Connect with us


      




ದೇಶ

ಮೂವರು ಉಗ್ರರು ಅಡಗಿರುವ ಶಂಕೆ: ಪುಲ್ವಾಮಾದಲ್ಲಿ ಎನ್‌ಕೌಂಟರ್ ಆರಂಭ

Iranna Anchatageri

Published

on

ಸಾಂದರ್ಭಿಕ ಚಿತ್ರ

ಶ್ರೀನಗರ: ಏಪ್ರಿಲ್ 24 (ಯು.ಎನ್.ಐ.) ಇಂದು ಮಧ್ಯಾಹ್ನ ಪುಲ್ವಾಮಾದ ಪಹು ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ಆರಂಭವಾಗಿದೆ. ಮೂವರು ಉಗ್ರರು ಅಡಗಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಭದ್ರತಾ ಪಡೆಗಳು ಉಗ್ರರನ್ನು ಸುತ್ತುವರೆದಿದ್ದು, ಎರಡೂ ಕಡೆಯಿಂದ ಗುಂಡಿನ ಚಕಮಕಿ ಮುಂದುವರಿದಿದೆ. ಭದ್ರತಾ ಪಡೆಗಳು ಜಾಗರೂಕತೆಯಿಂದ ಉಗ್ರರಿಗೆ ತಕ್ಕ ಪ್ರತ್ಯುತ್ತರ ನೀಡುತ್ತಿವೆ. ಈ ಬಗ್ಗೆ ಮಾಹಿತಿ ನೀಡಿರುವ ಕಾಶ್ಮೀರ ಐಜಿಪಿ ವಿಜಯ್ ಕುಮಾರ್, ಪುಲ್ವಾಮಾದಲ್ಲಿ ಮೂವರು ಲಷ್ಕರ್-ಎ-ತೊಯ್ಬಾ ಉಗ್ರರೊಂದಿಗೆ ಎನ್‌ಕೌಂಟರ್ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಶನಿವಾರ ಸಂಜೆ ದಕ್ಷಿಣ ಕಾಶ್ಮೀರದ ಕುಲ್ಗಾಮ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್‌ನ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಹತರಾಗಿದ್ದರು. ಮೂರು ದಿನಗಳಲ್ಲಿ ಕಣಿವೆಯ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಭದ್ರತಾ ಪಡೆಗಳು ಆರು ಭಯೋತ್ಪಾದಕರನ್ನು ಕೊಂದಿವೆ. ಗುಂಡಿನ ಚಕಮಕಿ ನಡೆದ ಸ್ಥಳದಲ್ಲಿ ಎರಡು ಎಕೆ-47, ಏಳು ಮ್ಯಾಗಜೀನ್‌ಗಳು, ಒಂಬತ್ತು ಗ್ರೆನೇಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

Share