Connect with us


      
ವಿದೇಶ

ಮುಂಬೈ ದಾಳಿ ಮಾಸ್ಟರ್ ಮೈಂಡ್ ಗೆ 31 ವರ್ಷ ಜೈಲು ಶಿಕ್ಷೆ

Lakshmi Vijaya

Published

on

ಇಸ್ಲಾಮಾಬಾದ್: ಏಪ್ರಿಲ್ 08 (ಯು.ಎನ್.ಐ) 26/11ರ ಮುಂಬೈ ದಾಳಿ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಗೆ ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ನ್ಯಾಯಾಲಯ 31 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜಮಾತ್ ಉದ್ ದಾವಾ ಮುಖ್ಯಸ್ಥ ಹಫೀಜ್ ಸಯೀದ್‌ಗೆ ಎರಡು ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಲಾಗಿದೆ. ಅವರ ಎಲ್ಲಾ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಕೋರ್ಟ್ ಆದೇಶಿಸಿದೆ.

ಹಫೀಜ್ ಸಯೀದ್ ನಿರ್ಮಿಸಿದ ಎಂದು ಹೇಳಲಾದ ಮಸೀದಿ ಮತ್ತು ಮದರಸಾ ಸೇರಿದಂತೆ ಸಯೀದ್ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಸೂಚಿಸಲಾಗಿದೆ.

ಭಯೋತ್ಪಾದನೆಯ ಮಾಸ್ಟರ್‌ಮೈಂಡ್‌ಗೆ 3 ಲಕ್ಷದ 40 ಸಾವಿರ ದಂಡವನ್ನೂ ವಿಧಿಸಲಾಗಿದೆ.

2020 ರಲ್ಲಿ, ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ಭಯೋತ್ಪಾದನಾ ವಿರೋಧಿ ನ್ಯಾಯಾಲಯವು ಹಫೀಜ್ ಸಯೀದ್‌ಗೆ 15 ವರ್ಷಗಳ ಜೈಲು ಶಿಕ್ಷೆ ವಿಧಿಸಿತು.

 

Share