Connect with us


      
ದೇಶ

ಜಾಮೀನು ಸಿಕ್ಕ ಬೆನ್ನಲ್ಲೇ ಮತ್ತೆ ಬಂಧನಕ್ಕೊಳಗಾದ ಶಾಸಕ ಜಿಗ್ನೇಶ್ ಮೇವಾನಿ

Lakshmi Vijaya

Published

on

ಗುವಾಹಟಿ: ಏಪ್ರಿಲ್ 25 (ಯು.ಎನ್.ಐ.) ಜಾಮೀನು ಪಡೆದು ಜೈಲಿಂದ ಹೊರಬಂದ ಕೆಲವೇ ಕ್ಷಣದಲ್ಲಿ ಶಾಸಕ ಜಿಗ್ನೇಶ್ ಮೇವಾನಿ ಮತ್ತೆ ಬಂಧನಕ್ಕೊಳಗಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಟ್ವೀಟ್ ಮಾಡಿದ ಪ್ರಕರಣದಲ್ಲಿ ಅಸ್ಸಾಂನ ನ್ಯಾಯಾಲಯದಿಂದ ಜಾಮೀನು ಪಡೆದ ಬೆನ್ನಲ್ಲೇ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ಹೊಸ ಪ್ರಕರಣದಲ್ಲಿ ಇಂದು ಮತ್ತೆ  ಬಂಧಿಸಲಾಗಿದೆ. ಟ್ವೀಟ್ ಪ್ರಕರಣದಲ್ಲಿ ಜಾಮೀನು ಅರ್ಜಿಯ ಆದೇಶವನ್ನು ನ್ಯಾಯಾಲಯ ನಿನ್ನೆ ಕಾಯ್ದಿರಿಸಿತ್ತು.

ಮೇವಾನಿ ಅವರನ್ನು ಬಂಧಿಸಲು ಬಂದಿದ್ದ ಅಸ್ಸಾಂನ ಬರ್ಪೇಟಾ ಪೊಲೀಸರು ಗುಜರಾತ್ ಶಾಸಕನನ್ನು ಯಾವ ಪ್ರಕರಣದಲ್ಲಿ ಮತ್ತೆ ಬಂಧಿಸಲಾಗಿದೆ ಎಂದು ತಿಳಿಸಿಲ್ಲ.

ಅಸ್ಸಾಂನ ಕೊಕ್ರಜಾರ್‌ನ ಸ್ಥಳೀಯ ಬಿಜೆಪಿ ನಾಯಕರೊಬ್ಬರು ಅವರ ವಿರುದ್ಧ ದೂರು ದಾಖಲಿಸಿದ ನಂತರ ಅಸ್ಸಾಂ ಪೊಲೀಸರ ತಂಡವು ಗುರುವಾರ ಗುಜರಾತ್‌ನ ಪಾಲನ್‌ಪುರದಿಂದ ಜಿಗ್ನೇಶ್ ಮೇವಾನಿ ಅವರನ್ನು ಮೊದಲ ಬಾರಿಗೆ ಬಂಧಿಸಿತ್ತು.

“ಇದು ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಷಡ್ಯಂತ್ರ. ಅವರು ನನ್ನ ವರ್ಚಸ್ಸನ್ನು ಹಾಳುಮಾಡಲು ಇದನ್ನು ವ್ಯವಸ್ಥಿತವಾಗಿ ಮಾಡುತ್ತಿದ್ದಾರೆ. ಅವರು ಇದನ್ನು ರೋಹಿತ್ ವೇಮುಲಾಗೆ , ಚಂದ್ರಶೇಖರ್ ಆಜಾದ್‌ಗೆ ಮಾಡಿದರು, ಈಗ ಅವರು ನನ್ನನ್ನು ಗುರಿಯಾಗಿಸುತ್ತಿದ್ದಾರೆ” ಎಂದು ಜಿಗ್ನೇಶ್ ಮೇವಾನಿ ಜಾಮೀನು ಸಿಕ್ಕ ಬಳಿಕ ಹೊರಗೆ ಬಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದರು.

 

Share