Connect with us


      




ದೇಶ

ಲೋಕಸಭೆಯಲ್ಲಿ ಚುನಾವಣಾ ಕಾನೂನುಗಳ (ತಿದ್ದುಪಡಿ) ಮಸೂದೆ- 2021 ಅಂಗೀಕಾರ

Published

on

ನವದೆಹಲಿ: ಡಿ,20 (ಯು.ಎನ್.​ಐ) ಮತದಾರರ ಪಟ್ಟಿಯನ್ನು ಆಧಾರ್ ಜೊತೆ ಜೋಡಿಸುವ ಚುನಾವಣಾ ಕಾನೂನುಗಳ (ತಿದ್ದುಪಡಿ) ಮಸೂದೆ- 2021ನ್ನು ಸೋಮವಾರ ಲೋಕಸಭೆಯಲ್ಲಿ ಮಂಡಿಸಲಾಯಿತು.

ಚುನಾವಣಾ ಕಾನೂನುಗಳ (ತಿದ್ದುಪಡಿ) ಮಸೂದೆ- 2021ನ್ನು ಪರಿಚಯಿಸಿದ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು, ಈ ಮಸೂದೆ ದೇಶದಲ್ಲಿ ನಕಲಿ ಮತದಾನವನ್ನು ಕೊನೆಗೊಳಿಸುತ್ತದೆ. ಅಲ್ಲದೇ ಚುನಾವಣಾ ಪ್ರಕ್ರಿಯೆಯನ್ನು ಹೆಚ್ಚು ವಿಶ್ವಾಸಾರ್ಹಗೊಳಿಸುತ್ತದೆ ಎಂದು ಹೇಳಿದರು.

ಮತದಾರರ ಪಟ್ಟಿಯಲ್ಲಿ ಈಗಾಗಲೇ ನೋಂದಣಿಯಾಗಿರುವ ಜನರ ಹೆಸರಿನ ದೃಢೀಕರಣಕ್ಕಾಗಿ ಮತ್ತು ಹೆಚ್ಚಿನ ಮತ ಕ್ಷೇತ್ರಗಳಲ್ಲಿ ನೋಂದಣಿಯಾಗಿರುವ ಮತದಾರರನ್ನು ಗುರುತಿಸಲೂ ಚುನಾವಣಾ ನೋಂದಣಿ ಅಧಿಕಾರಿಗಳು ಆಧಾರ್ ಸಂಖ್ಯೆ ಪಡೆಯಲು ಈ ಮಸೂದೆ ಅನುಮತಿಸುತ್ತದೆ.

ಆಧಾರ್‌ ಸಂಖ್ಯೆ ಒದಗಿಸಲಾಗದವರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡುವುದಿಲ್ಲ. ಅನಿವಾರ್ಯ ಕಾರಣಗಳಿಂದ ಆಧಾರ್‌ ಒದಗಿಸಲಾಗದವರು ಇತರ ದಾಖಲೆಗಳನ್ನು ನೀಡಬಹುದು ಎಂದು ಮಸೂದೆ ಸ್ಪಷ್ಟಪಡಿಸಿದೆ.

ಮಸೂದೆಯ ಬಗ್ಗೆ ವಿರೋಧ ಪಕ್ಷಗಳ ಆತಂಕವನ್ನು “ಆಧಾರರಹಿತ” ಎಂದು ತಳ್ಳಿಹಾಕಿದ ಸಚಿವರು, ವಿರೋಧ ಪಕ್ಷದ ಸದಸ್ಯರು ವೈಯಕ್ತಿಕ ಸ್ವಾತಂತ್ರ್ಯದ ಕುರಿತು ಸುಪ್ರೀಂ ಕೋರ್ಟ್ ತೀರ್ಪನ್ನು “ತಪ್ಪಾಗಿ ಅರ್ಥೈಸುತ್ತಿದ್ದಾರೆ” ಎಂದು ಹೇಳಿದರು.

ಪ್ರತಿಪಕ್ಷಗಳು ಮಸೂದೆಯ ಉದ್ದೇಶಗಳನ್ನು ಅರ್ಥಮಾಡಿಕೊಂಡಿಲ್ಲ, ಇದು ಚುನಾವಣಾ ಪ್ರಕ್ರಿಯೆಯನ್ನು ಹೆಚ್ಚು ವಿಶ್ವಾಸಾರ್ಹಗೊಳಿಸುತ್ತದೆ ಎಂದು ಅವರು ಹೇಳಿದರು.

ಸರ್ಕಾರವು ನಕಲಿ ಮತದಾನವನ್ನು ತಡೆಯಲು ಪ್ರಯತ್ನಿಸುತ್ತಿದೆ ಮತ್ತು ಅದಕ್ಕಾಗಿಯೇ ಸದನವು ಮಸೂದೆಯನ್ನು ಬೆಂಬಲಿಸಬೇಕು ಎಂದು ಸಚಿವರು ಹೇಳಿದರು. ಮಸೂದೆಯು ಸುಪ್ರೀಂ ಕೋರ್ಟ್ ತೀರ್ಪಗೆ ಸಂಪೂರ್ಣವಾಗಿ ಅರ್ಹವಾಗಿದೆ ಅವರು ಹೇಳಿದರು. ಆದರೆ, ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಮಸೂದೆಯನ್ನು ವಿರೋಧಿಸಿದ್ದು, ಇದು ನಾಗರಿಕರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿದರು.

ಮಸೂದೆಯನ್ನು ವಿರೋಧಿಸಿದ ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ಮಸೂದೆಯನ್ನು ಪರಿಶೀಲನೆಗೆ ಸಂಬಂಧಿಸಿದ ಸ್ಥಾಯಿ ಸಮಿತಿಗೆ ಕಳುಹಿಸಬೇಕು. ಈ ಮಸೂದೆಯು ಜನರ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕಲಿದೆ ಎಂದು ಒತ್ತಾಯಿಸಿದರು.

ಚೌಧರಿ ಅವರ ಪಕ್ಷದ ಸಹೋದ್ಯೋಗಿ ಮನೀಶ್ ತಿವಾರಿ, ಮತದಾನವು ಕಾನೂನುಬದ್ಧ ಹಕ್ಕು ಮತ್ತು ಇದು ಚುನಾವಣಾ ಕಾನೂನುಗಳೊಂದಿಗೆ ಆಧಾರ್ ಕಾಯ್ದೆಯ ಶಾಸಕಾಂಗ ಸಾಮರ್ಥ್ಯವನ್ನು ಮೀರಿದೆ ಎಂದು ಹೇಳಿದರು.

ಈ ಮಸೂದೆಯು ನ್ಯಾಯಮೂರ್ತಿ (ನಿವೃತ್ತ) ಕೆ ಎಸ್ ಪುಟ್ಟಸ್ವಾಮಿ ಪ್ರಕರಣದ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲಂಘಿಸುತ್ತದೆ ಎಂದು ತಿವಾರಿ ಹೇಳಿದ್ದಾರೆ.
ಆಗಸ್ಟ್ 24, 2017 ರಂದು, ಸುಪ್ರೀಂ ಕೋರ್ಟ್‌ನ ಒಂಬತ್ತು ನ್ಯಾಯಾಧೀಶರ ಪೀಠವು ನ್ಯಾಯಮೂರ್ತಿ (ನಿವೃತ್ತ) ಕೆ ಎಸ್ ಪುಟ್ಟಸ್ವಾಮಿ ಪ್ರಕರಣದಲ್ಲಿ ಸರ್ವಾನುಮತದ ತೀರ್ಪು ನೀಡಿತು. ಸಂವಿಧಾನವು ಪ್ರತಿಯೊಬ್ಬ ವ್ಯಕ್ತಿಗೂ ಖಾಸಗಿತನದ ಮೂಲಭೂತ ಹಕ್ಕನ್ನು ನೀಡುತ್ತದೆ ಎಂದು ಕೋರ್ಟ್ ಹೇಳಿತ್ತು.

ಈ ಮಸೂದೆಯು ಜನರ ಹಕ್ಕುಗಳನ್ನು ಮುಕ್ತವಾಗಿ ಚಲಾಯಿಸುವ ಹಕ್ಕನ್ನು ಹತ್ತಿಕ್ಕುತ್ತದೆ ಎಂದು ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಆರೋಪಿಸಿದ್ದಾರೆ.

ಈ ನಡುವೆ ಅಧ್ಯಕ್ಷತೆ ವಹಿಸಿದ್ದ ರಾಜೇಂದ್ರ ಅಗರ್‌ವಾಲ್ ಧ್ವನಿ ಮತ ಪಡೆದು ವಿಧೇಯಕ ಮಂಡನೆಯನ್ನು ಅಂಗೀಕರಿಸಿದರು.

ದೇಶ

ಟ್ರೈನ್ ಡ್ರೈವರ್‌ಗೆ ನಿದ್ದೆ ಎಂಬ ಚಿಂತೆ; ಪ್ರಯಾಣಿಕರಿಗೆ ಸುಸ್ತೋ ಸುಸ್ತು..!!

Published

on

ಶಹಜಹಾನ್ಪುರ್/ಉತ್ತರಪ್ರದೇಶ: ಜನೆವರಿ 23 (ಯು.ಎನ್.ಐ.) “ನನ್ನ ನಿದ್ದೆ ಸಂಪೂರ್ಣವಾಗಿಲ್ಲ. ನಾನು ಸದ್ಯ ರೈಲು ಚಲಾಯಿಸುವುದಿಲ್ಲ.” ಉತ್ತರ ಪ್ರದೇಶದ ಶಹಜಹಾನ್‌ಪುರ ರೈಲು ನಿಲ್ದಾಣದಲ್ಲಿ ಶುಕ್ರವಾರ ಇಂಥದ್ದೊಂದು ವಿಚಿತ್ರ ಘಟನೆ ನಡೆದಿದೆ. ಇಲ್ಲಿನ ಬಲಮೌ ಪ್ಯಾಸೆಂಜರ್ ರೈಲಿನ ಚಾಲಕ ನಿದ್ರೆಯ ಕೊರತೆಯಿಂದಾಗಿ ರೈಲನ್ನು ಓಡಿಸಲು ನಿರಾಕರಿಸಿದ್ದಾನೆ. ಇದರಿಂದಾಗಿ ರೈಲು ಸುಮಾರು ಎರಡೂವರೆ ಗಂಟೆಗಳ ಕಾಲ ನಿಲ್ದಾಣದಿಂದ ಕದಲಿಲ್ಲ. ಇದರಿಂದಾಗಿ ರೈಲಿನಲ್ಲಿದ್ದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಬೇಕಾಯಿತು.

ಆಗಿದ್ದೇನೆಂದರೆ? ಬಾಲಾಮೌ ಪ್ಯಾಸೆಂಜರ್ ಗುರುವಾರ ರಾತ್ರಿ ಸುಮಾರು 1 ಗಂಟೆಯ ಹೊತ್ತಿಗೆ ಮೂರೂವರೆ ಗಂಟೆ ತಡವಾಗಿ ಶಹಜಹಾನ್‌ಪುರ ರೈಲು ನಿಲ್ದಾಣವನ್ನು ತಲುಪಿತು. ಬಲಮೌವಿಗೆ ರೈಲು ತಂದಿದ್ದ ಚಾಲಕ ಬೆಳಗ್ಗೆ ಅದೇ ರೈಲನ್ನು ವಾಪಸ್ ಬಲಮೌವಿಗೆ ತೆಗೆದುಕೊಂಡು ಹೋಗಬೇಕಾಗಿತ್ತು. ಆದರೆ, ರಾತ್ರಿ ತಡವಾಗಿ ಬಂದ ಕಾರಣ ಚಾಲಕನಿಗೆ ನಿದ್ರೆ ಸಂಪೂರ್ಣ ಆಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ 7 ಗಂಟೆಗೆ ಹೊರಡಬೇಕಿದ್ದ ರೈಲನ್ನು ಚಲಾಯಿಸಲು ನಿರಾಕರಿಸಿದ್ದಾನೆ.

ಶಹಜಹಾನ್‌ಪುರ ರೈಲ್ವೆ ಸೂಪರಿಂಟೆಂಡೆಂಟ್ ಅಮರೇಂದ್ರ ಗೌತಮ್ ಮಾತನಾಡಿ, ರೋಜಾ ಜಂಕ್ಷನ್‌ನಲ್ಲಿ ರಾತ್ರಿ ವಿಶ್ರಾಂತಿ ಪಡೆದ ನಂತರ ಅದೇ ಡ್ರೈವರ್ ಬೆಳಗ್ಗೆ ರೈಲನ್ನು ವಾಪಸ್ ತೆಗೆದುಕೊಂಡು ಹೋಗುತ್ತಾನೆ. ರೈಲು ಚಾಲಕನಿಗೆ ರಾತ್ರಿ ಸಂಪೂರ್ಣ ನಿದ್ದೆಯಾಗದ ಕಾರಣ ನಿರಾಕರಿಸಿದ್ದಾನೆ. ಅವರ ನಿದ್ರೆ ಪೂರ್ಣಗೊಂಡ ಬಳಿಕ ರೈಲು ಚಾಲಕ ಟ್ರೈನ್ ಹತ್ತಿದ್ದಾನೆ ಎಂದು ಗೌತಮ್ ತಿಳಿಸಿದ್ದಾರೆ.

Continue Reading

ದೇಶ

ಬಂಗಾಳ: ನೇತಾಜಿ ಜನ್ಮದಿನದಂದು ಲಾಠಿ ಚಾರ್ಜ್

Published

on

ಕೋಲ್ಕತ್ತಾ: ಜನೆವರಿ 23 (ಯು.ಎನ್.ಐ.) ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ಸಂದರ್ಭದಲ್ಲಿಯೂ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ರಾಜಕೀಯ ನಿಂತಿಲ್ಲ. ಪಶ್ಚಿಮ ಬಂಗಾಳದ ಬ್ಯಾರಕ್‌ಪೋರ್‌ನಲ್ಲಿ ನೇತಾಜಿಗೆ ಶ್ರದ್ಧಾಂಜಲಿ ಸಲ್ಲಿಸುವ ವೇಳೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಟಿಎಂಸಿ-ಬಿಜೆಪಿ ಕಾರ್ಯಕರ್ತರ ಮಧ್ಯೆ ಜಟಾಪಟಿ ನಡೆದಿದೆ.

ಪಶ್ಚಿಮ ಬಂಗಾಳದ ಬ್ಯಾರಕ್‌ಪೋರ್‌ನಲ್ಲಿ ಪರಿಸ್ಥಿತಿ ಎಷ್ಟು ಹದಗೆಟ್ಟಿತು ಎಂದರೆ ಬಿಜೆಪಿ ಸಂಸದ ಅರ್ಜುನ್ ಸಿಂಗ್ ಅವರ ಭದ್ರತಾ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಬೇಕಾಯಿತು. ನೇತಾಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಎರಡೂ ಕಡೆಯವರು ಸೇರಿದ್ದಾಗ ವಿವಾದ ಹುಟ್ಟಿಕೊಂಡಿತು. ಅರ್ಜುನ್ ಸಿಂಗ್ ಸ್ಥಳಕ್ಕಾಗಮಿಸುತ್ತಿದ್ದಂತೆ ಟಿಎಂಸಿ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ತೀವ್ರ ಸ್ವರೂಪ ಪಡೆದುಕೊಂಡಿತು. ಅರ್ಜುನ್ ಸಿಂಗ್ ಅವರನ್ನು ಗುರಿಯಾಗಿಸಿಕೊಂಡು ಟಿಎಂಸಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಇದಾದ ನಂತರ ಅರ್ಜುನ್ ಸಿಂಗ್ ಅವರ ಭದ್ರತಾ ಸಿಬ್ಬಂದಿ ಗಾಳಿಯಲ್ಲಿ ಹಲವು ಸುತ್ತು ಗುಂಡು ಹಾರಿಸಿ ಅರ್ಜುನ್ ಸಿಂಗ್ ಅವರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ದರು. ಈ ವೇಳೆ ಪೊಲೀಸರು ಕೂಡ ಸ್ಥಳದಲ್ಲಿಯೇ ಇದ್ದರು.
ಪೊಲೀಸರಿಂದ ಲಾಠಿಚಾರ್ಜ್
ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಲಾಠಿ ಪ್ರಹಾರವನ್ನೂ ನಡೆಸಬೇಕಾಯಿತು. ಅರ್ಜುನ್ ಸಿಂಗ್ ಅವರ ಕಾರನ್ನು ಕೂಡ ಧ್ವಂಸಗೊಳಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಅರ್ಜುನ್ ಸಿಂಗ್ ಅವರ ಭದ್ರತಾ ಸಿಬ್ಬಂದಿ 7 ಸುತ್ತು ಗುಂಡು ಹಾರಿಸಿದ್ದಾರೆ ಎಂದು ಟಿಎಂಸಿ ಆರೋಪಿಸಿದೆ
ಟಿಎಂಸಿ ಜನರ ಮೇಲೆ ಹಲ್ಲೆ: ಬಿಜೆಪಿ ಸಂಸದ
“ಇಂದು ಬೆಳಗ್ಗೆ 10:30ಕ್ಕೆ ನೇತಾಜಿಯವರಿಗೆ ನಮನ ಸಲ್ಲಿಸಲು ನಮ್ಮ ಶಾಸಕ ಪವನ್ ಸಿಂಗ್ ತೆರಳಿದ್ದರು. ಟಿಎಂಸಿ ಗೂಂಡಾಗಳು ಅವರ ಮೇಲೆ ದಾಳಿ ನಡೆಸಿ, ಗುಂಡು ಹಾರಿಸಿ ಇಟ್ಟಿಗೆ ಎಸೆದಿದ್ದಾರೆ. ನಾನು ಬಂದ ಮೇಲೆ ಅವರು ನನ್ನ ಮೇಲೆಯೂ ಹಲ್ಲೆ ನಡೆಸಿದರು ಎಂದು ಬಿಜೆಪಿ ಸಂಸದ ಅರ್ಜುನ್ ಸಿಂಗ್ ಹೇಳಿದ್ದಾರೆ. . ಪೋಲೀಸರ ಮುಂದೆಯೇ ಎಲ್ಲವೂ ನಡೆಯುತ್ತಿತ್ತು…ನನ್ನ ಕಾರನ್ನು ಸಹ ಒಡೆದು ಹಾಕಲಾಯಿತು ಎಂದರು.”
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಹಾಗೂ ಟಿಎಂಸಿ ಕಾರ್ಯಕರ್ತರ ಬಡಿದಾಟ, ಆರೋಪ-ಪ್ರತ್ಯಾರೋಪ, ಹಿಂಸಾಚಾರ ಸಾಮಾನ್ಯವಾಗಿಬಿಟ್ಟಿದೆ. ಇಂದು ಬ್ಯಾರಕ್‌ಪೋರ್‌ನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125 ನೇ ಜನ್ಮದಿನದಂದು ಇದು ಮುಂದುವರಿದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಹಿನ್ನೆಲೆಯಲ್ಲಿ ಹೆಚ್ಚಿನ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.

Continue Reading

ದೇಶ

ಅರುಣಾಚಲದಿಂದ ನಾಪತ್ತೆಯಾಗಿದ್ದ ಯುವಕ ಚೀನಾ ಗಡಿಯಲ್ಲಿ ಪತ್ತೆ!

Published

on

ಹೊಸದಿಲ್ಲಿ: ಜನೆವರಿ 23 (ಯು.ಎನ್.ಐ.) ಅರುಣಾಚಲ ಪ್ರದೇಶದಿಂದ ನಾಪತ್ತೆಯಾಗಿದ್ದ ಭಾರತೀಯ ಯುವಕ ಚೀನಾ ಗಡಿಯಲ್ಲಿ ಪತ್ತೆಯಾಗಿದ್ದಾನೆ. ಈ ಬಗ್ಗೆ ಚೀನಾ ಸೈನಿಕರು ಭಾರತೀಯ ಯೋಧರಿಗೆ ಮಾಹಿತಿ ನೀಡಿದ್ದು, ಭಾರತಕ್ಕೆ ಮರಳಿ ಹಸ್ತಾಂತರಿಸಲು ಔಪಚಾರಿಕ ಪ್ರಕ್ರಿಯೆಗಳು ಪೂರ್ಣಗೊಳ್ಳುತ್ತಿವೆ.

ಅರುಣಾಚಲ ಪ್ರದೇಶದ ಸಿಯುಂಗಾಲಾದ ಲುಂಗ್ಟಾ ಜೋರ್ ಪ್ರದೇಶದ ನಿವಾಸಿ 17 ವರ್ಷದ ಮಿರಮ್ ತರನ್ ಜನೆವರಿ 18ರಂದು ನಾಪತ್ತೆಯಾಗಿದ್ದ. ಈ ಬಗ್ಗೆ ಅರುಣಾಚಲ ಪೂರ್ವದ ಸಂಸದ ತಪಿರ್ ಗಾವೊ ಅವರು ಮೊದಲ ಬಾರಿಗೆ ಮಾಹಿತಿ ನೀಡಿದ್ದರು. ಚೀನಾ ಸೈನಿಕರು ಈ ಯುವಕನನ್ನು ಸೆರೆ ಹಿಡಿದಿದ್ದರು ಎಂದು ಗಾವೋ ಆರೋಪ ಮಾಡಿದ್ದರು. ಇದಾದ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹ ಚೀನಾದಿಂದ ಭಾರತೀಯ ಯುವಕ ಅಪಹರಣಕ್ಕೊಳಗಾಗಿರುವುದನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಅರುಣಾಚಲದಿಂದ ಯುವಕ ಕಣ್ಮರೆಯಾದ ಬಳಿಕ ಭಾರತೀಯ ಸೇನೆ ಮಿರಮ್ ಗಾಗಿ ಹುಡುಕಾಟ ಆರಂಭಿಸಿದ್ದರು. ಅಲ್ಲದೆ, ಚೀನಾ ಪಿಎಲ್ಎಗೆ ಈ ಬಗ್ಗೆ ಮಾಹಿತಿ ನೀಡಿದ್ದರು. ಆದರೆ, ಮೊದಲಿಗೆ ಈ ಯುವಕನ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ ಎಂದು ಚೀನಾ ಹೇಳಿತ್ತು. ಆದರೆ ಇಂದು ತಮ್ಮ ಪ್ರದೇಶದಲ್ಲಿ ಯುವಕನೊಬ್ಬ ಪತ್ತೆಯಾಗಿದ್ದಾನೆ ಎಂದು ಚೀನಾ ಯೋಧರು ಭಾರತೀಯ ಸೇನೆಗೆ ತಿಳಿಸಿದ್ದಾರೆ.

ಅಸ್ಸಾಂನ ತೇಜ್‌ಪುರದಲ್ಲಿ ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಹರ್ಷವರ್ಧನ್ ಪಾಂಡೆ, ಅರುಣಾಚಲ ಪ್ರದೇಶದಿಂದ ನಾಪತ್ತೆಯಾಗಿರುವ ಯುವಕ ಪತ್ತೆಯಾಗಿದ್ದಾನೆ ಎಂದು ಚೀನಿ ಸೇನೆ ಮಾಹಿತಿ ನೀಡಿದೆ ಎಂದು ತಿಳಿಸಿದ್ದಾರೆ. ಈ ಯುವಕರನ್ನು ಭಾರತಕ್ಕೆ ಹಸ್ತಾಂತರಿಸಲು ಚೀನಾ ಸೇನೆಯೊಂದಿಗೆ ಸೂಕ್ತ ಕ್ರಮ ಅನುಸರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

Continue Reading
Advertisement
ದೇಶ20 seconds ago

ಟ್ರೈನ್ ಡ್ರೈವರ್‌ಗೆ ನಿದ್ದೆ ಎಂಬ ಚಿಂತೆ; ಪ್ರಯಾಣಿಕರಿಗೆ ಸುಸ್ತೋ ಸುಸ್ತು..!!

ಶಹಜಹಾನ್ಪುರ್/ಉತ್ತರಪ್ರದೇಶ: ಜನೆವರಿ 23 (ಯು.ಎನ್.ಐ.) “ನನ್ನ ನಿದ್ದೆ ಸಂಪೂರ್ಣವಾಗಿಲ್ಲ. ನಾನು ಸದ್ಯ ರೈಲು ಚಲಾಯಿಸುವುದಿಲ್ಲ.” ಉತ್ತರ ಪ್ರದೇಶದ ಶಹಜಹಾನ್‌ಪುರ ರೈಲು ನಿಲ್ದಾಣದಲ್ಲಿ ಶುಕ್ರವಾರ ಇಂಥದ್ದೊಂದು ವಿಚಿತ್ರ ಘಟನೆ...

ದೇಶ30 mins ago

ಬಂಗಾಳ: ನೇತಾಜಿ ಜನ್ಮದಿನದಂದು ಲಾಠಿ ಚಾರ್ಜ್

ಕೋಲ್ಕತ್ತಾ: ಜನೆವರಿ 23 (ಯು.ಎನ್.ಐ.) ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ಸಂದರ್ಭದಲ್ಲಿಯೂ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ರಾಜಕೀಯ ನಿಂತಿಲ್ಲ. ಪಶ್ಚಿಮ ಬಂಗಾಳದ...

ಅಂಕಣ1 hour ago

ದಟ್ಟ ಕಾಡಿನಲ್ಲಿ ʻಸಪ್ನೋಂ ಕೀ ರಾಣೀʼ

ಅಂಕಣ: ಒಂದೂರಲ್ಲಿ ಒಂದಿನ- 3 ಈ ಒಂದೂರು ಅನ್ನುವ ಮಾಯೆ ಇದೆಯಲ್ಲ, ಅದು ವಿಚಿತ್ರವಾದದ್ದು. ಅಪ್ಪ ಕಥೆ ಹೇಳುವಾಗ ಪ್ರತಿ ಸಲವೂ ಆ ಕಥೆ ಒಂದೂರಿನಲ್ಲಿ ಅಂತಲೇ...

ಕ್ರೀಡೆ2 hours ago

ಅಂಕುಶ್ ರಘುವಂಶಿ ಟೀಂ ಇಂಡಿಯಾದ ಉದಯೋನ್ಮುಖ ತಾರೆ!

ಹೊಸದಿಲ್ಲಿ: ಜನೆವರಿ 23 (ಯು.ಎನ್.ಐ.) ಅಂಡರ್ 19 ವರ್ಲ್ಡ್ ಕಪ್ ಮೂಲಕ ಭಾರತ ಕ್ರಿಕೆಟ್ ತಂಡಕ್ಕೆ ಮತ್ತೊಬ್ಬ ಉದಯೋನ್ಮುಖ ಆಟಗಾರ ದೊರೆತಿದ್ದಾರೆ. ಅವರೇ ದೆಹಲಿ ಮೂಲದ ಅಂಕುಶ್...

ಅಂಕಣ3 hours ago

ಎಳವೆಯಿಂದ ರಂಗಭೂಮಿ

ನಾದಾಂಕಣ – ಡಾ. ನಾ. ದಾಮೋದರ ಶೆಟ್ಟಿ ಭಾರತೀಯ ಹಾಗೂ ಗ್ರೀಕ್‌ ರಂಗಭೂಮಿಗೆ ಬಹುದೊಡ್ಡ ಪರಂಪರೆಇದೆ ಎನ್ನುವುದು ಸಾರ್ವಕಾಲಿಕ ಸತ್ಯ. ಆದರೆ ಯುರೋಪಿನ ರಂಗಭೂಮಿಯಾಗಲೀ ರಷ್ಯಾ, ಅಮೇರಿಕಾ...

ದೇಶ3 hours ago

ಅರುಣಾಚಲದಿಂದ ನಾಪತ್ತೆಯಾಗಿದ್ದ ಯುವಕ ಚೀನಾ ಗಡಿಯಲ್ಲಿ ಪತ್ತೆ!

ಹೊಸದಿಲ್ಲಿ: ಜನೆವರಿ 23 (ಯು.ಎನ್.ಐ.) ಅರುಣಾಚಲ ಪ್ರದೇಶದಿಂದ ನಾಪತ್ತೆಯಾಗಿದ್ದ ಭಾರತೀಯ ಯುವಕ ಚೀನಾ ಗಡಿಯಲ್ಲಿ ಪತ್ತೆಯಾಗಿದ್ದಾನೆ. ಈ ಬಗ್ಗೆ ಚೀನಾ ಸೈನಿಕರು ಭಾರತೀಯ ಯೋಧರಿಗೆ ಮಾಹಿತಿ ನೀಡಿದ್ದು,...

ಹಣಕಾಸು3 hours ago

ಕೆಲಸ ಬದಲಾಯಿಸಿದ್ದೀರಾ? ಚಿಂತೆ ಬಿಡಿ.. ನಿಮ್ಮ ನೆರವಿಗೆ ಇದೆ ಇಪಿಎಫ್ಒ!

ಬೆಂಗಳೂರು: ಜನೆವರಿ 23 (ಯು.ಎನ್.ಐ.) ಉತ್ತಮ ಸಂಬಳ, ಭದ್ರತೆಯುಳ್ಳ ನೌಕರಿ, ವಿಶೇಷ ಸವಲತ್ತುಗಳು.. ಹೀಗೆ ನಾನಾ ಉದ್ದೇಶಗಳಿಂದ ಉದ್ಯೋಗಿಗಳು ತಮ್ಮ ಕೆಲಸವನ್ನು ಬದಲಾಯಿಸುತ್ತಾ ಇರುತ್ತಾರೆ. ಇಂತಹ ಸಂದರ್ಭದಲ್ಲಿ...

ದೇಶ3 hours ago

ನೇತಾಜಿ ಸುಭಾಷ್ ಚಂದ್ರ ಬೋಸ್ ಜಯಂತಿ… ದೇಶಾದ್ಯಂತ ಪರಾಕ್ರಮ ದಿನವಾಗಿ ಆಚರಣೆ

ನವದೆಹಲಿ, ಜ ೨೩( ಯುಎನ್ ಐ) ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ೧೨೫ನೇ ಜನ್ಮಜಯಂತಿ ಇಂದು. ದೇಶಾದ್ಯಂತ ಪರಾಕ್ರಮ ದಿನವಾಗಿ ನೇತಾಜಿ...

ಕರ್ನಾಟಕ4 hours ago

ಇಡೀ ವರ್ಷ ಸುಭಾಷ್ ಚಂದ್ರಬೋಸ್ ಜನ್ಮದಿನಾಚರಣೆಗೆ ತೀರ್ಮಾನ: ಸಿಎಂ

ಬೆಂಗಳೂರು : ಜನೆವರಿ 23 (ಯು.ಎನ್.ಐ.) ರಾಜ್ಯ ಸರ್ಕಾರದ ವತಿಯಿಂದ ವರ್ಷವಿಡೀ ನೇತಾಜಿ ಸುಭಾಷ್ ಚಂದ್ರಬೋಸ್ ರವರ 125ನೇ ಜನ್ಮ ದಿನಾಚರಣೆಯನ್ನ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ...

ಅಂಕಣ4 hours ago

ಸ್ವಾತಂತ್ರ್ಯಕ್ಕಿಂತ ದೊಡ್ಡದು ಇನ್ಯಾವುದಿದೆ ?

‌ಅಂಕಣ: ದಿಟನುಡಿ -೩ ಕಳೆದ ವಾರ ನನ್ನ ಕೈರೋಪ್ರಾಕ್ಟರ್ ರೇ ಬಳಿ ಹೋಗಿದ್ದೆ. ಏಕೋ ಗೊತ್ತಿಲ್ಲ ಕೆಲ ದಿನಗಳ ಹಿಂದೆ ಸೊಂಟ ಹಿಡಿದಿತ್ತು. ಏಳಲು, ಕೂರಲು, ನಿಲ್ಲಲು...

ಟ್ರೆಂಡಿಂಗ್

Share