Connect with us


      




ದೇಶ

ಜಮ್ಮು ಕಾಶ್ಮೀರ; ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಹತ

Iranna Anchatageri

Published

on

ಶ್ರೀನಗರ, ಡಿಸೆಂಬರ್ 12 (ಯು.ಎನ್.ಐ) ಕಣಿವೆಯಲ್ಲಿ ಭಯೋತ್ಪಾದಕರ ವಿರುದ್ಧ ಭದ್ರತಾ ಪಡೆಗಳ ಕಾರ್ಯಾಚರಣೆ ಮುಂದುವರಿದಿದೆ. ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ಇತ್ತ ಬರಗಾಂ ಪ್ರದೇಶದಲ್ಲಿ ಎನ್‌ಕೌಂಟರ್ ಇನ್ನೂ ನಡೆಯುತ್ತಿದೆ.

ಈ ಮಧ್ಯೆ ಬುಧವಾರ ಮುಂಜಾನೆ ನಡೆದ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯಲ್ಲಿ ದಕ್ಷಿಣ ಕಾಶ್ಮೀರದ ಶೋಪಿಯಾನ್‌ನಲ್ಲಿ ಭದ್ರತಾ ಪಡೆಗಳು 3 ಭಯೋತ್ಪಾದಕರನ್ನು ಹೊಡೆದುರುಳಿಸಿದ್ದವು.

Share