀಕರಿಗೆ ಧೈರ್ಯ ತುಂಬಿದ್ದಾರೆ.

ಕೊರೋನಾ ಪ್ರಕರಣಗಳು ಹೆಚ್ಚಳ ಕಂಡರೂ ಆಸ್ಪತ್ರೆಗೆ ದಾಖಲಾಗುತ್ತಿರುವವರ ಮತ್ತು ಸಾವಿಗೆ ತುತ್ತಾಗುತ್ತಿರುವುದು ಕಡಿಮೆಯಾಗಿದೆ ಎಂದು ಹೇಳಿದರು.
ಜನರು ಜವಾಬ್ದಾರಿಯುತವಾಗಿ ವರ್ತಿಸಬೇಕು ಮತ್ತು ಸರ್ಕಾರವು ಕೋವಿಡ್ ನಿಯಂತ್ರಣಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ಮಾಡಿದೆ ಮತ್ತು ಆಸ್ಪತ್ರೆಯಲ್ಲಿ ಸಾಕಷ್ಟು ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ ಎಂದು ಭರವಸೆ ನೀಡಿದರು.

“ಗಾಬರಿಪಡುವ ಅಗತ್ಯವಿಲ್ಲ. ಪ್ರಕರಣಗಳು ಹೆಚ್ಚಿವೆ ಆದರೆ ಆಸ್ಪತ್ರೆಗೆ ದಾಖಲಾಗುತ್ತಿರುವವರ ಮತ್ತು ಸಾವಿಗೀಡಾಗುತ್ತಿರುವವರ ಸಂಖ್ಯೆ ಕಡಿಮೆಯಾಗಿದೆ. ನಾವು ಎಲ್ಲಾ ಸಿದ್ಧತೆಗಳನ್ನು ಮಾಡಿದ್ದೇವೆ ಮತ್ತು ಹಾಸಿಗೆಗಳ ಕೊರತೆಯಿಲ್ಲ” ಎಂದು ಕೇಜ್ರಿವಾಲ್ ತಿಳಿಸಿದರು.

ದೇಶ

ಅರುಣಾಚಲದಿಂದ ನಾಪತ್ತೆಯಾಗಿದ್ದ ಯುವಕ ಚೀನಾ ಗಡಿಯಲ್ಲಿ ಪತ್ತೆ!

Published

on

ಹೊಸದಿಲ್ಲಿ: ಜನೆವರಿ 23 (ಯು.ಎನ್.ಐ.) ಅರುಣಾಚಲ ಪ್ರದೇಶದಿಂದ ನಾಪತ್ತೆಯಾಗಿದ್ದ ಭಾರತೀಯ ಯುವಕ ಚೀನಾ ಗಡಿಯಲ್ಲಿ ಪತ್ತೆಯಾಗಿದ್ದಾನೆ. ಈ ಬಗ್ಗೆ ಚೀನಾ ಸೈನಿಕರು ಭಾರತೀಯ ಯೋಧರಿಗೆ ಮಾಹಿತಿ ನೀಡಿದ್ದು, ಭಾರತಕ್ಕೆ ಮರಳಿ ಹಸ್ತಾಂತರಿಸಲು ಔಪಚಾರಿಕ ಪ್ರಕ್ರಿಯೆಗಳು ಪೂರ್ಣಗೊಳ್ಳುತ್ತಿವೆ.

ಅರುಣಾಚಲ ಪ್ರದೇಶದ ಸಿಯುಂಗಾಲಾದ ಲುಂಗ್ಟಾ ಜೋರ್ ಪ್ರದೇಶದ ನಿವಾಸಿ 17 ವರ್ಷದ ಮಿರಮ್ ತರನ್ ಜನೆವರಿ 18ರಂದು ನಾಪತ್ತೆಯಾಗಿದ್ದ. ಈ ಬಗ್ಗೆ ಅರುಣಾಚಲ ಪೂರ್ವದ ಸಂಸದ ತಪಿರ್ ಗಾವೊ ಅವರು ಮೊದಲ ಬಾರಿಗೆ ಮಾಹಿತಿ ನೀಡಿದ್ದರು. ಚೀನಾ ಸೈನಿಕರು ಈ ಯುವಕನನ್ನು ಸೆರೆ ಹಿಡಿದಿದ್ದರು ಎಂದು ಗಾವೋ ಆರೋಪ ಮಾಡಿದ್ದರು. ಇದಾದ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹ ಚೀನಾದಿಂದ ಭಾರತೀಯ ಯುವಕ ಅಪಹರಣಕ್ಕೊಳಗಾಗಿರುವುದನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಅರುಣಾಚಲದಿಂದ ಯುವಕ ಕಣ್ಮರೆಯಾದ ಬಳಿಕ ಭಾರತೀಯ ಸೇನೆ ಮಿರಮ್ ಗಾಗಿ ಹುಡುಕಾಟ ಆರಂಭಿಸಿದ್ದರು. ಅಲ್ಲದೆ, ಚೀನಾ ಪಿಎಲ್ಎಗೆ ಈ ಬಗ್ಗೆ ಮಾಹಿತಿ ನೀಡಿದ್ದರು. ಆದರೆ, ಮೊದಲಿಗೆ ಈ ಯುವಕನ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ ಎಂದು ಚೀನಾ ಹೇಳಿತ್ತು. ಆದರೆ ಇಂದು ತಮ್ಮ ಪ್ರದೇಶದಲ್ಲಿ ಯುವಕನೊಬ್ಬ ಪತ್ತೆಯಾಗಿದ್ದಾನೆ ಎಂದು ಚೀನಾ ಯೋಧರು ಭಾರತೀಯ ಸೇನೆಗೆ ತಿಳಿಸಿದ್ದಾರೆ.

ಅಸ್ಸಾಂನ ತೇಜ್‌ಪುರದಲ್ಲಿ ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಹರ್ಷವರ್ಧನ್ ಪಾಂಡೆ, ಅರುಣಾಚಲ ಪ್ರದೇಶದಿಂದ ನಾಪತ್ತೆಯಾಗಿರುವ ಯುವಕ ಪತ್ತೆಯಾಗಿದ್ದಾನೆ ಎಂದು ಚೀನಿ ಸೇನೆ ಮಾಹಿತಿ ನೀಡಿದೆ ಎಂದು ತಿಳಿಸಿದ್ದಾರೆ. ಈ ಯುವಕರನ್ನು ಭಾರತಕ್ಕೆ ಹಸ್ತಾಂತರಿಸಲು ಚೀನಾ ಸೇನೆಯೊಂದಿಗೆ ಸೂಕ್ತ ಕ್ರಮ ಅನುಸರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

Continue Reading

ದೇಶ

ನೇತಾಜಿ ಸುಭಾಷ್ ಚಂದ್ರ ಬೋಸ್ ಜಯಂತಿ… ದೇಶಾದ್ಯಂತ ಪರಾಕ್ರಮ ದಿನವಾಗಿ ಆಚರಣೆ

Published

on

By

ನವದೆಹಲಿ, ಜ ೨೩( ಯುಎನ್ ಐ) ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ೧೨೫ನೇ ಜನ್ಮಜಯಂತಿ ಇಂದು. ದೇಶಾದ್ಯಂತ ಪರಾಕ್ರಮ ದಿನವಾಗಿ ನೇತಾಜಿ ಜಯಂತಿಯನ್ನು ಆಚರಿಸಲಾಗುತ್ತಿದೆ.
ಸ್ವಾತಂತ್ರ್ಯ ಸೇನಾನಿ ಗೆ ಗೌರವ ಸಲ್ಲಿಸುವ ಉದ್ದೇಶದಿಂದ ದೆಹಲಿಯ ಇಂಡಿಯಾ ಗೇಟ್ ಬಳಿ ಇಂದು ಸಂಜೆ ೬ ಗಂಟೆಗೆ ಸುಭಾಷ್ ಚಂದ್ರ ಬೋಸ್ ಅವರ ಹಾಲೋಗ್ರಾಂ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಲಿದ್ದಾರೆ.
ಈ ಜಾಗದಲ್ಲಿ ನೇತಾಜಿಯವರ ೨೮ ಅಡಿ ಎತ್ತರ ಮತ್ತು ೬ ಅಡಿ ಅಗಲದ ಗ್ರಾನೈಟ್ ಪ್ರತಿಮೆಯನ್ನು ಸ್ಥಾಪಿಸಲು ಕೇಂದ್ರ ಸರಕಾರ ನಿರ್ಧರಿಸಿದೆ. ಈ ಪ್ರತಿಮೆ ಸ್ಥಾಪನೆಯಾಗುವವರೆಗೆ ಹಾಲೋಗ್ರಾಂ ಪ್ರತಿಮೆ ಇಲ್ಲಿ ನೇತಾಜಿಯವರ ಸಾಧನೆಯನ್ನು ಬಿಂಬಿಸಲಿದೆ.ರೆ.
ಇದೇ ವೇಳೆ ೨೦೧೯, ೨೦೨೦ ಮತ್ತು ೨೦೨೧ನೇ ಸಾಲಿನ ಸುಭಾಷ್ ಚಂದ್ರ ಬೋಸ್ ಆಪ್ದಾ ಪ್ರಬಂಧನ್ ಪುರಸ್ಕಾರಗಳನ್ನು ಪ್ರಧಾನಿ ನರೇಂದ್ರ ಮೋದಿ ಪ್ರದಾನ ಮಾಡಲಿದ್ದಾರೆ.
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕ್ರಾಂತಿಕಾರಿ ಹೋರಾಟಗಾರರಲ್ಲಿ ಪ್ರಮುಖ ಸ್ಥಾನ ಹೊಂದಿದ್ದು, ಆಜಾದ್ ಹಿಂದ್ ಫೌಜ್ ಸೇನೆಯನ್ನು ಮತ್ತೆ ಬಲಗೊಳಿಸುವ ಮೂಲಕ ದೇಶದ ಯುವಕರಲ್ಲಿ ಸ್ವಾತಂತ್ರ್ಯದ ಕಿಚ್ಚು ಹಚ್ಚಿದ್ದರು.
**
ಸುಭಾಷ ಚಂದ್ರ ಬೋಸ್ ಜನ್ಮಜಯಂತಿಯಂದು ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ ಸೇರಿದಂತೆ ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ.
ಟ್ವೀಟ್ ಮೂಲಕ ನೇತಾಜಿಯವರಿಗೆ ಗೌರವ ಸಲ್ಲಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ೧೨೫ ನೇ ಜನ್ಮದಿನದಂದು ದೇಶವು ಕೃತಜ್ಞತೆಯಿಂದ ಗೌರವ ಸಲ್ಲಿಸುತ್ತದೆ. ಆಜಾದ್ ಹಿಂದ್- ಮುಕ್ತ ಭಾರತದ ಕಲ್ಪನೆಯ ಬದ್ಧತೆ ಪೂರೈಸಲು ತೆಗೆದುಕೊಂಡ ಧೈರ್ಯದ ಹೆಜ್ಜೆಗಳು ಅವರನ್ನು ರಾಷ್ಟ್ರೀಯ ಐಕಾನ್ ಆಗಿ ರೂಪಿಸಿತು. ಅವರ ಆದರ್ಶ, ತ್ಯಾಗ ಪ್ರತಿಯೊಬ್ಬ ಭಾರತೀಯರಿಗೆ ಶಾಶ್ವತವಾಗಿ ಸ್ಫೂರ್ತಿ ನೀಡುತ್ತವೆ ಎಂದಿದ್ದಾರೆ.
ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು, ಮಹಾನ್ ರಾಷ್ಟ್ರೀಯವಾದಿ, ಸ್ವಾತಂತ್ರ್ಯ ಹೋರಾಟಗಾರ ಮತ್ತು ದೂರದೃಷ್ಟಿಯ ನಾಯಕ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದಂದು ಗೌರವಪೂರ್ವಕ ನಮನಗಳು. ನೇತಾಜಿಯವರ ಅದಮ್ಯ ಧೈರ್ಯ ಮತ್ತು ರಾಷ್ಟ್ರಕ್ಕೆ ನಿಸ್ವಾರ್ಥ ಸೇವೆಯನ್ನು ಗೌರವಿಸಲು ನಾವು ಈ ದಿನವನ್ನು ಪರಾಕ್ರಮ್ ದಿವಸ್ ಎಂದು ಸ್ಮರಿಸಿಕೊಳ್ಳುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿಯಂದು ಅವರಿಗೆ ನಮನಗಳು. ರಾಷ್ಟ್ರಕ್ಕೆ ಅವರು ನೀಡಿದ ಕೊಡುಗೆಗೆ ಪ್ರತಿಯೊಬ್ಬ ಭಾರತೀಯನೂ ಹೆಮ್ಮೆಪಡುತ್ತಾನೆ ಎಂದು ಹೇಳಿದ್ದಾರೆ.

Continue Reading

ದೇಶ

ಪಂಜಾಬ್ ಚುನಾವಣೆ: ಕೆಂಪು ಕೋಟೆ ಹಿಂಸಾಚಾರದ ಆರೋಪಿಗೆ ರೈತ ಸಂಘಟನೆಯಿಂದ ಟಿಕೆಟ್!

Published

on

ಚಂಡೀಗಢ: ಜನೆವರಿ 23 (ಯು.ಎನ್.ಐ.) ರೈತರ ಸಂಘಟನೆ ಯುನೈಟೆಡ್ ಸಮಾಜ ಮೋರ್ಚಾ ಪಂಜಾಬ್ ವಿಧಾನಸಭಾ ಚುನಾವಣೆಗೆ 35 ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಮಾಜಿ ಗ್ಯಾಂಗ್‌ಸ್ಟರ್ ಲಖ್ವಿಂದರ್ ಸಿಂಗ್ ಅಲಿಯಾಸ್ ಲಾಖಾ ಸಿಧಾನಗೆ ಟಿಕೆಟ್ ನೀಡಿರುವುದು ಆಘಾತಕಾರಿಯಾಗಿದೆ. ಯುನೈಟೆಡ್ ಸಮಾಜ ಮೋರ್ಚಾ ಮೌರ್ ಮಂಡಿಯಿಂದ ಲಾಖಾಗೆ ಟಿಕೆಟ್ ನೀಡಿದೆ. ದೆಹಲಿಯಲ್ಲಿ ಹಲವು ತಿಂಗಳ ಕಾಲ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರಕ್ಕೆ ಸವಾಲ್ ಹಾಕಿದ್ದ ರೈತರ 22 ಸಂಘಟನೆಗಳು ಸಂಯುಕ್ತ ಸಮಾಜ ಮೋರ್ಚಾದಲ್ಲಿ ಒಂದಾಗಿವೆ. ರೈತರ ಮೋರ್ಚಾದ ವತಿಯಿಂದ ಇದುವರೆಗೆ 4 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ಗಣರಾಜ್ಯೋತ್ಸವ ದಿನದಂದು ಟ್ರಾಕ್ಟರ್ ಮೆರವಣಿಗೆ ವೇಳೆ ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಲಾಖಾ ಸಿಧನಾ ವಿರುದ್ಧ ಪ್ರಕರಣ ದಾಖಲಿಸಿದ್ದರು. ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪ ಲಾಖಾ ಮೇಲಿದೆ. ಅಂದು ನಾಪತ್ತೆಯಾಗಿದ್ದ ಲಾಖಾನ ವಿರುದ್ಧ ಪೊಲೀಸರು 1 ಲಕ್ಷ ರೂಪಾಯಿ ಬಹುಮಾನವನ್ನೂ ಘೋಷಣೆ ಮಾಡಿದ್ದರು.
ಈ ಎಲ್ಲ ಘಟನೆಗಳು ನಡೆದ ಬಳಿಕ ಲಾಖಾ ಪರಾರಿಯಾಗಿದ್ದ. ಭಟಿಂಡಾದ ರಾಂಪುರ ಫೂಲ್ ಅಸೆಂಬ್ಲಿ ಅಡಿಯಲ್ಲಿ ಮೆಹ್ರಾಜ್ ಗ್ರಾಮದಲ್ಲಿ ಯುವಕರ ರಾಲಿಯನ್ನು ಉದ್ದೇಶಿಸಿ ಅವರು ಫೆಬ್ರವರಿ 2021ರಲ್ಲಿ ಕಾಣಿಸಿಕೊಂಡಿದ್ದರು. ದೆಹಲಿ ಹಿಂಸಾಚಾರ ಸೇರಿದಂತೆ ಎಲ್ಲ ಘಟನೆಗಳ ಬಳಿಕವೂ ಕೃಷಿ ಕಾನೂನುಗಳ ವಿರುದ್ಧ ಆಂದೋಲನದಲ್ಲಿ ಅಂದು ಸಂಯುಕ್ತ ಕಿಸಾನ್ ಮೋರ್ಚಾ ಲಾಖಾನಿಂದ ದೂರವಿತ್ತು.
ಇದಾದ ನಂತರ ಹಲವು ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡ ಲಾಖಾ, ಕಳೆದ ವರ್ಷ ಸೆಪ್ಟೆಂಬರ್ 15 ರಂದು 500 ವಾಹನಗಳ ಬೆಂಗಾವಲು ಪಡೆಯಲ್ಲಿ ಸಿಂಘು ಗಡಿಯನ್ನು ತಲುಪಿದ್ದರು. ಈ ಬೆಂಗಾವಲು ಪಡೆಯಲ್ಲಿ ಯುನೈಟೆಡ್ ಕಿಸಾನ್ ಮೋರ್ಚಾದ ಅನೇಕ ನಾಯಕರು ಉಪಸ್ಥಿತರಿದ್ದರು. ಆದರೆ ಪಂಜಾಬ್ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಯಾವುದೇ ಮಾಹಿತಿ ಹೊರ ಹಾಕಿದ್ದಿಲ್ಲ.
ಮನ್‌ಪ್ರೀತ್ ಬಾದಲ್ ಅವರ ಪಕ್ಷದ ಪೀಪಲ್ಸ್ ಪಾರ್ಟಿ ಆಫ್ ಪಂಜಾಬ್ (ಪಿಪಿಪಿ) ಟಿಕೆಟ್‌ನಲ್ಲಿ ಲಾಖಾ, ರಾಂಪುರ ಫೂಲ್‌ನಿಂದ 2012ರಲ್ಲಿ ಸ್ಪರ್ಧಿಸಿದ್ದರು. 2013ರ ಜಿಲ್ಲಾ ಪರಿಷತ್ ಚುನಾವಣೆ ವೇಳೆ ನಡೆದ ಹಿಂಸಾಚಾರದಲ್ಲಿ ಲಖಾ ಗಾಯಗೊಂಡಿದ್ದರು. ಅಲ್ಲದೆ, ಬಾದಲ್ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದ್ದಕ್ಕಾಗಿ 2019ರಲ್ಲಿ ಲಾಖಾ ಸೇರಿದಂತೆ 60 ಜನರ ವಿರುದ್ಧ ಕೊಲೆ ಯತ್ನದ ಪ್ರಕರಣ ದಾಖಲಾಗಿತ್ತು.

Continue Reading
Advertisement
ಅಂಕಣ1 min ago

ದಟ್ಟ ಕಾಡಿನಲ್ಲಿ ʻಸಪ್ನೋಂ ಕೀ ರಾಣೀʼ

ಅಂಕಣ: ಒಂದೂರಲ್ಲಿ ಒಂದಿನ- 3 ಈ ಒಂದೂರು ಅನ್ನುವ ಮಾಯೆ ಇದೆಯಲ್ಲ, ಅದು ವಿಚಿತ್ರವಾದದ್ದು. ಅಪ್ಪ ಕಥೆ ಹೇಳುವಾಗ ಪ್ರತಿ ಸಲವೂ ಆ ಕಥೆ ಒಂದೂರಿನಲ್ಲಿ ಅಂತಲೇ...

ಕ್ರೀಡೆ21 mins ago

ಅಂಕುಶ್ ರಘುವಂಶಿ ಟೀಂ ಇಂಡಿಯಾದ ಉದಯೋನ್ಮುಖ ತಾರೆ!

ಹೊಸದಿಲ್ಲಿ: ಜನೆವರಿ 23 (ಯು.ಎನ್.ಐ.) ಅಂಡರ್ 19 ವರ್ಲ್ಡ್ ಕಪ್ ಮೂಲಕ ಭಾರತ ಕ್ರಿಕೆಟ್ ತಂಡಕ್ಕೆ ಮತ್ತೊಬ್ಬ ಉದಯೋನ್ಮುಖ ಆಟಗಾರ ದೊರೆತಿದ್ದಾರೆ. ಅವರೇ ದೆಹಲಿ ಮೂಲದ ಅಂಕುಶ್...

ಅಂಕಣ1 hour ago

ಎಳವೆಯಿಂದ ರಂಗಭೂಮಿ

ನಾದಾಂಕಣ – ಡಾ. ನಾ. ದಾಮೋದರ ಶೆಟ್ಟಿ ಭಾರತೀಯ ಹಾಗೂ ಗ್ರೀಕ್‌ ರಂಗಭೂಮಿಗೆ ಬಹುದೊಡ್ಡ ಪರಂಪರೆಇದೆ ಎನ್ನುವುದು ಸಾರ್ವಕಾಲಿಕ ಸತ್ಯ. ಆದರೆ ಯುರೋಪಿನ ರಂಗಭೂಮಿಯಾಗಲೀ ರಷ್ಯಾ, ಅಮೇರಿಕಾ...

ದೇಶ1 hour ago

ಅರುಣಾಚಲದಿಂದ ನಾಪತ್ತೆಯಾಗಿದ್ದ ಯುವಕ ಚೀನಾ ಗಡಿಯಲ್ಲಿ ಪತ್ತೆ!

ಹೊಸದಿಲ್ಲಿ: ಜನೆವರಿ 23 (ಯು.ಎನ್.ಐ.) ಅರುಣಾಚಲ ಪ್ರದೇಶದಿಂದ ನಾಪತ್ತೆಯಾಗಿದ್ದ ಭಾರತೀಯ ಯುವಕ ಚೀನಾ ಗಡಿಯಲ್ಲಿ ಪತ್ತೆಯಾಗಿದ್ದಾನೆ. ಈ ಬಗ್ಗೆ ಚೀನಾ ಸೈನಿಕರು ಭಾರತೀಯ ಯೋಧರಿಗೆ ಮಾಹಿತಿ ನೀಡಿದ್ದು,...

ಹಣಕಾಸು2 hours ago

ಕೆಲಸ ಬದಲಾಯಿಸಿದ್ದೀರಾ? ಚಿಂತೆ ಬಿಡಿ.. ನಿಮ್ಮ ನೆರವಿಗೆ ಇದೆ ಇಪಿಎಫ್ಒ!

ಬೆಂಗಳೂರು: ಜನೆವರಿ 23 (ಯು.ಎನ್.ಐ.) ಉತ್ತಮ ಸಂಬಳ, ಭದ್ರತೆಯುಳ್ಳ ನೌಕರಿ, ವಿಶೇಷ ಸವಲತ್ತುಗಳು.. ಹೀಗೆ ನಾನಾ ಉದ್ದೇಶಗಳಿಂದ ಉದ್ಯೋಗಿಗಳು ತಮ್ಮ ಕೆಲಸವನ್ನು ಬದಲಾಯಿಸುತ್ತಾ ಇರುತ್ತಾರೆ. ಇಂತಹ ಸಂದರ್ಭದಲ್ಲಿ...

ದೇಶ2 hours ago

ನೇತಾಜಿ ಸುಭಾಷ್ ಚಂದ್ರ ಬೋಸ್ ಜಯಂತಿ… ದೇಶಾದ್ಯಂತ ಪರಾಕ್ರಮ ದಿನವಾಗಿ ಆಚರಣೆ

ನವದೆಹಲಿ, ಜ ೨೩( ಯುಎನ್ ಐ) ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ೧೨೫ನೇ ಜನ್ಮಜಯಂತಿ ಇಂದು. ದೇಶಾದ್ಯಂತ ಪರಾಕ್ರಮ ದಿನವಾಗಿ ನೇತಾಜಿ...

ಕರ್ನಾಟಕ3 hours ago

ಇಡೀ ವರ್ಷ ಸುಭಾಷ್ ಚಂದ್ರಬೋಸ್ ಜನ್ಮದಿನಾಚರಣೆಗೆ ತೀರ್ಮಾನ: ಸಿಎಂ

ಬೆಂಗಳೂರು : ಜನೆವರಿ 23 (ಯು.ಎನ್.ಐ.) ರಾಜ್ಯ ಸರ್ಕಾರದ ವತಿಯಿಂದ ವರ್ಷವಿಡೀ ನೇತಾಜಿ ಸುಭಾಷ್ ಚಂದ್ರಬೋಸ್ ರವರ 125ನೇ ಜನ್ಮ ದಿನಾಚರಣೆಯನ್ನ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ...

ಅಂಕಣ3 hours ago

ಸ್ವಾತಂತ್ರ್ಯಕ್ಕಿಂತ ದೊಡ್ಡದು ಇನ್ಯಾವುದಿದೆ ?

‌ಅಂಕಣ: ದಿಟನುಡಿ -೩ ಕಳೆದ ವಾರ ನನ್ನ ಕೈರೋಪ್ರಾಕ್ಟರ್ ರೇ ಬಳಿ ಹೋಗಿದ್ದೆ. ಏಕೋ ಗೊತ್ತಿಲ್ಲ ಕೆಲ ದಿನಗಳ ಹಿಂದೆ ಸೊಂಟ ಹಿಡಿದಿತ್ತು. ಏಳಲು, ಕೂರಲು, ನಿಲ್ಲಲು...

ದೇಶ3 hours ago

ಪಂಜಾಬ್ ಚುನಾವಣೆ: ಕೆಂಪು ಕೋಟೆ ಹಿಂಸಾಚಾರದ ಆರೋಪಿಗೆ ರೈತ ಸಂಘಟನೆಯಿಂದ ಟಿಕೆಟ್!

ಚಂಡೀಗಢ: ಜನೆವರಿ 23 (ಯು.ಎನ್.ಐ.) ರೈತರ ಸಂಘಟನೆ ಯುನೈಟೆಡ್ ಸಮಾಜ ಮೋರ್ಚಾ ಪಂಜಾಬ್ ವಿಧಾನಸಭಾ ಚುನಾವಣೆಗೆ 35 ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಮಾಜಿ...

ಕರ್ನಾಟಕ4 hours ago

ನ್ಯಾಯಮೂರ್ತಿ ಕೆ ಎಲ್. ಮಂಜುನಾಥ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಬೆಂಗಳೂರು: ಜನವರಿ 23 (ಯು.ಎನ್.ಐ.)  ಕರ್ನಾಟಕ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. ನ್ಯಾಯಮೂರ್ತಿ ಮಂಜುನಾಥ್ ಅವರು...

ಟ್ರೆಂಡಿಂಗ್

Share