Connect with us


      
ದೇಶ

ವಾಯುಭಾರ ಕುಸಿತ, ಹೆಚ್ಚಲಿದೆ ಮಳೆಯ ಅಬ್ಬರ

UNI Kannada

Published

on

ಚನ್ನೈ ನ 8   (ಯುಎನ್ಐ)  ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮುಂದಿನ 48 ಗಂಟೆಗಳ  ಕಾಲ  ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ   ಮುನ್ಸೂಚನೆ ನೀಡಿದೆ.

ತಮಿಳುನಾಡು, ಕೇರಳ, ಮಹಾರಾಷ್ಟ್ರ, ಪುದುಚೆರಿಯಲ್ಲಿ ಕರ್ನಾಟಕ, ಆಂಧ್ರಪ್ರದೇಶದಲ್ಲಿ ಇದೇ  11 ರವರೆಗೆ  ಭಾರೀ ಮಳೆಯಾಗಲಿದೆ ಎಂದು ಇಲಾಖೆ ವರದಿ ಹೇಳಿದೆ.

ಮಂಗಳವಾರ ತಮಿಳುನಾಡು ಪುದುಚೇರಿ ಮತ್ತು ಕಾರೈಕಲ್ಲ್ಲಿ ಭಾರೀ ಮಳೆಯಾಗುವ  ಸಾಧ್ಯತೆಯಿದೆ.  ಆಂಧ್ರಪ್ರದೇಶದ ಕರಾವಳಿ ಮತ್ತು ಯಾನಂ, ರಾಯಲಸೀಮಾ, ಕರಾವಳಿ ಮತ್ತು ದಕ್ಷಿಣ ಒಳನಾಡು ಕರ್ನಾಟಕ, ತಮಿಳುನಾಡಿನಲ್ಲಿ ಗುಡುಗು ಸಹಿತ ಭರ್ಜರಿ ಮಳೆಯಾಗಲಿದೆ ಎಂದು ಇಲಾಖೆ ವರದಿ ಹೇಳಿದೆ.

Share