Published
6 months agoon
By
UNI Kannadaನವದೆಹಲಿ, ಜ 10(ಯುಎನ್ ಐ) – ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ಮತ್ತೆ ಭೀತಿ ಸೃಷ್ಟಿಸುತ್ತಿದೆ. ಕಳೆದ 24 ಗಂಟೆಗಳಲ್ಲಿ 1,79,723 ಹೊಸದಾಗಿ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 146 ಮಂದಿ ಸಾಂಕ್ರಾಮಿಕ ರೋಗದಿಂದ ಸಾವನ್ನಪ್ಪಿದ್ದಾರೆ.
ಪ್ರಸ್ತುತ, 7,23,619 ಕೋವಿಡ್ ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೊರಡಿಸಿರುವ ಬುಲೆಟಿನ್ ತಿಳಿಸಿದೆ. ಪ್ರಸ್ತುತ ಪಾಸಿಟಿವಿಟಿ ದರ ಶೇ 13.29 ರಷ್ಟಿದೆ . ಮತ್ತೊಂದೆಡೆ, ಓಮಿಕ್ರಾನ್ ರೂಪಾಂತರಿ ಪ್ರಕರಣಗಳು ಸಹ ವೇಗವಾಗಿ ವೃದ್ದಿಯಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 4,033 ಒಮಿಕ್ರಾನ್ ಪ್ರಕರಣಗಳು ವರದಿಯಾಗಿವೆ.