Connect with us


      




ದೇಶ

“ರಾಷ್ಟ್ರೀಯ ಭದ್ರತೆಗೆ ಡ್ರಗ್ಸ್ ದೊಡ್ಡ ಸವಾಲು” : ಷಾ

Iranna Anchatageri

Published

on

ಹೊಸದಿಲ್ಲಿ: ಜೂನ್ 26 (ಯು.ಎನ್‌.ಐ.) ಮಾದಕ ದ್ರವ್ಯಗಳು ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಇದರ ನಿರ್ಮೂಲನೆಗೆ ಸಾರ್ವಜನಿಕರ ಸಹಭಾಗಿತ್ವ ಬಹಳ ಮುಖ್ಯ ಎಂದು ಅವರು ತಿಳಿಸಿದ್ದಾರೆ.

ಪ್ರತಿ ವರ್ಷ ಜೂನ್ 26 ರಂದು ಮಾದಕ ವ್ಯಸನ ಮತ್ತು ಅಕ್ರಮ ಕಳ್ಳಸಾಗಣೆ ವಿರುದ್ಧದ ಅಂತರಾಷ್ಟ್ರೀಯ ದಿನದಂದು ಅಮಿತ್ ಷಾ ಅವರು ಸರಣಿ ಟ್ವೀಟ್ ನಲ್ಲಿ ವಿಚಾರ ವ್ಯಕ್ತಪಡಿಸಿದ್ದಾರೆ.
ಮಾದಕ ವಸ್ತುಗಳ ಸಮಸ್ಯೆ ರಾಷ್ಟ್ರೀಯ ಭದ್ರತೆಗೆ ದೊಡ್ಡ ಸವಾಲಾಗಿದೆ. ಇದರ ಸಂಪೂರ್ಣ ನಾಶಕ್ಕೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ, ಮೋದಿಜಿಯವರ ಮಾದಕ ದ್ರವ್ಯ ಮುಕ್ತ ಭಾರತದ ಸಂಕಲ್ಪವನ್ನು ಈಡೇರಿಸಲು ನಾವೆಲ್ಲರೂ ಒಗ್ಗೂಡಿ ಕೆಲಸ ಮಾಡಬೇಕಿದೆ ಎಂದು ತಿಳಿಸಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, “ಮೋದಿ ಸರ್ಕಾರವು ಮಾದಕ ವಸ್ತುಗಳ ವಿರುದ್ಧ ಜಿರೋ ಟಾಲರೆನ್ಸ್ ನೀತಿ ಹೊಂದಿದೆ. ಮಾದಕ ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರುದ್ಧ ಅಂತಾರಾಷ್ಟ್ರೀಯ ದಿನದಂದು, ಮಾದಕ ದ್ರವ್ಯ ಮುಕ್ತ ಭಾರತದ ಸಂಕಲ್ಪವನ್ನು ಈಡೇರಿಸುವಲ್ಲಿ ಶ್ರಮಿಸಿದ ರಾಷ್ಟ್ರೀಯ ಅಪರಾಧ ಬ್ಯೂರೋ ಸಿಬ್ಬಂದಿ, ಎನ್‌ಜಿಒಗಳು ಮತ್ತು ಅದರ ಸಂಬಂಧಿತ ಸ್ವಯಂಸೇವಕರನ್ನು ನಾನು ಅಭಿನಂದಿಸುತ್ತೇನೆ ಎಂದು ಅಮಿತ್ ಷಾ ಟ್ವೀಟ್ ಮಾಡಿದ್ದಾರೆ.

 

Share