Published
5 months agoon
By
Vanitha Jainಕೋಲಾ, ಡಿಸೆಂಬರ್ 10(ಯು.ಎನ್.ಐ) ಆತಂಕಕ್ಕೆ ಕಾರಣವಾಗಿದ್ದ ಕೇಂದ್ರದ ಮಾಜಿ ಸಚಿವ ಆರ್ ಎಲ್ ಜಾಲಪ್ಪ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದೂ, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕೋಲಾರದ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಮುಂದುವರೆಸಲಾಗಿದೆ.
ಶ್ವಾಸಕೋಶ ಹಾಗೂ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ ಆರ್.ಎಲ್ ಜಾಲಪ್ಪ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿತ್ತು, ಆದರೀಗ ವೈದ್ಯರು ನೀಡುತ್ತಿರುವ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯ ಮೂಲಗಳು ತಿಳಿಸಿವೆ.