Published
1 month agoon
By
Vanitha Jainಬೆಂಗಳೂರು: ಮೇ 17 (ಯು.ಎನ್.ಐ.) ರಾಜ್ಯದಲ್ಲಿ ಪಠ್ಯಪುಸ್ತಕದ ಪರಿಷ್ಕರಣೆ ಕುರಿತು ಚರ್ಚೆಗಳು ನಡೆಯುತ್ತಿದ್ದು, ಹತ್ತನೇ ತರಗತಿಯ ಪ್ರಥಮ ಭಾಷೆ ಕನ್ನಡ ಪಠ್ಯಪುಸ್ತಕದಲ್ಲಿ ಮಾಡಲಾಗುತ್ತಿರುವ ಬದಲಾವಣೆಯ ಕುರಿತು ಅಸಮಾಧಾನ ವ್ಯಕ್ತಪಡಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
“ಭಗತ್ ಸಿಂಗ್ ಕುರಿತ ಪಾಠವನ್ನು ಪಠ್ಯದಿಂದ ತೆಗೆಯಲು ನಿರ್ಧರಿಸಿರುವುದು ದೇಶವಿರೋಧಿ ಕ್ರಮ ಎಂದು ಹೇಳಿರುವ ಡಿ.ಕೆ ಶಿವಕುಮಾರ್, “ಇಂದು ಭಗತ್ ಸಿಂಗ್ ಪಾಠ ತೆಗೆದುಹಾಕುತ್ತಿದ್ದಾರೆ, ನಾಳೆ ಮಹಾತ್ಮ ಗಾಂಧಿ ಅವರನ್ನು ತೆಗೆದುಹಾಕುತ್ತಾರೆ ಎಂದು ಪಠ್ಯಪುಸ್ತಕ ಪರಿಷ್ಕರಣೆ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ.
ಭಗತ್ ಸಿಂಗ್ ಕುರಿತ ಪಾಠವನ್ನು ಪಠ್ಯದಿಂದ ತೆಗೆಯಲು ನಿರ್ಧರಿಸಿರುವುದು ದೇಶವಿರೋಧಿ ಕ್ರಮ. ಇಂದು ಭಗತ್ ಸಿಂಗ್ ಪಾಠ ತೆಗೆದುಹಾಕುತ್ತಿದ್ದಾರೆ, ನಾಳೆ ಮಹಾತ್ಮ ಗಾಂಧಿ ಅವರನ್ನು ತೆಗೆದುಹಾಕುತ್ತಾರೆ. ಬ್ರಿಟಿಷ್ ವಸಾಹತುಶಾಹಿಯಿಂದ ನಮ್ಮನ್ನು ಮುಕ್ತಗೊಳಿಸಿದವರ ತ್ಯಾಗ, ಬಲಿದಾನವನ್ನು ನಾವು ಎಂದಿಗೂ ಮರೆಯಬಾರದು. #ThankYouBhagatSingh pic.twitter.com/5swOJpxMzs
— DK Shivakumar (@DKShivakumar) May 17, 2022
“ಬ್ರಿಟಿಷ್ ವಸಾಹತುಶಾಹಿಯಿಂದ ನಮ್ಮನ್ನು ಮುಕ್ತಗೊಳಿಸಿದವರ ತ್ಯಾಗ, ಬಲಿದಾನವನ್ನು ನಾವು ಎಂದಿಗೂ ಮರೆಯಬಾರದು.” ಎಂದು ಟ್ವೀಟ್ನಲ್ಲಿ ತಿಳಿಸಿರುವ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಅಪ್ರತಿಮ ಕೊಡುಗೆ ನೀಡಿದವರ ಕುರಿತ ಪಾಠವನ್ನು ಪಠ್ಯದಿಂದ ಕೈಬಿಡುವ ನಿರ್ಧಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಧಾರವಾಡ-ಬೆಳಗಾವಿ ರೈಲು ಯೋಜನೆ ಶೀಘ್ರದಲ್ಲಿ ಪ್ರಾರಂಭ : ಸಿಎಂ
ರಮೇಶ್ ಜಾರಕಿಹೊಳಿ ವಿರುದ್ಧ ಗಂಭೀರ ಆರೋಪ: 819 ಕೋಟಿ ರೂ. ಲೂಟಿ!
ಬೆಳಗಾವಿ ಭೀಕರ ಅಪಘಾತ: ಮೃತ ಕಾರ್ಮಿಕರಿಗೆ 5 ಲಕ್ಷ ರೂ. ಪರಿಹಾರ
ಅಂಜನಾದ್ರಿ ಬೆಟ್ಟದಲ್ಲಿ ಜುಲೈನಲ್ಲಿ ಕಾಮಗಾರಿ ಪ್ರಾರಂಭಿಸಲು ಸಿಎಂ ಬೊಮ್ಮಾಯಿ ಸೂಚನೆ
ಎಸ್. ಎಂ. ಕೃಷ್ಣ, ನಾರಾಯಣ ಮೂರ್ತಿ, ಪ್ರಕಾಶ್ ಪಡುಕೋಣೆಗೆ ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿ
ತಿಂಗಳಲ್ಲಿ 15 ದಿನ ಅರಣ್ಯದಲ್ಲಿರಿ: ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಿಎಂ ತಾಕೀತು