Connect with us


      
ಬೆಂಗಳೂರು

ಕೃಷಿ ಸಿಂಚಾಯಿ ಯೋಜನೆಯಡಿ ಗರಿಷ್ಠ ಅನುದಾನದ ಸದುಪಯೋಗಕ್ಕೆ ಈರಣ್ಣ ಕಡಾಡಿ ಮನವಿ

Published

on

ಬೆಂಗಳೂರು: ಜನೆವರಿ 14 (ಯು.ಎನ್.ಐ.) ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯಕ್ಕೆ ರೂ. 642.26 ಕೋಟಿ ಮಂಜೂರು ಮಾಡಿದ್ದು, ಇದು ಹಿಂದಿನ ಯಾವುದೇ ಸರ್ಕಾರಗಳಿಗಿಂತ ದೊಡ್ಡ ಪ್ರಮಾಣದ ಅನುದಾನವಾಗಿದೆ. ಇದನ್ನು ರೈತರು ಸರಿಯಾಗಿ ಸದುಪಯೋಗ ಮಾಡಿಕೊಳ್ಳಬೇಕೆಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರು ಮತ್ತು ರಾಜ್ಯಸಭಾ ಸದಸ್ಯರೂ ಆದ ಈರಣ್ಣ ಕಡಾಡಿ ಅವರು ವಿನಂತಿಸಿದ್ದಾರೆ. ಗರಿಷ್ಠ ಅನುದಾನ ನೀಡಿರುವ ಪ್ರಧಾನಿ ಮತ್ತು ಕೇಂದ್ರ ಸಚಿವ ಸಂಪುಟಕ್ಕೆ ಈರಣ್ಣ ಕಡಾಡಿ ಅವರು ಧನ್ಯವಾದ ಸಮರ್ಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರೇ ಹೇಳಿದಂತೆ ನೀರು ಭಗವಂತ ಕೊಟ್ಟ ಪ್ರಸಾದ. ಇದನ್ನು ಯಾವುದೇ ಕಾರ್ಖಾನೆಯಲ್ಲಿ ಉತ್ಪಾದನೆ ಮಾಡಲು ಆಗುವುದಿಲ್ಲ. ನೈಸರ್ಗಿಕವಾಗಿ ಸಿಕ್ಕಂತ ಅತ್ಯಮೂಲ್ಯವಾದ ನೀರಿನ ಉಪಯೋಗವನ್ನು ಸರಿಯಾಗಿ ಮಾಡಿಕೊಳ್ಳಬೇಕು ಮತ್ತು ಅಂತರ್ಜಲ ಹೆಚ್ಚು ಮಾಡುವ ದೃಷ್ಟಿಯಿಂದ ನಾವು ಮುಂದಿನ ದಿನಗಳಲ್ಲಿ ಪ್ರಯತ್ನ ಮಾಡಬೇಕಾಗಿದೆ ಎಂದು ತಿಳಿಸಿದ್ದಾರೆ.

ದೇಶಕ್ಕೆ ಅನ್ನ ನೀಡುವಂತಹ ರೈತನಿಗೆ ಬೇಕಾದದ್ದು ಆರೋಗ್ಯಪೂರ್ಣವಾದ ಮಣ್ಣು, ಉತ್ತಮವಾದಹ ನೀರು ಇವೆರಡು ಇದ್ದರೆ ಇಡಿ ಜಗತ್ತಿಗೆ ಅನ್ನ ನೀಡುವ ತಾಕತ್ತು ರೈತ ಕುಲಕ್ಕೆ ಇದೆ. ಅದಕ್ಕೆ ನೀರು ಹೆಚ್ಚುವರಿಯಾಗಿ ಉಪಯೋಗವಾಗಿ, ವೇಸ್ಟ್ ಆಗಿ ಹೋಗಬಾರದು ಅನ್ನುವ ಕಾರಣದಿಂದ ಮತ್ತು ಹೆಚ್ಚು ನೀರು ಬಳಸುವುದರಿಂದ ಉತ್ಪಾದನೆಗೆ ಕುಂಠಿತಕೊಳ್ಳುತ್ತದೆ. ಜಮೀನು ಸವಳು ಜವಳು ಆಗುತ್ತವೆ. ಇವೆಲ್ಲವನ್ನು ಮನಗಂಡು ಕಡಿಮೆ ನೀರಿನಿಂದ ಹೆಚ್ಚು ಬೆಳೆ ತೆಗೆಯುವುದಕ್ಕೆಆದ್ಯತೆ ಕೊಡುವ ದೃಷ್ಟಿಯಿಂದ ಕೇಂದ್ರ ಸರ್ಕಾರವು ಈ ಯೋಜನೆ ಮಾಡಿದೆ. ಇದನ್ನು ರೈತ ಮೋರ್ಚಾ ರಾಜ್ಯ ಅಧ್ಯಕ್ಷನಾಗಿ ನಾನು ಸ್ವಾಗತ ಮಾಡುತ್ತೇನೆ ಎಂದು ಹೇಳಿದ್ದಾರೆ.

“ಪರ್ ಡ್ರಾಪ್ ಮೋರ್ ಕ್ರಾಪ್” ಎನ್ನುವ ಕಲ್ಪನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ನಮಗೆ ಕೊಟ್ಟಿದ್ದಾರೆ. ಒಂದೊಂದು ಹನಿ ನೀರಿನಲ್ಲಿಯೂ ಹೆಚ್ಚು ಬೆಳೆ ಬೆಳೆಯುವಂತಹ ಆಲೋಚನೆಯನ್ನು ನಾವೆಲ್ಲರೂ ಜಾರಿಗೆ ತರಬೇಕಾಗಿದೆ. ಪರ್ ಡ್ರಾಪ್ ಮೋರ್ ಕ್ರಾಪ್ ಎನ್ನುವ ಕಲ್ಪನೆಯನ್ನು ಎಲ್ಲರೂ ಕಾರ್ಯಗತ ಮಾಡೋಣ ಎಂದು ಈರಣ್ಣ ಕಡಾಡಿ ಕರೆ ನೀಡಿದ್ದಾರೆ.

ಅಪರಾಧ

‘ನಿಮ್ಮ ಇಲಾಖೆಯಲ್ಲೇ ದೊಡ್ಡ ಭ್ರಷ್ಟರಿದ್ದಾರೆ’ ಅವರನ್ನ ಹಿಡಿಯಿರಿ ಎಂದು ಡಿಸಿಪಿ ಅನೂಪ್ ಶೆಟ್ಟಿಗೆ ಹೇಳಿದ ನೆಟ್ಟಿಗರು !

Published

on

ಬೆಂಗಳೂರು: ಜನೆವರಿ 22 ( ಯು.ಎನ್.ಐ.) ದಿನದಿಂದ ದಿನಕ್ಕೆ ಬೆಂಗಳೂರು ನಗರದಲ್ಲಿ ವಂಚನೆ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಹಣ ವಂಚನೆ, ಬಂಗಾರ ವಂಚನೆ, ಮನೆ ವಂಚನೆ, ದಾಖಲಾತಿ ವಂಚನೆ ಸಂಬಂಧ ಹೀಗೆ ಸಾಲು ಸಾಲು ದೂರುಗಳು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾಗುತ್ತಿವೆ.

ಇದೀಗ ವ್ಯಕ್ತಿಯೊಬ್ಬರ ದಾಖಲಾತಿಗಳನ್ನು ದುರ್ಬಳಕೆ ಮಾಡಿಕೊಂಡು ಸಾಲ ಪಡೆದುಕೊಂಡಿರುವ ಘಟನೆ ನಡೆದಿದೆ. ಈ ಆರೋಪಿಯು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ. ವ್ಯಕ್ತಿಯೊಬ್ಬರ ದಾಖಲಾತಿಗಳನ್ನು ದುರ್ಬಳಕೆ ಮಾಡಿಕೊಂಡು ಮೊಬೈಲ್ ಮೂಲಕ ಲೋನ್ ಪಡೆದು ವಂಚಿಸಿದ ಆರೋಪಿಯನ್ನು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಈಶಾನ್ಯ ವಿಭಾಗದ ಡಿಸಿಪಿ ಅನೂಪ್ ಶೆಟ್ಟಿ, ಟ್ವೀಟ್ ಮಾಡಿದ್ದು, ಆರೋಪಿ ಬಂಧಿಸಿರುವ ಬಗ್ಗೆ ತಿಳಿಸಿದ್ದಾರೆ. ಆದರೆ ಆರೋಪಿಯ ಹೆಸರು, ಊರು ಎಂಬುದು ತಿಳಿದು ಬಂದಿಲ್ಲ. ತನಿಖೆಯ ನಂತರ ಎಲ್ಲಾ ಮಾಹಿತಿ ಬಹಿರಂಗವಾಗಲಿದೆ.

ಆದರೆ ಅನೂಪ್ ಅವರ ಈ ಟ್ವೀಟ್ ಗೆ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಒಬ್ಬರು ಟ್ವೀಟ್ ಮಾಡಿ, ಕಳ್ಳತನ ಮತ್ತು ಮೋಸದ ಜಾಲವನ್ನು ಪತ್ತೆ ಹಚ್ಚಿದಕ್ಕಾಗಿ ಅಭಿನಂದನೆಗಳು. ಮನೆ ಖರೀದಿದಾರರಿಗೆ ಮನೆ ತಲುಪಿಸದೆ ಸಾವಿರಾರು ಕೋಟಿ ಲೂಟಿ ಮಾಡಿದ ಮಂತ್ರಿ ಡೆವಲಪರ್ಸ್ ವಿರುದ್ಧ ನಿಮ್ಮ ಇಲಾಖೆ ಚಾರ್ಜ್ ಶೀಟ್ ಸಲ್ಲಿಸಿದೆಯೇ? ಎಂತಹ ಅವಮಾನ ಎಂದು ಕರ್ನಾಟಕ ಹೋಮ್ ಬಯರ್ಸ್ ಫೋರಮ್ ಪ್ರಶ್ನಿಸಿದೆ.

ರುದ್ರೇಶ್ ಪಿ ಎಂಬುವರು ಟ್ವೀಟ್ ಮಾಡಿ, ನಿಮ್ಮ ಇಲಾಖೆಗಳಲ್ಲೇ ದೊಡ್ಡ ದೊಡ್ಡ ಭ್ರಷ್ಟರು ಇದ್ದಾರೆ ಅವರನ್ನು ಮೊದಲು ಹಿಡಿಯಿರಿ ಸರ್ ಎಂದಿದ್ದಾರೆ.

ನನ್ನ ಬಳಿ ಒಬ್ಬರು ಅಸಭ್ಯವಾಗಿ ಮಾತನಾಡುತ್ತಾರೆ ಎಂದು ದೂರು ನೀಡಲು ಬೆಂಗಳೂರು ಸೈಬರ್ ಕ್ರೈಂಗೆ ಕರೆ ಮಾಡಿದೆ. ಆದರೆ ಇಲ್ಲಿ ಕೇವಲ ಹಣಕಾಸಿನ ನಷ್ಟ, ವಂಚನೆ ಬಗ್ಗೆ ಮಾತ್ರ ದೂರು ತೆಗೆದುಕೊಳ್ಳಲಾಗುತ್ತದೆ ಎಂದು ಉತ್ತರಿಸಿ ಪೊಲೀಸ್ ಠಾಣೆಗೆ ಭೇಟಿ ನೀಡಲು ಹೇಳಿದರು ಎಂದು ರಂಗಣ್ಣ ಎಂಬುವವರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ

ಸರ್ ನಗರದಲ್ಲಿ ಹೊಸ ಅಪರಾಧ ಪ್ರಕರಣಗಳು ಸಹ ನಡೆಯುತ್ತಿದೆ. ಹಣದ ಅಗತ್ಯವಿರುವ ವ್ಯಕ್ತಿಯನ್ನು ಕೆಲವು ಗುಂಪಿನ ಜನರು ಸಂಪರ್ಕಿಸುತ್ತಾರೆ!. ನೀವು ಕಾರನ್ನು ಗೆದ್ದಿದ್ದೀರಿ ಎಂದು ಪತ್ರವನ್ನು ಕಳುಹಿಸಿ 1ಸಾವಿರ, 3 ಸಾವಿರ ಅಥವಾ 5 ಸಾವಿರ ತೆಗೆದುಕೊಳ್ಳಿ ಎಂದು ಹೇಳಿ ವರ್ಷದ ಅಂತ್ಯದ ವೇಳೆಗೆ ಅವರು 3-5 ಲಕ್ಷ ಸಂಗ್ರಹಿಸುತ್ತಿದ್ದರು. ತಿಂಗಳಿಗೆ 10 ಜನರ ಗುರಿ ಇಟ್ಟುಕೊಂಡು ಕೃತ್ಯ ನಡೆಸುತ್ತಿದ್ದಾರೆ ಎಂದು ಅಪರಾಧದ ಬಗ್ಗೆ ವರುಣ್ ಸಿ ಎಂಬುವವರು ಮಾಹಿತಿ ನೀಡಿದ್ದಾರೆ.

Continue Reading

ಬೆಂಗಳೂರು

ದೇವಾಸ್ ಕುರಿತ ಸುಪ್ರೀಂ ತೀರ್ಪಿನಿಂದ ಕಾಂಗ್ರೆಸ್ ಭ್ರಷ್ಟಾಚಾರದ ಅನಾವರಣ: ಎಂ.ಜಿ.ಮಹೇಶ್

Published

on

ಬೆಂಗಳೂರು: ಜನೆವರಿ 18 (ಯು.ಎನ್.ಐ.) ಬೆಂಗಳೂರಿನ ದೇವಾಸ್ ಮಲ್ಟಿಮೀಡಿಯಾ ಸಂಸ್ಥೆಯನ್ನು ಮುಚ್ಚಬೇಕೆಂದು ಅಭಿಪ್ರಾಯಪಟ್ಟ ಸುಪ್ರೀಂ ಕೋರ್ಟ್‍ನ ತೀರ್ಪು ಅತ್ಯಂತ ಮಹತ್ವದ್ದು ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಎಂ.ಜಿ.ಮಹೇಶ್ ಅವರು ಅಭಿಪ್ರಾಯಪಟ್ಟಿದ್ದಾರೆ.

ನ್ಯಾಶನಲ್ ಕಂಪೆನಿ ಲಾ ಟ್ರಿಬ್ಯೂನಲ್ (ಎನ್‍ಸಿಎಲ್‍ಟಿ) 2021ರ ಮೇ ತಿಂಗಳಿನಲ್ಲಿ ದೇವಾಸ್ ಕಂಪೆನಿಯನ್ನು ಮುಚ್ಚಲು ಸೂಚಿಸಿತ್ತು. ಇದರ ವಿರುದ್ಧ ದೇವಾಸ್ ಮಲ್ಟಿಮೀಡಿಯಾವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ಎನ್‍ಸಿಎಲ್‍ಟಿ ಆದೇಶವನ್ನು ಎತ್ತಿ ಹಿಡಿದಿದೆ ಮತ್ತು ದೇವಾಸ್ ಸಂಸ್ಥೆಯನ್ನು ಮುಚ್ಚಲು ಸಹಮತ ಸೂಚಿಸಿದೆ ಎಂದು ಮಹೇಶ್ ಅವರು ತಿಳಿಸಿದ್ದಾರೆ.

ದೇವಾಸ್ ಮತ್ತು ಇಸ್ರೋದ ಅಂಗಸಂಸ್ಥೆಯಾದ ಅಂತರಿಕ್ಷ್ ನಡುವಿನ ಒಪ್ಪಂದದ ವೇಳೆ ವಂಚನೆ ನಡೆದಿದೆ. ಸ್ಪೆಕ್ಟ್ರಂ ಒಪ್ಪಂದದ ಪರಿಣಾಮವಾಗಿ ಸರಕಾರದ ಬೊಕ್ಕಸಕ್ಕೆ 2 ಲಕ್ಷ ಕೋಟಿ ರೂಪಾಯಿ ನಷ್ಟ ಸಂಭವಿಸಿದೆ ಎಂದು ಮಹಾ ಲೆಕ್ಕ ಪರಿಶೋಧಕ ಸಂಸ್ಥೆ (ಸಿಎಜಿ) ತಿಳಿಸಿತ್ತು. ಈ ತೀರ್ಪಿನ ಮೂಲಕ ಕಾಂಗ್ರೆಸ್ ಅವಧಿಯ ಮತ್ತೊಂದು ದೊಡ್ಡ ಭ್ರಷ್ಟಾಚಾರ ಹಗರಣದ ನಗ್ನ ದರ್ಶನವಾಗಿದೆ. ಕ್ರೋನಿ ಬಂಡವಾಳಗಾರರಿಗೆ ಲಾಭ ಆಗುವ ಪಿತೂರಿ ಇದರ ಹಿಂದಿರುವುದೂ ಬಹಿರಂಗಗೊಂಡಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪ್ರಧಾನಿಯವರಾದ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರದ ವಾದವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಸರಕಾರವು ಮಧ್ಯವರ್ತಿಗಳ ಜೊತೆಗೂಡಿ ಮೋಸ ಮಾಡಲು ಮುಂದಾದುದನ್ನು ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ತಿಳಿಸಿದೆ. ಭ್ರಷ್ಟಾಚಾರದ ವಿರುದ್ಧ ಮಾತನ್ನೇ ಬಂಡವಾಳ ಮಾಡಿಕೊಂಡ ಯುಪಿಎ ಮತ್ತು ಅದರ ಅಂಗಪಕ್ಷವೆನಿಸಿದ ಕಾಂಗ್ರೆಸ್‍ನ ನಿಜ ಬಣ್ಣ ಈ ಮೂಲಕ ಬಯಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ತೀರ್ಪನ್ನು ಬಿಜೆಪಿ ಸ್ವಾಗತಿಸುತ್ತದೆ ಹಾಗೂ ತಪ್ಪಿತಸ್ಥರ ವಿರುದ್ಧ ತೀವ್ರ ಕ್ರಮಕ್ಕೆ ಒತ್ತಾಯಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

Continue Reading

ಬೆಂಗಳೂರು

ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಗೆ ಕೋವಿಡ್

Published

on

By

ಬೆಂಗಳೂರು, ಜ ೧೭(ಯುಎನ್ ಐ) ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಕಳೆದ ನಾಲ್ಕೈದು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆಆರ್ ಟಿ ಪಿ ಸಿ ಆರ್ ಪರೀಕ್ಷೆ ನಡೆಸಿದಾಗ ಸೋಂಕು ಇರುವುದು ದೃಢವಾಗಿದೆ. ಮುಂಜಾಗ್ರತಾ ಕ್ರಮವಾಗಿ ತಮ್ಮ ಸಿಬ್ಬಂದಿಗೆ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.
ರಾಜಧಾನಿ ಪೊಲೀಸ್ ಸಿಬ್ಬಂದಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈವರೆಗೆ ೭೩೮ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಸೋಂಕು ತಗುಲಿದೆ. ಇದರ ಬೆನ್ನಲ್ಲೇ ಸಿಬ್ಬಂದಿಗೆ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಲು ಪೊಲೀಸ್ ಕಮಿಷನರ್ ಕಮಲ್ ಪಂತ್ ಸೂಚನೆ ನೀಡಿದ್ದಾರೆ.
ಕಾರ್ಯ ನಿರ್ವಹಿಸುತ್ತಿರುವ ಪೊಲೀಸ್ ಠಾಣೆ ಬಿಟ್ಟು ಹೊರಗೆ ಕೆಲಸ ಮಾಡುವ ಪೊಲೀಸ್ ಸಿಬ್ಬಂದಿ ಟೆಸ್ಟ್ ಹೆಚ್ಚಳ ಮಾಡುವಂತೆ ಅವರು ಸಲಹೆ ನೀಡಿದ್ದಾರೆ. ಆಯಾ ಠಾಣೆಗಳಲ್ಲಿ ಗರ್ಭಿಣಿ ಮಹಿಳಾ ಸಿಬ್ಬಂದಿಗೆ ಆರೋಗ್ಯದ ಸಮಸ್ಯೆ ಕಾಣಿಸಿದರೆ ಕೆಲಸಕ್ಕೆ ಬರದೆ ಮನೆಯಲ್ಲಿರುವಂತೆ ಸೂಚಿಸಲಾಗಿದೆ.

Continue Reading
Advertisement
ದೇಶ28 mins ago

ಬಂಗಾಳ: ನೇತಾಜಿ ಜನ್ಮದಿನದಂದು ಲಾಠಿ ಚಾರ್ಜ್

ಕೋಲ್ಕತ್ತಾ: ಜನೆವರಿ 23 (ಯು.ಎನ್.ಐ.) ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ಸಂದರ್ಭದಲ್ಲಿಯೂ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ರಾಜಕೀಯ ನಿಂತಿಲ್ಲ. ಪಶ್ಚಿಮ ಬಂಗಾಳದ...

ಅಂಕಣ1 hour ago

ದಟ್ಟ ಕಾಡಿನಲ್ಲಿ ʻಸಪ್ನೋಂ ಕೀ ರಾಣೀʼ

ಅಂಕಣ: ಒಂದೂರಲ್ಲಿ ಒಂದಿನ- 3 ಈ ಒಂದೂರು ಅನ್ನುವ ಮಾಯೆ ಇದೆಯಲ್ಲ, ಅದು ವಿಚಿತ್ರವಾದದ್ದು. ಅಪ್ಪ ಕಥೆ ಹೇಳುವಾಗ ಪ್ರತಿ ಸಲವೂ ಆ ಕಥೆ ಒಂದೂರಿನಲ್ಲಿ ಅಂತಲೇ...

ಕ್ರೀಡೆ2 hours ago

ಅಂಕುಶ್ ರಘುವಂಶಿ ಟೀಂ ಇಂಡಿಯಾದ ಉದಯೋನ್ಮುಖ ತಾರೆ!

ಹೊಸದಿಲ್ಲಿ: ಜನೆವರಿ 23 (ಯು.ಎನ್.ಐ.) ಅಂಡರ್ 19 ವರ್ಲ್ಡ್ ಕಪ್ ಮೂಲಕ ಭಾರತ ಕ್ರಿಕೆಟ್ ತಂಡಕ್ಕೆ ಮತ್ತೊಬ್ಬ ಉದಯೋನ್ಮುಖ ಆಟಗಾರ ದೊರೆತಿದ್ದಾರೆ. ಅವರೇ ದೆಹಲಿ ಮೂಲದ ಅಂಕುಶ್...

ಅಂಕಣ3 hours ago

ಎಳವೆಯಿಂದ ರಂಗಭೂಮಿ

ನಾದಾಂಕಣ – ಡಾ. ನಾ. ದಾಮೋದರ ಶೆಟ್ಟಿ ಭಾರತೀಯ ಹಾಗೂ ಗ್ರೀಕ್‌ ರಂಗಭೂಮಿಗೆ ಬಹುದೊಡ್ಡ ಪರಂಪರೆಇದೆ ಎನ್ನುವುದು ಸಾರ್ವಕಾಲಿಕ ಸತ್ಯ. ಆದರೆ ಯುರೋಪಿನ ರಂಗಭೂಮಿಯಾಗಲೀ ರಷ್ಯಾ, ಅಮೇರಿಕಾ...

ದೇಶ3 hours ago

ಅರುಣಾಚಲದಿಂದ ನಾಪತ್ತೆಯಾಗಿದ್ದ ಯುವಕ ಚೀನಾ ಗಡಿಯಲ್ಲಿ ಪತ್ತೆ!

ಹೊಸದಿಲ್ಲಿ: ಜನೆವರಿ 23 (ಯು.ಎನ್.ಐ.) ಅರುಣಾಚಲ ಪ್ರದೇಶದಿಂದ ನಾಪತ್ತೆಯಾಗಿದ್ದ ಭಾರತೀಯ ಯುವಕ ಚೀನಾ ಗಡಿಯಲ್ಲಿ ಪತ್ತೆಯಾಗಿದ್ದಾನೆ. ಈ ಬಗ್ಗೆ ಚೀನಾ ಸೈನಿಕರು ಭಾರತೀಯ ಯೋಧರಿಗೆ ಮಾಹಿತಿ ನೀಡಿದ್ದು,...

ಹಣಕಾಸು3 hours ago

ಕೆಲಸ ಬದಲಾಯಿಸಿದ್ದೀರಾ? ಚಿಂತೆ ಬಿಡಿ.. ನಿಮ್ಮ ನೆರವಿಗೆ ಇದೆ ಇಪಿಎಫ್ಒ!

ಬೆಂಗಳೂರು: ಜನೆವರಿ 23 (ಯು.ಎನ್.ಐ.) ಉತ್ತಮ ಸಂಬಳ, ಭದ್ರತೆಯುಳ್ಳ ನೌಕರಿ, ವಿಶೇಷ ಸವಲತ್ತುಗಳು.. ಹೀಗೆ ನಾನಾ ಉದ್ದೇಶಗಳಿಂದ ಉದ್ಯೋಗಿಗಳು ತಮ್ಮ ಕೆಲಸವನ್ನು ಬದಲಾಯಿಸುತ್ತಾ ಇರುತ್ತಾರೆ. ಇಂತಹ ಸಂದರ್ಭದಲ್ಲಿ...

ದೇಶ3 hours ago

ನೇತಾಜಿ ಸುಭಾಷ್ ಚಂದ್ರ ಬೋಸ್ ಜಯಂತಿ… ದೇಶಾದ್ಯಂತ ಪರಾಕ್ರಮ ದಿನವಾಗಿ ಆಚರಣೆ

ನವದೆಹಲಿ, ಜ ೨೩( ಯುಎನ್ ಐ) ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ೧೨೫ನೇ ಜನ್ಮಜಯಂತಿ ಇಂದು. ದೇಶಾದ್ಯಂತ ಪರಾಕ್ರಮ ದಿನವಾಗಿ ನೇತಾಜಿ...

ಕರ್ನಾಟಕ4 hours ago

ಇಡೀ ವರ್ಷ ಸುಭಾಷ್ ಚಂದ್ರಬೋಸ್ ಜನ್ಮದಿನಾಚರಣೆಗೆ ತೀರ್ಮಾನ: ಸಿಎಂ

ಬೆಂಗಳೂರು : ಜನೆವರಿ 23 (ಯು.ಎನ್.ಐ.) ರಾಜ್ಯ ಸರ್ಕಾರದ ವತಿಯಿಂದ ವರ್ಷವಿಡೀ ನೇತಾಜಿ ಸುಭಾಷ್ ಚಂದ್ರಬೋಸ್ ರವರ 125ನೇ ಜನ್ಮ ದಿನಾಚರಣೆಯನ್ನ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ...

ಅಂಕಣ4 hours ago

ಸ್ವಾತಂತ್ರ್ಯಕ್ಕಿಂತ ದೊಡ್ಡದು ಇನ್ಯಾವುದಿದೆ ?

‌ಅಂಕಣ: ದಿಟನುಡಿ -೩ ಕಳೆದ ವಾರ ನನ್ನ ಕೈರೋಪ್ರಾಕ್ಟರ್ ರೇ ಬಳಿ ಹೋಗಿದ್ದೆ. ಏಕೋ ಗೊತ್ತಿಲ್ಲ ಕೆಲ ದಿನಗಳ ಹಿಂದೆ ಸೊಂಟ ಹಿಡಿದಿತ್ತು. ಏಳಲು, ಕೂರಲು, ನಿಲ್ಲಲು...

ದೇಶ4 hours ago

ಪಂಜಾಬ್ ಚುನಾವಣೆ: ಕೆಂಪು ಕೋಟೆ ಹಿಂಸಾಚಾರದ ಆರೋಪಿಗೆ ರೈತ ಸಂಘಟನೆಯಿಂದ ಟಿಕೆಟ್!

ಚಂಡೀಗಢ: ಜನೆವರಿ 23 (ಯು.ಎನ್.ಐ.) ರೈತರ ಸಂಘಟನೆ ಯುನೈಟೆಡ್ ಸಮಾಜ ಮೋರ್ಚಾ ಪಂಜಾಬ್ ವಿಧಾನಸಭಾ ಚುನಾವಣೆಗೆ 35 ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಮಾಜಿ...

ಟ್ರೆಂಡಿಂಗ್

Share