Connect with us


      
ದೇಶ

ಚುನಾವಣಾ ಆಯೋಗದ ಮಹತ್ವದ ಸಭೆ ಇಂದು

Iranna Anchatageri

Published

on

ಹೊಸದಿಲ್ಲಿ : ಜನೆವರಿ 17 (ಯು.ಎನ್.ಐ.) ಪಂಜಾಬ್ ನ ಹಲವು ರಾಜಕೀಯ ಪಕ್ಷಗಳ ಮುಖಂಡರ ಕೋರಿಕೆ ಹಿನ್ನೆಲೆಯಲ್ಲಿ ಇಂದು ಚನಾವಣಾ ಆಯೋಗ ಮಹತ್ವದ ಸಭೆ ನಡೆಸಲಿದೆ. ಪಂಜಾಬ್ ನ ಎಲ್ಲ ರಾಜಕೀಯ ಪಕ್ಷಗಳು ಫೆಬ್ರವರಿ 14 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಮುಂದೂಡಬೇಕೆಂದು ಮನವಿ ಮಾಡಿಕೊಂಡಿದ್ವು. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಚುನಾವಣಾ ಆಯೋಗದ ಮಹತ್ವದ ನಿರ್ಧಾರ ಹೊರಬೀಳಲಿದೆ.
ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ, ಚುನಾವಣಾ ಆಯೋಗಕ್ಕೆ ಬರೆದ ಪತ್ರದಲ್ಲಿ ಫೆಬ್ರವರಿ 14 ರಂದು ನಡೆಯಲಿರುವ ಚುನಾವಣೆಯನ್ನು ಗುರು ರವಿದಾಸ್ ಜಯಂತಿ ಹಿನ್ನೆಲೆಯಲ್ಲಿ ಕನಿಷ್ಠ 6 ದಿನಗಳ ಕಾಲ ಮುಂದೂಡಬೇಕೆಂದು ಮನವಿ ಮಾಡಿದ್ದಾರೆ.
“ಪಂಜಾಬ್‌ನ ಶೇಕಡಾ 32ರಷ್ಟು ಜನಸಂಖ್ಯೆಯನ್ನು ಹೊಂದಿರುವ ಪರಿಶಿಷ್ಟ ಜಾತಿಯ ಸಮುದಾಯದ ಜನ್ರು ಫೆಬ್ರವರಿ 10 ರಿಂದ 16 ರವರೆಗೆ ಉತ್ತರ ಪ್ರದೇಶದ ಬನಾರಸ್‌ಗೆ ಭೇಟಿ ನೀಡುತ್ತಾರೆ. ಈ ಹಿನ್ನೆಲೆಯಲ್ಲಿ ಫೆಬ್ರವರಿ 14 ರಂದು ನಡೆಯುವ ಚುನಾವಣೆಯಲ್ಲಿ ಮತದಾನ ಮಾಡಲು ಸಾಧ್ಯವಾಗುವದಿಲ್ಲ ಎಂದು ಆ ಸಮುದಾಯದ ಪ್ರತಿನಿಧಿಗಳು ತಿಳಿಸಿದ್ದಾರೆ. ಹೀಗಾಗಿ ಚುನಾವಣೆ ದಿನಾಂಕವನ್ನು ಆರು ದಿನಗಳ ಕಾಲ ಮುಂದೂಡಬೇಕೆಂದು” ಪಂಜಾಬ್ ಸಿಎಂ ಚನ್ನಿ ಆಯೋಗಕ್ಕೆ ಸಲಹೆ ನೀಡಿದ್ದಾರೆ.
ಇತ್ತ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಭಾಷ್ ಶರ್ಮಾ ಸಹ ಮುಖ್ಯ ಚುನಾವಣಾ ಆಯುಕ್ತರಿಗೆ ಪತ್ರ ಬರೆದಿದ್ದು, “ರಾಜ್ಯವು ಗುರು ರವಿದಾಸ್ ಜಿ ಅವರ ಅನುಯಾಯಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಹೊಂದಿದೆ. ಇದರಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಜನಸಂಖ್ಯೆಯ ಶೇಕಡಾ 32 ರಷ್ಟಿದೆ. ಈ ಪರಿಸ್ಥಿತಿಯಲ್ಲಿ ಗುರುಪರ್ಬ್ ಆಚರಿಸಲು ಲಕ್ಷಾಂತರ ಭಕ್ತರು ಉತ್ತರ ಪ್ರದೇಶದ ಬನಾರಸ್ ಗೆ ಭೇಟಿ ನೀಡುತ್ತಾರೆ. ಹಾಗಾಗಿ ಅವರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ. ಈ ದೃಷ್ಟಿಯಿಂದ ಚುನಾವಣೆ ದಿನಾಂಕವನ್ನು ಮುಂದೂಡವಂತೆ” ಆಗ್ರಹಿಸಿದ್ದಾರೆ.
ಚುನಾವಣಾ ಆಯೋಗ ಈ ಹಿಂದೆ ಘೋಷಣೆ ಮಾಡಿದಂತೆ ಫೆಬ್ರವರಿ 14 ರಂದು ಒಂದೇ ಹಂತದಲ್ಲಿ ಮತದಾನ ನಡೆಸಲು ತೀರ್ಮಾನ ಕೈಗೊಂಡಿತ್ತು. ಮತಎಣಿಕೆ ಪ್ರಕ್ರಿಯೆಯನ್ನು ಮಾರ್ಚ್ 10 ರಂದು ನೆರವೇರಿಸಲು ನಿರ್ಧಾರ ಕೈಗೊಂಡಿತ್ತು. ಆದರೆ, ಎಲ್ಲ ಪಕ್ಷಗಳ ಮನವಿ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಇಂದು ಸಭೆ ನಡೆಸಿ ಅಂತಿಮ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ.

Share