Published
6 months agoon
By
UNI Kannadaನವದೆಹಲಿ, ಜ 9(ಯುಎನ್ ಐ) ಕೇಂದ್ರ ಆಯುಷ್ ಸಚಿವಾಲಯ ಮಕರ ಸಂಕ್ರಾಂತಿಯ ದಿನವಾದ ಇದೇ 14ರಂದು ಜಾಗತಿಕ ಸೂರ್ಯ ನಮಸ್ಕಾರ ಪ್ರದರ್ಶನ ಆಯೋಜಿಸಿದೆ.
ಈ ಕಾರ್ಯಕ್ರಮದಲ್ಲಿ ಜಗತ್ತಿನೆಲ್ಲೆಡೆಯಿಂದ 75 ಲಕ್ಷ ಮಂದಿ ಪಾಲ್ಗೊಳ್ಳಲಿದ್ದಾರೆ.
ಸಕಲ ಜೀವಿಗಳ ಬೆಳವಣಿಗೆಗೆ ತನ್ನ ಕಿರಣಗಳ ಮೂಲಕ ಚೈತನ್ಯ ನೀಡುವ ಸೂರ್ಯನಿಗೆ ಕೃತಜ್ಞತೆ ಸಮರ್ಪಿಸಲು ಅಂದು ಸೂರ್ಯ ನಮಸ್ಕಾರ ನಡೆಸಲಾಗುತ್ತದೆ. ಸೂರ್ಯ ಶಕ್ತಿಯ ಮೂಲವಾಗಿದೆ; ಆಹಾರ ಸರಪಳಿಯ ಮುಂದುವರಿಕೆಗೆ ಮಾತ್ರವಲ್ಲದೆ, ಮಾನವ ಜೀವಿಗಳ ದೇಹ ಹಾಗೂ ಮನಸ್ಸಿನ ಚೈತನ್ಯಕ್ಕೆ ಅತ್ಯಗತ್ಯವಾಗಿದೆ. ಸಾಮೂಹಿಕ ಸೂರ್ಯ ನಮಸ್ಕಾರ ಪ್ರದರ್ಶನ ಹವಾಮಾನ ಬದಲಾವಣೆ ಹಾಗೂ ಜಾಗತಿಕ ತಾಪಮಾನ ಸಂದೇಶವನ್ನು ಜಗತ್ತಿಗೆ ಸಾರುವ ಉದ್ದೇಶವನ್ನು ಹೊಂದಿದೆ.
ಭಾರತೀಯ ಸಾಂಸ್ಕೃತಿಕ, ಆಧ್ಯಾತ್ಮಿಕ ಪರಂಪರೆಯಲ್ಲಿ ಮಕರ ಸಂಕ್ರಾಂತಿ ಅತ್ಯಂತ ಮಹತ್ವ ಹೊಂದಿದೆ; ಸೂರ್ಯ ನಮಸ್ಕಾರ 12 ಹಂತಗಳ ಒಂದು ಸುತ್ತಾಗಿದ್ದು, ಈ ಅಭ್ಯಾಸ ಮನುಷ್ಯನ ದೇಹ ಮತ್ತು ಮನಸ್ಸುಗಳಿಗೆ ಚೈತನ್ಯ ನೀಡುತ್ತದೆ.
ಆಭರಣ ಅಂಗಡಿಗೆ ನುಗ್ಗಿ ದರೋಡೆ, ಮಾಲೀಕನಿಗೆ ಗುಂಡೇಟು; ಸಿಸಿಕ್ಯಾಮೆರಾದಲ್ಲಿ ಕೃತ್ಯ ಸೆರೆ
ಸಿಧು ಮೂಸೆವಾಲಾರ ಕೊನೆಯ ಹಾಡನ್ನ ಯೂಟ್ಯೂಬ್ ನಿಂದ ತೆಗೆದುಹಾಕಿರೋದೇಕೆ?
ಹಕ್ಕುಗಳನ್ನು ರಕ್ಷಿಸುವುದು ಅಪರಾಧವಲ್ಲ; ತೀಸ್ತಾ ಸೆತಲ್ವಾಡ್ ಪರ ವಿಶ್ವಸಂಸ್ಥೆ ಅಧಿಕಾರಿ ದನಿ
“ರಾಷ್ಟ್ರೀಯ ಭದ್ರತೆಗೆ ಡ್ರಗ್ಸ್ ದೊಡ್ಡ ಸವಾಲು” : ಷಾ
ಸಿಎಂ ಭೇಟಿಯಾಗಲು ಪ್ರವಾಹದ ನೀರಲ್ಲಿ ಪರದಾಡಿದ ಅಸ್ಸಾಂ ಯುವಕ
ಸಿಎಂ ಯೋಗಿ ಆದಿತ್ಯನಾಥ್ ಪ್ರಯಾಣಿಸ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ