Published
6 months agoon
ಮೊರಾದಾಬಾದ್: ನ. 7 (ಯುಎನ್ಐ) ಶಾಲೆಗೆ ಹೋಗುವ ದಾರಿಯಲ್ಲಿ ಸ್ಥಳೀಯ ವ್ಯಕ್ತಿಯೊಬ್ಬ 15 ವರ್ಷದ ವಿದ್ಯಾರ್ಥಿನಿಯೊಬ್ಬಳಿಗೆ ಕಿರುಕುಳ ನೀಡುತ್ತಿದ್ದ, ಇದರಿಂದ ಮನನೊಂದ ಆಕೆ ಟೆರೇಸ್ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಘಟನೆ ಉತ್ತರಪ್ರದೇಶದ ಮೊರಾದಾಬಾದ್ನಲ್ಲಿ ನಡೆದಿದೆ.
ಶಾಲೆಗೆ ಹೋಗುವ ದಾರಿಯಲ್ಲಿ ಸ್ಥಳೀಯ ವ್ಯಕ್ತಿಯೊಬ್ಬ ಆಕೆಗೆ ನಿತ್ಯ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತ ಆಕೆ ಈ ರೀತಿ ಮಾಡಿಕೊಂಡಿದ್ದಾಳೆ ಎಂದು ಮೃತಳ ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಆರೋಪಿಗಳು ಅಪ್ರಾಪ್ತ ಬಾಲಕಿಗೆ ಶಾಲೆಗೆ ಹೋಗುವಾಗ ನಿತ್ಯ ಕಿರುಕುಳ ನೀಡುತ್ತಿದ್ದರು. ಮೊರಾದಾಬಾದ್ನ ಮಜೋಲಾ ಪೊಲೀಸ್ ಠಾಣೆ ವ್ಯಾಪ್ತಿಯ ಕಾಶಿರಾಮ್ ನಗರದಲ್ಲಿ ನವೆಂಬರ್ 2 ರಂದು ಈ ಘಟನೆ ನಡೆದಿದೆ.
ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿ, ಚಿಕಿತ್ಸೆ ನೀಡಿದ್ರು ಸಂತ್ರಸ್ತೆ ಸಾವಿಗೀಡಾಗಿದ್ದಾಳೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ತನಿಖೆಗೆ ಆದೇಶಿಸಲಾಗಿದೆ. ಕಿರುಕುಳದ ಬಗ್ಗೆ ಸಂತ್ರಸ್ತೆ ತನ್ನ ಕುಟುಂಬ ಸದಸ್ಯರಿಗೆ ವಿಷಯ ತಿಳಿಸಿ ನ. 2ರಂದು ತಾರಸಿಗೆ ಹೋಗಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಸಂತ್ರಸ್ತೆಯನ್ನು ಆಸ್ಪತ್ರೆಗೆ ಕರೆದೊಯ್ದಾಗ, ಆಕೆಯ ಸ್ಥಿತಿ ಚಿಂತಾಜನಕವಾಗಿತ್ತು. ಆರೋಪಿ ಬಾಲಕಿಗೆ ಕಿರುಕುಳ ನೀಡುತ್ತಿದ್ದ, ಹಾಗಾಗಿ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮಜೋಲಾ ಎಸ್ಎಚ್ಒ, ಜೀತ್ ಸಿಂಗ್ ಹೇಳಿದ್ದಾರೆ.