Published
6 months agoon
By
Vanitha Jainನವದೆಹಲಿ: ಜನವರಿ 04(ಯು.ಎನ್.ಐ) ಅವ್ಯಾಹತವಾಗಿ ಏರುತ್ತಿರುವ ಕೋವಿಡ್-19 ಅನ್ನು ತಡೆಗಟ್ಟಲು ದೆಹಲಿ ಸರ್ಕಾರವು ರಾಷ್ಟ್ರ ರಾಜಧಾನಿಯಲ್ಲಿ ವಾರಾಂತ್ಯದ ಕರ್ಫ್ಯೂ ವಿಧಿಸಲು ನಿರ್ಧರಿಸಿದೆ. ರಾಜಧಾನಿಯಲ್ಲಿನ ಕೊರೋನಾ ಪರಿಸ್ಥಿತಿಯನ್ನು ಪರಿಶೀಲಿಸಲು ವಾಸ್ತವಿಕವಾಗಿ ಸಭೆ ನಡೆಸಿದ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ಈ ನಿರ್ಧಾರ ತೆಗೆದುಕೊಂಡಿದೆ.
ಕೋವಿಡ್-19 ಪ್ರಕರಣಗಳ ಹೆಚ್ಚಳವಾಗುತ್ತಿರುವ ಕಾರಣ ದೆಹಲಿಯಲ್ಲಿ ವಾರಾಂತ್ಯದ ಕರ್ಫ್ಯೂ ವಿಧಿಸಲಾಗುವುದು. ಅಗತ್ಯ ಸೇವೆಗಳ ಮೇಲೆ ನಿರ್ಬಂಧ ಹೇರುವ ಕಾರಣ ಸರ್ಕಾರಿ ಅಧಿಕಾರಿಗಳು ಮನೆಯಿಂದಲೇ ಕೆಲಸ ಮಾಡುತ್ತಾರೆ ಎಂದು ಡಿಡಿಎಂಎ ಆದೇಶದಲ್ಲಿ ತಿಳಿಸಿದೆ.
ಈ ಕುರಿತು ಮಾಹಿತಿ ಹಂಚಿಕೊಂಡ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, “ಒಮೈಕ್ರಾನ್ ರೂಪಾಂತರದ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ದೆಹಲಿಯಲ್ಲಿ ಕಳೆದ 8-10 ದಿನಗಳಲ್ಲಿ ಸುಮಾರು 11,000 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ, ಅದರಲ್ಲಿ ಸುಮಾರು 350 ರೋಗಿಗಳು ಆಸ್ಪತ್ರೆಯಲ್ಲಿದ್ದಾರೆ, 124 ರೋಗಿಗಳಿಗೆ ಮಾತ್ರ ಆಮ್ಲಜನಕದ ಅಗತ್ಯವಿದೆ. ಮತ್ತು 7 ಮಂದಿ ವೆಂಟಿಲೇಟರ್ನಲ್ಲಿದ್ದಾರೆ ಎಂದು ಹೇಳಿದರು.
ಹೆಚ್ಚಿನ ಕಚೇರಿಗಳು ತಮ್ಮ ಅರ್ಧದಷ್ಟು ಉದ್ಯೋಗಿಗಳನ್ನು ಮನೆಯಿಂದಲೇ ಕೆಲಸ ಮಾಡುವಂತೆ ಆದೇಶಿಸಬೇಕು. ಕೋವಿಡ್ ಉಲ್ಬಣ ತಡೆಯಲು ಶನಿವಾರ ಮತ್ತು ಭಾನುವಾರದಂದು ದೆಹಲಿಯಲ್ಲಿ ಕರ್ಫ್ಯೂ ವಿಧಿಸಲು ಡಿಡಿಎಂಎ ನಿರ್ಧರಿಸಿದೆ. ಅಗತ್ಯ ಸೇವೆಗಳಲ್ಲಿ ತೊಡಗಿರುವವರನ್ನು ಹೊರತುಪಡಿಸಿ ಎಲ್ಲಾ ಸರ್ಕಾರಿ ಅಧಿಕಾರಿಗಳು ಮತ್ತು ಖಾಸಗಿ ಕಚೇರಿಗಳ 50% ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡಬೇಕು ಎಂದು ದೆಹಲಿ ಉಪ ಮುಖ್ಯಮಂತ್ರಿ ಹೇಳಿದ್ದಾರೆ.
“ಮೆಟ್ರೋ ನಿಲ್ದಾಣಗಳ ಹೊರಗೆ ಮತ್ತು ಬಸ್ ನಿಲ್ದಾಣಗಳಲ್ಲಿ ಜನಸಂದಣಿ ತಪ್ಪಿಸಲು ಬಸ್ಸುಗಳು ಮತ್ತು ಮೆಟ್ರೋ ರೈಲುಗಳು ಮತ್ತೆ ಪೂರ್ಣ ಆಸನ ಸಾಮಥ್ರ್ಯದಲ್ಲಿ ಸಂಚರಿಸುತ್ತವೆ ಎಂದರು.
ಇನ್ನು ಈ ಸಂಬಂಧ ದೆಹಲಿಯಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ದೆಹಲಿಯ ಪಾಸಿಟಿವಿಟಿ ದರವು 6.6 ಇರುವ ಕಾರಣ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಆಭರಣ ಅಂಗಡಿಗೆ ನುಗ್ಗಿ ದರೋಡೆ, ಮಾಲೀಕನಿಗೆ ಗುಂಡೇಟು; ಸಿಸಿಕ್ಯಾಮೆರಾದಲ್ಲಿ ಕೃತ್ಯ ಸೆರೆ
ಸಿಧು ಮೂಸೆವಾಲಾರ ಕೊನೆಯ ಹಾಡನ್ನ ಯೂಟ್ಯೂಬ್ ನಿಂದ ತೆಗೆದುಹಾಕಿರೋದೇಕೆ?
ಹಕ್ಕುಗಳನ್ನು ರಕ್ಷಿಸುವುದು ಅಪರಾಧವಲ್ಲ; ತೀಸ್ತಾ ಸೆತಲ್ವಾಡ್ ಪರ ವಿಶ್ವಸಂಸ್ಥೆ ಅಧಿಕಾರಿ ದನಿ
“ರಾಷ್ಟ್ರೀಯ ಭದ್ರತೆಗೆ ಡ್ರಗ್ಸ್ ದೊಡ್ಡ ಸವಾಲು” : ಷಾ
ಸಿಎಂ ಭೇಟಿಯಾಗಲು ಪ್ರವಾಹದ ನೀರಲ್ಲಿ ಪರದಾಡಿದ ಅಸ್ಸಾಂ ಯುವಕ
ಸಿಎಂ ಯೋಗಿ ಆದಿತ್ಯನಾಥ್ ಪ್ರಯಾಣಿಸ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ