Connect with us


      
ದೇಶ

ಪುಲ್ವಾಮಾ ಎನ್‌ಕೌಂಟರ್: ಮೂವರು ಭಯೋತ್ಪಾದಕರ ಹತ್ಯೆ

Iranna Anchatageri

Published

on

ಶ್ರೀನಗರ: ಏಪ್ರಿಲ್ 24 (ಯು.ಎನ್.ಐ.) ಇಂದು ಮಧ್ಯಾಹ್ನ ಆರಂಭಗೊಂಡ ಪುಲ್ವಾಮಾದ ಪಹು ಪ್ರದೇಶದಲ್ಲಿನ ಎನ್ ಕೌಂಟರ್ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ. ಇತರರಿಗಾಗಿ ಹುಡುಕಾಟ ನಡೆಯುತ್ತಿದೆ.

ಉಗ್ರರು ಅಡಗಿರುವ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರಿದಿವೆ. ಎರಡೂ ಕಡೆಯಿಂದ ಗುಂಡಿನ ಚಕಮಕಿ ಮುಂದುವರಿದಿದೆ. ಭದ್ರತಾ ಪಡೆಗಳು ಜಾಗರೂಕತೆಯಿಂದ ಉಗ್ರರಿಗೆ ತಕ್ಕ ಪ್ರತ್ಯುತ್ತರ ನೀಡುತ್ತಿವೆ. ಪುಲ್ವಾಮಾದಲ್ಲಿ ಮೂವರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರು ಇದ್ದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಹೇಳಿದ್ದಾರೆ.

Share