Published
5 months agoon
By
Vanitha Jainಬೆಂಗಳೂರು/ಕೋಲಾರ,ಡಿಸೆಂಬರ್ 13(ಯು.ಎನ್.ಐ)ವಿಧಾನಸಭೆಯ ಚಳಿಗಾಲದ ಅಧಿವೇಶನದ ಕೊನೆಯ ದಿನ ಬಲವಂತದ ಮತಾಂತರ ಮಸೂದೆ ಜಾರಿಯಾಗಲಿದೆ ಎನ್ನುವ ಚರ್ಚೆಯ ಬೆನ್ನಲ್ಲೆ ಕೋಲಾರದಲ್ಲಿ ಚರ್ಚ್ ಅನ್ನು ಧರ್ಮಕ್ಕೆ ಪರಿವರ್ತಿಸಲಾಗಿದೆ ಎಂದು ಆರೋಪಿಸಿ ಬಲಪಂಥೀಯ ಗುಂಪೊಂದು ಕ್ರಿಶ್ಚಿಯನ್ ಧಾರ್ಮಿಕ ಪುಸ್ತಕಗಳಿಗೆ ಬೆಂಕಿ ಹಚ್ಚಿದ ಘಟನೆ ಬೆಳಕಿಗೆ ಬಂದಿದೆ.
ಕಳೆದ ಶನಿವಾರ ಈ ಘಟನೆ ನಡೆದಿದೆಯಾದರೂ ಈ ಪ್ರಕರಣದಲ್ಲಿ ಇದುವರೆಗೂ ಯಾರ ಬಂಧನವೂ ಆಗಿಲ್ಲ.
ಈ ವಿಷಯಕ್ಕೆ ಸಂಬಂಧಿಸಿದಂತೆ, ಧಾರ್ಮಿಕ ಕಿರುಪುಸ್ತಕಗಳನ್ನು ಹಂಚದಂತೆ ಕ್ರಿಶ್ಚಿಯನ್ ಸಮುದಾಯಕ್ಕೆ ಎಚ್ಚರಿಕೆ ನೀಡಲಾಗಿದೆ ಎಂದು ಪೆÇಲೀಸರು ತಿಳಿಸಿದ್ದಾರೆ. ಇಲ್ಲಿಯವರೆಗೆ, ಘಟನೆಯಲ್ಲಿ ಯಾವುದೇ ಬಲಪಂಥೀಯ ಗುಂಪಿನ ಸದಸ್ಯರನ್ನು ಬಂಧಿಸಲಾಗಿಲ್ಲ.
ಪ್ರಚಾರದ ಅಂಗವಾಗಿ ಕ್ರೈಸ್ತ ಸಮುದಾಯದ ಪ್ರತಿನಿಧಿಗಳು ಮನೆ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಬಲಪಂಥೀಯ ಗುಂಪುಗಳ ಸದಸ್ಯರು ಅವರನ್ನು ತಡೆದು ವಿಚಾರಣೆಗೆ ಒಳಪಡಿಸಿ ನಂತರ ಪುಸ್ತಕಗಳನ್ನು ಕಸಿದುಕೊಂಡು ಬೆಂಕಿ ಹಚ್ಚಿದರು ಎನ್ನಲಾಗಿದೆ.
ಕಳೆದ 12 ತಿಂಗಳುಗಳಲ್ಲಿ ಕರ್ನಾಟಕದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ಅನೇಕ ದಾಳಿಗಳು ನಡೆದಿವೆನ್ನಲಾಗಿದ್ದು ರಾಜ್ಯದಲ್ಲಿ ಬಿಜೆಪಿ ಸರ್ಕಾರವು ಬಲವಂತದ ಮತಾಂತರವನ್ನು ನಿಷೇಧಿಸುವ ಮಸೂದೆಯನ್ನು ಪರಿಗಣಿಸಲು ಪ್ರಾರಂಭಿಸಿದಾಗ ರಾಜ್ಯದಲ್ಲಿ ಇಂತಹ ದಾಳಿಗಳು ಪ್ರಾರಂಭವಾಗಿವೆ ಎನ್ನುವುದು ಕ್ರೈಸ್ತ ಸಮುದಾಯದ ಆರೋಪ.
ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಬಲವಂತದ ಮತಾಂತರ ಮಸೂದೆ ಚರ್ಚೆಗೆ ಬರಲಿದ್ದು, ರಾಜ್ಯದಲ್ಲಿ ಬಲವಂತದ ಮತಾಂತರದಿಂದ ಜನರನ್ನು ರಕ್ಷಿಸುವುದಾಗಿ ಭಾನುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಪಶುವೈದ್ಯರಿಗೂ ಕಾನೂನಿನ ಅಡಿಯಲ್ಲಿ ರಕ್ಷಣೆ ನೀಡಿ: ರಾಜ್ಯ ಪಶುವೈದ್ಯಕೀಯ ಸಂಘ ಒತ್ತಾಯ
ನಗರದಲ್ಲಿ ಎಲ್ಲೆಡೆ ಕಳಪೆ ಕಾಮಗಾರಿ: ಎಚ್.ಡಿ.ಕುಮಾರಸ್ವಾಮಿ
ಪರಿಷತ್ ಟಿಕೆಟ್ ಹಂಚಿಕೆ: ಕಾಂಗ್ರೆಸ್ನಿಂದ ಒಮ್ಮತದ ಅಭ್ಯರ್ಥಿಗಳು ಶಿಫಾರಸು-ಡಿಕೆಶಿ
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ: ಈಶ್ವರಪ್ಪ ಪ್ರತಿಕ್ರಿಯೆ
ಮಳೆ ಅನಾಹುತ: ಸಚಿವರ ನೇತೃತ್ವದಲ್ಲಿ 8 ಕಾರ್ಯಪಡೆ ರಚನೆ
ಎಫ್ಡಿಐ ಹೂಡಿಕೆಯಲ್ಲಿ ರಾಜ್ಯಕ್ಕೆ ಸಿಂಹಪಾಲು: ಸಿಎಂ