Connect with us


      
ಕ್ರೀಡೆ

ಅನಿಶ್ಚಿತತೆಯ ನಡುವೆಯೂ… ‘ಡ್ರಾ’ ದಲ್ಲಿ ಜೊಕೊವಿಕ್ !

Published

on

ಸಿಡ್ನಿ, ಜ 14(ಯುಎನ್‌ ಐ) ಸರ್ಬಿಯಾದ ಸ್ಟಾರ್, ಹಾಲಿ ಚಾಂಪಿಯನ್ ನೊವಾಕ್ ಜೊಕೊವಿಕ್ ಈ ಋತುವಿನ ಮೊದಲ ಗ್ರ್ಯಾನ್‌ಸ್ಲಾಮ್ ಆಡುವ ವಿಷಯದಲ್ಲಿ ಉಂಟಾಗಿರುವ ಅನಿಶ್ಚಿತತೆ ಇನ್ನೂ ಮುಗಿದಿಲ್ಲ ಆದರೆ “ಡ್ರಾ” ದಲ್ಲಿ ಅವರ ಹೆಸರು ಅಂತಿಮಗೊಂಡಿದೆ. ಆಸ್ಟ್ರೇಲಿಯಾ ಸರ್ಕಾರದ ನಿರ್ಧಾರಕ್ಕಾಗಿ ಕಾಯುತ್ತಿದ್ದ ಟೆನಿಸ್ ಟೂರ್ನಿಯ ಆಯೋಜಕರು ಸ್ವಲ್ಪ ತಡವಾಗಿ ‘ಡ್ರಾ’ ಬಿಡುಗಡೆ ಮಾಡಿದ್ದಾರೆ. ಪುರುಷರ ಸಿಂಗಲ್ಸ್‌ನಲ್ಲಿ ಅಗ್ರ ಶ್ರೇಯಾಂಕ ಹೊಂದಿರುವ ಸರ್ಬಿಯಾದ ಟೆನಿಸ್‌ ತಾರೆ, ಮೊದಲ ಸುತ್ತಿನಲ್ಲಿ ಸಹ ಆಟಗಾರ ಮಯೋಮಿರ್ ಕೆಮನೋವಿಕ್ ಅವರನ್ನು ಎದುರಿಸಲಿದ್ದಾರೆ.

ಲಸಿಕೆ ಹಾಕಿಸಿಕೊಳ್ಳದಿದ್ದರೂ ವಿಶೇಷ ವಿನಾಯಿತಿಯೊಂದಿಗೆ ಆಸ್ಟ್ರೇಲಿಯಾಕ್ಕೆ ಬಂದಿರುವ ಜೋಕೊ ಅವರ ವೀಸಾ ರದ್ದುಗೊಳಿಸಲಾಗಿದೆ. ಆದರೂ ನ್ಯಾಯಾಲಯದ ಹೋರಾಟದ ಮೂಲಕ ಪರಿಹಾರ ಪಡೆದುಕೊಂಡಿದ್ದರು. ಆಸ್ಟ್ರೇಲಿಯ ಸರ್ಕಾರದ ನಿಯಮಗಳ ಪ್ರಕಾರ ಎರಡನೇ ಬಾರಿ ವೀಸಾ ರದ್ದುಪಡಿಸುವ ಅಧಿಕಾರ ವಿದೇಶಾಂಗ ವ್ಯವಹಾರಗಳ ಸಚಿವರು ಹೊಂದಿದ್ದಾರೆ. ಗುರುವಾರ ಅಂತಿಮ ನಿರ್ಧಾರ ಹೊರಬೀಳಲಿದೆ ಎಂಬ ವರದಿಗಳಿದ್ದವು , ಸರ್ಕಾರ ತನ್ನ ನಿರ್ಧಾರ ಬಾಕಿ ಉಳಿಸಿಕೊಂಡಿದೆ. ಆದರೆ, ಜೊಕೊವಿಕ್ ಮಾತ್ರ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

ಕ್ರೀಡೆ

ಅಂಕುಶ್ ರಘುವಂಶಿ ಟೀಂ ಇಂಡಿಯಾದ ಉದಯೋನ್ಮುಖ ತಾರೆ!

Published

on

ಹೊಸದಿಲ್ಲಿ: ಜನೆವರಿ 23 (ಯು.ಎನ್.ಐ.) ಅಂಡರ್ 19 ವರ್ಲ್ಡ್ ಕಪ್ ಮೂಲಕ ಭಾರತ ಕ್ರಿಕೆಟ್ ತಂಡಕ್ಕೆ ಮತ್ತೊಬ್ಬ ಉದಯೋನ್ಮುಖ ಆಟಗಾರ ದೊರೆತಿದ್ದಾರೆ. ಅವರೇ ದೆಹಲಿ ಮೂಲದ ಅಂಕುಶ್ ರಘವಂಶಿ. ಇತ್ತೀಚೆಗೆ ನಡೆಯುತ್ತಿರುವ ಐಸಿಸಿ ಅಂಡರ್ -19 ವರ್ಲ್ಡ್ ಕಪ್ ನಲ್ಲಿ ಐರ್ಲೆಂಡ್ ವಿರುದ್ಧ ಅರ್ಧಶತಕ, ಉಗಾಂಡಾ ವಿರುದ್ಧ ಶತಕ ಬಾರಿಸುವ ಮೂಲಕ ಮುಂದಿನ ಕ್ರಿಕೆಟ್ ತಾರೆ ಎಂದೇ ಬಿಂಬಿತವಾಗುತ್ತಿದ್ದಾರೆ. ಇದುವರೆಗೆ ನಡೆದ ವಿಶ್ವಕಪ್ ನಲ್ಲಿ ರಘುವಂಶಿ ಅದ್ಭುತ ಬ್ಯಾಟಿಂಗ್‌ ಪ್ರದರ್ಶನ ಮಾಡಿದ್ದಾರೆ.

ಅಂಡರ್-19 ವಿಶ್ವಕಪ್‌ನಲ್ಲಿ ಉಗಾಂಡ ವಿರುದ್ಧ ಟೀಂ ಇಂಡಿಯಾ 326 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಟೀಂ ಇಂಡಿಯಾದ ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಅಂಕುಶ್ ರಘುವಂಶಿ 144 ರನ್ ಗಳಿಸಿದ್ದಾರೆ. ಇದಲ್ಲದೇ, ಶ್ರೀಲಂಕಾ ವಿರುದ್ಧದ ಏಷ್ಯಾಕಪ್ ಫೈನಲ್‌ನಲ್ಲಿ 56 ರನ್ ಗಳಿಸಿ ತಂಡವನ್ನು ಗೆಲ್ಲಿಸಿ ಕೊಟ್ಟಿದ್ದರು. ಅಂಕುಶ್ ರಘುವಂಶಿಗೆ ಸದ್ಯ 16 ವರ್ಷ. 5 ಜೂನ್ 2005ರಂದು ದೆಹಲಿಯಲ್ಲಿ ಜನಿಸಿದ್ದಾರೆ.

ಓಪನರ್ ಅಂಕುಶ್ ರಘುವಂಶಿ ಪೋಷಕರೂ ಸಹ ಕ್ರೀಡಾ ಹಿನ್ನೆಲೆ ಹೊಂದಿದ್ದಾರೆ. ಅಂಕುಶ್ ತಾಯಿ ಮಲಿಕಾ ಭಾರತ ತಂಡದ ಪರ ಬ್ಯಾಸ್ಕೆಟ್‌ ಬಾಲ್ ಆಡಿದ್ದಾರೆ ಮತ್ತು ತಂದೆ ಅವನೀಶ್ ರಘುವಂಶಿ ಟೆನಿಸ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. ಗುರ್‌ಗಾಂವ್‌ನಲ್ಲಿ ಆರಂಭಿಕ ತರಬೇತಿ ಪಡೆದ ಅಂಕುಶ್, ಏನಾದ್ರೂ ಸಾಧಿಸಬೇಕು ಹಾಗೂ ಉತ್ತಮ ಕ್ರಿಕೆಟಿಗನಾಗುವ ಕನಸಿನೊಂದಿಗೆ ಕೋಚಿಂಗ್‌ಗಾಗಿ 10ನೇ ವಯಸ್ಸಿನಲ್ಲಿ ಮುಂಬೈನತ್ತ ಹೊರಟರು.

10ನೇ ವಯಸ್ಸಿನಲ್ಲಿ ದೆಹಲಿಯಿಂದ ಮುಂಬೈಗೆ ಬಂದ ನಂತರ ಅಂಕುಶ್ ಗೆ ಅಭಿಷೇಕ್ ನಾಯರ್ ಎಂಬವರು ತಮ್ಮ ಮನೆಯಲ್ಲಿಯೇ ತರಬೇತಿ ನೀಡಿದರು. ಬಲಗೈ ಬ್ಯಾಟ್ಸ್‌ಮನ್ ಅಂಕುಶ್ ಅಂಡರ್-19 ವಿಶ್ವಕಪ್‌ನಲ್ಲಿ ಭಾರತ ತಂಡಕ್ಕಾಗಿ ಸತತ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಐರ್ಲೆಂಡ್ ವಿರುದ್ಧ 79 ರನ್ ಮತ್ತು ಉಗಾಂಡಾ ವಿರುದ್ಧ 144 ರನ್ ಗಳಿಸಿದ್ದಾರೆ. ಇಲ್ಲಿಯವರೆಗೆ ಅಂಕುಶ್ 7 ಅಂಡರ್-19 ಒಡಿಐಗಳಲ್ಲಿ 55.83 ಸರಾಸರಿಯಲ್ಲಿ 335 ರನ್ ಗಳಿಸಿದ್ದಾರೆ.

ಐಸಿಸಿ ಅಂಡರ್ – 19 ವಿಶ್ವಕಪ್ ನಲ್ಲಿ ಭಾರತ ತಂಡ ಗ್ರೂಪ್ ಸುತ್ತಿನ ಎಲ್ಲ ಪಂದ್ಯಗಳನ್ನು ಗೆಲ್ಲುವ ಮೂಲಕ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿದೆ. ಭಾರತ ತಂಡ ಜನವರಿ 29ರಂದು ಬಾಂಗ್ಲಾದೇಶ ವಿರುದ್ಧ ಕ್ವಾರ್ಟರ್ ಫೈನಲ್ ಪಂದ್ಯವನ್ನು ಆಡಬೇಕಾಗಿದೆ. ಆಂಟಿಗುವಾದ ಕೂಲಿಡ್ಜ್ ಕ್ರಿಕೆಟ್ ಮೈದಾನದಲ್ಲಿ ಈ ಪಂದ್ಯ ನಡೆಯಲಿದೆ. ಕಳೆದ ವಿಶ್ವಕಪ್‌ನಲ್ಲಿ ಬಾಂಗ್ಲಾದೇಶದ ಎದುರು ಭಾರತ ಫೈನಲ್‌ನಲ್ಲಿ ಸೋಲನುಭವಿಸಿತ್ತು. ಅಂಕುಶ್ ರಘುವಂಶಿ ಮುಂಬರುವ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆ ಇದೆ.

Continue Reading

ಕ್ರೀಡೆ

ಧಾವನ್‌ ದಾಖಲೆ ಮುರಿದು ಸಂಚಲನ ಸೃಷ್ಟಿಸಿದ ರಾಜ್ ಬಾವಾ..

Published

on

By

ಉಗಾಂಡ ಜ 23(ಯುಎನ್‌ ಐ) ಅಂಡರ್ 19 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ವಿಜಯ ಯಾತ್ರೆ ಮುಂದುವರಿದಿದೆ. ಉಗಾಂಡದೊಂದಿಗೆ ನಡೆದ ಕೊನೆಯ ಲೀಗ್ ಪಂದ್ಯದಲ್ಲಿ ಯುವ ಭಾರತ ತಂಡ 326 ರನ್‌ಗಳಿಂದ ಜಯ ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ ಭಾರತ ನಿಗದಿತ 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 405 ರನ್ ಗಳಿಸಿತು. ಮತ್ತೊಂದೆಡೆ 406 ರನ್ ಗಳ ಬೃಹತ್ ಗುರಿಯ ಬೆನ್ನಟ್ಟಿದ ಉಗಾಂಡ ಕೇವಲ 79 ರನ್ ಗಳಿಗೆ ಆಲೌಟ್ ಆಯಿತು. ಈ ಗೆಲುವಿನಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ ಮನ್‌ ರಾಜ್ ಬಾವಾ (ಔಟಾಗದೆ 162), ಆರಂಭಿಕ ಆಟಗಾರ ಅಂಗ್‌ ಕೃಷ್ಣ ರಘುವಂಶಿ (144) ಪ್ರಮುಖ ಪಾತ್ರ ವಹಿಸಿದರು.

ಆದರೆ, 19 ವರ್ಷದೊಳಗಿನವರ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಆಟಗಾರ ಎಂಬ ರಾಜ್ ಬಾವಾ ಸೃಷ್ಟಿಸಿದ್ದಾರೆ. ಇದುವರೆಗೆ ಶಿಖರ್ ಧವನ್ (155) ಅವರ ಹೆಸರಿನಲ್ಲಿದ್ದ ದಾಖಲೆಯನ್ನು ರಾಜ್ ಬಾವಾ ಮುರಿದಿದ್ದಾರೆ. ಅದೇ ರೀತಿ ಈ ಬಾರಿಯ ವಿಶ್ವಕಪ್ ನಲ್ಲಿ ರಾಜ್ ಬಾವಾ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ನಲ್ಲಿ ಅದ್ಬುತವಾಗಿ ಮಿಂಚಿದ್ದರು. ಈ ಆಲ್ ರೌಂಡರ್ ಅಂಡರ್-19 ಏಷ್ಯನ್ ಕಪ್ ಭಾರತ ಗೆಲ್ಲುವಲ್ಲಿ ಭಾರತ ಪ್ರಮುಖ ಪಾತ್ರ ವಹಿಸಿತ್ತು.

Continue Reading

ಕ್ರೀಡೆ

SA vs IND: ದಕ್ಷಿಣ ಆಫ್ರಿಕಾ ವಿರುದ್ಧ ಮೂರನೇ ಏಕದಿನ ಪಂದ್ಯ.. ವಿರಾಟ್ ಕೊಹ್ಲಿ ದೂರ!

Published

on

By

ಕೇಪ್ ಟೌನ್, ಜ 23(ಯುಎನ್‌ ಐ) ಕೇಪ್‌ ಟೌನ್‌ ನಲ್ಲಿಂದು ದಕ್ಷಿಣ ಆಫ್ರಿಕಾ – ಭಾರತ ನಡುವಣ ಅಂತಿಮ ಏಕದಿನ ಪಂದ್ಯ ನಡೆಯಲಿದೆ. ಈಗಾಗಲೇ ಎರಡು ಏಕ ದಿನ ಪಂದ್ಯಗಳಲ್ಲಿ ಸೋತಿರುವ ಭಾರತ ಸರಣಿ ಕಳೆದುಕೊಂಡಿದೆ. ಎರಡೂ ಏಕದಿನ ಪಂದ್ಯಗಳಲ್ಲಿ ನಾಯಕನಾಗಿ ಕೆ .ಎಲ್ .ರಾಹುಲ್ ಸಫಲರಾಗಿಲ್ಲ… ರಾಹುಲ್ ದ್ರಾವಿಡ್ ಕೂಡ ಮುಖ್ಯ ಕೋಚ್ ಆಗಿ ಪ್ರಮುಖ ಆಟಗಾರರೊಂದಿಗಿನ ಮೊದಲ ಪ್ರವಾಸದಲ್ಲಿ ತೃಪ್ತಿಕರ ಫಲಿತಾಂಶ ಪಡೆಯಲಿಲ್ಲ. ಆದರೆ, ಅಂತಿಮ ಪಂದ್ಯದಲ್ಲಿ ಭಾರತ ತಂಡದಲ್ಲಿ ಪ್ರಮುಖ ಬದಲಾವಣೆ ಮಾಡಲಿದೆಯಂತೆ.

ಮೊದಲೆರಡು ಏಕ ದಿನ ಪಂದ್ಯಗಳಲ್ಲಿ ವಿಫಲರಾಗಿದ್ದ ಭುವನೇಶ್ವರ್ ಕುಮಾರ್ ಅಂತಿಮ ಪಂದ್ಯದಲ್ಲಿ ಸ್ಥಾನ ತಪ್ಪಲಿದ್ದು, ಅವರ ಸ್ಥಾನಕ್ಕೆ ದೀಪಕ್ ಚಹಾರ್ ಗೆ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿದುಬಂದಿದೆ. ಅದೇ ರೀತಿ ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಆತನ ಸ್ಥಾನದಲ್ಲಿ ಸೂರ್ಯಕುಮಾರ್‌ ಯಾದವ್‌ ಗೆ ಅವಕಾಶ ನೀಡುವ ಆಲೋಚನೆ ತಂಡದಲ್ಲಿದೆ. ಮೊದಲೆರಡು ಏಕ ದಿನ ಪಂದ್ಯಗಳಲ್ಲಿ ವೈಫಲ್ಯ ಕಂಡಿರುವ ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್ ಅವಕಾಶ ಕೈತಪ್ಪುವ ಸಾಧ್ಯತೆ ಇದೆ. ಒಂದು ವೇಳೆ ಶ್ರೇಯಸ್‌ ಅಯ್ಯರ್‌ ಹೊರಗುಳಿದರೆ ಅವರ ಸ್ಥಾನಕ್ಕೆ ರುತುರಾಜ್‌ ಗಾಯಕ್‌ವಾಡ್‌ ಕಣಕ್ಕಿಳಿಯಲಿದ್ದಾರೆ.

Continue Reading
Advertisement
ಅಂಕಣ9 mins ago

ದಟ್ಟ ಕಾಡಿನಲ್ಲಿ ʻಸಪ್ನೋಂ ಕೀ ರಾಣೀʼ

ಅಂಕಣ: ಒಂದೂರಲ್ಲಿ ಒಂದಿನ- 3 ಈ ಒಂದೂರು ಅನ್ನುವ ಮಾಯೆ ಇದೆಯಲ್ಲ, ಅದು ವಿಚಿತ್ರವಾದದ್ದು. ಅಪ್ಪ ಕಥೆ ಹೇಳುವಾಗ ಪ್ರತಿ ಸಲವೂ ಆ ಕಥೆ ಒಂದೂರಿನಲ್ಲಿ ಅಂತಲೇ...

ಕ್ರೀಡೆ29 mins ago

ಅಂಕುಶ್ ರಘುವಂಶಿ ಟೀಂ ಇಂಡಿಯಾದ ಉದಯೋನ್ಮುಖ ತಾರೆ!

ಹೊಸದಿಲ್ಲಿ: ಜನೆವರಿ 23 (ಯು.ಎನ್.ಐ.) ಅಂಡರ್ 19 ವರ್ಲ್ಡ್ ಕಪ್ ಮೂಲಕ ಭಾರತ ಕ್ರಿಕೆಟ್ ತಂಡಕ್ಕೆ ಮತ್ತೊಬ್ಬ ಉದಯೋನ್ಮುಖ ಆಟಗಾರ ದೊರೆತಿದ್ದಾರೆ. ಅವರೇ ದೆಹಲಿ ಮೂಲದ ಅಂಕುಶ್...

ಅಂಕಣ1 hour ago

ಎಳವೆಯಿಂದ ರಂಗಭೂಮಿ

ನಾದಾಂಕಣ – ಡಾ. ನಾ. ದಾಮೋದರ ಶೆಟ್ಟಿ ಭಾರತೀಯ ಹಾಗೂ ಗ್ರೀಕ್‌ ರಂಗಭೂಮಿಗೆ ಬಹುದೊಡ್ಡ ಪರಂಪರೆಇದೆ ಎನ್ನುವುದು ಸಾರ್ವಕಾಲಿಕ ಸತ್ಯ. ಆದರೆ ಯುರೋಪಿನ ರಂಗಭೂಮಿಯಾಗಲೀ ರಷ್ಯಾ, ಅಮೇರಿಕಾ...

ದೇಶ1 hour ago

ಅರುಣಾಚಲದಿಂದ ನಾಪತ್ತೆಯಾಗಿದ್ದ ಯುವಕ ಚೀನಾ ಗಡಿಯಲ್ಲಿ ಪತ್ತೆ!

ಹೊಸದಿಲ್ಲಿ: ಜನೆವರಿ 23 (ಯು.ಎನ್.ಐ.) ಅರುಣಾಚಲ ಪ್ರದೇಶದಿಂದ ನಾಪತ್ತೆಯಾಗಿದ್ದ ಭಾರತೀಯ ಯುವಕ ಚೀನಾ ಗಡಿಯಲ್ಲಿ ಪತ್ತೆಯಾಗಿದ್ದಾನೆ. ಈ ಬಗ್ಗೆ ಚೀನಾ ಸೈನಿಕರು ಭಾರತೀಯ ಯೋಧರಿಗೆ ಮಾಹಿತಿ ನೀಡಿದ್ದು,...

ಹಣಕಾಸು2 hours ago

ಕೆಲಸ ಬದಲಾಯಿಸಿದ್ದೀರಾ? ಚಿಂತೆ ಬಿಡಿ.. ನಿಮ್ಮ ನೆರವಿಗೆ ಇದೆ ಇಪಿಎಫ್ಒ!

ಬೆಂಗಳೂರು: ಜನೆವರಿ 23 (ಯು.ಎನ್.ಐ.) ಉತ್ತಮ ಸಂಬಳ, ಭದ್ರತೆಯುಳ್ಳ ನೌಕರಿ, ವಿಶೇಷ ಸವಲತ್ತುಗಳು.. ಹೀಗೆ ನಾನಾ ಉದ್ದೇಶಗಳಿಂದ ಉದ್ಯೋಗಿಗಳು ತಮ್ಮ ಕೆಲಸವನ್ನು ಬದಲಾಯಿಸುತ್ತಾ ಇರುತ್ತಾರೆ. ಇಂತಹ ಸಂದರ್ಭದಲ್ಲಿ...

ದೇಶ2 hours ago

ನೇತಾಜಿ ಸುಭಾಷ್ ಚಂದ್ರ ಬೋಸ್ ಜಯಂತಿ… ದೇಶಾದ್ಯಂತ ಪರಾಕ್ರಮ ದಿನವಾಗಿ ಆಚರಣೆ

ನವದೆಹಲಿ, ಜ ೨೩( ಯುಎನ್ ಐ) ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ೧೨೫ನೇ ಜನ್ಮಜಯಂತಿ ಇಂದು. ದೇಶಾದ್ಯಂತ ಪರಾಕ್ರಮ ದಿನವಾಗಿ ನೇತಾಜಿ...

ಕರ್ನಾಟಕ3 hours ago

ಇಡೀ ವರ್ಷ ಸುಭಾಷ್ ಚಂದ್ರಬೋಸ್ ಜನ್ಮದಿನಾಚರಣೆಗೆ ತೀರ್ಮಾನ: ಸಿಎಂ

ಬೆಂಗಳೂರು : ಜನೆವರಿ 23 (ಯು.ಎನ್.ಐ.) ರಾಜ್ಯ ಸರ್ಕಾರದ ವತಿಯಿಂದ ವರ್ಷವಿಡೀ ನೇತಾಜಿ ಸುಭಾಷ್ ಚಂದ್ರಬೋಸ್ ರವರ 125ನೇ ಜನ್ಮ ದಿನಾಚರಣೆಯನ್ನ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ...

ಅಂಕಣ3 hours ago

ಸ್ವಾತಂತ್ರ್ಯಕ್ಕಿಂತ ದೊಡ್ಡದು ಇನ್ಯಾವುದಿದೆ ?

‌ಅಂಕಣ: ದಿಟನುಡಿ -೩ ಕಳೆದ ವಾರ ನನ್ನ ಕೈರೋಪ್ರಾಕ್ಟರ್ ರೇ ಬಳಿ ಹೋಗಿದ್ದೆ. ಏಕೋ ಗೊತ್ತಿಲ್ಲ ಕೆಲ ದಿನಗಳ ಹಿಂದೆ ಸೊಂಟ ಹಿಡಿದಿತ್ತು. ಏಳಲು, ಕೂರಲು, ನಿಲ್ಲಲು...

ದೇಶ3 hours ago

ಪಂಜಾಬ್ ಚುನಾವಣೆ: ಕೆಂಪು ಕೋಟೆ ಹಿಂಸಾಚಾರದ ಆರೋಪಿಗೆ ರೈತ ಸಂಘಟನೆಯಿಂದ ಟಿಕೆಟ್!

ಚಂಡೀಗಢ: ಜನೆವರಿ 23 (ಯು.ಎನ್.ಐ.) ರೈತರ ಸಂಘಟನೆ ಯುನೈಟೆಡ್ ಸಮಾಜ ಮೋರ್ಚಾ ಪಂಜಾಬ್ ವಿಧಾನಸಭಾ ಚುನಾವಣೆಗೆ 35 ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಮಾಜಿ...

ಕರ್ನಾಟಕ4 hours ago

ನ್ಯಾಯಮೂರ್ತಿ ಕೆ ಎಲ್. ಮಂಜುನಾಥ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಬೆಂಗಳೂರು: ಜನವರಿ 23 (ಯು.ಎನ್.ಐ.)  ಕರ್ನಾಟಕ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. ನ್ಯಾಯಮೂರ್ತಿ ಮಂಜುನಾಥ್ ಅವರು...

ಟ್ರೆಂಡಿಂಗ್

Share