Connect with us


      
ಕರ್ನಾಟಕ

ಕರ್ನಾಟಕದಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

Iranna Anchatageri

Published

on

ಬೆಂಗಳೂರು: ಮೇ 12 (ಯು.ಎನ್.ಐ.) ಕರ್ನಾಟಕದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣಾ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿದೆ. ಜೂನ್ 10ರಂದು ಮತದಾನ ಪ್ರಕ್ರಿಯೆ ನಡೆದರೆ, ಜೂನ್ 10 ರಂದು ಮತ ಎಣಿಕೆ ನಡೆಯಲಿದೆ.

ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಜೈ ರಾಮ್ ರಮೇಶ್, ಕೆ.ಸಿ.ರಾಮಮೂರ್ತಿ, ಆಸ್ಕರ್ ಫರ್ನಾಂಡಿಸ್ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಸದಸ್ಯತ್ವ ಜೂನ್ 6ರಂದು ಕೊನೆಗೊಳ್ಳಲಿದೆ. ಈ ಸ್ಥಾನಗಳಿಗೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಕರ್ನಾಟಕ ಅಷ್ಟೇ ಅಲ್ಲದೆ, ಆಂಧ್ರಪ್ರದೇಶ, ತೆಲಂಗಾಣ, ಛತ್ತೀಸಗಢ, ಮಧ್ಯಪ್ರದೇಶ, ತಮಿಳುನಾಡು, ಒಡಿಶಾ, ಮಹಾರಾಷ್ಟ್ರ, ಪಂಜಾಬ್, ರಾಜಸ್ಥಾನ, ಉತ್ತರ ಪ್ರದೇಶ, ಉತ್ತರಾಖಂಡ, ಬಿಹಾರ, ಜಾರ್ಖಂಡ್ ಮತ್ತು ಹರಿಯಾಣದ ಖಾಲಿ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಬರೋಬ್ಬರಿ 15 ರಾಜ್ಯಗಳ  57 ಸಂಸದರ ಸದಸ್ಯತ್ವ ಜೂನ್ 26 ರಿಂದ ಆಗಸ್ಟ್ 1ರ ಮಧ್ಯಾವಧಿಯಲ್ಲಿ ಕೊನೆಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ತೆರುವಾಗಲಿರುವ ಸ್ಥಾನಗಳಿಗೆ ಜೂನ್ 10 ಶುಕ್ರವಾರದಂದು ಚುನಾವಣೆ ನಡೆಯಲಿದೆ.

Share