Connect with us


      
ಅಪರಾಧ

ಕಾಂಗ್ರೆಸ್ ಅಭ್ಯರ್ಥಿ ಯೂಸುಫ್ ಶರೀಫ್ ಬಾಬು ವಿರುದ್ಧ ಎಫ್ಐಆರ್ ದಾಖಲು

Bindushree Hosuru

Published

on

ಬೆಂಗಳೂರು: ಡಿ. 09(ಯು.ಎನ್.ಐ) : ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಕಾರಣಕ್ಕೆ ಬೆಂಗಳೂರು ಮಹಾನಗರ ವಿಧಾನಪರಿಷತ್ ಕಾಂಗ್ರೆಸ್ ಅಭ್ಯರ್ಥಿ ಯೂಸುಫ್ ಶರೀಫ್ ಬಾಬು (ಕೆ.ಜಿ.ಎಫ್.ಬಾಬು) ವಿರುದ್ಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್ಐಹಆರ್ ದಾಖಲಾಗಿದೆ.

ಯೂಸುಫ್ ಶರೀಫ್ ಬಾಬು “ನನ್ನನ್ನು ಗೆಲ್ಲಿಸಿದರೆ ರೂ. 5,000, ರೂ.10 ಸಾವಿರ, 50 ಸಾವಿರ, ಒಂದು ಲಕ್ಷ ಜೀವವಿಮೆ ಲೆಕ್ಕದಲ್ಲಿ ತಲಾ ರೂ. 5 ಲಕ್ಷ -ಹೀಗೆ ರೂ. 500 ಕೋಟಿಗೂ ಅಧಿಕ ಹಣವನ್ನು ನಿಮಗೆ ಕೊಡುತ್ತೇನೆ” ಎಂದು ಮತದಾರಿಗೆ ಬಹಿರಂಗವಾಗಿ ಹೇಳುತ್ತಿದ್ದಾರೆ.

ಈ ರೀತಿ ಹೇಳುವ ಮೂಲಕ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ್ದಕ್ಕಾಗಿ ಈ ಎಫ್ಐಆರ್ ದಾಖಲಿಸಲಾಗಿದೆ. ಯಲಹಂಕದ ತಹಶೀಲ್ದಾರ್ ದೂರಿನನ್ವಯ ಈ ಪ್ರಕರಣ ದಾಖಲಾಗಿದೆ.

Share