Connect with us


      




ರಾಜಕೀಯ

ಗಂಗೆ ಸಾಕ್ಷಿಯಾಗಿ ಸಿದ್ದರಾಮಯ್ಯʼಸುಳ್ಳು ಹೇಳಿ ಅಪಚಾರʼ ಎಸಗಿದ್ದಾರೆ: ಹೆಚ್ಡಿಕೆ

Published

on

ಸಾಂದರ್ಭಿಕ ಚಿತ್ರ

ಪ್ರತಿಪಕ್ಷ ನಾಯಕನನ್ನು ಸುಳ್ಳಯ್ಯ ಎಂದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಜನೆವರಿ 03 (ಯು.ಎನ್.ಐ.) ಸತ್ಯಕ್ಕೆ ಸಮಾಧಿ ಕಟ್ಟಿ ಸುಳ್ಳಿನಯಾತ್ರೆಗೆ ಹೊರಟವರ ಜಾತಕವನ್ನು ದಾಖಲೆಗಳೇ ಬೆತ್ತಲು ಮಾಡುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

ಸೋಮವಾರ ಈ ಬಗ್ಗೆ  ಅವರು ಸರಣಿ ಟ್ವೀಟ್ ಮಾಡಿದ್ದಾರೆ.  ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಮಿಸ್ಟರ್ ಸುಳ್ಳಯ್ಯ ಎಂದು ಕರೆದಿದ್ದಾರೆ. ಅವರ ಟ್ವೀಟ್ ಪೂರ್ಣಪಾಠ ಇಲ್ಲಿದೆ. ” ಮಾಜಿ ಸಿಎಂ, ಹಾಲಿ ಪ್ರತಿಪಕ್ಷ ನಾಯಕರ ನಾಲಿಗೆ ಮೇಲೆ ರಾಜ್ಯ ನೀರಾವರಿ ಬಗ್ಗೆ ಸೃಷ್ಟಿ ಆಗುತ್ತಿರುವ ʼಸುಳ್ಳಿನ ಸರಮಾಲೆʼಯು ಜನತೆಗೆ ಯಾಮಾರಿಸಿ ಬೇಳೆ ಬೇಯಿಸಿಕೊಳ್ಳುತ್ತಿರುವ ʼರಾಜಕೀಯ ಹುಂಬತನʼವಲ್ಲದೆ ಮತ್ತೇನೂ ಅಲ್ಲ. ಸತ್ಯಕ್ಕೆ ಸಮಾಧಿ ಕಟ್ಟಿ ʼಸುಳ್ಳಿನಯಾತ್ರೆʼಗೆ ಹೊರಟವರ ಜಾತಕವನ್ನು ದಾಖಲೆಗಳೇ ಬೆತ್ತಲು ಮಾಡುತ್ತಿವೆ”

“1989ರಲ್ಲಿ ತಮಿಳುನಾಡು ಒತ್ತಡಕ್ಕೆ ಮಣಿದು ವಿ.ಪಿ.ಸಿಂಗ್ ಸರಕಾರ ಕಾವೇರಿ ಟ್ವಿಬ್ಯೂನಲ್ ರಚಿಸಿತ್ತು. ಆಗ ವೀರೇಂದ್ರ ಪಾಟೀಲ್ ಸಿಎಂ ಆಗಿದ್ದರೆ, ಪುಟ್ಟಸ್ವಾಮಿಗೌಡರು ನೀರಾವರಿ ಮಂತ್ರಿ. ಈ ಟ್ರಿಬ್ಯೂನಲ್ ಬೇಡವೇ ಬೇಡ ಎಂದು ದನಿಯೆತ್ತಿದ ಏಕೈಕ ನಾಯಕರು ದೇವೇಗೌಡರು ಮಾತ್ರ. ಆದರೆ, ಅವರ ಮಾತನ್ನು ಯಾರೂ ಕೇಳಲಿಲ್ಲ”

“ಈಗ ʼಮಿ.ಸುಳ್ಳಯ್ಯʼ ಹೊಸ ಕಥೆ, ಚಿತ್ರಕಥೆ ಬರೆದಿದ್ದಾರೆ. 1968ರಲ್ಲೇ ಮೇಕೆದಾಟು ಯೋಜನೆಗೆ ಕಾಂಗ್ರೆಸ್ ಪ್ರಯತ್ನಿಸಿತ್ತಂತೆ ಎಂದು ಹೇಳಿದ್ದಾರೆ. 2017ರಲ್ಲೇ ಕಾಂಗ್ರೆಸ್ ಸರಕಾರ DPR ಸಿದ್ಧಪಡಿಸಿ 5,912 ಕೋಟಿ ರೂ. ಯೋಜನಾ ವೆಚ್ಚ ನಿಗದಿ ಮಾಡಿತ್ತು. ಸಮ್ಮಿಶ್ರ ಸರಕಾರದಲ್ಲಿ ಜಲ ಸಂಪನ್ಮೂಲ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ಮತ್ತೆ 9,000 ಕೋಟಿ ರೂ. ಮೊತ್ತದ ವಿಸ್ತೃತ DPR ಸಿದ್ಧಪಡಿಸಿ ಕೇಂದ್ರಕ್ಕೆ ಕಳುಹಿಸಿದ್ದರಂತೆ”

“ಅಬ್ಬಾ..! ʼಸಿದ್ದಸುಳ್ಳುಶೂರ!!ʼ. ಸುಳ್ಳು ಸೃಷ್ಟಿಗೊಂದು ಆಸ್ಕರ್ ಇರಬೇಕಿತ್ತು. ಮೇಕೆದಾಟು ಸಮಗ್ರ ಯೋಜನಾ ವರದಿ-DPR ಸಿದ್ಧವಾಗಿ ಕೇಂದ್ರಕ್ಕೆ ಸಲ್ಲಿಕೆ ಆಗಿದ್ದು 2018ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದಾಗಲೇ. ಇದರಲ್ಲಿ ಡಿಕೆಶಿ ಪಾತ್ರವೇನೂ ಇರಲಿಲ್ಲ. ಈ ಸತ್ಯವನ್ನು ʼಸಿದ್ದಹಸ್ತರುʼ ಮುಚ್ಚಿಟ್ಟ ಪರಮಾರ್ಥವೇನು”

“ನನ್ನ ಸಂಪುಟದಲ್ಲಿ ಜಲಸಂಪನ್ಮೂಲ ಮಂತ್ರಿಯಾಗಿದ್ದವರು ಮೇಕೆದಾಟು ವಿಚಾರದಲ್ಲಿ ನಾನು ಮತ್ತು ನನ್ನ ಸಂಪುಟ ಸಹೋದ್ಯೋಗಿ ಹೆಚ್.ಡಿ.ರೇವಣ್ಣ ಅವರು ಆಗಿನ ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ್ದಾಗ ಎಲ್ಲಿದ್ದರು? ಜನರಿಗೆ ತಿಳಿಯಬೇಕಲ್ಲವೆ”

ನನ್ನ ಮನವಿ ಮೇರೆಗೆ ಅಂದು ಗಡ್ಕರಿ ಅವರು ತಕ್ಷಣವೇ DPR ಸಿದ್ಧಪಡಿಸಿ ಕಳಿಸಿ ಎಂದು ಹೇಳಿದ್ದರು. ಆ ಸಭೆಗೆ ಡಿ.ಕೆ.ಶಿವಕುಮಾರ್ ಬರಲೇ ಇಲ್ಲ. ಅಂದು ನಾನು ದೆಹಲಿಯಲ್ಲಿ ಮಾಧ್ಯಮಗಳ ಜತೆ ಮೇಕೆದಾಟು ಯೋಜನೆ ಬಗ್ಗೆ ಹಾಗೂ ಗಡ್ಕರಿ ಅವರ ಜತೆಗಿನ ಚರ್ಚೆಯ ವಿವರಗಳ ಕುರಿತು ಮಾತನಾಡಿದ್ದೆ.

ಕ್ಷಣಕ್ಕೊಂದು ಬಣ್ಣ ಬದಲಿಸುವ ಇವರ ನಿಜಬಣ್ಣ ಪಿ.ವಿ.ನರಸಿಂಹರಾವ್ ಪ್ರಧಾನಿ ಆಗಿದ್ದಾಗಲೇ ಕನ್ನಡಿಗರಿಗೆ ಅರಿವಾಗಿತ್ತು. ಬೆಂಗಳೂರಿಗೆ ಕಾವೇರಿ 4ನೇ ಹಂತದಲ್ಲಿ ನ್ಯಾಯಸಮ್ಮತವಾಗಿ ದಕ್ಕಬೇಕಿದ್ದ 9 ಟಿಎಂಸಿ ನೀರನ್ನು ತಮಿಳುನಾಡು ಒತ್ತಡಕ್ಕೆ ಮಣಿದು ಸಾರಾಸಗಟಾಗಿ ನಿರಾಕರಿಸಿತ್ತು ಇದೇ ಕಾಂಗ್ರೆಸ್!

“ಹೋಗಲಿ, ಆ 9 ಟಿಎಂಸಿ ನೀರು ಬೆಂಗಳೂರಿಗೆ ತಂದವರು ಯಾರು? ಅದೇ ʼಸುಳ್ಳಯ್ಯʼನನ್ನು ವಿತ್ತಮಂತ್ರಿ, ಡಿಸಿಎಂ ಮಾಡಿದ ದೇವೇಗೌಡರೇ. ಬೆನ್ನಿಗಿರಿದು ಹೋದವರ ನಾಲಿಗೆಯ ಮೇಲೆ ಸತ್ಯಕ್ಕೆ ತಾವಿದೆಯೇ? ಸಾಧಿಸಿ ತೋರಿದ್ದನ್ನು ಹೇಳಿಕೊಳ್ಳದ ಆ ಹಿರಿಯ ಜೀವದ ತ್ಯಾಗವನ್ನೂ ʼಹೈಜಾಕ್ʼ ಮಾಡುವ ಹುನ್ನಾರಷ್ಟೇ ಇದು”

“2013ರಲ್ಲಿ ಇದೇ ‘ಸಿದ್ದಹಸ್ತರು’ ಸಿಎಂ ಆದ ಮೇಲೆ ನಡೆದ ವಿಧಾನಮಂಡಲ ಜಂಟಿ ಕಲಾಪದಲ್ಲಿ ರಾಜ್ಯಪಾಲರ ಭಾಷಣದಲ್ಲಿ; “ಕಾವೇರಿ ಐ ತೀರ್ಪಿನ ಭಾಗವಾಗಿ ಕಾವೇರಿ ವಿಸ್ತರಣಾ, ಮುಂದುವರಿದ ಹಾಗೂ ನವೀಕರಣ ಯೋಜನೆಗಳನ್ನು ಕೇಂದ್ರದ ಅನುಮೋದನೆ ಕೋರಲಾಗುವುದು” ಎಂದು ಹೇಳಿಸಿದ್ದರು”

“ಕೇಂದ್ರದ ಅನುಮೋದನೆ ಎಂದರೆ, ಮತ್ತೆ ಮತ್ತೆ ಅರ್ಜಿ ಹಿಡಿದು ಕೇಂದ್ರದ ಮರ್ಜಿ ಕಾಯುವುದು. ಅದಕ್ಕೆ, ಅಂದೇ ಸದನದಲ್ಲಿ ಜೆಡಿಎಸ್ ಆ ಭಾಷಣವನ್ನು ವಿರೋಧಿಸಿತ್ತು. ಕಾವೇರಿ ಐ ತೀರ್ಪಿನ ಭಾಗವಾಗಿ ನಮ್ಮ ಪಾಲಿನ ನೀರು ಬಳಕೆಗೆ ಕ್ರಮ ಕೈಗೊಳ್ಳುವುದು ನಮ್ಮ ಹಕ್ಕು. ಈ ಸರಳ ವಿಷಯವೂ ಆವತ್ತಿನ ಸಿಎಂಗೆ ಅರ್ಥವಾಗಲಿಲ್ಲ”

ಚಾಮರಾಜನಗರದ ಶ್ರೀ ಚಾಮರಾಜೇಶ್ವರನ ಸನ್ನಿಧಿಯಲ್ಲಿ ಸಿದ್ದಹಸ್ತರು ʼಸತ್ಯʼ ನುಡಿಯಬೇಕಿತ್ತು. ಆದರೆ, ಆ ಶಿವನ ಶಿರದಲ್ಲಿ ನೆಲೆನಿಂತ ಗಂಗೆಯ ಸಾಕ್ಷಿಯಾಗಿ ʼಸುಳ್ಳು ಹೇಳಿ ಅಪಚಾರʼ ಎಸಗಿದ್ದಾರೆ. ತಪ್ಪಿಗೆ ಪ್ರಾಯಶ್ಚಿತ್ತ ತಪ್ಪಿದ್ದಲ್ಲ. ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

ರಾಜಕೀಯ

ಭಾರತದ ಅತಿ ಎತ್ತರ ವ್ಯಕ್ತಿ ಧರ್ಮೇಂದ್ರ ಪ್ರತಾಪ್ ಸಿಂಗ್ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ

Published

on

ಲಕ್ನೋ: ಜನೆವರಿ 22 (ಯು.ಎನ್.ಐ.) ಭಾರತದ ಅತಿ ಎತ್ತರದ ವ್ಯಕ್ತಿ ಧರ್ಮೇಂದ್ರ ಪ್ರತಾಪ್ ಸಿಂಗ್ ಶನಿವಾರ ಸಮಾಜವಾದಿ ಪಕ್ಷ (SP) ಗೆ ಸೇರ್ಪಡೆಗೊಂಡಿದ್ದಾರೆ.

ಉತ್ತರ ಪ್ರದೇಶದ ಪ್ರತಾಪ್‌ಗಢ್ ಜಿಲ್ಲೆಯ ನರಹರ್ ಪುರ ಕಾಸಿಯಾಹಿ ಗ್ರಾಮದ ನಿವಾಸಿಯಾದ ಸಿಂಗ್ ಧರ್ಮೇಂದ್ರ ಪ್ರತಾಪ್ ಅವರನ್ನು ಎಸ್ಪಿಯ ರಾಜ್ಯಾಧ್ಯಕ್ಷ ನರೇಶ್ ಪಟೇಲ್ ಪಕ್ಷಕ್ಕೆ ಬರಮಾಡಿಕೊಂಡರು. ಅಖಿಲೇಶ್ ಯಾದವ್ ಸೇರಿದಂತೆ ಪಕ್ಷದ ನಾಯಕರೊಂದಿಗೆ ಧರ್ಮೇಂದ್ರ ಪ್ರತಾಪ್ ಸಿಂಗ್ ಇರುವ ಫೋಟೋವನ್ನು ಪಕ್ಷವು ಹಂಚಿಕೊಂಡಿದ್ದಾರೆ.

ಪ್ರತಾಪ್‌ಗಢದ ಧರ್ಮೇಂದ್ರ ಪ್ರತಾಪ್ ಸಿಂಗ್ ಅವರು ಎಸ್‌ಪಿ ಪಕ್ಷದ ನೀತಿಗಳು ಮತ್ತು ಅಖಿಲೇಶ್ ಯಾದವ್ ಅವರ ನಾಯಕತ್ವದಲ್ಲಿ ಸಮಾಜವಾದಿ ಪಕ್ಷದ ಸದಸ್ಯತ್ವವನ್ನು ಪಡೆದು ಪಕ್ಷದ ಏಳಿಗೆಗಾಗಿ ದುಡಿಯುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

8 ಅಡಿ 2 ಇಂಚುಗಳಷ್ಟು ಎತ್ತರದ ವ್ಯಕ್ತಿತ್ವ, ಧರ್ಮೇಂದ್ರ ಪ್ರತಾಪ್ ಸಿಂಗ್ ಭಾರತದ ಅತಿ ಎತ್ತರದ ವ್ಯಕ್ತಿ. 46 ವರ್ಷ ವಯಸ್ಸಿನವರಾದ ಇವರು ಗಿನ್ನೆಸ್ ವಿಶ್ವ ದಾಖಲೆಗಳಲ್ಲಿ ತಮ್ಮ ಹೆಸರನ್ನು ಅಚ್ಚೊತ್ತಿದ್ದಾರೆ ಮತ್ತು ಏಷ್ಯಾದ ಅತಿ ಎತ್ತರದ ಪುರುಷ ಎಂಬ ಖ್ಯಾತಿಗೂ ಒಳಗಾಗಿದ್ದಾರೆ. ಕಳೆದ ವರ್ಷ ಏಪ್ರಿಲ್‌ನಲ್ಲಿ ಯುಪಿ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದ್ದ ಸಹವರ್ತಿ ಪರ ಪ್ರಚಾರ ಕೂಡ ಮಾಡಿದ್ದರು.

Continue Reading

ರಾಜಕೀಯ

ಮನೆ ಮನೆ ಪ್ರಚಾರ ಆರಂಭಿಸಿದ ಬಿಜೆಪಿ ಧುರೀಣ ಅಮಿತ್ ಶಾ; 300ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಭರವಸೆ

Published

on

ಲಕ್ನೋ: ಜನೆವರಿ 22 (ಯು.ಎನ್.ಐ.) ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿಯ ಹಿರಿಯ ಚುನಾವಣಾ ತಂತ್ರಗಾರ ಅಮಿತ್ ಶಾ ಅವರು ಕೈರಾನಾದಲ್ಲಿ ಪಕ್ಷದ ಅಭ್ಯರ್ಥಿ ಮೃಗಾಂಕಾ ಸಿಂಗ್ ಪರವಾಗಿ ಮನೆ ಮನೆ ಪ್ರಚಾರವನ್ನು ಪ್ರಾರಂಭಿಸುವ ಮೂಲಕ ‘ಅಬ್ ಕಿ ಬಾರ್ 300 ಪಾರ್’ (ಬಿಜೆಪಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ) ಘೋಷಣೆಯಡಿ ಮತಯಾಚಿಸಿದರು.

ಹಣ ಸುಲಿಗೆಗಾಗಿ ಸ್ಥಳೀಯರ ಬೆದರಿಕೆಯಿಂದಾಗಿ ಪಟ್ಟಣವನ್ನು ತೊರೆಯಲು ಒತ್ತಾಯಿಸಲ್ಪಟ್ಟ ಹಲವಾರು ಕುಟುಂಬಗಳನ್ನು ಷಾ ಭೇಟಿಯಾದರು.

ಪ್ರಮುಖ ಗುರ್ಜರ್ ನಾಯಕ ದಿವಂಗತ ಹುಕುಮ್ ಸಿಂಗ್ ಅವರ ಪುತ್ರಿ ಮೃಗಾಂಕಾ ಸಿಂಗ್ ಅವರು 1996 ರಿಂದ 2012 ರವರೆಗೆ ಸತತ ನಾಲ್ಕು ಅವಧಿಗೆ ಬಿಜೆಪಿಯ ಸ್ಥಾನವನ್ನು ಪ್ರತಿನಿಧಿಸಿದ್ದಾರೆ. ಕೈರಾನಾದಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಇವರ ವಿರುದ್ಧ ಸ್ಪರ್ಧಿಸಿದ್ದಾರೆ. 2017 ರಲ್ಲಿ, ಸಮಾಜವಾದಿ ಪಕ್ಷದ ನಹಿದ್ ಹಾಸನ್ ಮುಂದೆ ಮೃಗಾಂಕಾ ಸಿಂಗ್ ಸೋಲನ್ನು ಅನುಭವಿಸಿದ್ದರು. ಅವರು ಈ ವರ್ಷ ಎಸ್‌ಪಿಯಿಂದ ಮತ್ತೊಮ್ಮೆ ನಾಮನಿರ್ದೇಶನಗೊಂಡಿದ್ದಾರೆ ಆದರೆ ಪ್ರಸ್ತುತ ಕ್ರಿಮಿನಲ್ (ಗ್ಯಾಂಗ್ ಸ್ಟಾರ್ ಆಕ್ಟ) ಕಾಯಿದೆಯಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿದ್ದಾರೆ. ಇದರ ಪರಿಣಾಮವಾಗಿ, ನಹಿದ್ ತನ್ನ ಕ್ರಿಮಿನಲ್ ಹಿನ್ನಲೆಯ ಕಾರಣದಿಂದ ಸ್ಪರ್ಧಿಸಲು ವಿಫಲವಾದರೆ ಎಸ್ಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಲು ಹಾಸನದ ಸಹೋದರಿ ಇಕ್ರಾ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಕೈರಾನಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾ, ಮಿತ್ತಲ್ ಕುಟುಂಬದ 11 ಸದಸ್ಯರೊಂದಿಗೆ ಸಂವಾದ ನಡೆಸಿದ್ದೇನೆ, ಅವರು ಇನ್ನು ಮುಂದೆ ಭಯದಿಂದ ಬದುಕುವುದಿಲ್ಲ. ಕಾನೂನು ಮತ್ತು ಸುವ್ಯವಸ್ಥೆಯಿಂದಾಗಿ ಕುಟುಂಬವು ಉತ್ತರ ಪ್ರದೇಶವನ್ನು ಮೊದಲೇ ತೊರೆಯಬೇಕಾಯಿತು ಎಂದು ಅವರು ಹೇಳಿದರು.

ಉತ್ತರ ಪ್ರದೇಶದ ಜನರಲ್ಲಿರುವ ವಿಶ್ವಾಸವನ್ನು ನಾನು ನೋಡಿದೆ. ಮುಂದಿನ ದಿನಗಳಲ್ಲಿ, ಇದು ಭಾರತದ ಅತ್ಯಂತ ಅಭಿವೃದ್ಧಿ ಹೊಂದಿದ ರಾಜ್ಯವಾಗಲಿದೆ ಎಂದು ಅಮಿತ್ ಶಾ ಅವರು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಉತ್ತರಪ್ರದೇಶದಲ್ಲಿನ ಕೇಂದ್ರ ಕಲ್ಯಾಣ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಶ್ಲಾಘಿಸಿದರು.

ಯಾವುದೇ ರಾಜ್ಯವು ಅಭಿವೃದ್ಧಿ ಹೊಂದಬೇಕಾದರೆ ಕಾನೂನು ಮತ್ತು ಸುವ್ಯವಸ್ಥೆಯು ಉತ್ತಮವಾಗಿರಬೇಕು. ಯುಪಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಎತ್ತಿ ಹಿಡಿಯಬೇಕಾದರೆ, ತುಷ್ಟೀಕರಣವನ್ನು ಕೊನೆಗೊಳಿಸಬೇಕು, ಒಂದು ಜಾತಿಗಾಗಿ ಕೆಲಸ ಮಾಡುವ ಸಂಪ್ರದಾಯವನ್ನು ಕೊನೆಗೊಳಿಸಬೇಕು ಮತ್ತು ಮುಂದೆಯೂ ಸಮರ್ಪಕವಾದ ಅಭಿವೃದ್ಧಿಯಾಗಬೇಕಾದರೆ ಯುಪಿಯಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರವನ್ನು ರಚನೆಯಾಗಬೇಕು. ಯೋಗಿ ಆದಿತ್ಯನಾಥ್ ನಾಯಕತ್ವದಲ್ಲಿ 300 ಕ್ಕೂ ಹೆಚ್ಚು ಸ್ಥಾನಗಳೊಂದಿಗೆ ಬಹುಮತ ಸಾಧಿಸಬೇಕು ಎಂದು ಅಮಿತ್ ಶಾ ಹೇಳಿದರು.

ಕುಟುಂಬಗಳೊಂದಿಗಿನ ಸಭೆ ಮತ್ತು ಮನೆ-ಮನೆ ಪ್ರಚಾರದ ಸಮಯದಲ್ಲಿ, ಬಲವಂತವಾಗಿ ವಲಸೆ ಹೋಗಲಾಯಿತು. ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶದ ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ “ಸುಧಾರಣೆ” ಯಾಗಲು ಕಾರಣ ಎಂದು ಜನರು ಹೇಳಿದರು. ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 300 ಪಾರ್ (ಬಿಜೆಪಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ) ಎಂದು ಎಲ್ಲರೂ ಹೇಳುತ್ತಿದ್ದಾರೆ ಎಂದು ಶಾ ಹೇಳಿದರು.

ಮತ್ತೊಂದೆಡೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ನಗೀನಾ, ಬಿಜ್ನೋರ್ ಮತ್ತು ಮುಜಾಫರ್‌ನಗರದ ಬಿಜೆಪಿ ನಾಯಕರೊಂದಿಗೆ ಸರಣಿ ಸಭೆಗಳನ್ನು ನಡೆಸಿದರೆ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಶನಿವಾರ ಅಲಿಘರ್ ಮತ್ತು ಬುಲಂದ್‌ಶಹರ್‌ನಲ್ಲಿ ಪಕ್ಷದ ಪ್ರಚಾರದ ನೇತೃತ್ವ ವಹಿಸಿಕೊಂಡರು.

Continue Reading

ರಾಜಕೀಯ

ಸಮಾಜವಾದಿ ಪಕ್ಷ, ರಾಷ್ಟ್ರೀಯ ಲೋಕ ದಳದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

Published

on

ಲಕ್ನೋ: ಜನೆವರಿ 22 (ಯು.ಎನ್.ಐ.) ಉತ್ತರ ಪ್ರದೇಶ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಈಗಾಗಲೇ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿವೆ. ಇನ್ನು ಕೆಲವು ಪಕ್ಷಗಳ ಸಚಿವರು, ಶಾಸಕರು ಬೇರೊಂದು ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ.

ಇದೀಗ ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷ, ಕಾಂಗ್ರೆಸ್, ಬಿಜೆಪಿಯ ನಡುವೆ ಪ್ರಬಲ ಪೈಪೋಟಿ ಇದೆ. ಇದರ ಮಧ್ಯೆ ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ರಾಷ್ಟ್ರೀಯ ಲೋಕ ದಳ (ಆರ್‌ಎಲ್‌ಡಿ) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಮೈತ್ರಿಕೂಟವು 36 ಹೆಸರುಗಳ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿದೆ. 29 ಅಭ್ಯರ್ಥಿಗಳ (10 ಎಸ್‌ಪಿ ಮತ್ತು 19 ಆರ್‌ಎಲ್‌ಡಿ) ಮೊದಲ ಪಟ್ಟಿಯನ್ನು ಜನವರಿ 13 ರಂದು ಬಿಡುಗಡೆ ಮಾಡಿದ್ದರೆ, 7 ಆರ್‌ಎಲ್‌ಡಿ ಅಭ್ಯರ್ಥಿಗಳ ಎರಡನೇ ಪಟ್ಟಿ ಜನವರಿ 15 ರಂದು ಬಿಡುಗಡೆಗೊಳಿಸಿತ್ತು.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮೈನ್‌ಪುರಿ ಜಿಲ್ಲೆಯ ಕರ್ಹಾಲ್ ಕ್ಷೇತ್ರದಿಂದ ತನ್ನ ಮೊದಲ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಘೋಷಿಸಿತು.

ಯಾದವ್ ಪ್ರಸ್ತುತ ಅಜಂಗಢದಿಂದ ಲೋಕಸಭಾ ಸಂಸದರಾಗಿದ್ದಾರೆ. 2012ರಲ್ಲಿ ಯಾದವ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾದಾಗ ವಿಧಾನ ಪರಿಷತ್ತಿನ ಹಾದಿ ಹಿಡಿದರು. ಕರ್ಹಾಲ್ ಅಸೆಂಬ್ಲಿ ಕ್ಷೇತ್ರವು ಉತ್ತರ ಪ್ರದೇಶ ವಿಧಾನಸಭೆಯ 403 ಕ್ಷೇತ್ರಗಳಲ್ಲಿ ಒಂದಾಗಿದೆ ಮತ್ತು ಮೈನ್‌ಪುರಿ (ಲೋಕಸಭಾ ಕ್ಷೇತ್ರ) ದ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಒಂದಾಗಿದೆ.

ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3 ಮತ್ತು 7 ರಂದು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

Continue Reading
Advertisement
ದೇಶ29 mins ago

ಬಂಗಾಳ: ನೇತಾಜಿ ಜನ್ಮದಿನದಂದು ಲಾಠಿ ಚಾರ್ಜ್

ಕೋಲ್ಕತ್ತಾ: ಜನೆವರಿ 23 (ಯು.ಎನ್.ಐ.) ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ಸಂದರ್ಭದಲ್ಲಿಯೂ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ರಾಜಕೀಯ ನಿಂತಿಲ್ಲ. ಪಶ್ಚಿಮ ಬಂಗಾಳದ...

ಅಂಕಣ1 hour ago

ದಟ್ಟ ಕಾಡಿನಲ್ಲಿ ʻಸಪ್ನೋಂ ಕೀ ರಾಣೀʼ

ಅಂಕಣ: ಒಂದೂರಲ್ಲಿ ಒಂದಿನ- 3 ಈ ಒಂದೂರು ಅನ್ನುವ ಮಾಯೆ ಇದೆಯಲ್ಲ, ಅದು ವಿಚಿತ್ರವಾದದ್ದು. ಅಪ್ಪ ಕಥೆ ಹೇಳುವಾಗ ಪ್ರತಿ ಸಲವೂ ಆ ಕಥೆ ಒಂದೂರಿನಲ್ಲಿ ಅಂತಲೇ...

ಕ್ರೀಡೆ2 hours ago

ಅಂಕುಶ್ ರಘುವಂಶಿ ಟೀಂ ಇಂಡಿಯಾದ ಉದಯೋನ್ಮುಖ ತಾರೆ!

ಹೊಸದಿಲ್ಲಿ: ಜನೆವರಿ 23 (ಯು.ಎನ್.ಐ.) ಅಂಡರ್ 19 ವರ್ಲ್ಡ್ ಕಪ್ ಮೂಲಕ ಭಾರತ ಕ್ರಿಕೆಟ್ ತಂಡಕ್ಕೆ ಮತ್ತೊಬ್ಬ ಉದಯೋನ್ಮುಖ ಆಟಗಾರ ದೊರೆತಿದ್ದಾರೆ. ಅವರೇ ದೆಹಲಿ ಮೂಲದ ಅಂಕುಶ್...

ಅಂಕಣ3 hours ago

ಎಳವೆಯಿಂದ ರಂಗಭೂಮಿ

ನಾದಾಂಕಣ – ಡಾ. ನಾ. ದಾಮೋದರ ಶೆಟ್ಟಿ ಭಾರತೀಯ ಹಾಗೂ ಗ್ರೀಕ್‌ ರಂಗಭೂಮಿಗೆ ಬಹುದೊಡ್ಡ ಪರಂಪರೆಇದೆ ಎನ್ನುವುದು ಸಾರ್ವಕಾಲಿಕ ಸತ್ಯ. ಆದರೆ ಯುರೋಪಿನ ರಂಗಭೂಮಿಯಾಗಲೀ ರಷ್ಯಾ, ಅಮೇರಿಕಾ...

ದೇಶ3 hours ago

ಅರುಣಾಚಲದಿಂದ ನಾಪತ್ತೆಯಾಗಿದ್ದ ಯುವಕ ಚೀನಾ ಗಡಿಯಲ್ಲಿ ಪತ್ತೆ!

ಹೊಸದಿಲ್ಲಿ: ಜನೆವರಿ 23 (ಯು.ಎನ್.ಐ.) ಅರುಣಾಚಲ ಪ್ರದೇಶದಿಂದ ನಾಪತ್ತೆಯಾಗಿದ್ದ ಭಾರತೀಯ ಯುವಕ ಚೀನಾ ಗಡಿಯಲ್ಲಿ ಪತ್ತೆಯಾಗಿದ್ದಾನೆ. ಈ ಬಗ್ಗೆ ಚೀನಾ ಸೈನಿಕರು ಭಾರತೀಯ ಯೋಧರಿಗೆ ಮಾಹಿತಿ ನೀಡಿದ್ದು,...

ಹಣಕಾಸು3 hours ago

ಕೆಲಸ ಬದಲಾಯಿಸಿದ್ದೀರಾ? ಚಿಂತೆ ಬಿಡಿ.. ನಿಮ್ಮ ನೆರವಿಗೆ ಇದೆ ಇಪಿಎಫ್ಒ!

ಬೆಂಗಳೂರು: ಜನೆವರಿ 23 (ಯು.ಎನ್.ಐ.) ಉತ್ತಮ ಸಂಬಳ, ಭದ್ರತೆಯುಳ್ಳ ನೌಕರಿ, ವಿಶೇಷ ಸವಲತ್ತುಗಳು.. ಹೀಗೆ ನಾನಾ ಉದ್ದೇಶಗಳಿಂದ ಉದ್ಯೋಗಿಗಳು ತಮ್ಮ ಕೆಲಸವನ್ನು ಬದಲಾಯಿಸುತ್ತಾ ಇರುತ್ತಾರೆ. ಇಂತಹ ಸಂದರ್ಭದಲ್ಲಿ...

ದೇಶ3 hours ago

ನೇತಾಜಿ ಸುಭಾಷ್ ಚಂದ್ರ ಬೋಸ್ ಜಯಂತಿ… ದೇಶಾದ್ಯಂತ ಪರಾಕ್ರಮ ದಿನವಾಗಿ ಆಚರಣೆ

ನವದೆಹಲಿ, ಜ ೨೩( ಯುಎನ್ ಐ) ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ೧೨೫ನೇ ಜನ್ಮಜಯಂತಿ ಇಂದು. ದೇಶಾದ್ಯಂತ ಪರಾಕ್ರಮ ದಿನವಾಗಿ ನೇತಾಜಿ...

ಕರ್ನಾಟಕ4 hours ago

ಇಡೀ ವರ್ಷ ಸುಭಾಷ್ ಚಂದ್ರಬೋಸ್ ಜನ್ಮದಿನಾಚರಣೆಗೆ ತೀರ್ಮಾನ: ಸಿಎಂ

ಬೆಂಗಳೂರು : ಜನೆವರಿ 23 (ಯು.ಎನ್.ಐ.) ರಾಜ್ಯ ಸರ್ಕಾರದ ವತಿಯಿಂದ ವರ್ಷವಿಡೀ ನೇತಾಜಿ ಸುಭಾಷ್ ಚಂದ್ರಬೋಸ್ ರವರ 125ನೇ ಜನ್ಮ ದಿನಾಚರಣೆಯನ್ನ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ...

ಅಂಕಣ4 hours ago

ಸ್ವಾತಂತ್ರ್ಯಕ್ಕಿಂತ ದೊಡ್ಡದು ಇನ್ಯಾವುದಿದೆ ?

‌ಅಂಕಣ: ದಿಟನುಡಿ -೩ ಕಳೆದ ವಾರ ನನ್ನ ಕೈರೋಪ್ರಾಕ್ಟರ್ ರೇ ಬಳಿ ಹೋಗಿದ್ದೆ. ಏಕೋ ಗೊತ್ತಿಲ್ಲ ಕೆಲ ದಿನಗಳ ಹಿಂದೆ ಸೊಂಟ ಹಿಡಿದಿತ್ತು. ಏಳಲು, ಕೂರಲು, ನಿಲ್ಲಲು...

ದೇಶ4 hours ago

ಪಂಜಾಬ್ ಚುನಾವಣೆ: ಕೆಂಪು ಕೋಟೆ ಹಿಂಸಾಚಾರದ ಆರೋಪಿಗೆ ರೈತ ಸಂಘಟನೆಯಿಂದ ಟಿಕೆಟ್!

ಚಂಡೀಗಢ: ಜನೆವರಿ 23 (ಯು.ಎನ್.ಐ.) ರೈತರ ಸಂಘಟನೆ ಯುನೈಟೆಡ್ ಸಮಾಜ ಮೋರ್ಚಾ ಪಂಜಾಬ್ ವಿಧಾನಸಭಾ ಚುನಾವಣೆಗೆ 35 ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಮಾಜಿ...

ಟ್ರೆಂಡಿಂಗ್

Share