Connect with us


      




ಕರ್ನಾಟಕ

‘ಪ್ರತಿ ಹತ್ಯೆಯಲ್ಲೂ ಬಿಜೆಪಿ ಹೆಣದ ರಾಜಕೀಯ’ – ದಿನೇಶ್ ಗುಂಡೂರಾವ್

Iranna Anchatageri

Published

on

ಬೆಂಗಳೂರು: ಜೂನ್ 29 (ಯು.ಎನ್.ಐ.) ರಾಜಸ್ಥಾನದಲ್ಲಿ ಕನ್ಹಯ್ಯ ಲಾಲ್ ಹತ್ಯೆಯನ್ನು ಬಿಜೆಪಿ ರಾಜಕೀಯಗೊಳಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್, “ರಾಜಸ್ಥಾನದ ಕನ್ಹಯ್ಯ ಲಾಲ್ ಹತ್ಯೆಯನ್ನು ಎಲ್ಲರೂ ಒಕ್ಕೊರಲಿನಿಂದ ಖಂಡಿಸಲೇಬೇಕು. ಧರ್ಮಾಂಧತೆಯ ಅಮಲು ತಲೆಗೇರಿಸಿಕೊಂಡಿರುವ ರಕ್ತಪಿಪಾಸಿಗಳು ಮಾತ್ರ ಇಂತಹ ಹೇಯ ಕೃತ್ಯ ನಡೆಸಲು ಸಾಧ್ಯ. ಈ ಹತ್ಯೆಯನ್ನು ಯಾರೇ ಸಂಭ್ರಮಿಸಿದರೂ ಅವರು ಮನುಷ್ಯತ್ವ ಇಲ್ಲದ ಮೃಗಗಳಿಗೆ ಸಮ. ಅದೇ ರೀತಿ ಪ್ರತಿ ಹತ್ಯೆಯಲ್ಲೂ ರಾಜಕೀಯ ಮಾಡುವವರು ಕೂಡ ಮೃಗಗಳೆ ಆಗಿರುತ್ತಾರೆ.

ಕನ್ಹಯ್ಯ ಹತ್ಯೆಯನ್ನು BJP ರಾಜಕೀಯಗೊಳಿಸುತ್ತಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಇರುವ ಕಾರಣ ಕನ್ಹಯ್ಯ ಹತ್ಯೆಯಾಗಿದೆ ಎಂದು ಬೊಬ್ಬಿಡುತ್ತಿರುವ BJP ವರ್ತನೆ ಬಾಲಿಷತನ. ಇತ್ತೀಚೆಗೆ ಶಿವಮೊಗ್ಗದಲ್ಲಿ ಹರ್ಷ ಎಂಬ ಯುವಕನ ಕೊಲೆಯಾಯ್ತು. ಆಗ ರಾಜ್ಯದಲ್ಲಿದಿದ್ದು ಇದೇ BJP ಸರ್ಕಾರ. ಹಾಗಾದರೆ ಹರ್ಷನ ಕೊಲೆಯ ಹೊಣೆಗಾರಿಕೆ ಈಗಿನ BJP ಸರ್ಕಾರದ್ದೆ.?

ಧರ್ಮದ ಅಫೀಮ್ ತಿಂದಿರುವ ಕೋಮು‌ ಕ್ರಿಮಿಗಳಿಗೆ ಯಾವುದೇ ಸರ್ಕಾರವಿದ್ದರೂ ಅಂಜಿಕೆಯಿರುವುದಿಲ್ಲ. ಇಂತಹ ಕ್ರಿಮಿಗಳನ್ನು ಯಾವುದೇ ಮುಲಾಜಿಲ್ಲದೆ ಹೆಡೆಮುರಿ ಕಟ್ಟಿ ಹುಟ್ಟಡಗಿಸಬೇಕು. ಮನುಷ್ಯತ್ವ ಮರೆತ ಇಂತಹ ಕ್ರಿಮಿಗಳ ಹುಟ್ಟಡಗಿಸಲು ಯಾರ ತಕರಾರು ಇಲ್ಲ. ಹೀಗಿರುವಾಗ ಬಿಜೆಪಿ ಪ್ರತಿ ಹತ್ಯೆಯಲ್ಲೂ ಹೆಣದ ರಾಜಕೀಯ ಮಾಡುವ ಉದ್ದೇಶವೇನು.?

ಕನ್ಹಯ್ಯರನ್ನು ಹತ್ಯೆ ಮಾಡಿದ ಇಬ್ಬರು ಪಾತಕಿಗಳನ್ನು ರಾಜಸ್ಥಾನ ಸರ್ಕಾರ ಈಗಾಗಲೇ ಬಂಧಿಸಿದೆ. ಈ ಇಬ್ಬರು ಕಿರಾತಕರ ಕೃತ್ಯ ಯಾವ ಭಯೋತ್ಪಾದಕ ಕೃತ್ಯಕ್ಕೂ ಕಡಿಮೆಯಿಲ್ಲ‌. ರಾಜಸ್ಥಾನ ಸರ್ಕಾರ ಈ ದುಷ್ಟರ ವಿರುದ್ದ ತ್ವರಿತಗತಿಯ ವಿಚಾರಣೆ ನಡೆಸಿ ಉಗ್ರ ಶಿಕ್ಷೆಯಾಗುವಂತೆ ನೋಡಿಕೊಳ್ಳಲಿ. ಈ ಪ್ರಕರಣದ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸಲಿ” ಎಂದು ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.‌

Share