Published
6 months agoon
ಬೆಂಗಳೂರು : ಜನೆವರಿ 06 (ಯು.ಎನ್.ಐ.) ಬೆಂಗಳೂರು ಅಭಿವೃದ್ಧಿಗೆ ಪ್ರತಿ ವರ್ಷ 2 ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡುವ ಬಗ್ಗೆ ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಯಿತು.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಸುದ್ದಿಗೋಷ್ಠಿ ನಡೆಸಿದರು, ಬೆಂಗಳೂರು ಮೂಲ ಸೌಕರ್ಯ ಅಭಿವೃದ್ಧಿ ದೃಷ್ಟಿಯಿಂದ ನಗರೋತ್ಥಾನ ಯೋಜನೆಗೆ ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದಾರೆ. ಈ ಯೋಜನೆಯಡಿ 6 ಸಾವಿರ ಕೋಟಿ ರೂಪಾಯಿಯನ್ನು ಬೆಂಗಳೂರು ಅಭಿವೃದ್ಧಿಗೆ ಖರ್ಚು ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ವಿಶೇಷ ಅನುದಾನದಡಿ 6 ಸಾವಿರ ಕೋಟಿ ರೂಪಾಯಿಯನ್ನು 3 ವರ್ಷದಲ್ಲಿ ವೆಚ್ಚ ಮಾಡಲಾಗುವುದು ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು.
ಪ್ರತಿ ವರ್ಷ 2 ಸಾವಿರ ಕೋಟಿ ರೂಪಾಯಿಯಂತೆ ಬೆಂಗಳೂರು ನಗರವನ್ನು ಅಮೃತ್ ಹಾಗೂ ನಗರೋತ್ಥಾನ ಯೋಜನೆಯಡಿ ಅಭಿವೃದ್ಧಿಗೆ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೊದಲು ಈ ಹಣವನ್ನು ಐದು ವರ್ಷದಲ್ಲಿ ವೆಚ್ಚ ಮಾಡಲು ತೀರ್ಮಾನಿಸಲಾಗಿತ್ತು. ಈಗ ಇದರ ಬದಲಾಗಿ 3 ವರ್ಷಗಳಲ್ಲಿ ಖರ್ಚು ಮಾಡಲು ನಿರ್ಧರಿಸಲಾಗಿದೆ. ಯಾವ ರೀತಿಯ ಯೋಜನೆಗಳನ್ನು ಹಮ್ಮಿಕೊಳ್ಳಬೇಕೆಂದು ಮಾರ್ಗಸೂಚಿಗಳನ್ನು ನೀಡಲಾಗಿದೆ. ಇದು ಬಿಬಿಎಂಪಿ ಹಣ ಅಲ್ಲ. ರಾಜ್ಯ ಸರ್ಕಾರದ ಗ್ರ್ಯಾಂಟ್ ಎಂದು ಸಚಿವ ಮಾಧುಸ್ವಾಮಿ ಸುದ್ದಿಗಾರರಿಗೆ ತಿಳಿಸಿದರು.
ಇಂಧನ ಇಲಾಖೆ: 1385 ಅಭ್ಯರ್ಥಿಗಳಿಗೆ ಏಕಕಾಲಕ್ಕೆ ನೇಮಕ ಆದೇಶ
ಮೈಶುಗರ್ ಕಾರ್ಖಾನೆ ಆಗಸ್ಟ್ನಲ್ಲಿ ಪುನಾರಂಭ!
ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮು ಅವರಿಗೆ ಜೆಡಿಎಸ್ ಬೆಂಬಲ
‘ಪ್ರತಿ ಹತ್ಯೆಯಲ್ಲೂ ಬಿಜೆಪಿ ಹೆಣದ ರಾಜಕೀಯ’ – ದಿನೇಶ್ ಗುಂಡೂರಾವ್
ರಾಜಸ್ಥಾನ ಹತ್ಯೆ: ಕಾಂಗ್ರೆಸ್ ಸರಕಾರ ವಜಾಗೊಳಿಸಲು ಕಟೀಲ್ ಆಗ್ರಹ
ರಾಜಸ್ಥಾನದಲ್ಲಿ ಟೈಲರ್ ಶಿರಚ್ಛೇದ: ಹತ್ಯೆ ಖಂಡಿಸಿದ ಎಚ್ಡಿಕೆ