Connect with us


      
ದೇಶ

ಹರಿಯಾಣ: 14 ಜಿಲ್ಲೆಗಳಲ್ಲಿ ಪಟಾಕಿ ಮಾರಾಟ ಮತ್ತು ಬಳಕೆಗೆ ನಿಷೇಧ

pratham

Published

on

ಗುರುಗ್ರಾಮ್ : ಅ. 31(ಯುಎನ್ಐ) ದೀಪಾವಳಿಗೆ ಇನ್ನೇನು ಕೆಲವೇ ದಿನಗಳು ಬಾಕಿಯಿರುವಾಗಲೇ, ಹರಿಯಾಣ ಸರ್ಕಾರ ದೆಹಲಿ ಬಳಿಕ 14 ಜಿಲ್ಲೆಗಳಲ್ಲಿ ಪಟಾಕಿ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿ ಅಧಿಸೂಚನೆ ಹೊರಡಿಸಿದೆ.

ಭಿವಾನಿ, ಚಾರ್ಖಿ ದಾದ್ರಿ, ಫರಿದಾಬಾದ್, ಗುರುಗ್ರಾಮ್, ಜಜ್ಜರ್, ಜಿಂದ್, ಕರ್ನಾಲ್, ಮಹೇಂದ್ರಗಢ, ನುಹ್, ಪಲ್ವಾಲ್, ಪಾಣಿಪತ್, ರೇವಾರಿ, ರೋಹ್ಟಕ್ ಮತ್ತು ಸೋನಿಪತ್ ಜಿಲ್ಲೆಗಳಲ್ಲಿ ಈ ನಿಷೇಧವನ್ನು ಜಾರಿಗೊಳಿಸಲಾಗಿದೆ. ನವೆಂಬರ್​​ನಲ್ಲಿ ಹೆಚ್ಚು ವಾಯುಮಾಲಿನ್ಯಕ್ಕೆ ಒಳಗಾಗುವ ರಾಜ್ಯದ ನಗರಗಳು ಮತ್ತು ಪಟ್ಟಣಗಳಿಗೂ ಈ ನಿಯಮ ಅನ್ವಯಿಸುತ್ತದೆ.

ಗಾಳಿಯ ಗುಣಮಟ್ಟ ಮಧ್ಯಮ ಅಥವಾ ಕಡಿಮೆ ಇರುವ ನಗರಗಳಲ್ಲಿ ವಾಸಿಸುವ ಜನರಿಗೆ ಹಸಿರು ಕ್ರ್ಯಾಕರ್‌ಗಳನ್ನು ಬಳಸಲು ಅನುಮತಿಸಲಾಗಿದೆ. ಮದುವೆ ಮತ್ತಿತರ ಸಮಾರಂಭಗಳಿಗೂ ಹಸಿರು ಪಟಾಕಿ ಸಿಡಿಸಲು ಮಾತ್ರ ಅನುಮತಿ ನೀಡಲಾಗುವುದು ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

ಗಾಳಿಯ ಗುಣಮಟ್ಟ ಮಧ್ಯಮ ಅಥವಾ ಅದಕ್ಕಿಂತ ಕಡಿಮೆ ಇರುವ ನಗರಗಳು/ಪಟ್ಟಣ/ಪ್ರದೇಶಗಳಲ್ಲಿ ದೀಪಾವಳಿ ಅಥವಾ ಗುರುಪುರಬ್‌ನಂತಹ ಯಾವುದೇ ಹಬ್ಬದಲ್ಲಿ ಪಟಾಕಿ ಸಿಡಿಸುವ ಸಮಯವೂ ರಾತ್ರಿ 8 ರಿಂದ ರಾತ್ರಿ 10 ರವರೆಗೆ ಮಾತ್ರ ಇರುತ್ತವೆ.  ಚತ್​​ ಸಮಯದಲ್ಲಿ ಬೆಳಗ್ಗೆ 6 ರಿಂದ ಬೆಳಗ್ಗೆ 8 ರವರೆಗೆ ಇರುತ್ತದೆ. ಕ್ರಿಸ್ಮಸ್ ಮತ್ತು ಹೊಸ ವರ್ಷದ ಸಮಯದಲ್ಲಿ ಬೆಳಗ್ಗೆ 12 ರಿಂದ ರಾತ್ರಿ 11:55 ರಿಂದ 12:30 ರವರೆಗೆ ಮಾತ್ರ ಪಟಾಕಿ ಹೊಡೆಯಲು ಅವಕಾಶ ಇರುತ್ತದೆ.

ಹರಿಯಾಣ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಈ ನಗರಗಳು ಮತ್ತು ಪಟ್ಟಣಗಳ ಪಟ್ಟಿಯನ್ನು ಪ್ರತ್ಯೇಕವಾಗಿ ಬಿಡುಗಡೆ ಮಾಡಲಿದೆ. ಅಲ್ಲದೇ ಪಟ್ಟಿಯನ್ನು ತನ್ನ ವೆಬ್‌ಸೈಟ್‌ನಲ್ಲಿ ಎಲ್ಲಾರಿಗೂ ಲಭ್ಯವಾಗುವಂತೆ ಹಾಕಲಿದೆ. ಪಟಾಕಿ ಮಾರಾಟವನ್ನು ಪರವಾನಗಿ ಪಡೆದ ವ್ಯಾಪಾರಿಗಳು ಮತ್ತು ಫ್ಲಿಪ್‌ಕಾರ್ಟ್, ಅಮೆಜಾನ್ ಸೇರಿದಂತೆ ಇತರ ಇ-ಕಾಮರ್ಸ್ ಪೋರ್ಟಲ್‌ಗಳ ಮೂಲಕ ಮಾತ್ರ ಮಾರಾಟ ಮಾಡಬಹುದಾಗಿದೆ.

Share