Connect with us


      




ಕರ್ನಾಟಕ

ರೇಷ್ಮೆ ಬೆಳೆಗಾರನ ಮೇಲೆ ದೌರ್ಜನ್ಯ ಎಸಗಿದ ರೀಲರ್ ವಿರುದ್ಧ ಎಫ್‌ಐಆರ್ : ಸಚಿವ ಡಾ.ನಾರಾಯಣಗೌಡ

Published

on

ರೇಷ್ಮೆ ಬೆಳೆಗಾರನ ಮೇಲೆ ದೌರ್ಜನ್ಯ ಎಸಗಿದ ರೀಲರ್ ವಿರುದ್ಧ ಎಫ್‌ಐಆರ್:ಸಚಿವ ಡಾ.ನಾರಾಯಣಗೌಡ

ರಾಮನಗರ: ಜನವರಿ 15 (ಯು.ಎನ್.ಐ.) ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೈತನ ಮೇಲೆ ದೌರ್ಜನ್ಯ ಎಸಗಿದ್ದ ರೀಲರ್ ವಿರುದ್ಧ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರ ಸೂಚನೆಯಂತೆ ಕೇಸ್ ದಾಖಲಾಗಿದೆ.

ಜನವರಿ 13 ರಂದು ಹಾವೇರಿ ಮೂಲದ ವಿರೂಪಾಕ್ಷಪ್ಪ ಎಂಬುವರು ರಾಮನಗರ ಮಾರುಕಟ್ಟೆಗೆ ರೇಷ್ಮೆಗೂಡನ್ನು ತಂದಿದ್ದರು. ಹರಾಜಿನಲ್ಲಿ ರೇಷ್ಮೆ ಗೂಡು ಖರೀದಿಸಿದ್ದ ಮುನೀರ್ ಅಹ್ಮದ್ ಎಂಬ ರೀಲರ್ ರೈತನ ಮೇಲೆ ದೌರ್ಜನ್ಯ ಎಸಗಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಧಮ್ಕಿ ಹಾಕಿದ್ದ ವೀಡಿಯೋ ವೈರಲ್ ಆಗಿತ್ತು. ಈ ಬಗ್ಗೆ ತಮ್ಮ ಗಮನಕ್ಕೆ ಬರುತ್ತಿದ್ದಂತೆ ಕೊರೋನಾಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವ ಡಾ.ನಾರಾಯಣಗೌಡ ಅವರು, ಆಸ್ಪತ್ರೆಯಿಂದಲೇ ಅಧಿಕಾರಿಗಳ ಜೊತೆ ಮಾತನಾಡಿ ಕೂಡಲೇ ಆತನ ವಿರುದ್ಧ ಕೇಸ್ ದಾಖಲಿಸುವಂತೆ ಸೂಚಿಸಿದ್ದರು. ಅದರಂತೆ ರಾಮನಗರದ ಐಜೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ರೇಷ್ಮೆ ಬೆಳೆಗಾರರ ಹಿತ ಕಾಯುವುದಕ್ಕೆ ಸರ್ಕಾರ ಬದ್ದವಾಗಿದೆ. ರೇಷ್ಮೆ ಬೆಳೆಗಾರರಿಗೆ ತಾವು ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಗಬೇಕು ಎಂದು ಉತ್ತಮ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗಿದೆ. ಮಾರುಕಟ್ಟೆಯಲ್ಲಿ ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಲು ಐಡಿ ಕಾರ್ಡ್, ಸಿಸಿ ಕ್ಯಾಮರ ಅಳವಡಿಕೆ ಸೇರಿದಂತೆ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹಾಗಿದ್ದರೂ ಕೆಲವು ರೀಲರ್‌ಗಳು ಈ ರೀತಿಯ ದೌರ್ಜನ್ಯ ಎಸಗುತ್ತಿರುವುದು ಗಮನಕ್ಕೆ ಬಂದಿದ್ದು, ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ‌. ರೇಷ್ಮೆ ಬೆಳೆಗಾರರಿಗೆ ಯಾವುದೇ ರೀತಿ ತೊಂದರೆ ಆಗುವುದಕ್ಕೆ ಬಿಡುವುದಿಲ್ಲ ಎಂದು ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ.

ಕರ್ನಾಟಕ

ಬೆಂಗಳೂರಲ್ಲಿ ಆತಂಕ ಹೆಚ್ಚಿಸಿದ ಒಮೈಕ್ರಾನ್!

Published

on

ಬೆಂಗಳೂರು: ಜನೆವರಿ 17 (ಯು.ಎನ್.ಐ) ರಾಜಧಾನಿ ಬೆಂಗಳೂರಲ್ಲಿ ಒಂದೇ ದಿನ ಬರೋಬ್ಬರಿ 287 ಒಮೈಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯ ಸರ್ಕಾರ ತೀವ್ರ ನಿಗಾದ ಮಧ್ಯೆಯೇ ಒಮೈಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವುದು ಬೆಂಗಳೂರಿಗರನ್ನು ಬೆಚ್ಚಿಬೀಳಿಸಿದೆ.

ಒಂದೇ ದಿನದಲ್ಲಿ 287 ಹೊಸ ರೂಪಾಂತರಿ ಒಮೈಕ್ರಾನ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಸಚಿವ ಟ್ವೀಟ್ ಮಾಡುವ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ರಾಜಧಾನಿಯಲ್ಲಿ 287 ಪ್ರಕರಣಗಳು ಕಾಣಿಸಿಕೊಂಡಿರುವುದರಿಂದ ರಾಜ್ಯದಲ್ಲಿ ಒಟ್ಟಾರೆ ಹೊಸ ತಳಿಯ ಕೇಸ್ ಗಳ ಸಂಖ್ಯೆ 766ಕ್ಕೆ ಏರಿಕೆಯಾಗಿದೆ.

Continue Reading

ಕರ್ನಾಟಕ

ಪಿಎಂಎಫ್ಎಂಇ ಯೋಜನೆಗೆ ಶೇ.15 ರಷ್ಟು ರಾಜ್ಯದಿಂದ ಹೆಚ್ಚುವರಿ ಸಹಾಯಧನ

Published

on

ಬೆಂಗಳೂರು: ಜನೆವರಿ 17 (ಯು.ಎನ್.ಐ.)ರೈತರಿಗೆ ಬಲತುಂಬಲು ರಾಜ್ಯ ಸರ್ಕಾರ ಕೇಂದ್ರದ ಆತ್ಮ ನಿರ್ಭರ ಭಾರತ ಅಭಿಯಾನ (ಪಿಎಂಎಫ್ಎಂಇ) ಯೋಜನೆಗೆ ಸಹಾಯಧನವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ.
ಪಿಎಂಎಫ್ಎಂಇ ಯೋಜನೆಗೆ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಶೇ.35 ರಷ್ಟು ಅನುದಾನ ಒದಗಿಸಿತ್ತು. ಇದೀಗ ಸರ್ಕಾರ ರೈತರ ಅನುಕೂಲಕ್ಕಾಗಿ ಶೇ.15 ರಷ್ಟು ಹೆಚ್ಚಿನ ಸಹಾಯಧನ ನೀಡಿದ್ದು, ಈಗ ಪಿಎಂಎಫ್ಎಂಇ ಯೋಜನೆಯ ಸಹಾಯಧನ ಶೇ.50 ರಷ್ಟಾಗಿದೆ.
ಪ್ರಧಾನ ಮಂತ್ರಿಗಳ ಆಹಾರ ಸಂಸ್ಕರಣೆ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆ ಹಾಗೂ ಇತರ ಕಾರ್ಯಕ್ರಮಗಳಿಗೆ ಕೇಂದ್ರ ಸರ್ಕಾರ ಶೇ.35 ರಷ್ಟನ್ನು ಒದಗಿಸಿತ್ತು. ಕಳೆದ ಬಾರಿ ಆಯವ್ಯಯದಲ್ಲಿ ಘೋಷಿಸಿದಂತೆ ರಾಜ್ಯ ಸರ್ಕಾರ ಶೇ.15 ರಷ್ಟು ಸಹಾಯಧನ ನೀಡಿದ್ದು, ಈಗ ಸಹಾಯಧನ ಶೇ.50ಕ್ಕೆ ಹೆಚ್ಚಿದೆ.
ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ರಫ್ತು ನಿಗಮ ನಿಯಮಿತ ಅಡಿ ಪಿಎಂಎಫ್ಎಂಇ ಯೋಜನೆಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲು ಕೃಷಿ ಇಲಾಖೆಯನ್ನು ರಾಜ್ಯದ ನೋಡಲ್ ಇಲಾಖೆಯನ್ನಾಗಿಯೂ ಕೆಪೆಕ್ ಸಂಸ್ಥೆಯನ್ನು ನೋಡಲ್ ಏಜೆನ್ಸಿಯನ್ನಾಗಿ ನೇಮಿಸಲಾಗಿದೆ.
ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ (ಪಿಎಂಎಫ್ಎಂಇ)ಯೋಜನೆಯು 5 ವರ್ಷಗಳ ಅವಧಿಯಲ್ಲಿ 2020-21ನೇ ಸಾಲಿನಿಂದ 2024-25ನೇ ಸಾಲಿನವರೆಗೂ ಜಾರಿಯಲ್ಲಿರುತ್ತದೆ. 2021-22ನೇ ಸಾಲಿನಲ್ಲಿ 2,651 ವೈಯಕ್ತಿಕ ಉದ್ದಿಮೆದಾರರಿಗೆ ಹಾಗೂ ಗುಂಪುಗಳಿಗಳಿಗೆ 100 ಉದ್ದಿಮೆಗಳ ಸ್ಥಾಪನೆಗೆ ಸಹಾಯಧನ ಒದಗಿಸುವ ಗುರಿ ಹೊಂದಲಾಗಿದೆ.
ಸರ್ಕಾರ ರೈತರ ಅನುಕೂಲಕ್ಕಾಗಿ ಅನುದಾನ ಹೆಚ್ಚಿಸಿರುವುದನ್ನು ಶ್ಲಾಘಿಸಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್, ರೈತಾಪಿ ಗುಂಪುಗಳು ಮತ್ತು ವೈಯಕ್ತಿಕ ಉದ್ದಿಮೆದಾರರು ಯೋಜನೆಯ ಸದುಪಯೋಗ ಪಡಿಸಿಕೊಂಡು ಆದಾಯ ವೃದ್ಧಿಸಿಕೊಳ್ಳಬೇಕೆಂದು ಕರೆ ನೀಡಿದ್ದಾರೆ.

Continue Reading

ಕರ್ನಾಟಕ

ಕೋವಿಡ್‌ ಸೋಂಕು ಹೆಚ್ಚು; ಸಾವು ಕಡಿಮೆ:‌ ಸಚಿವ ಅಶೋಕ್

Published

on

ಬೆಂಗಳೂರು: ಜನೆವರಿ ೧೭ (ಯು.ಎನ್.ಐ.) ರಾಜ್ಯದಲ್ಲಿ ಕೋವಿಡ್‌ ಸೋಂಕಿನ ಪ್ರಮಾಣ ಹೆಚ್ಚಾಗಿದೆ.  ಸಾವಿನ ಪ್ರಮಾಣ ಗಣನೀಯವಾಗಿ ಕಡಿಮೆ ಇದೆ ಎಂದು ಕಂದಾಯ ಸಚಿವ ಆರ್.‌ ಅಶೋಕ್‌ ತಿಳಿಸಿದರು.

ಅವರಿಂದು ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಿದ್ದರು. ಬೇರೆ ರಾಜ್ಯಗಳಲ್ಲಿ‌ಸೋಂಕು‌ ತಗ್ಗುತ್ತಿದೆ ಎಂದ ಅವರು ಕೋವಿಡ್‌ ನಿಯಂತ್ರಣ ಕುರಿತಂತೆ ಇಂದು ಸಂಜೆ ಮುಖ್ಯಮಂತ್ರಿ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ವಿವರ ನೀಡಿದರು.

ಕೋವಿಡ್‌ ಸೋಂಕು ಅಧಿಕವಾಗಿರುವುದರಿಂದ ಕೆಲವು ನಿರ್ಬಂಧಗಳನ್ನು ಮಾಡಲಾಗಿದೆ. ಯಾರಿಗೋ ತುಸು ಲಾಭವಾಗುತ್ತದೆ ಎಂದು ಈ ನಿಯಮಾವಳಿಗಳನ್ನು ಸಡಿಲಿಸಲು ಸಾಧ್ಯವಿಲ್ಲ. ಲಕ್ಷಾಂತರ ಜನರನ್ನು ಕಷ್ಟಕ್ಕೆ ದೂಡಲು ಆಗುವುದಿಲ್ಲ . ಹೋಟೆಲ್ ಮಾಲಿಕರಾಗಲಿ,ಬೇರೆಯವರಿಂದಾಗಲಿ ಬರುವ ಒತ್ತಡಕ್ಕೆ ಮಣಿಯಲು ಸಾಧ್ಯವಿಲ್ಲ . ತಜ್ಞರ ಸಲಹೆಯಂತೆ ನಡೆದುಕೊಳ್ಳುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್‌ ರ್ಯಾಲಿ ಕುರಿತು ಮಾತನಾಡಿದ ಅವರು ಬೆಟ್ಟ ಅಗೆದು ಇಲಿ ಹಿಡಿದ್ರು ಎಂಬಂತಿದೆ  ಕಾಂಗ್ರೆಸ್ ನವರ ಮನಸ್ಥಿತಿ. ರ್ಯಾಲಿಯಲ್ಲಿ ಯಾರು ಮೊದಲಿರಬೇಕು

ಆ ನಂತರ ಯಾರು ಹಿಂದಿರಬೇಕು ಎಂಬ ಮನಸ್ಥಿತಿ  ಅವರಲ್ಲಿತ್ತು. ಇದು ಡಿಕೆಶಿ,ಸಿದ್ದರಾಮಯ್ಯ ಮೇಲಾಟದ ಪಾದಯಾತ್ರೆ. ಹಿಂದೆ ಎಸ್.ಎಂ.ಕೃಷ್ಣರು ಪಾದಯಾತ್ರೆ ಮಾಡಿದ್ರು. ಆಗ ಕೋರ್ಟ್ ಛೀಮಾರಿ ಹಾಕಿತ್ತು ಎಂದ ಅವರು  ಮೇಕೆದಾಟು ಪಾದಯಾತ್ರೆಗೆ  ಟಾಂಗ್ ನೀಡಿದರು.

Continue Reading
Advertisement
ಕರ್ನಾಟಕ2 mins ago

ಬೆಂಗಳೂರಲ್ಲಿ ಆತಂಕ ಹೆಚ್ಚಿಸಿದ ಒಮೈಕ್ರಾನ್!

ಬೆಂಗಳೂರು: ಜನೆವರಿ 17 (ಯು.ಎನ್.ಐ) ರಾಜಧಾನಿ ಬೆಂಗಳೂರಲ್ಲಿ ಒಂದೇ ದಿನ ಬರೋಬ್ಬರಿ 287 ಒಮೈಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯ ಸರ್ಕಾರ ತೀವ್ರ ನಿಗಾದ ಮಧ್ಯೆಯೇ ಒಮೈಕ್ರಾನ್ ಪ್ರಕರಣಗಳು...

ದೇಶ15 mins ago

ಪಂಜಾಬ್ ಚುನಾವಣಾ ದಿನಾಂಕ ಮುಂದೂಡಿಕೆ

ಚಂಡೀಗಢ: ಜನೆವರಿ 17 (ಯು.ಎನ್.ಐ.) ಪಂಜಾಬ್‌ನಲ್ಲಿ ಫೆಬ್ರವರಿ 20ರಂದು ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಇಂದು ತಿಳಿಸಿದೆ. ಗುರು ರವಿದಾಸ್ ಜಯಂತಿ ಆಚರಣೆಗೆ ಅನುಕೂಲ...

ದೇಶ17 mins ago

ದೇಶವನ್ನು ಕೊರೋನಾ ಮುಕ್ತಗೊಳಿಸಲು ಪಣ ತೊಡೋಣ; ಕೇಜ್ರಿವಾಲ್

ನವದೆಹಲಿ: ಜನೆವರಿ 17 (ಯು.ಎನ್.ಐ.) ಸಾಂಕ್ರಾಮಿಕ ರೋಗವಾದ ಕೋವಿಡ್ -೧೯ ಪರಿಸ್ಥಿತಿಯನ್ನು ಆಪಾದನೆ ಮಾಡುತ್ತಾ ಕುಳಿತುಕೊಂಡರೆ ಯಾವುದೇ ಪ್ರಯೋಜನವಿಲ್ಲ. ಇಡೀ ದೇಶದಿಂದ ತೊಡೆದುಹಾಕು ಪಣ ತೊಡಬೇಕು ಎಂದು...

ಸಿನೆಮಾ34 mins ago

ಹಿಂದಿಯಲ್ಲಿ ತೆರೆ ಕಾಣುತ್ತಿದೆ ಅಲ್ಲು ಅರ್ಜುನ್‌ ಅಭಿನಯದ ‘ಅಲಾ ವೈಕುಂಠಪುರಮುಲು’

ಹೈದರಾಬಾದ್: ಜನೆವರಿ 17 (ಯು.ಎನ್.ಐ.) ಇದೀಗ ಟಾಲಿವುಡ್ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಪುಷ್ಪ ದಿ ರೈಸ್ ಸಿನಿಮಾದ ಯಶಸ್ಸಿನಲ್ಲಿದ್ದಾರೆ. ಮತ್ತೊಂದು ಸಂತೋಷದ ವಿಚಾರವೆಂದರೆ ಅಲ್ಲು ಅರ್ಜುನ್‌...

ದೇಶ49 mins ago

ಮೂವರು ಪಿಎಲ್ ಎಫ್ ಐ ಸಂಘಟನೆ ನಕ್ಸಲರ ಬಂಧನ

ಖುಂಟಿ: ಜನೆವರಿ 17 (ಯು.ಎನ್.ಐ.) ನಿಷೇಧಿತ ಪೀಪಲ್ಸ್ ಲಿಬರೇಶನ್ ಫ್ರಂಟ್ ಆಫ್ ಇಂಡಿಯಾ (ಪಿಎಲ್ ಎಫ್‌ಐ) ಸಂಘಟನೆಗೆ ಸೇರಿದ 14 ವರ್ಷದ ಅಪ್ರಾಪ್ತ ಸೇರಿದಂತೆ ಮೂವರು ಮೂವರು...

ದೇಶ54 mins ago

ಪದ್ಮಶ್ರೀ ಪುರಸ್ಕೃತೆ, ಸಾಮಾಜಿಕ ಕಾರ್ಯಕರ್ತೆ ಶಾಂತಿ ದೇವಿ ನಿಧನ: ಮೋದಿ ಸಂತಾಪ

ರಾಯಗಡ: ಜನೆವರಿ ೧೭ (ಯು.ಎನ್.ಐ.) ಪದ್ಮಶ್ರೀ ಪುರಸ್ಕೃತೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಶಾಂತಿ ದೇವಿ ಭಾನುವಾರ ರಾತ್ರಿ ಒಡಿಶಾದ ರಾಯಗಡ ಜಿಲ್ಲೆಯ ಗುಣಪುರದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ....

ಕರ್ನಾಟಕ1 hour ago

ಪಿಎಂಎಫ್ಎಂಇ ಯೋಜನೆಗೆ ಶೇ.15 ರಷ್ಟು ರಾಜ್ಯದಿಂದ ಹೆಚ್ಚುವರಿ ಸಹಾಯಧನ

ಬೆಂಗಳೂರು: ಜನೆವರಿ 17 (ಯು.ಎನ್.ಐ.)ರೈತರಿಗೆ ಬಲತುಂಬಲು ರಾಜ್ಯ ಸರ್ಕಾರ ಕೇಂದ್ರದ ಆತ್ಮ ನಿರ್ಭರ ಭಾರತ ಅಭಿಯಾನ (ಪಿಎಂಎಫ್ಎಂಇ) ಯೋಜನೆಗೆ ಸಹಾಯಧನವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ. ಪಿಎಂಎಫ್ಎಂಇ ಯೋಜನೆಗೆ...

ಬೆಂಗಳೂರು1 hour ago

ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಗೆ ಕೋವಿಡ್

ಬೆಂಗಳೂರು, ಜ ೧೭(ಯುಎನ್ ಐ) ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಕಳೆದ ನಾಲ್ಕೈದು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆಆರ್ ಟಿ...

ದೇಶ2 hours ago

ಉಪಯುಕ್ತ ಮಾಹಿತಿ ; 5 ಸಾವಿರ ಅಲ್ಲ, ಕೇವಲ ₹260 ರಲ್ಲಿ ಒಮೈಕ್ರಾನ್ ಪತ್ತೆ ಹಚ್ಚಿ!

ಬೆಂಗಳೂರು : ಜನೆವರಿ 17 (ಯು.ಎನ್.ಐ.) ಪ್ರತಿ ದಿನ ಒಮೈಕ್ರಾನ್ ಸೋಂಕು ದೇಶದಲ್ಲಿ ವೇಗವಾಗಿ ಹರಡಲಾರಂಭಿಸಿದೆ. ಕೊರೊನಾ ರೂಪಾಂತರಗಳಿಗಿಂತ ಒಮೈಕ್ರಾನ್ ಹೆಚ್ಚು ಸಾಂಕ್ರಾಮಿಕವಾಗಿದ್ದು, ಜೀನೋಮ್ ಸೀಕ್ವೆನ್ಸಿಂಗ್ ಟೆಸ್ಟ್‌ನೊಂದಿಗೆ...

ದೇಶ2 hours ago

ಐಐಟಿ ಬಾಂಬೆಯ ವಿದ್ಯಾರ್ಥಿ ಆತ್ಮಹತ್ಯೆ

ಮುಂಬೈ: ಜನೆವರಿ 17  (ಯು.ಎನ್.ಐ.) ಐಐಟಿ ಬಾಂಬೆಯ ವಿದ್ಯಾರ್ಥಿ ಸೋಮವಾರ ಮುಂಜಾನೆ ಇಲ್ಲಿನ ಪೊವೈ ಕ್ಯಾಂಪಸ್ ನಲ್ಲಿರುವ ತನ್ನ ಹಾಸ್ಟೆಲಿನ ಟೆರೇಸ್‌ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ...

ಟ್ರೆಂಡಿಂಗ್

Share